ಬೆಂಗಳೂರು: ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಚುರುಕಾಗಿದೆ. ಇದರ ನಡುವೆಯೇ ನಿಗಮ ಮಂಡಳಿಗಳ ನೇಮಕ ಮಾಡಿ ಆದೇಶ ನೀಡಿದ್ದ ಸಿಎಂ ಪರೋಕ್ಷವಾಗಿ ಸಚಿವ ಸಂಪುಟ ಪುನಾರಚನೆಗೆ ಸೂಚನೆ ನೀಡಿದ್ದಾರೆ ಎನ್ನಲಾಗಿತ್ತು. ಇದರ ನಡುವೆಯೇ ಸಚಿನ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ದೆಹಲಿಗೆ ಭೇಟಿ ನೀಡಿದ್ದಾರೆ. ನಿನ್ನೆ ರಾತ್ರಿಯೇ ದೆಹಲಿಗೆ ಭೇಟಿ ನೀಡಿರುವ …
Read More »ಅನುಷ್ಕಾಳನ್ನು ಭೇಟಿಯಾಗದಿದ್ದರೆ ನಾನು ಬದಲಾಗುತ್ತಿರಲಿಲ್ಲ: ಪತ್ನಿಯನ್ನು ಹಾಡಿಹೊಗಳಿದ ವಿರಾಟ್
ನವದೆಹಲಿ: ಅನುಷ್ಕಾಳನ್ನು ಭೇಟಿಯಾಗದಿದ್ದರೆ ಜೀವನದಲ್ಲಿ ನಾನು ಬದಲಾಗುತ್ತಿರಲಿಲ್ಲ ಎಂದು ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಹೇಳಿದ್ದಾರೆ. ಕೊರೊನಾ ಲಾಕ್‍ಡೌನ್ ನಂತರ ಭಾರತ ಕ್ರಿಕೆಟ್ ತಂಡ ಯಾವುದೇ ಕ್ರಿಕೆಟ್ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ. ಹೀಗಾಗಿ ಮನೆಯಲ್ಲೇ ಉಳಿದಿರುವ ಆಟಗಾರರು ಸಾಮಾಜಿಕ ಜಾಲತಾಣದಲ್ಲಿ ಸಖತ್ ಸಕ್ರಿಯವಾಗಿ ಇದ್ದಾರೆ. ಈಗ ಕನ್ನಡಿಗ ಮಯಾಂಕ್ ಅಗರ್ವಾಲ್ ಅವರು ಜೊತೆ ‘ಓಫನ್ ನೆಟ್ಸ್ ವಿತ್ ಅಗರ್ವಾಲ್’ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿರುವ ವಿರಾಟ್, ಪತ್ನಿಯನ್ನು ಹಾಡಿಹೊಗಳಿದ್ದಾರೆ …
Read More »C.M. ಆಗ್ತಾರಾ ಲಕ್ಷ್ಮಣ ಸವದಿ ಎಂಬುದಕ್ಕೆ ಅವರೇ ಉತ್ತರ ಕೊಟ್ಟಿದ್ದಾರೆ……..!
ಬೆಂಗಳೂರು: ದೆಹಲಿ ಭೇಟಿ ಕುರಿತು ಸ್ಪಷ್ಟೀಕರಣ ನೀಡಿರುವ ಡಿಸಿಎಂ ಲಕ್ಷಣ ಸವದಿ ನಾವೆಲ್ಲರೂ ಪಕ್ಷಕ್ಕೆ ನಿಷ್ಠರು ಹಾಗೂ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರು.ಅನಗತ್ಯವಾದ ಪ್ರಚಾರ ಬೇಡ ಎಂದು ಅಭಿಮಾನಿಗಳಲ್ಲಿ ಹಾಗೂ ಮಾಧ್ಯಮ ಮಿತ್ರರಲ್ಲಿ ಮನವಿ ಮಾಡಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣಗಳ ಖಾತೆ ಮೂಲಕ ಈ ಕುರಿತು ಬರೆದುಕೊಂಡಿರುವ ಅವರು ನನ್ನ ದೆಹಲಿ ಭೇಟಿಯ ಬಗ್ಗೆ ಅನಗತ್ಯವಾದ ಪ್ರಚಾರ ಬೇಡ ದೆಹಲಿಯಲ್ಲಿ ವರಿಷ್ಠರೊಂದಿಗಿನ ಭೇಟಿ ಪೂರ್ವ ನಿರ್ಧಾರಿತವಾಗಿದ್ದ ಕಾರ್ಯಕ್ರಮ ಅದರ ಬಗ್ಗೆ …
Read More »ಮನೆಯಲ್ಲಿ ಜೂಜಾಟ ವಾಡುವಾಗ ಸಿಕ್ಕಿಬಿದ್ದ ಖ್ಯಾತ ನಟ.
ಚೆನ್ನೈ: ಕೊರೊನಾ ನಿಯಂತ್ರಣಕ್ಕಾಗಿ ವಿಧಿಸಿರುವ ಲಾಕ್‍ಡೌನ್ ನಿಯಮವನ್ನು ಉಲ್ಲಂಘನೆ ಮಾಡಿ ಮನೆಯಲ್ಲಿಯೇ ಜೂಜಾಟ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ದಕ್ಷಿಣ ಭಾರತದ ಖ್ಯಾತ ಸೇರಿ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಖ್ಯಾತ ನಟ ಶ್ಯಾಮ್ ನುಂಗಂಬಕ್ಕಂ ಪ್ರದೇಶದ ಸಮೀಪವಿರುವ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಜೂಜಾಟ ಆಡುತ್ತಿದ್ದರು. ಅಲ್ಲದೇ ಈ ಜೂಜಾಟದಲ್ಲಿ ತಮಿಳು ನಟರೊಬ್ಬರು ಹಣ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಖಚಿತ ಮಾಹಿತಿ ಮೇರೆಗೆ ಪೊಲೀಸರು ನಟನ ಅಪಾರ್ಟ್‌ಮೆಂಟ್ ಮೇಲೆ ದಾಳಿ ಮಾಡಿದ್ದಾರೆ. …
Read More »ವರಮಹಾಲಕ್ಷ್ಮಿ ಹಬ್ಬಕ್ಕೆ ಅಪ್ಪು ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್
ಬೆಂಗಳೂರು: ಪವರ್‍ಸ್ಟಾರ್ ಪುನೀತ್ ರಾಜ್‍ಕುಮಾರ್ ಹಾಗೂ ಸಂತೋಷ್ ಆನಂದ್‍ರಾಮ್ ಕಾಂಬಿನೇಷನ್ ಸಿನಿಮಾ ‘ಯುವರತ್ನ’ ಈಗಾಗಲೇ ಬಿಡುಗಡೆಯಾಗಬೇಕಿತ್ತು. ಆದರೆ ಕೊರೊನಾ ವೈರಸ್ ಎಂಬ ಮಹಾಮಾರಿಯಿಂದಾಗಿ ಅನಿವಾರ್ಯವಾಗಿ ಮುಂದೂಡಲಾಗಿದೆ. ಈ ಮಧ್ಯೆ ನಿರ್ದೇಶಕ ಸಂತೋಷ್ ಅವರು ಟ್ವೀಟ್ ಮಾಡಿ, ಅಭಿಮಾನಿಗಳ ಕೋರಿಕೆಗಾಗಿ “ಯುವರತ್ನ” ಪೋಸ್ಟರ್ ವರಮಹಾಲಕ್ಷ್ಮಿಗೆ ದೊಡ್ಮನೆ ಅಭಿಮಾನಿ ಬಳಗಕ್ಕೆ ಇದು ಸಮರ್ಪಣೆ ಎಂದು ಬರೆದುಕೊಂಡಿದ್ದಾರೆ.ಕೊರೊನಾ ಭೀತಿ ಎದುರಾಗದಿದ್ದಲ್ಲಿ ಏಪ್ರಿಲ್ 3ಕ್ಕೆ ಸಿನಿಮಾ ಬಿಡುಗಡೆಯಾಗುತ್ತಿತ್ತು. ಸಿನಿಮಾ ಬಿಡುಗಡೆ ಕುರಿತು ನಿರ್ದೇಶಕ ಸಂತೋಷ್ ಆನಂದರಾಮ್ …
Read More »ನಾಳೆ ಸಿಎಂ ಯಡಿಯೂರಪ್ಪನವರ ಕಾವೇರಿ ನಿವಾಸಕ್ಕೆ ಮುತ್ತಿಗೆ ಹಾಕಲು ತೀರ್ಮಾನಿಸಿದ್ದಾರೆ.ಆಶಾ ಕಾರ್ಯಕರ್ತರು
ಬೆಂಗಳೂರು,ಜು.28-ಮಾಸಿಕ ಗೌರವ ಧನ ಹೆಚ್ಚಳ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಆಶಾ ಕಾರ್ಯಕರ್ತರು ನಾಳೆ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲಿದ್ದಾರೆ. ಕಳೆದ 19 ದಿನಗಳಿಂದ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ನಾಳೆ ಸಿಎಂ ಯಡಿಯೂರಪ್ಪನವರ ಕಾವೇರಿ ನಿವಾಸಕ್ಕೆ ಮುತ್ತಿಗೆ ಹಾಕಲು ತೀರ್ಮಾನಿಸಿದ್ದಾರೆ. ಮಾಸಿಕ ಗೌರವಧನವನ್ನು 12 ಸಾವಿರ ರೂ.ಗೆ ಹೆಚ್ಚಳ ಮಾಡುವುದು, ಕೋವಿಡ್ ವಿರುದ್ಧದ ಹೋರಾಟಕ್ಕೆ ಅಗತ್ಯವಿರುವಷ್ಟು ಸುರಕ್ಷತಾ ಸಾಮಾಗ್ರಿಗಳನ್ನು …
Read More »ಸುರಕ್ಷಿತ ವಾತಾವರಣ ಇರೋ ಕಡೆ ತರಗತಿ ಪ್ರಾರಂಭಿಸಿದರೆ ತಪ್ಪೇನು ಇಲ್ಲʼ
ಬೆಂಗಳೂರು: ಸುರಕ್ಷಿತ ವಾತಾವರಣವೆಂದು ಕಂಡುಬಂದ ಕಡೆಗಳಲ್ಲಿ ಶಾಲಾ ತರಗತಿಗಳನ್ನೇ ಪ್ರಾರಂಭಿಸಿದರೆ ತಪ್ಪೇನು ಇಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಕೊರೊನಾ ಸಾಮಾಜಿಕ ಸಂದರ್ಭದಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣ ಮತ್ತು ಶಾಲಾ ಚಟುವಟಿಕೆಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಮಂಗಳವಾರ ಶೈಕ್ಷಣಿಕ ವಲಯದಲ್ಲಿ ತೊಡಗಿಸಿಕೊಂಡಿರುವ 36ಕ್ಕೂ ಹೆಚ್ಚು ಸರ್ಕಾರೇತರ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಚಿವ ಸುರೇಶ್ ಕುಮಾರ್ ಸಂವಾದ ನಡೆಸಿದರು ಅಜೀಂ ಪ್ರೇಮ್‍ಜಿ ಪ್ರತಿಷ್ಠಾನ, ಗ್ರಾಮ್ಸ್, ಅಕ್ಷರ ಫೌಂಡೇಷನ್, ಯೂನಿಸೆಫ್, ಶಿಕ್ಷಣ, ಸಿಇಇ (ವಾಷ್ ಪ್ರೋಗ್ರಾಂ), ಪೋರ್ತ್ ಫೌಂಡೇಷನ್, …
Read More »ರಾಜ್ಯದಲ್ಲಿ ಇಂದು 5,536 ಮಂದಿಗೆ ಕೊರೊನಾ – ಬೆಂಗ್ಳೂರಿನಲ್ಲಿ 1,898 ಜನರಿಗೆ ಸೋಂಕು, 102 ಬಲಿ
ಬೆಂಗಳೂರು: ರಾಜ್ಯದಲ್ಲಿ ಕಳೆದ ಆರು ದಿನಗಳಿಂದ 5 ಸಾವಿರಕ್ಕೂ ಅಧಿಕ ಮಂದಿಗೆ ಕೊರೊನಾ ಸೋಂಕು ಬರುತ್ತಿದೆ. ಇಂದು ಕೂಡ ಒಟ್ಟು 5,536 ಮಂದಿಗೆ ಸೋಂಕು ತಗುಲಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಒಂದು ಲಕ್ಷ ಗಡಿ ದಾಟಿದೆ. ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ಅನ್ವಯ ಕೋವಿಡ್ ಸೋಂಕಿತರ ಸಂಖ್ಯೆ 1,07,001ಕ್ಕೆ ಏರಿದೆ. ಇಂದು 102 ಮಂದಿ ಮೃತಪಟ್ಟಿದ್ದಾರೆ. ಇಲ್ಲಿಯವರೆಗೆ 2,055 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಂದು …
Read More »ಜೈಲಿನಲ್ಲೇ ಮರ್ಡರ್ಗೆ ಸ್ಕೆಚ್; ₹1 ಕೋಟಿ ಸುಪಾರಿ ಪಡೆದಿದ್ದ ಆರೋಪಿಗಳು ಅರೆಸ್ಟ್
ಬೆಂಗಳೂರು: ಜೈಲಿನಲ್ಲೇ ಇದ್ದು ಮರ್ಡರ್ ಮಾಡೋಕೆ ಸ್ಕೆಚ್ ಹಾಕಿದ್ದ ಖತರ್ನಾಕ್ ಗ್ಯಾಂಗ್ನ ಒಂಬತ್ತು ಜನ ಆರೋಪಿಗಳನ್ನು ಪೊಲೀಸರು ಹೆರೆಮುರಿ ಕಟ್ಟಿದ್ದಾರೆ. ಕಾಮಾಕ್ಷಿಪಾಳ್ಯ ನಿವಾಸಿ ವರಲಕ್ಷ್ಮೀ ಎಂಬುವವರ ಪತಿ ಗೋವಿಂದೇ ಗೌಡನ ಹತ್ಯೆಯ ಪ್ರತೀಕಾರವಾಗಿ ಕೊಲೆ ಮಾಡಿದ ಆರೋಪಿಗಳ ಹತ್ಯೆಗೆ ವರಲಕ್ಷ್ಮೀ ಸುಪಾರಿ ನೀಡಿದ್ದರು ಎನ್ನಲಾಗಿದೆ. ವರಲಕ್ಷ್ಮೀ ಹಾಗೂ ಗೋವಿಂದೇಗೌಡನಿಗೆ ಆತ್ಮೀಯನಾಗಿದ್ದ ಚಿಕ್ಕತಿಮ್ಮೇಗೌಡ, ತಾನು ಬೆಳೆಯುತ್ತಿದ್ದಂತೆ ಇಬ್ಬರನ್ನ ದೂರ ಮಾಡಿದ್ದ. ವರಲಕ್ಷ್ಮೀ ದಂಪತಿಗೆ ಮಕ್ಕಳಿಲ್ಲದ ಕಾರಣ ಚಿಕ್ಕತಿಮ್ಮೇಗೌಡನನ್ನು ಬೆಳೆಸಿ, ಆತನಿಗೆ ಒಳ್ಳೆಯ …
Read More »ಹೋಟೆಲ್ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಮೂವರು ಅರೆಸ್ಟ್
ಬೆಂಗಳೂರು: ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಗೌರವ್, ಹೀನಾ ಹಾಗೂ ಅಣ್ಣಪ್ಪ ಬಂಧಿತರು. ಆರೋಪಿಗಳು ಲಾಡ್ಜ್ ನಡೆಸಲು ಪರವಾನಗಿ ಪಡೆದು ಅನಧಿಕೃತವಾಗಿ ವೇಶ್ಯಾವಾಟಿಕೆಗೆ ಇಳಿದಿದ್ದರು. ಕೆಲಸದ ಆಮಿಷವೊಡ್ಡಿ ಹೊರರಾಜ್ಯದಿಂದ ಹುಡುಗಿಯರನ್ನು ಕರೆಯಿಸಿ ಕಂಫರ್ಟ್ ಹೋಟೆಲ್ನಲ್ಲಿ ದಂಧೆ ನಡೆಸುತ್ತಿದ್ದರು. ಆನ್ಲೈನ್ನಲ್ಲಿ ಮೊಬೈಲ್ ನಂಬರ್ ಹಾಕಿಕೊಂಡು, ಟೆಲಿಕಾಲರ್ ಮೂಲಕ ಗಿರಾಕಿಗಳನ್ನ ಕರೆಸುತ್ತಿದ್ದರು. ಇದು ಯಾರಿಗೂ ಗೊತ್ತಾಗದಂತೆ ಒಂದೊಂದು ನಂಬರ್ ಯ್ಯೂಸ್ ಮಾಡುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಖಚಿತ …
Read More »