ಬೆಂಗಳೂರು: ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಗಲಭೆಯಲ್ಲಿ ಕೆಲ ಕಾಂಗ್ರೆಸ್ ನಾಯಕರ ಕೈವಾಡವೂ ಇದೆ ಎಂದು ಮಾಜಿ ಸಚಿವ ರೋಶನ್ ಬೇಗ್ ಆರೋಪಿಸಿದ್ದಾರೆ.ಡಿಜೆ ಹಳ್ಳಿ ಗಲಭೆ ಕುರಿತು ಪ್ರತಿಕ್ರಿಯಿಸಿರುವ ಅವರು, ಗೋರಿ ಪಾಳ್ಯದ ಮೌಲಾನ ಇಲ್ಲಿಗೆ ಯಾಕೆ ಬರಬೇಕಿತ್ತು, ಕಲಾಸಿಪಾಳ್ಯದಿಂದ, ಟಿಪ್ಪು ನಗರದಿಂದ ಇಲ್ಲಿಗೆ ಯಾಕೆ ಬರಬೇಕಿತ್ತು? ಹೊರಗಿನವರು ಯಾರ್ಯಾರೋ ಬಂದಿದ್ದರು. ದಿಡೀರ್ ಗಲಾಟೆ ಮಾಡಿದರು ಎಂದು ಸ್ಥಳಿಯರೇ ಹೇಳುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಪೊಲೀಸರು ಬಂಧಿಸಿದವರಲ್ಲಿ ಕೆಲವರು ಅಮಾಯಕರೂ …
Read More »ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ
ಬೆಂಗಳೂರು: ಕೊರೊನಾ ವೈರಸ್ ಹಿನ್ನೆಲೆ ಈ ಬಾರಿ ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ನಿರ್ಬಂಧ ವಿಧಿಸಿದ್ದ ಸರಕಾರ ವ್ಯಾಪಕ ವಿರೋಧದ ನಂತರ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ. ಈಗ ಗಣೇಶೋತ್ಸವಕ್ಕೆ ಸಂಬಂಧಪಟ್ಟಂತೆ ಪರಿಷ್ಕೃತ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದ್ದು, ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿಯನ್ನು ನೀಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೊರೊನಾ ಪರಿಸ್ಥಿತಿ ಹಿನ್ನೆಲೆ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ, ಸಾಂಪ್ರದಾಯಿಕ ಗಣೇಶೋತ್ಸವ ಆಚರಣೆಗೆ ಧಕ್ಕೆ ಬಾರದಂತೆ ಸರಕಾರ ಮಾರ್ಗಸೂಚಿಗಳನ್ನು …
Read More »ಬೆಂಗಳೂರಿನ ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ.
ಬೆಂಗಳೂರಿನ ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಷ್ಟದ ಅಂದಾಜು ಮಾಡಲಾಗಿದೆ. ಇದುವರೆಗಿನ ಲೆಕ್ಕದ ಪ್ರಕಾರ 9 ಕೋಟಿ 50 ಲಕ್ಷ ರೂ.ಗೂ ಹೆಚ್ಚು ನಷ್ಟವಾಗಿದೆ. ಆಸ್ತಿ ಪಾಸ್ತಿ ನಷ್ಟ, ವಾಹನಗಳ ನಷ್ಟಗಳ ಬಗ್ಗೆ ಅಂದಾಜು ಹಾಕಲಾಗಿದೆ. ಸದ್ಯ ದಾಖಲಾಗಿರುವ ಎಫ್‌ಐಆರ್ ಗಳ ಅನ್ವಯ ಲೆಕ್ಕ ಹಾಕಲಾಗಿದೆ. ಮುಂದಿನ ದಿನಗಳಲ್ಲಿ ನಷ್ಟದ ಅಂದಾಜು ಇನ್ನೂ ಹೆಚ್ಚಾಗಬಹುದು ಎಂದು ಹೇಳಲಾಗಿದೆ. ಬೆಂಗಳೂರಿನ …
Read More »ರಾಜ್ಯದಲ್ಲಿ ಕಳೆದ ಒಂದು ತಿಂಗಳಲ್ಲಿ ಕೋವಿಡ್ ಸೋಂಕಿಗೆ 3,030 ಮಂದಿ ಬಲಿ
ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ತಿಂಗಳಲ್ಲಿ ಸರಿಸುಮಾರು ಮೂರು ಸಾವಿರದಷ್ಟು ಕೋವಿಡ್ ವೈರಸ್ ಸೋಂಕಿತರ ಸಾವಾಗಿದೆ. ಈ ಮೂಲಕ ಒಟ್ಟಾರೆ ಸೋಂಕಿಗೆ ಬಲಿಯಾದವರ ಸಂಖ್ಯೆ ನಾಲ್ಕು ಸಾವಿರ ಗಡಿದಾಟಿದೆ. ಸೋಮವಾರ 115 ಮಂದಿ ಸೋಂಕು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದು ವರದಿಯಾಗಿದ್ದು, ಒಟ್ಟಾರೆ ಸಂಖ್ಯೆ 4062ಕ್ಕೆ ಏರಿಕೆಯಾಗಿದೆ. ಒಂದು ತಿಂಗಳ ಹಿಂದಷ್ಟೆ (ಜುಲೈ 16ಕ್ಕೆ) ಸೋಂಕಿತರ ಸಾವಿನ ಸಂಖ್ಯೆ ಒಂದು ಸಾವಿರ ಗಡಿದಾಟಿತ್ತು. ಆ ನಂತರ ನಿತ್ಯ ಸರಾಸರಿ ನೂರು ಸೋಂಕಿತರು ಸಾವು …
Read More »ಮುಖ್ಯ ಶಿಕ್ಷಕರನ್ನು ಕೊರೊನಾ ಸೇವೆಯಿಂದ ಕೈ ಬಿಡಿ- ಸುರೇಶ್ ಕುಮಾರ್
ಬೆಂಗಳೂರು: ಶಾಲಾ ಮುಖ್ಯೋಪಾಧ್ಯಾಯರನ್ನು ಕೋವಿಡ್ ಸೇವೆಯಿಂದ ಮುಕ್ತಿಗೊಳಿಸಲು ಸಚಿವ ಸುರೇಶ್ ಕುಮಾರ್ ಸೂಚಿಸಿದ್ದಾರೆ. ಈ ಸಂಬಂಧ ಆಯುಕ್ತರಿಗೆ ಪತ್ರ ಬರೆದಿರುವ ಸಚಿವರು, ಕೋವಿಡ್ ಸಂದರ್ಭದಲ್ಲಿ ಸರ್ಕಾರಿ ಶಾಲಾ ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರುಗಳನ್ನು ತುರ್ತು ಸೇವೆಗೆ ಬಳಸಿಕೊಳ್ಳಲಾಗಿದೆ. ಶೈಕ್ಷಣಿಕ ಚಟುವಟಿಕೆಗಳಿಗೆ ಶಾಲೆಗಳಲ್ಲಿ ಶಿಕ್ಷಕರ, ವಿಶೇಷವಾಗಿ ಮುಖ್ಯ ಶಿಕ್ಷಕರ ಅಲಭ್ಯತೆಯ ಹಿನ್ನೆಲೆಯಲ್ಲಿ ಪ್ರತಿಕೂಲ ಪರಿಣಾಮವನ್ನು ಬೀರುತ್ತಿದೆ ಎಂದು ಬರೆದಿದ್ದಾರೆ. ಅಲ್ಲದೆ ವಿದ್ಯಾರ್ಥಿಗಳ ಕಲಿಕೆಯನ್ನು ಮುಂದುವರಿಸುವ ದೂರದೃಷ್ಟಿ ಯೋಜನೆಯಾದ ವಿದ್ಯಾಗಮನ ಅನುಷ್ಠಾನ, ಮಧ್ಯಾಹ್ನ ಉಪಹಾರ …
Read More »ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಕಾನೂನು ರೀತಿಯಲ್ಲಿ ಅನುಮತಿ ನೀಡಿ,
ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಜಯಂತಿಯಂದು, ಬೆಳಗಾವಿಯ ಪೀರನವಾಡಿಯಲ್ಲಿ ಅವರ ಪ್ರತಿಮೆ ತೆರವುಗೊಳಿಸಿರುವುದು ನಿಜಕ್ಕೂ ಕನ್ನಡಿಗರಿಗೆ ಆಗಿರುವ ಅಪಮಾನ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಅವರು, ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಕಾನೂನು ರೀತಿಯಲ್ಲಿ ಅನುಮತಿ ನೀಡಿ, ಈ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸುವಂತೆ ಬೆಳಗಾವಿ ಜಿಲ್ಲಾಡಳಿತಕ್ಕೆ ಅವರು ಮನವಿ ಮಾಡಿದ್ದಾರೆ. ಆ. 15 ರಂದು ಬೆಳಗಿನ ಜಾವ ಕೆಲ ಯುವಕರು ಪೀರಣವಾಡಿಯ …
Read More »ಪ್ರಥಮ್ ವಿರುದ್ಧ ಪ್ರಕರಣ…………
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಪ್ರಥಮ್ ವಿರುದ್ಧ ಪ್ರಕರಣ ದಾಖಲಾಗಿದೆ.ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಸ್‌ಡಿಪಿಐ ಸದಸ್ಯ ಉಮರ್ ಫಾರೂಕ್ ಎಂಬವರು ದೂರು ನೀಡಿದ್ದಾರೆ. ದೂರಿನ ಅನ್ವಯ ಐಪಿಸಿ ಸೆಕ್ಷನ್ 295(ಧಾರ್ಮಿಕ ಭಾವನೆಗೆ ಧಕ್ಕೆ) ಅಡಿ ಪ್ರಕರಣ ದಾಖಲಾಗಿದೆಚಿತ್ರನಟ ಪ್ರಥಮ್ ಫೇಸ್‌ಬುಕ್‌ನಲ್ಲಿ ಮುಸ್ಲಿಮ್ ಸಮುದಾಯದ ಧಾರ್ಮಿಕ ಭಾವನೆಗೆ ನೋವುಂಟು ಮಾಡುವಂತಹ , ಇಂತಹ ಮುಗ್ಧ ಮುಸ್ಲಿಮ್‌ಗಳು ಅನ್ ಎಜ್ಯುಕೇಟೆಡ್ ಇರಬೇಕು. ಇಲ್ಲ ಅಂದ್ರೆ …
Read More »ಗುಟ್ಟು ಗುಟ್ಟಾಗಿ ಪರಿಹಾರ ಕೊಡಿ ಅನ್ನೋ ಪಕ್ಷದ ನಾಯಕರ ಮಾತಿಗೆ ಜಮೀರ್ ಅಹ್ಮದ್ ಗೊಂದಲದಲ್ಲಿ ಸಿಲುಕಿದ್ದಾರೆ
ಬೆಂಗಳೂರು: ಕೆಜಿ ಹಳ್ಳಿ ಗಲಾಟೆಯಲ್ಲಿ ಮೃತರಾದ ಮೂವರ ಕುಟುಂಬಕ್ಕೆ ಮಾಜಿ ಸಚಿವ, ಶಾಸಕ ಜಮೀರ್ ಅಹ್ಮದ್ ಖಾನ್ 5 ಲಕ್ಷ ರೂ. ಪರಿಹಾರ ನೀಡುವದಾಗಿ ಘೋಷಣೆ ಮಾಡಿದ್ದರು. ಇದೀಗ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪಕ್ಷದ ನಾಯಕರು ನೀಡಿರುವ ಎಚ್ಚರದ ಸಂದೇಶಕ್ಕೆ ಜಮೀರ್ ಅಹ್ಮದ್ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕೆ.ಜೆ.ಹಳ್ಳಿ ಗಲಾಟೆಯಲ್ಲಿ ಮೃತಪಟ್ಟ ಮೂವರು ಯುವಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಕೊಡುವುದಾಗಿ ಶಾಸಕ ಜಮೀರ್ ಅಹ್ಮದ್ …
Read More »ಕೊರೊನಾ ಸಂಕಷ್ಟದ ನಡುವೆ ಬಿಜೆಪಿ ನಾಯಕರಿಂದ ಸ್ಥಾನಮಾನಕ್ಕೆ ಲಾಬಿ
ಬೆಂಗಳೂರು: ಕೊರೊನಾ ಭೀತಿ ಹಿನ್ನೆಲೆ ದೇಶದ್ಯಾಂತ ಲಾಕ್‍ಡೌನ್ ಮಾಡಲಾಗಿತ್ತು. ಲಾಕ್‍ಡೌನ್ ನಿಂದಾಗಿ ರಾಜ್ಯದಲ್ಲಿ ಅಲ್ಲ ಇಡೀ ದೇಶದ ರಾಜಕೀಯ ವಿದ್ಯಮಾನಗಳು ಸ್ತಬ್ಧವಾಗಿದ್ದವು. ಆದರೆ ಲಾಕ್‍ಡೌನ್ ಅನ್‍ಲಾಕ್ ಆಗ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಪುನಾರಂಭಗೊಂಡಿದೆ. ಸ್ಥಾನಮಾನದ ಲೆಕ್ಕಾಚಾರದಲ್ಲಿರುವ ಆಡಳಿತ ಪಕ್ಷದ ನಾಯಕರು ದೆಹಲಿ ದಂಡಯಾತ್ರೆ ಶುರು ಮಾಡಿದ್ದು ಹೈಕಮಾಂಡ್ ನಾಯಕರ ಮನ ಗೆಲಲ್ಲು ಪ್ರಯತ್ನ ಆರಂಭಿಸಿದ್ದಾರೆ. ಅನ್‍ಲಾಕ್ ಬಳಿಕ ನಾಲ್ಕನೇ ಬಾರಿಗೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೋಳಿ ದೆಹಲಿ ದಂಡಯಾತ್ರೆ ಮಾಡುತ್ತಿದ್ದಾರೆ. …
Read More »ಬೆಂಗಳೂರು ಗಲಭೆ – ಇಬ್ಬರು ಕಾಂಗ್ರೆಸ್ ಕಾರ್ಪೋರೇಟರ್ಗಳಿಗೆ ನೋಟಿಸ್
ಬೆಂಗಳೂರು: ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಕಾಂಗ್ರೆಸ್ ಕಾರ್ಪೋರೇಟರ್ ಗಳಿಗೆ ನೋಟಿಸ್ ನೀಡಿದ್ದಾರೆ. ಮಾಜಿ ಮೇಯರ್ ಸಂಪತ್‍ರಾಜ್ ಮತ್ತು ಪುಲಕೇಶಿನಗರ ಕಾರ್ಪೋರೇಟರ್ ಅಬ್ದುಲ್ ರಕೀಬ್ ಝಾಕೀರ್ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.ಶಾಸಕ ಅಖಂಡ ಶ್ರೀನಿವಾಸ್‍ಮೂರ್ತಿ ಮನೆ ಮೇಲಿನ ದಾಳಿ, ಡಿ ಜೆ ಹಳ್ಳಿ, ಕೆಜಿಹಳ್ಳಿ ಮತ್ತು ಕಾವಲ್‍ಬೈರಸಂದ್ರದಲ್ಲಿ ನಡೆದಿದ್ದ ದಳ್ಳುರಿ ಹಿಂದೆ ರಾಜಕೀಯ ದ್ವೇಷದ ಕಾರಣವಿದೆ ಎಂಬ ಕಾರಣಕ್ಕಾಗಿ ಇಬ್ಬರು ಕಾಂಗ್ರೆಸ್ ಪಾಲಿಕೆ ಸದಸ್ಯರನ್ನ …
Read More »