ಬೆಂಗಳೂರು, ಆ.5- ಪೀಣ್ಯದಲ್ಲಿರುವ ಶ್ರೀ ಬಸವೇಶ್ವರ ಬಸ್ ನಿಲ್ದಾಣವನ್ನು ಸಾರಿಗೆ ಇಲಾಖೆ ಕೋವಿಡ್ ಆರೈಕೆ ಕೇಂದ್ರವನ್ನಾಗಿ ಪರಿವರ್ತಿಸಿದೆ.ಪ್ರಾಥಮಿಕ ಹಂತದಲ್ಲಿ 200 ಹಾಸಿಗೆಗಳ ಈ ಕೇಂದ್ರವನ್ನು ಇಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಉದ್ಘಾಟಿಸಿದರು. ನಾಳೆಯಿಂದ ಕೇಂದ್ರದಲ್ಲಿ ದಾಖಲಾತಿ ಆರಂಭಗೊಳ್ಳಲಿದೆ. ತುಮಕೂರು ಮಾರ್ಗವಾಗಿ ಬರುವ ಬಸ್‍ಗಳು ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಬರುವುದರಿಂದ ಉಂಟಾಗುವ ಸಂಚಾರ ದಟ್ಟಣೆಯನ್ನು ತಪ್ಪಿಸಲು ಪಿಣ್ಯ ಬಳಿ ಬಸವೇಶ್ವರ ಬಸ್ ನಿಲ್ದಾಣ ಮತ್ತು ಬಹುಮಹಡಿಗಳ ಸಂಕೀರ್ಣವನ್ನು …
Read More »ಕೆಎಸ್ಆರ್‌ಟಿಸಿಯ ಮಿಡಿ ಬಸ್ಸುಗಳು ಈಗ ಅಂಬುಲೆನ್ಸ್………..
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಪ್ರಮಾಣ ಹೆಚ್ಚುತ್ತಿರುವ ಕಾರಣ ಕೆಎಸ್‍ಆರ್‍ಟಿಸಿಯ ಮಿಡಿ ಬಸ್ಸುಗಳನ್ನು ಅಂಬುಲೆನ್ಸ್ ಗಳನ್ನಾಗಿ ಬಳಸಿಕೊಳ್ಳಲು ಸರ್ಕಾರ ನಿರ್ಧಾರ ಮಾಡಿದೆ.ಇದರ ಬಗ್ಗೆ ಮಾಹಿತಿ ನೀಡಿ ಸುತ್ತೋಲೆ ಹೊರಡಿಸಿರುವ ಕೆ.ಎಸ್.ಆರ್.ಟಿ.ಸಿ. ಈ ಅಂಬುಲೆನ್ಸ್ ಗಳಲ್ಲಿ ತುರ್ತುಸ್ಥಳದಿಂದ ರೋಗಿಯನ್ನು ತ್ವರಿತವಾಗಿ ಮತ್ತು ಸುರಕ್ಷಿತವಾಗಿ ವರ್ಗಾಹಿಸಲು ಮತ್ತು ಆಸ್ವತ್ರೆಯನ್ನು ತಲುಪಿದ ನಂತರ ತುರ್ತುಕೋಣಿಗೆ ರೋಗಿಯನ್ನು ತ್ವರಿತವಾಗಿ ಮತ್ತು ಆರಾಮದಾಯಕವಾಗಿ ತೆಗೆದುಕೊಂಡು ಹೋಗಲು ಅನುಕೂಲವಾಗುವಂತೆ 2 ಸ್ಟ್ರೆಚರ್ ಗಳನ್ನು ನಿರ್ಮಾಣ ಮಾಡಲಾಗಿದೆ. ಬ್ಯಾಂಡೇಜ್, ಕ್ರಿಮಿನಾಶಕ, …
Read More »ಉತ್ತಮ ಮಳೆ,ಅರ್ಧದಷ್ಟು ಭರ್ತಿಯಾಗಿಲ್ಲ ಜಲಾಶಯಗಳು
ಬೆಂಗಳೂರು, ಆ.5-ಪ್ರಸಕ್ತ ಮುಂಗಾರಿನಲ್ಲಿ ರಾಜ್ಯದ ಪ್ರಮುಖ ಜಲಾಶಯಗಳು ಇನ್ನೂ ಅರ್ಧದಷ್ಟು ಭರ್ತಿಯಾಗಿಲ್ಲ. ಮುಂಗಾರು ಪ್ರಾರಂಭವಾಗಿ ಎರಡು ತಿಂಗಳು ಕಳೆದರೂ ನಿರೀಕ್ಷಿತ ಪ್ರಮಾಣದಲ್ಲಿ ನೀರು ಜಲಾಶಗಳಿಗೆ ಬಂದಿಲ್ಲ. ಕೃಷ್ಣಾ ಕೊಳ್ಳದ ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳು ಮಾತ್ರ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗುವ ಹಂತಕ್ಕೆ ತಲುಪಿವೆ. ಉಳಿದ ಜಲಾಶಯಗಳು ನೀರಿನ ಕೊರತೆಯನ್ನು ಎದುರಿಸುತ್ತಿವೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಕಳೆದೆರಡು ದಿನಗಳಿಂದ ನಿರಂತರವಾಗಿ ಹೆಚ್ಚಿನ ಪ್ರಮಾಣದ ಮಳೆಯಾಗುತ್ತಿದ್ದು, ಈ ವಾರ ಒಳ ಹರಿವು …
Read More »ಸಿದ್ದರಾಮಯ್ಯ ಅವರ ಸ್ಥಿತಿಯಲೆಟಿನ್ ಬಿಡುಗಡೆಗೊಳಿಸಿದ ಮಣಿಪಾಲ್ ಆಸ್ಪತ್ರೆ
ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸ್ಥಿತಿ ಸ್ಥಿರವಾಗಿದೆ ಮತ್ತು ಪ್ರಸ್ತುತ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ. “ಪ್ರಸ್ತುತ ಅವರಿಗೆ ಜ್ವರವಿಲ್ಲ ಮತ್ತು ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಸೂಕ್ತವಾದ ಚಿಕಿತ್ಸೆಯನ್ನು ಪ್ರಾರಂಭಿಸಲಾಗಿದೆ ಮತ್ತು ಅವರನ್ನು ನಮ್ಮ ತಜ್ಞರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಆಸ್ಪತ್ರೆಗೆ ಬಂದ ನಂತರ ಅವರ ಲಕ್ಷಣಗಳು ಸುಧಾರಿಸಿದೆ ಮತ್ತು ಪ್ರಸ್ತುತ ಅವರು ಆರಾಮವಾಗಿದ್ದಾರೆ” ಎಂದು ಮಣಿಪಾಲ್ ಆಸ್ಪತ್ರೆ ಆರೋಗ್ಯ ಬುಲೆಟಿನ್ ನಲ್ಲಿ ತಿಳಿಸಿದೆ. …
Read More »ಎರಡು ದಿನಗಳಿಂದ ಗಾಳಿ ಸಮೇತ ಭಾರೀ ಮಳೆಯಾಗುತ್ತಿದೆ. ಹೀಗಾಗಿ ನದಿಗಳು ಉಕ್ಕಿ ಹರಿಯುತ್ತಿವೆ.
ಬೆಂಗಳೂರು: ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಗಾಳಿ ಸಮೇತ ಭಾರೀ ಮಳೆಯಾಗುತ್ತಿದೆ. ಹೀಗಾಗಿ ನದಿಗಳು ಉಕ್ಕಿ ಹರಿಯುತ್ತಿವೆ. ನೇತ್ರಾವತಿ, ಅಘನಾಶಿನಿ, ಕಾವೇರಿ, ಕಾಳಿ ಸೇರಿ ಬಹುತೇಕ ನದಿಗಳು ಉಕ್ಕಿ ಹರಿಯುತ್ತಿವೆ. ಮಲೆನಾಡು ಹಾಗೂ ಕರಾವಳಿ ತೀರ ಪ್ರದೇಶದಲ್ಲಿ ಜೂನ್ ಹಾಗೂ ಜುಲೈ ಆರಂಭದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಆಗಿತ್ತು. ನಂತರ ಮಳೆ ಆಗಿರಲೇ ಇಲ್ಲ. ಹೀಗಾಗಿ ರಾಜ್ಯದ ಜಲಾಶಯಗಳು ಅಂದುಕೊಂಡ ಮಟ್ಟಿಗೆ ತುಂಬಿಲ್ಲ. ಆದರೆ, ಈಗ …
Read More »ಯುಪಿಎಸ್ ಸಿಯ 1 ಸಾವಿರ ರ್ಯಾಂಕ್ ಗಳಲ್ಲಿ ರಾಜ್ಯದ ಒಟ್ಟು 37 ಜನರು
ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗ ನಡೆಸಿದ 2019 ನೇ ಸಾಲಿನ ಪ್ರತಿಷ್ಠಿತ ಯುಪಿಎಸ್ ಸಿ ಪರೀಕ್ಷೆಯಲ್ಲಿ ಪ್ರದೀಪ್ ಸಿಂಗ್ ದೇಶಕ್ಕೆ ಮೊದಲ ರ್ಯಾಂಕ್ ಪಡೆಇದ್ದಾರೆ. ಯಶಸ್ವಿನಿ.ಬಿ ರಾಜ್ಯದಲ್ಲಿ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಚಿಕ್ಕಮಗಳೂರು ಮೂಲದ ಯಶಸ್ವಿನಿ 71ನೇ ಸ್ಥಾನ ಪಡೆದು ರಾಜ್ಯಕ್ಕೆ ಮೊದಲಿಗರಾಗಿದ್ದಾರೆ. ಇನ್ನು ಎಚ್. ವಿನೋದ್ ಪಾಟೀಲ್ (132) ಹಾಗೂ ಎಚ್.ಎಸ್.ಕೀರ್ತನಾ(167) ಕ್ರಮವಾಗಿ ರಾಜ್ಯಕ್ಕೆ ಎರಡನೇ ಹಾಗೂ ಮೂರನೇ ಸ್ಥಾನ ಗಳಿಸಿದ್ದಾರೆ. ಯುಪಿಎಸ್ ಸಿಯ 1 ಸಾವಿರ ರ್ಯಾಂಕ್ …
Read More »ದೃಷ್ಟಿ ಸಮಸ್ಯೆಯುಳ್ಳ ಮೇಘನಾ, ಬಾಲನಟಿ ಕೀರ್ತನಾ ಯುಪಿಎಸ್ಸಿ ಪರೀಕ್ಷೆ ಪಾಸ್; ಡಾ.ರಾಜ್ಕುಮಾರ್ ಅಕಾಡೆಮಿಯಿಂದ 19 ಮಂದಿ ತೇರ್ಗಡೆ
ಬೆಂಗಳೂರು; ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ದೇಶದ ಅತ್ಯುನ್ನತ ನಾಗರಿಕ ಸೇವೆಗಳ ನೇಮಕಕ್ಕೆ ನಡೆಸಿದ 2019ನೇ ಸಾಲಿನ ಪರೀಕ್ಷೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ಈ ಪರೀಕ್ಷೆಯಲ್ಲಿ ಕರ್ನಾಟಕದಿಂದ ಒಟ್ಟು 37 ಮಂದಿ ತೇರ್ಗಡೆಯಾಗಿದ್ದಾರೆ. ವಿಶೇಷ ಅಂದರೆ ಈ 37 ಮಂದಿಯಲ್ಲಿ 19 ಮಂದಿ ಡಾ.ರಾಜ್ಕುಮಾರ್ ಸಿವಿಲ್ ಸರ್ವಿಸ್ ಅಕಾಡೆಮಿಯಲ್ಲಿ ತರಬೇತಿ ಇನ್ನು ವಿಶೇಷ ಅಂದರೆ ಇದೇ ಅಕಾಡೆಮಿಯಿಂದ ತೇರ್ಗಡೆಯಾದ ಯುಪಿಎಸ್ಸಿ ಪರೀಕ್ಷೆಯಲ್ಲಿ 465ನೇ ರ್ಯಾಂಕ್ ಪಡೆದಿರುವ ಮೇಘನಾ ಎಂಬುವವರಿಗೆ ಪೂರ್ಣಪ್ರಮಾಣದಲ್ಲಿ ಕಣ್ಣು ಕಾಣುವುದಿಲ್ಲ. …
Read More »ರಾಮ ಮಂದಿರ ಶಿಲಾನ್ಯಾಸ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಹೈ ಅಲರ್ಟ್..!
ಬೆಂಗಳೂರು:ಅಯೋಧ್ಯೆಯಲ್ಲಿ ನಾಳೆ ಶ್ರೀರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮ ನಡೆಯುತ್ತಿರುವ ಹಿನ್ನಲೆಯಲ್ಲಿ ರಾಜ್ಯದ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ಭಾರೀ ಭದ್ರತೆ ಕೈಗೊಳ್ಳಲಾಗಿದೆ. ರಾಜಧಾನಿ ಬೆಂಗಳೂರು,ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮೈಸೂರು, ಮಡಿಕೇರಿ, ಶಿವಮೊಗ್ಗ, ದಾವಣಗೆರೆ, ಬೆಳಗಾವಿ, ಹುಬ್ಬಳ್ಳಿ- ಧಾರವಾಡ, ಬಳ್ಳಾರಿ, ರಾಯಚೂರು, ಬಾಗಲಕೋಟೆ, ಕಲಬುರಗಿ, ಸೇರಿದಂತೆ ರಾಜ್ಯಾದ್ಯಂತ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಭದ್ರತಾ ಪಡೆಗಳನ್ನು ನಿಯೋಜನೆ ಮಾಡಬೇಕೆಂದು ಸೂಚನೆ ನೀಡಲಾಗಿದೆ. ಈ ಸಂಬಂಧ …
Read More »ಕೊರೊನಾ ಅನಾರೋಗ್ಯದ ನಡುವೆಯೂ ಕರ್ತವ್ಯ ನಿಷ್ಠೆ ಮೆರೆದ ಸಿಎಂ ಯಡಿಯೂರಪ್ಪ – ವರ್ಕ್ ಫ್ರಮ್ ಹಾಸ್ಪಿಟಲ್
ಬೆಂಗಳೂರು: ಕೊರೊನಾ ಸೋಂಕು ತಗುಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅನಾರೋಗ್ಯದ ನಡುವೆಯೂ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ. ಇವತ್ತು ಕೆಲವು ಮಹತ್ವದ ಕಡತಗಳ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಆಸ್ಪತ್ರೆಯಿಂದಲೇ ಕೆಲಸ ನಿರ್ವಹಿಸುತ್ತಿದ್ದು ಈ ಮೂಲಕ ಕೊರೊನಾ ಸೋಂಕಿತರಾಗಿ ಚಿಕಿತ್ಸೆ ಪಡೆಯುತ್ತಿದ್ದರೂ ಕರ್ತವ್ಯನಿಷ್ಠೆ ಮೆರೆಯುವ ಮೂಲಕ ರಾಜ್ಯದ ಜನತೆಗೆ ಸಂದೇಶ ರವಾನಿಸಿದ್ದಾರೆ. ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವ ಸಿಎಂ ಸರ್ಕಾರಿ ಕಚೇರಿ ಕೆಲಸ ಕಾರ್ಯಗಳಿಗೆ ಯಾವುದೇ …
Read More »24ಗಂಟೆಯಲ್ಲಿ ಪತ್ತೆಯಾದ ಹೊಸ ಕರೊನಾ ಪ್ರಕರಣಗಳಿಗಿಂತ ಡಿಸ್ಚಾರ್ಜ್ ಆದವರೇ ಹೆಚ್ಚು; 110 ಮಂದಿ ಸಾವು
ಬೆಂಗಳೂರು: ರಾಜ್ಯದಲ್ಲಿ ಕರೊನಾದಿಂದ ಚೇತರಿಕೆ ಕಾಣುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವುದು ಸಮಾಧಾನ ಮೂಡಿಸಿದೆ. ಕಳೆದ 24 ಗಂಟೆಯಲ್ಲಿ ಹೊಸ ಕರೊನಾ ಪ್ರಕರಣಗಳಿಗಿಂತ, ಸೋಂಕಿನಿಂದ ಮುಕ್ತರಾಗಿ ಡಿಸ್ಚಾರ್ಜ್ ಆದವರ ಸಂಖ್ಯೆಯೇ ತುಸು ಜಾಸ್ತಿ ಇದೆ. 24 ಗಂಟೆಯಲ್ಲಿ 6,259 ಹೊಸ ಕರೊನಾ ಕೇಸ್ಗಳು ಪತ್ತೆಯಾಗಿದ್ದು, ಒಟ್ಟು 6,777 ಮಂದಿ ಗುಣಮುಖರಾಗಿ, ಡಿಸ್ಚಾರ್ಜ್ ಆಗಿದ್ದಾರೆ. 110 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇಲ್ಲಿಯವರೆಗಿನ ಕರೊನಾ ಸೋಂಕಿತರ ಸಂಖ್ಯೆ 1,45.830ಕ್ಕೆ ಏರಿಕೆಯಾಗಿದ್ದು, ಮೃತಪಟ್ಟವರ ಸಂಖ್ಯೆ 2704. ಹಾಗೇ ಡಿಸ್ಚಾರ್ಜ್ …
Read More »