Breaking News

ಬೆಂಗಳೂರು

ಟಿಪ್ಪು ಸುಲ್ತಾನ್ ಕುರಿತ ಅಧ್ಯಾಯವನ್ನು ಪಠ್ಯಪುಸ್ತಕಗಳಿಂದ ಕೈಬಿಡುವ ನಿರ್ಧಾರ ಬದಲಿಸಿದ ಸರ್ಕಾರ

ಬೆಂಗಳೂರು: ಶೇಕಡಾ 30ರಷ್ಟು ಪಠ್ಯವನ್ನು ಕಡಿತಗೊಳಿಸುವ ನಿರ್ಧಾರವನ್ನು ಸರ್ಕಾರ ಬದಲಿಸಿದ್ದು ಟಿಪ್ಪು ಸುಲ್ತಾನ್ (Tippu Sultan) ಮತ್ತು ಸಂವಿಧಾನದ ಬಗ್ಗೆ ಪಠ್ಯ ಕಡಿತ ಮಾಡಿದ ವಿವಾದ ಹಿನ್ನೆಲೆಯಲ್ಲಿ ಪರಿಷ್ಕೃತ ಪಠ್ಯ ಹಿಂಪಡೆಯಲು ಸರ್ಕಾರ ಸೂಚನೆ ನೀಡಿದೆ ಎಂದು ಹೇಳಲಾಗಿದೆ.  ಮೈಸೂರು  ಹುಲಿ ಖ್ಯಾತಿಯ ಟಿಪ್ಪು ಸುಲ್ತಾನ್, ಹೈದರ್ ಅಲಿಗೆ ಸಂಬಂಧಿಸಿದ ಹಲವಾರು ಅಧ್ಯಾಯಗಳನ್ನು 7 ನೇ ತರಗತಿಯ ಪಠ್ಯಪುಸ್ತಕದಿಂದ ಕೈಬಿಟ್ಟಿದ್ದಕ್ಕಾಗಿ ತೀವ್ರ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಸದ್ಯಕ್ಕೆ ಪಠ್ಯ ಕಡಿತ …

Read More »

ನವೆಂಬರ್ ವರೆಗೂ ಅಕ್ಕಿ ವಿತರಣೆಗೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಪತ್ರ

ಬೆಂಗಳೂರು,ಜು.31-ಬಿಪಿಎಲ್ ಕಾರ್ಡ್ ಇಲ್ಲದವರು ಹಾಗೂ ಎಪಿಎಲ್ ಕಾರ್ಡ್ ಹೊಂದಿರುವವರಿಗೆ, ಮುಖ್ಯವಾಗಿ ವಲಸಿಗರಿಗೆ ನವೆಂಬರ್‍ವರೆಗೆ ಅಕ್ಕಿ ಮತ್ತು ಧಾನ್ಯಗಳನ್ನು ವಿತರಿಸಬೇಕೆಂದು ರಾಜ್ಯ ಬಿಜೆಪಿ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ರಾಜ್ಯ ಸರ್ಕಾರವು ತನ್ನ ಗೋದಾಮಿನಲ್ಲಿ 28 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ಹೊಂದಿದ್ದು, ಇದು ಎರಡು ತಿಂಗಳವರೆಗೆ ಮಾತ್ರ ಸಾಕಾಗಲಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ಈ ಸಂಬಂಧ ಕೇಂದ್ರದ ಸಂಬಂಧಪಟ್ಟ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಈ …

Read More »

ಸಿ.ಪಿ ಯೋಗೇಶ್ವರ್‌ಗೆ ಸಿಎಂ ಬಿಎಸ್‍ವೈ ಖಡಕ್ ವಾರ್ನಿಂಗ್…………

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ವಿರುದ್ಧ ಅಡ್ಜೆಸ್ಟ್ ಮೆಂಟ್ ಪಾಲಿಟಿಕ್ಸ್ ಆರೋಪ ಮಾಡಿರುವ ಸಿಪಿ ಯೋಗೇಶ್ವರ್‌ಗೆ ಸಿಎಂ ಯಡಿಯೂರಪ್ಪ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಪಕ್ಷ, ಸರ್ಕಾರಕ್ಕೆ ಮುಜುಗರ ಆಗುವಂಥ ಹೇಳಿಕೆ ಕೊಡಬೇಡಿ. ಕೊರೊನಾ ಸಮಯದಲ್ಲಿ ಅನಗತ್ಯ ಹೇಳಿಕೆ ಕೊಡಬೇಡಿ. ನಿಮ್ಮ ಕಿತ್ತಾಟ ಕ್ಷೇತ್ರದ ಮಟ್ಟಿಗೆ ಇಟ್ಕೊಳ್ಳಿ. ಸುಮ್ನೆ ನಿಮ್ ಜಂಜಾಟದಲ್ಲಿ ನಮ್ಮನ್ನ್ಯಾಕೆ ಎಳೀತೀರಾ ಅಂದಿದ್ದಾರೆ ಅಂತ ತಿಳಿದುಬಂದಿದೆ. ಸಚಿವ ಸಂಪುಟ ವಿಸ್ತರಣೆ ಚರ್ಚೆ ಬೆನ್ನಲ್ಲೇ …

Read More »

ಶಿಕ್ಷಕರ ವರ್ಗಾವಣೆಗೆ ಮುಹೂರ್ತ ಫಿಕ್ಸ್ :ಸಚಿವ ಸುರೇಶ್ ಕುಮಾರ್

ಬೆಂಗಳೂರು :  ಶಿಕ್ಷಕರ ವರ್ಗಾವಣೆ ಸಂಬಂಧ ಇತ್ತೀಚೆಗೆ ರಾಜ್ಯ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಕೂಡ ಹೊರಡಿಸಿತ್ತು. ಈಗ ಅಧಿಕಾರಿಗಳ ಸಭೆಯಲ್ಲಿ ಆಗಸ್ಟ್ ನಲ್ಲಿ ಶಿಕ್ಷಕರ ವರ್ಗಾವಣಾ ವೇಳಾಪಟ್ಟಿ ಸಿದ್ಧಗೊಳಿಸಿ, ಪ್ರಕಟಿಸುವಂತೆ ಅಧಿಕಾರಿಗಳಿಗೆ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚಿಸಿದ್ದಾರೆ. ಶಿಕ್ಷಕರ ವರ್ಗಾವಣೆಯ ಸಂಬಂಧ ನಿಯಮಗಳನ್ನು ಶಿಕ್ಷಣ ಇಲಾಖೆ ಅಂತಿಮಗೊಳಿಸಿ. ಈ ಕಾಯ್ದೆಗೆ ಈಗಾಗಲೇ ಅಧಿವೇಶನದಲ್ಲೂ ಅನುಮೋದನೆ ದೊರೆತಿದೆ. ಹೀಗಾಗಿ ಕೂಡಲೇ ಶಿಕ್ಷಕರ ವರ್ಗಾವಣಾ ವೇಳಾಪಟ್ಟಿಯನ್ನು ಪ್ರಕಟಿಸಬೇಕು ಎಂಬುದಾಗಿ ಇಂದು …

Read More »

ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನಿರಾಕರಿಸಿದೆ.ಮನೆಗಳಲ್ಲಿ ಮಾತ್ರ ಗಣೇಶ ಪ್ರತಿಷ್ಠಾಪನೆ ಮಾಡಿ ಹಬ್ಬ ಆಚರಿಸಬಹುದು.

ಬೆಂಗಳೂರು : ನಗರದಲ್ಲಿ ಕೊರೊನಾ ಸೋಂಕಿತರು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನಿರಾಕರಿಸಿದೆ. ಒಂದು ವೇಳೆ ಆದೇಶ ಉಲ್ಲಂಘಿಸಿ ಸಾರ್ವಜನಿಕ ಪ್ರದೇಶದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡುವವರ ವಿರುದ್ಧವೂ ಡಿಸಾಸ್ಟರ್ ಮ್ಯಾನೇಜ್‍ಮೆಂಟ್ ಆ್ಯಕ್ಟ್ ಅಡಿ ಪ್ರಕರಣ ದಾಖಲಿಸಲಾಗುವುದು ಎಂದು ಮಂಜುನಾಥ್ ಪ್ರಸಾದ್ ಎಚ್ಚರಿಸಿದ್ದಾರೆ. ಸಾರ್ವಜನಿಕರು ಮನೆಗಳಲ್ಲಿ ಮಾತ್ರ ಗಣೇಶ ಪ್ರತಿಷ್ಠಾಪನೆ ಮಾಡಿ ಹಬ್ಬ ಆಚರಿಸಬಹುದು. ಪರಿಸರ ಸ್ನೇಹಿ ಗಣಪನಿಗೆ ಮಾತ್ರ ಅವಕಾಶ. ಬಿಬಿಎಂಪಿ ಕೆರೆಗಳು, ಕಲ್ಯಾಣಿಗಳಲ್ಲಿ ಗಣೇಶ …

Read More »

ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ವರ್ಗಾವಣೆ

ಬೆಂಗಳೂರು: ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರ ಒಂದು ವರ್ಷದ ಅವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರ ಕಮಲ್ ಪಂಥ್ ಅವರನ್ನು ನೂತನ ಆಯುಕ್ತರನ್ನಾಗಿ ನೇಮಿಸಿ ಆದೇಶ ನೀಡಿದೆ. ಭಾಸ್ಕರ್ ರಾವ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಆಗಿ ವಗಾವಣೆ ಮಾಡಲಾಗಿದೆ. ಉಳಿದಂತೆ ಕಮಲ್ ಪಂಥ್ ಜಾಗಕ್ಕೆ ದಯಾನಂದ ಅವರನ್ನು ಗುಪ್ತಚರ ಇಲಾಖೆಯ ಎಡಿಜಿಪಿ ಆಗಿ ನೇಮಕ ಮಾಡಲಾಗಿದೆ. ಆ.1ಕ್ಕೆ ಭಾಸ್ಕರ್ ರಾವ್ ಅವರು ಆಯುಕ್ತರಾಗಿ ಒಂದು ವರ್ಷ …

Read More »

ಚಿಕಿತ್ಸೆ ಸಿಗದೆ ಆರು ದಿನದ ಬಾಣಂತಿ ಕೊರೊನಾಗೆ ಬಲಿ

ಬೆಂಗಳೂರು: ಆಸ್ಪತ್ರೆಯಲ್ಲಿ ಬೆಡ್ ಸಿಗದೆ 6 ದಿನದ ಬಾಣಂತಿ ಕೊರೊನಾಗೆ ಬಲಿಯಾಗಿರುವ ಅಮಾನವೀಯ ಘಟನೆ ರಾಜಾಜಿನಗರದಲ್ಲಿ ನಡೆದಿದೆ. ರಾಜಾಜಿನಗರ ಖಾಸಗಿ ಆಸ್ಪತ್ರೆಯಲ್ಲಿ 6 ದಿನಗಳ ಹಿಂದೆ ಗರ್ಭಿಣಿ ಮಗುವಿಗೆ ಜನ್ಮ ನೀಡಿದ್ದರು. ನಿನ್ನೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದರು. ಆದರೆ ಮನೆಗೆ ತೆರಳಿದ ಸಂದರ್ಭದಲ್ಲಿ ಮಹಿಳೆಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಕೂಡಲೇ ಬಾಣಂತಿಯನ್ನು ಕುಟುಂಬಸ್ಥರು ಖಾಸಗಿ ಆಸ್ಪತ್ರೆಗೆ ಕರೆತಂದಿದ್ದರು. ಈ ಸಂದರ್ಭದಲ್ಲಿ ಅವರಿಗೆ ಆ್ಯಂಟಿಜೆನ್‌ ಟೆಸ್ಟ್ ಮಾಡಿದ ವೇಳೆ …

Read More »

ಆಗಸ್ಟ್ 5ರಿಂದ ಯೋಗ, ಜಿಮ್ ಓಪನ್ ಸೇರಿದಂತೆ ಆಗಸ್ಟ್ 31ರವರೆಗೆ ಶಾಲೆ ಕಾಲೇಜ್ ನಿರ್ಬಂಧ

ಬೆಂಗಳೂರು: ಕೇಂದ್ರ ಸರ್ಕಾರ ಅನ್‍ಲಾಕ್ 3ಗೆ ಮಾರ್ಗಸೂಚಿ ಪ್ರಕಟಿಸಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಯಥಾವತ್ತಾಗಿ ಜಾರಿಗೆ ತರಲು ನಿರ್ಧರಿಸಿದೆ. ಇದರ ಜೊತೆಗೆ ಸಂಡೇ ಲಾಕ್‍ಡೌನ್, ಶನಿವಾರ ರಜೆ ದಿನವನ್ನೂ ರದ್ದುಗೊಳಿಸಿದೆ.ಕೇಂದ್ರದ ಮಾರ್ಗಸೂಚಿಯಂತೆ ಆಗಸ್ಟ್ 1ರಿಂದ ನೈಟ್ ಕರ್ಫ್ಯೂ ರದ್ದು, ಆಗಸ್ಟ್ 5ರಿಂದ ಯೋಗ, ಜಿಮ್ ಓಪನ್ ಸೇರಿದಂತೆ ಆಗಸ್ಟ್ 31ರವರೆಗೆ ಶಾಲೆ ಕಾಲೇಜ್ ನಿರ್ಬಂಧ ಮುಂದುವರಿಕೆಯನ್ನು ಪಾಲಿಸಿದೆ. ಜೊತೆಗೆ ಥಿಯೇಟರ್, ಬಾರ್, ರೆಸ್ಟೋರೆಂಟ್, ಮೆಟ್ರೋಗೆ ಅವಕಾಶ ಇಲ್ಲ ರಾಜಕೀಯ, ಧಾರ್ಮಿಕ …

Read More »

ವಿಕ್ಟೋರಿಯಾ ಆಸ್ಪತ್ರೆ ಸಿಬ್ಬಂದಿಗಳು ಇಂದು ಬೆಳಗ್ಗೆ ಪಿಪಿಇ ಕಿಟ್ ಧರಿಸಿ ಸಂಕೇತಿಕ ಪ್ರತಿಭಟನೆ

ಬೆಂಗಳೂರು: ನಗರದ ವಿಕ್ಟೋರಿಯಾ ಆಸ್ಪತ್ರೆ ಸಿಬ್ಬಂದಿಗಳು ಇಂದು ಬೆಳಗ್ಗೆ ಪಿಪಿಇ ಕಿಟ್ ಧರಿಸಿ ಸಂಕೇತಿಕ ಪ್ರತಿಭಟನೆ ನಡೆಸಿದ್ದಾರೆ. ಪಿಂಚಣಿ ಯೋಜನೆ, ಜ್ಯೋತಿ ಸಂಜೀವಿನಿ ವಿಮೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗಿದ್ದು, ಆಸ್ಪತ್ರೆ ಹೊರ ಆವರಣದಲ್ಲಿ ಪಿಪಿಇ ಕಿಟ್ ಧರಿಸಿ ಆಗಮಿಸಿದ್ದ ಖಾಯಂ ಶುಶ್ರೂಷಕರು ಪ್ರತಿಭಟನೆ ನಡೆಸಿದರು. ಕೈಯಲ್ಲಿ ತಮ್ಮ ಬೇಡಿಕೆ ಆಗ್ರಹಿಸಿ ಪ್ರದರ್ಶನ ಫಲಕಗಳನ್ನು ಹಿಡಿದು ಪ್ರತಿಭಟನೆ ಮಾಡಿದರು. ಸರ್ಕಾರ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗೆ ಹಲವು ದಿನಗಳಿಂದ ಸಿಬ್ಬಂದಿ ಮನವಿ …

Read More »

ಕೋವಿಡ್-19: ಪ್ರತೀ ದಿನ ತನ್ನ ದಾಖಲೆಯನ್ನು ತಾನೇ ಮುರಿಯುತ್ತಿರುವ ಕರ್ನಾಟಕ, ಕೊರೋನಾ ಪಾಸಿಟಿವ್ ದುಪ್ಪಟ್ಟು!

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಅಬ್ಬರ ಹೆಚ್ಚಾಗುತ್ತಲೇ ಇದ್ದು, ಪ್ರತೀನಿತ್ಯ ಕರ್ನಾಟಕ ತನ್ನ ದಾಖಲೆಯನ್ನು ತಾನೇ ಮುರಿಯುತ್ತಿದೆ. ರಾಜ್ಯದಲ್ಲಿ ಸೋಂಕಿನ ಸರಾಸರಿ ಪಾಸಿಟಿವಿಟಿ ಪ್ರಮಾಣ ದುಪ್ಪಟ್ಟಾಗಿದೆ. ಕಳೆದ ಜು.10ರವರೆಗೆ ಪ್ರತಿ 100 ಪರೀಕ್ಷೆಗಳಲ್ಲಿ ಸರಾಸರಿ ಶೇ.4.18ರಷ್ಟಿದ್ದ ಪಾಸಿಟಿವಿಟಿ ದರ ಇದೀಗ ಶೇ.8.60ಕ್ಕೆ ಏರಿಕೆಯಾಗಿದೆ. ಅಲ್ಲದೆ, ಕಳೆದ 18 ದಿನಗಳಲ್ಲಿ ಪ್ರತಿ 100 ಪರೀಕ್ಷೆಗಳಲ್ಲಿ ಸರಾಸರಿ ಶೇ.16.88 ಮಂದಿಗೆ ಸೋಂಕು ದೃಢಪಡುವ ಮೂಲಕ ಆತಂಕ ಹೆಚ್ಚಾಗುವಂತೆ ಮಾಡಿದೆ. ರಾಜ್ಯದಲ್ಲಿ ಜು.10ರವರೆಗೆ ಪಾಸಿಟಿವಿಟಿ …

Read More »