Breaking News

ಬೆಂಗಳೂರು

ಪ್ರತಿ ಭಾನುವಾರ ಸಿಎಂಗೆ ನಡೀತಿತ್ತು ಕೊರೊನಾ ಟೆಸ್ಟ್‌……….

ಬೆಂಗಳೂರು: ಸಿಎಂ ಯಡಿಯೂರಪ್ಪನವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಯಡಿಯೂರಪ್ಪನವರು ಪ್ರತಿ ದಿನ ಕೊರೊನಾ ನಿಯಂತ್ರಣ ಸಂಬಂಧ ಅಧಿಕಾರಿಗಳು, ತಜ್ಞರ ಜೊತೆ ಸಭೆ ನಡೆಸುತ್ತಿದ್ದರು. ಅಷ್ಟೇ ಅಲ್ಲದೇ ಪ್ರತಿ ದಿನ ಸಿಎಂ ಭೇಟಿಗೆ ಗಣ್ಯರು ಸಹ ಆಗಮಿಸುತ್ತಿದ್ದರು. ಹೀಗಾಗಿ ಪ್ರತಿ ಭಾನುವಾರ ಸಿಎಂಗೆ ಕೋವಿಡ್‌ ಪರೀಕ್ಷೆ ನಡೆಯುತ್ತಿತ್ತು. ನಿನ್ನೆ ನಡೆದ ಪರೀಕ್ಷೆಯಲ್ಲಿ ಪಾಸಿಟಿವ್‌ ಬಂದಿದೆ. ಭಾನುವಾರ ರಾತ್ರಿ ಟ್ವೀಟ್‌ ಮಾಡಿದ್ದ ಸಿಎಂ, ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ …

Read More »

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೂ ಕೊರೋನಾ ಸೋಂಕು ಪತ್ತೆ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೂ ಕೊರೋನಾ ಸೋಂಕು ಪತ್ತೆಯಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಅವರು ಟ್ವೀಟ್ ಮಾಡಿದ್ದು, ನನಗೆ ಕೊರೋನಾ ಪಾಸಿಟಿವ್ ಬಂದಿದೆ. ರೋಗ ಲಕ್ಷಣ ಇಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ ಎಂದು ತಿಳಿಸಿದ್ದಾರೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದಿರುವ ಎಲ್ಲವೂ ಪರೀಕ್ಷೆ ಮಾಡಿಸಿಕೊಳ್ಳಿ ಎಂದೂ ಅವರು ಕೋರಿದ್ದಾರೆ. ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಯಡಿಯೂರಪ್ಪ ಸೆಲ್ಫ್ ಕ್ವಾರಂಟೈನ್ ಗೆ ಒಳಗಾಗಿದ್ದರು. ಆಗ ಪರೀಕ್ಷೆ ನಡೆಸಿದಾಗ ನೆಗೆಟಿವ್ ಬಂದಿತ್ತು. …

Read More »

ಕರಾವಳಿಯಲ್ಲಿ ಉತ್ತಮ ಮಳೆ

ಬೆಂಗಳೂರು: ಕರಾವಳಿ ಭಾಗದ ಜಿಲ್ಲೆಗಳು ಹಾಗೂ ಬೆಳಗಾವಿ, ಧಾರವಾಡ ಜಿಲ್ಲೆಗಳ ಕೆಲವೆಡೆ ಶನಿವಾರ ಉತ್ತಮ ಮಳೆಯಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬೆಳಿಗ್ಗೆ ಉತ್ತಮ, ಮಧ್ಯಾಹ್ನದ ನಂತರ ತುಂತುರು ಮಳೆಯಾಗಿದೆ. ದಕ್ಷಿಣ ಕನ್ನಡದಲ್ಲಿ ಒಟ್ಟಾರೆ 5 ಸೆಂ.ಮೀ. ದಾಖಲಾಗಿದೆ. ಹವಾಮಾನ ಇಲಾಖೆಯು ಸಮುದ್ರದಲ್ಲಿ ಗಾಳಿ ಅಬ್ಬರ ಹೆಚ್ಚಿರಲಿದೆ ಎಂದು ಎಚ್ಚರಿಸಿದೆ. ಚಿಕ್ಕಮಗಳೂರಿನ ಕೆಲ ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ. ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಮಳೆಯಾಗಿದೆ. …

Read More »

ಮಂತ್ರಿಗಿರಿ ಉಳಿಸಿಕೊಳ್ಳಲು ಸಚಿವೆ ಜೊಲ್ಲೆ ಯತ್ನ.? : ರಮೇಶ್ ಜಾರಕಿಹೊಳಿ ಭೇಟಿಯಾದ ಶಶಿಕಲಾ..!

ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎನ್ನುವ ಸುದ್ದಿಯ ನಡುವೆಯೇ ಹಲವು ಸಚಿವರನ್ನು ಸಂಪುಟದಿಂದ ಕೈ ಬಿಡಲಾಗುತ್ತಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಅದರಲ್ಲೂ ರಾಜ್ಯದ ಏಕೈಕ ಮಹಿಳಾ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಕೊಕ್ ಕೊಡಲಾಗುತ್ತದೆ ಎನ್ನುವ ಮಾಹಿತಿ ಇದೆ. ಹೀಗಾಗಿ ಸಚಿವೆ ಶಶಿಕಲಾ ಜೊಲ್ಲೆ ತಮ್ಮ ಸ್ಥಾನ ಉಳಿಸಿಕೊಳ್ಳಲು ಪ್ರಯತ್ನ ಮುಂದುವರಿಸಿದ್ದಾರೆ. 2 ದಿನಗಳ ಹಿಂದೆಯಷ್ಟೇ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗಿ ಬಂದಿರುವ ಜೊಲ್ಲೆ ಇಂದು ಜಲಸಂಪನ್ಮೂಲ …

Read More »

ಕರೊನಾ ಕೇಸ್​: ಸಕ್ರಾ ಸೇರಿ ಐದು ಆಸ್ಪತ್ರೆಗಳ ವಿರದ್ಧ ಎಫ್​ಐಆರ್

ಬೆಂಗಳೂರು: ಸರ್ಕಾಋದ ಆದೇಶದಂತೆ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಶೇಕಡ 50 ಹಾಸಿಗೆ ಒದಗಿಸದ ಐದು ಖಾಸಗಿ ಆಸ್ಪತ್ರೆಗಳ ವಿರುದ್ಧ ಎಫ್​ಐಆರ್ ದಾಖಲಾಗಿದೆ. ನೃಪತುಂಗಾ ರಸ್ತೆಯಲ್ಲಿರುವ ಸೇಂಟ್ ಮಾರ್ಥಾಸ್ ಆಸ್ಪತ್ರೆ, ಶಂಕರಪುರದ ರಂಗದೊರೆ ಮೆಮೋರಿಯಲ್ ಆಸ್ಪತ್ರೆ, ಕ್ವೀನ್ಸ್ ರಸ್ತೆಯ ಶಿಫಾ ಆಸ್ಪತ್ರೆ, ಕನ್ನಿಂಗ್​ಹ್ಯಾಂ ರಸ್ತೆಯ ಫೋರ್ಟಿಸ್ ಆಸ್ಪತ್ರೆ ಹಾಗೂ ದೇವರಬೀಸನಹಳ್ಳಿಯ ಸಕ್ರಾ ಆಸ್ಪತ್ರೆ ವಿರುದ್ಧ ದೂರು ದಾಖಲಾಗಿರುವಂಥದ್ದು.   ಕರೊನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಮೀಸಲಿರಿಸಿದ ಬೆಡ್​ಗಳ ಕುರಿತು ಐಎಎಸ್ ಅಧಿಕಾರಿಗಳಿಗೆ …

Read More »

ಕೊರೋನಾ ವಿರುದ್ಧ ಹೋರಾಡಲು ರಾಜ್ಯ ಸರ್ಕಾರ ಸಿದ್ಧತೆ ಸಾಲದು: ಹೆಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಲೇ ಇದ್ದು, ಇಷ್ಟು ದಿನ ಸರ್ಕಾರಕ್ಕೆ ಬೆಂಬಲ ನೀಡುತ್ತಿದ್ದೇವೆಂದು ಹೇಳುತ್ತಿದ್ದ ರಾಜಕೀಯ ಪಕ್ಷಗಳು ಇದೀಗ ಸರ್ಕಾರದ ವಿರುದ್ಧ ತಿರುಗಿಬಿದ್ದಿವೆ. ಈ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಕಿಡಿಕಾರಿದ್ದರು. ಇದೀಗ ಇವರೊಂದಿಗೆ ಹೆಚ್.ಡಿ.ದೇವೇಗೌಡ ಅವರೂ ಕೂಡ ದನಿಗೂಡಿಸಿದ್ದಾರೆ. ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ಸುಧಾರಿಸುತ್ತಿದ್ದಂತೆಯೇ ಪರಿಸ್ಥಿತಿ ಕುರಿತು ಅವಲೋಕನ …

Read More »

ಟಿಪ್ಪು ಸುಲ್ತಾನ್ ಕುರಿತ ಅಧ್ಯಾಯವನ್ನು ಪಠ್ಯಪುಸ್ತಕಗಳಿಂದ ಕೈಬಿಡುವ ನಿರ್ಧಾರ ಬದಲಿಸಿದ ಸರ್ಕಾರ

ಬೆಂಗಳೂರು: ಶೇಕಡಾ 30ರಷ್ಟು ಪಠ್ಯವನ್ನು ಕಡಿತಗೊಳಿಸುವ ನಿರ್ಧಾರವನ್ನು ಸರ್ಕಾರ ಬದಲಿಸಿದ್ದು ಟಿಪ್ಪು ಸುಲ್ತಾನ್ (Tippu Sultan) ಮತ್ತು ಸಂವಿಧಾನದ ಬಗ್ಗೆ ಪಠ್ಯ ಕಡಿತ ಮಾಡಿದ ವಿವಾದ ಹಿನ್ನೆಲೆಯಲ್ಲಿ ಪರಿಷ್ಕೃತ ಪಠ್ಯ ಹಿಂಪಡೆಯಲು ಸರ್ಕಾರ ಸೂಚನೆ ನೀಡಿದೆ ಎಂದು ಹೇಳಲಾಗಿದೆ.  ಮೈಸೂರು  ಹುಲಿ ಖ್ಯಾತಿಯ ಟಿಪ್ಪು ಸುಲ್ತಾನ್, ಹೈದರ್ ಅಲಿಗೆ ಸಂಬಂಧಿಸಿದ ಹಲವಾರು ಅಧ್ಯಾಯಗಳನ್ನು 7 ನೇ ತರಗತಿಯ ಪಠ್ಯಪುಸ್ತಕದಿಂದ ಕೈಬಿಟ್ಟಿದ್ದಕ್ಕಾಗಿ ತೀವ್ರ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಸದ್ಯಕ್ಕೆ ಪಠ್ಯ ಕಡಿತ …

Read More »

ನವೆಂಬರ್ ವರೆಗೂ ಅಕ್ಕಿ ವಿತರಣೆಗೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಪತ್ರ

ಬೆಂಗಳೂರು,ಜು.31-ಬಿಪಿಎಲ್ ಕಾರ್ಡ್ ಇಲ್ಲದವರು ಹಾಗೂ ಎಪಿಎಲ್ ಕಾರ್ಡ್ ಹೊಂದಿರುವವರಿಗೆ, ಮುಖ್ಯವಾಗಿ ವಲಸಿಗರಿಗೆ ನವೆಂಬರ್‍ವರೆಗೆ ಅಕ್ಕಿ ಮತ್ತು ಧಾನ್ಯಗಳನ್ನು ವಿತರಿಸಬೇಕೆಂದು ರಾಜ್ಯ ಬಿಜೆಪಿ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ರಾಜ್ಯ ಸರ್ಕಾರವು ತನ್ನ ಗೋದಾಮಿನಲ್ಲಿ 28 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ಹೊಂದಿದ್ದು, ಇದು ಎರಡು ತಿಂಗಳವರೆಗೆ ಮಾತ್ರ ಸಾಕಾಗಲಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ಈ ಸಂಬಂಧ ಕೇಂದ್ರದ ಸಂಬಂಧಪಟ್ಟ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಈ …

Read More »

ಸಿ.ಪಿ ಯೋಗೇಶ್ವರ್‌ಗೆ ಸಿಎಂ ಬಿಎಸ್‍ವೈ ಖಡಕ್ ವಾರ್ನಿಂಗ್…………

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ವಿರುದ್ಧ ಅಡ್ಜೆಸ್ಟ್ ಮೆಂಟ್ ಪಾಲಿಟಿಕ್ಸ್ ಆರೋಪ ಮಾಡಿರುವ ಸಿಪಿ ಯೋಗೇಶ್ವರ್‌ಗೆ ಸಿಎಂ ಯಡಿಯೂರಪ್ಪ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಪಕ್ಷ, ಸರ್ಕಾರಕ್ಕೆ ಮುಜುಗರ ಆಗುವಂಥ ಹೇಳಿಕೆ ಕೊಡಬೇಡಿ. ಕೊರೊನಾ ಸಮಯದಲ್ಲಿ ಅನಗತ್ಯ ಹೇಳಿಕೆ ಕೊಡಬೇಡಿ. ನಿಮ್ಮ ಕಿತ್ತಾಟ ಕ್ಷೇತ್ರದ ಮಟ್ಟಿಗೆ ಇಟ್ಕೊಳ್ಳಿ. ಸುಮ್ನೆ ನಿಮ್ ಜಂಜಾಟದಲ್ಲಿ ನಮ್ಮನ್ನ್ಯಾಕೆ ಎಳೀತೀರಾ ಅಂದಿದ್ದಾರೆ ಅಂತ ತಿಳಿದುಬಂದಿದೆ. ಸಚಿವ ಸಂಪುಟ ವಿಸ್ತರಣೆ ಚರ್ಚೆ ಬೆನ್ನಲ್ಲೇ …

Read More »

ಶಿಕ್ಷಕರ ವರ್ಗಾವಣೆಗೆ ಮುಹೂರ್ತ ಫಿಕ್ಸ್ :ಸಚಿವ ಸುರೇಶ್ ಕುಮಾರ್

ಬೆಂಗಳೂರು :  ಶಿಕ್ಷಕರ ವರ್ಗಾವಣೆ ಸಂಬಂಧ ಇತ್ತೀಚೆಗೆ ರಾಜ್ಯ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಕೂಡ ಹೊರಡಿಸಿತ್ತು. ಈಗ ಅಧಿಕಾರಿಗಳ ಸಭೆಯಲ್ಲಿ ಆಗಸ್ಟ್ ನಲ್ಲಿ ಶಿಕ್ಷಕರ ವರ್ಗಾವಣಾ ವೇಳಾಪಟ್ಟಿ ಸಿದ್ಧಗೊಳಿಸಿ, ಪ್ರಕಟಿಸುವಂತೆ ಅಧಿಕಾರಿಗಳಿಗೆ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚಿಸಿದ್ದಾರೆ. ಶಿಕ್ಷಕರ ವರ್ಗಾವಣೆಯ ಸಂಬಂಧ ನಿಯಮಗಳನ್ನು ಶಿಕ್ಷಣ ಇಲಾಖೆ ಅಂತಿಮಗೊಳಿಸಿ. ಈ ಕಾಯ್ದೆಗೆ ಈಗಾಗಲೇ ಅಧಿವೇಶನದಲ್ಲೂ ಅನುಮೋದನೆ ದೊರೆತಿದೆ. ಹೀಗಾಗಿ ಕೂಡಲೇ ಶಿಕ್ಷಕರ ವರ್ಗಾವಣಾ ವೇಳಾಪಟ್ಟಿಯನ್ನು ಪ್ರಕಟಿಸಬೇಕು ಎಂಬುದಾಗಿ ಇಂದು …

Read More »