Breaking News

ಬೆಂಗಳೂರು

ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಮಹಾಸ್ವಾಮಿಗಳ ನೇತೃತ್ವದಲ್ಲಿ   ಸಚಿವ  ರಮೇಶ ಜಾರಕಿಹೊಳಿ ಅವರನ್ನು ಭೇಟಿ

ಬೆಂಗಳೂರು: ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಮಹಾಸ್ವಾಮಿಗಳ ನೇತೃತ್ವದಲ್ಲಿ   ಸಚಿವ  ರಮೇಶ ಜಾರಕಿಹೊಳಿ ಅವರನ್ನು ಭೇಟಿಯಾದ ನಿಯೋಗ  ಸಮುದಾಯದ ಮತ್ತು ಜ್ವಲಂತ ವಿಷಯಗಳ  ಕುರಿತು ಚರ್ಚೆ ನಡೆಸಿದರು. ನಗರದ ಸಚಿವರ ಮನೆಯಲ್ಲಿ ನಡೆದ ಈ ಸಭೆಯಲ್ಲಿ ಹೊಸದುರ್ಗದ ಉಪ್ಪಾರ ಗುರುಪೀಠದ ಪುರುಷೋತ್ತಮಾನಂದ ಮಹಾಸ್ವಾಮಿಗಳು, ಕುಂಚಿಟಿಗರ ಮಠದ ಶಾಂತವೀರ ಮಹಾಸ್ವಾಮಿಗಳು,ಮಡಿವಾಳ ಮಾಚಿದೇವ ಮಹಾಸ್ವಾಮಿಗಳು, ಕಾಗಿನೆಲೆ ಗುರುಪೀಠದ ಈಶ್ವರಾನಂದ ಮಹಾಸ್ವಾಮಿಗಳು, ಬೋವಿ ಪೀಠದ ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮಿಗಳು, ಮತ್ತು ಹರಳಯ್ಯ …

Read More »

ಹುಟ್ಟಿ ಬೆಳೆದ ಮನೆ ಸುಟ್ಟು ಹಾಕಿದ್ದಕ್ಕೆ ಕಣ್ಣೀರಿಟ್ಟ ಅಖಂಡ ಶ್ರೀನಿವಾಸಮೂರ್ತಿ: ಸೂಕ್ತ ತನಿಖೆಗೆ ಆಗ್ರಹ

ಬೆಂಗಳೂರು: ತಾವು ಹುಟ್ಟಿಬೆಳೆದ ಮನೆಯನ್ನು ದುಷ್ಕರ್ಮಿಗಳು ಸುಟ್ಟುಹಾಕಿದ್ದಕ್ಕೆ ಕಣ್ಣೀರಿಟ್ಟಿರುವ ಪುಲಕೇಶಿನಗರ ಮತಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ, ಸರ್ಕಾರ ಸಿಬಿಐ, ಸಿಐಡಿ ಯಾವುದಾದರೊಂದು ತನಿಖೆಯನ್ನು ಸೂಕ್ತವಾಗಿ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆಯಲು ಕಂದಾಯ ಸಚಿವ ಆರ್.ಅಶೋಕ್ ಅಖಂಡ ಶ್ರೀನಿವಾಸಮೂರ್ತಿ ನಿವಾಸಕ್ಕೆ ಭೇಟಿ ನೀಡಿದರು. ಭೇಟಿ ವೇಳೆ ತಮಗೂ ಕುಟುಂಬದ ಸದಸ್ಯರಿಗೆ ಸೂಕ್ತ ಕಾನೂನು ಭದ್ರತೆ ರಕ್ಷಣೆ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದರು. …

Read More »

ಬೆಂಗಳೂರು ಹಿಂಸಾಚಾರ: ಕೋಲಾರ ಸೇರಿ 6 ಪ್ರದೇಶಗಳಲ್ಲಿ ತೀವ್ರ ಕಟ್ಟೆಚ್ಚರ- ಐಜಿಪಿ ಸೀಮಂತ್ ಕುಮಾರ್ ಸಿಂಗ್

ಬೆಂಗಳೂರು: ಡಿಜೆ ಹಳ್ಳಿಯಲ್ಲಿ ನಡೆದ ಹಿಂಸಾಚಾರ ಘಟನೆ ಬಳಿಕ ಕೋಲಾರ ಸೇರಿದಂತೆ ಒಟ್ಟು 6 ಪ್ರದೇಶಗಲ್ಲಿ ತೀವ್ರ ಕಟ್ಟೆಚ್ಚರವಹಿಸಲಾಗಿದೆ ಎಂದು ಕೇಂದ್ರೀಯ ವಲಯದ ಐಜಿಪಿ ಸೀಮಂತ್ ಕುಮಾರ್ ಸಿಂಗ್ ಅವರು ಬುಧವಾರ ಹೇಳಿದ್ದಾರೆ. ಕೋಲಾರ, ರಾಮನಗರ, ತುಮಕೂರು, ಕೆಜಿಎಪ್, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ದಲ್ಲಿ ಹೈಅಲರ್ಟ್ ಆಗಿರುವಂತೆ ಹಾಗೂ ರಾತ್ರಿ ವೇಳೆ ಗಸ್ತು ತಿರುಗುವಂತೆ ಸೂಚಿಸಲಾಗಿದೆ. ಇನ್ನೂ ಎರಡೂ ದಿನಗಳ ಕಾಲ ಇದೇ ರೀತಿ ಭದ್ರತೆಯೊದಗಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ. …

Read More »

ಸುಟ್ಟು ಕರಕಲಾದ ಮೂರು ಅಂತಸ್ತಿನ ಮನೆ

ಬೆಂಗಳೂರು: ಕೆ.ಜಿ.ಹಳ್ಳಿ ಗಲಭೆ ಪ್ರಕರಣದಿಂದ ಪುಲಿಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಕಾವಲ್ ಭೈರಸಂದ್ರದಲ್ಲಿರುವ ಮೂರು ಅಂತಸ್ತಿನ ಮನೆ ಬೆಂಕಿಗಾಹುತಿಯಾಗಿದೆ. ಶಾಸಕರ ಮನೆ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಪಾಳು ಮನೆಯಂತೆ ಭಾಸವಾಗುತ್ತಿದೆ. ಪರಿಣಾಮ ಅಕ್ಕಪಕ್ಕದ ರಸ್ತೆ, ಮನೆಗಳಲ್ಲಿ ನೀರವ ಮೌನ ಆವರಿಸಿದೆ. ಸದ್ಯಕ್ಕೆ ಪೊಲೀಸರು ಕೆಜಿ ಹಳ್ಳಿಗೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳನ್ನ ಬಂದ್ ಮಾಡಿದ್ದಾರೆ. ಕಿಡಿಗೇಡಿಗಳು ಸ್ಥಳಕ್ಕೆ ಬಂದ ಪೊಲೀಸರು …

Read More »

ಪೊಲೀಸರಿಗೆ ಸಂಪೂರ್ಣ ಅಧಿಕಾರವನ್ನು ಕೊಟ್ಟಿದ್ದೇನೆ. ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತರುತ್ತಾರೆ

ಬೆಂಗಳೂರು: ಪುಲಿಕೇಶಿ ನಗರ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲೆ ಕಿಡಿಗೇಡಿಗಳ ದಾಳಿಯಾಗಿದೆ. ಸ್ಥಳೀಯ ಡಿಜೆ ಹಳ್ಳಿ ಪೊಲೀಸ್ ಠಾಣೆ ಮೇಲೆ ಕಿಡಿಗೇಡಿಗಳ ಮುತ್ತಿಗೆ ಹಾಕಿದ್ದು, ಪೊಲೀಸರ ಮೇಲೆ ಹಲ್ಲೆಗೆ ದುಷ್ಕರ್ಮಿಗಳು ಮುಂದಾಗಿದ್ದಾರೆ. ಈ ಬಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.ಪುಂಡರಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಡಿಜೆ ಹಳ್ಳಿ ವ್ಯಾಪ್ತಿಯಲ್ಲಿ ನಡೆದ ಪುಂಡಾಟಿಕೆ ಗಮನಕ್ಕೆ ಬಂದಿದೆ. ಬೆಂಕಿ ಹಚ್ಚುವುದು, ಗಲಾಟೆ ಕಾನೂನು ಬಾಹಿರ ಕೃತ್ಯ …

Read More »

ಫೇಸ್ ಬುಕ್ ನಲ್ಲಿ ಸಮುದಾಯವನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಶಾಸಕ ರ ನಿವಾಸದ ಮುಂದೆ ಜಮಾಯಿಸಿ ಬೆಂಕಿ ಹಚ್ಚಿದೆ.

ಬೆಂಗಳೂರು:  ಮಂಗಳವಾರ  ರಾತ್ರಿ ಕಾವಲ್‌ ಭೈರಸಂದ್ರದಲ್ಲಿ ಪುಂಡರು ಪಕ್ಕಾ ಪ್ಲಾನ್‌ ಮಾಡಿ ವಿಕೃತಿ ಮೆರೆದಿದ್ದಾರೆ.ಪುಲಿಕೇಶಿ ನಗರದ ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಅಕ್ಕನ ಮಗ ನವೀನ್ ಫೇಸ್ ಬುಕ್ ನಲ್ಲಿ ಸಮುದಾಯವನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಗುಂಪೊಂದು ದಿಢೀರ್‌ ಆಗಿ ರಾತ್ರಿ ಕಾವಲ್ ಭೈರಸಂದ್ರದಲ್ಲಿರುವ ‌ ಶಾಸಕ ರ ನಿವಾಸದ ಮುಂದೆ ಜಮಾಯಿಸಿ ಬೆಂಕಿ ಹಚ್ಚಿದೆ. ಕಿಡಿಗೇಡಿಗಳ ಲಾಂಗ್, ದೊಣ್ಣೆ, ಕಲ್ಲುಗಳನ್ನು ಶೇಖರಿಸಿ ತಂದಿದ್ದರು. ಕೃತ್ಯಕ್ಕೂ …

Read More »

ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮತ್ತು ಕಚೇರಿ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದೆ.

ಬೆಂಗಳೂರು: ಪುಲಿಕೇಶಿ ನಗರದ ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮತ್ತು ಕಚೇರಿ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದೆ. ಶಾಸಕರ ಆಪ್ತ ನವೀನ್ ಎಂಬವರು ಫೇಸ್ ಬುಕ್ ನಲ್ಲಿ ಸಮುದಾಯವನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಗುಂಪೊಂದು ದಿಢೀರ್‌ ಆಗಿ ರಾತ್ರಿ ಕಾವಲ್ ಭೈರಸಂದ್ರದಲ್ಲಿರುವ ಶಾಸಕರ ಮನೆ ಮುಂದೆ ಜಮಾಯಿಸಿ ಬೆಂಕಿ ಹಚ್ಚಿದೆ. 100ಕ್ಕೂ ಹೆಚ್ಚು ಪುಂಡರು ಕಲ್ಲು ತೂರಾಟ ನಡೆಸಿ ದೊಣ್ಣೆ ಹಿಡಿದು …

Read More »

ಕೊರೊನಾ ನಿಯಂತ್ರಣ: ಪ್ರಧಾನಿ ಜೊತೆ 4 ಪ್ರಮುಖ ಬೇಡಿಕೆ ಸಲ್ಲಿಸಿದ ಕರ್ನಾಟಕ

ಬೆಂಗಳೂರು: ಕೋವಿಡ್‌ 19 ನಿಯಂತ್ರಣ ಸಂಬಂಧ ಪ್ರಧಾನಿ ನರೇಂದ್ರ ಮೋದಿಯವರ ಜೊತೆಗಿನ ಸಭೆಯಲ್ಲಿ ಕರ್ನಾಟಕ ಸರ್ಕಾರ ಪ್ರಮುಖವಾಗಿ 4 ಬೇಡಿಕೆಯನ್ನು ಸಲ್ಲಿಸಿದೆ.ವಿಡಿಯೋ ಸಂವಾದದಲ್ಲಿ ಉಪಮುಖ್ಯಮಂತ್ರಿ ಅಶ್ವಥ್‍ನಾರಾಯಣ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಹಾಗೂ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. ರಾಜ್ಯದಲ್ಲಿ ಕೋವಿಡ್ ನಿರ್ವಹಣೆಯ ಕುರಿತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಮಾಹಿತಿ ಒದಗಿಸಿದರು.ಸಭೆಯಲ್ಲಿ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳನಾಡು, ಬಿಹಾರ್, ಗುಜರಾತ್, ಪಂಜಾಬ್, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ತೆಲಂಗಾಣ ರಾಜ್ಯಗಳ …

Read More »

S.S.L.C. ಪರೀಕ್ಷೆಯ ಯಶಸ್ಸಿಗೆ ಶ್ರಮಿಸಿದ ಎಲ್ಲರಿಗೆ ಸಿಎಂ ಕೃತಜ್ಞತೆ

ಬೆಂಗಳೂರು, ಆ.11 : ಸವಾಲುಗಳ ನಡುವೆ ಯಶಸ್ವಿಯಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲು ಕಾರಣರಾದ ಎಲ್ಲರಿಗೂ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಕೊರೋನಾ ಸವಾಲುಗಳ ನಡುವೆ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಅಡ್ಡಿಯಾಗಬಾರದು ಎಂದು ರಾಜ್ಯ ಸರ್ಕಾರ ಟೊಂಕಕಟ್ಟಿ ನಿಂತು, ಈ ವರ್ಷದ ಜೂನ್ 25 ರಿಂದ ಜುಲೈ 3 ರವರೆಗೆ, ಅತ್ಯಂತ ಯಶಸ್ವಿಯಾಗಿ ನಡೆಸಿದ ಎಸ್.ಎಸ್.ಎಲ್.ಸಿ ಪರೀಕ್ಷೆಗಳ ಫಲಿತಾಂಶ ನಿನ್ನೆ ಪ್ರಕಟವಾಗಿದೆ. ಶೇಕಡಾ 71.80 ರಷ್ಟು ಮಕ್ಕಳು …

Read More »

ನನ್ನ ಹೆಸರನ್ನು ಬಳಸಿಕೊಂಡು ಯಾರು ಕೂಡ ಅಭಿಮಾನಿಗಳ ಬಳ, ಸಂಘ ಸಂಸ್ಥೆಗಳನ್ನು, ಮತ್ತಿತರ ಸಂಘಟನೆಗಳನ್ನು ಮಾಡಿಕೊಳ್ಳದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್  ಎಂದು ಸ್ಪಷ್ಟ ಪಡಿಸಿದ್ದಾರೆ.

ಬೆಂಗಳೂರು: ನನ್ನ ಹೆಸರನ್ನು ಬಳಸಿಕೊಂಡು ಯಾರು ಕೂಡ ಅಭಿಮಾನಿಗಳ ಬಳ, ಸಂಘ ಸಂಸ್ಥೆಗಳನ್ನು, ಮತ್ತಿತರ ಸಂಘಟನೆಗಳನ್ನು ಮಾಡಿಕೊಳ್ಳದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್  ಎಂದು ಸ್ಪಷ್ಟ ಪಡಿಸಿದ್ದಾರೆ. ಈಗಾಗಲೇ ಅಸ್ತಿತ್ವದಲ್ಲಿರುವ ಎಂ.ಎಸ್. ಅಂಗಡಿ ನೇತೃತ್ವದ ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘಟನೆ ಹೊರತು ಪಡಿಸಿ, ಈ ಕ್ಷಣದಿಂದಲೇ ಉಳಿದ ಸಂಘಟನೆಗಳನ್ನು ವಿಸರ್ಜಿಸುವಂತೆ ಸೂಚನೆ ನೀಡಿದ್ದಾರೆ. ಯಾರಾದರು ತಮ್ಮ ಹಾಗೂ ಸಹೋದರ ಡಿ.ಕೆ. ಸುರೇಶ ಅವರ ಹೆಸರಲ್ಲಿ  ಸಂಘಟನೆಗಳನ್ನು ನಡೆಸಿದರೆ …

Read More »