Breaking News
Home / ಜಿಲ್ಲೆ / ಬೆಂಗಳೂರು (page 350)

ಬೆಂಗಳೂರು

ಭೂಗತ ಪಾತಕಿ ರವಿ ಪೂಜಾರಿ ವಿರುದ್ಧ ದೋಷಾರೋಪಣ ಪಟ್ಟಿ

ಬೆಂಗಳೂರು, ಜು.10- ಭೂಗತ ಪಾತಕಿ ರವಿ ಪೂಜಾರಿ ವಿರುದ್ಧ ಬೆಂಗಳೂರು ನಗರ ಪೊಲೀಸರು ನ್ಯಾಯಾಲಯಕ್ಕೆ ಮತ್ತೊಂದು ಚಾರ್ಜ್‍ಶೀಟ್ (ದೋಷಾರೋಪಣ ಪಟ್ಟಿ) ಸಲ್ಲಿಸಿದ್ದಾರೆ. ಈಗಾಗಲೇ ಮೂರು ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಪೊಲೀಸರು ಚಾರ್ಜ್‍ಶೀಟ್ ಸಲ್ಲಿಸಿದ್ದು, ಇದು ನಾಲ್ಕನೆ ಚಾರ್ಜ್‍ಶೀಟ್ ಆಗಿದೆ. ಈ ಮೊದಲು ತಿಲಕ್‍ನಗರ ಪೊಲೀಸ್ ಠಾಣೆ ಪ್ರಕರಣ, ವೈಯಾಲಿಕಾವಲ್ ಠಾಣೆ ಹಾಗೂ ವೈಟ್‍ಫೀಲ್ಡ್ ಠಾಣೆ ಪ್ರಕರಣಗಳಲ್ಲಿ ರವಿ ಪೂಜಾರಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಲಾಗಿದೆ. ದೀಗ ಇಂದಿರಾನಗರ ಪೊಲೀಸ್ ಠಾಣೆಯ …

Read More »

ಪಿಎಫ್‍ಐ ಯುವಕರ ತಂಡದಿಂದ ಸೋಂಕಿತರ ಶವಗಳಿಗೆ ಗೌರವದ ಅಂತ್ಯಕ್ರಿಯೆ…….

ಬೆಂಗಳೂರು: ಮಹಾಮಾರಿ ಕೊರೊನಾದಿಂದ ಮೃತಪಟ್ಟವರ ಅಂತ್ಯಕ್ರಿಯೆ ಅತ್ಯಂತ ಭೀಕರವಾಗಿತ್ತು. ಈ ಹಿಂದೆ ಕೊರೊನಾದಿಂದ ಮೃತಪಟ್ಟರೆ ಜೆಸಿಬಿಯಿಂದ ಶವವನ್ನು ತಂದು, ಗುಂಡಿಗಳಿಗೆ ಎಳೆದು ತಂದು ಬಿಸಾಕುವ ಮೂಲಕ ನಿರ್ಲಕ್ಷ್ಯವಾಗಿ ಅಂತ್ಯಕ್ರಿಯೆ ಮಾಡಲಾಗುತ್ತಿತ್ತು. ಆದರೆ ಇದೀಗ ಕೊರೊನಾ ರೋಗಿಗಳಿಗೆ ಮರ್ಯಾದೆಯ ಅಂತ್ಯಸಂಸ್ಕಾರ ಮಾಡಲಾಗುತ್ತಿದೆ. ಹೌದು. ಫ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‍ಐ) ದಿಂದ ಕೊರೊನಾದಿಂದ ಮೃತಪಟ್ಟವರ ಗೌರವಯುತವಾಗಿ ಅಂತ್ಯಸಂಸ್ಕಾರ ನಡೆಸುವ ಕಾರ್ಯ ಮಾಡುತ್ತಿದೆ. ಪಿಎಫ್‍ಐ ಯುವಕರ ತಂಡ ಕೊರೊನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರ ಮಾಡುತ್ತಿದೆ. …

Read More »

ಸೆಕೆಂಡ್ ಸಂಡೇ ಲಾಕ್‍ಡೌನ್ ಇಂದು ರಾತ್ರಿಯಿಂದಲೇ ಜಾರಿ……………

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ರಣಕೇಕೆ ಹಾಕುತ್ತಿದ್ದು, ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಕರ್ನಾಟಕದಲ್ಲಿ ಸೆಕೆಂಡ್ ಸಂಡೇ ಲಾಕ್‍ಡೌನ್ ಇಂದು ರಾತ್ರಿಯಿಂದಲೇ ಜಾರಿಯಾಗಲಿದೆ. ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ಜಾರಿಯಾಗಲಿದೆ. ತುರ್ತು, ಅಗತ್ಯ ಸೇವೆ ಹೊರತುಪಡಿಸಿ ಉಳಿದವೆಲ್ಲಾ ಕಂಪ್ಲೀಟ್ ಬಂದ್ ಆಗಲಿದೆ. ಕೊರೊನಾ ತಡೆಗೆ ಈಗಾಗಲೇ ಹಲವೆಡೆ ಸೆಲ್ಫ್ ಲಾಕ್‍ಡೌನ್ ಮಾಡಲಾಗಿದೆ. ರಾಜ್ಯದಲ್ಲಿ ಶುಕ್ರವಾರ 2,313 ಮಂದಿಗೆ ಕೋವಿಡ್-19 ಸೋಂಕು ತಗಲುವ …

Read More »

ಕೆ ಪಿ ಸಿ ಸಿ ಕಚೇರಿಯಲ್ಲಿರುವ ಮೂರು ಮಂದಿ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಆಗಿದೆ.

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಯ ಕ್ವೀನ್ಸ್ ರಸ್ತೆಯಲ್ಲಿರುವ ಕಚೇರಿಯಲ್ಲಿರುವ ಮೂರು ಮಂದಿ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಆಗಿದೆ. ಇವೆರೆಲ್ಲರೂ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣ ಸಮಾರಂಭದಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ. ಇವರಲ್ಲಿ ಇಬ್ಬರು ಸಿಬ್ಬಂದಿಯಾಗಿ ಮತ್ತೆ ಒಬ್ಬರು ಕೆಪಿಸಿಸಿ ಮಾಧ್ಯಮ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಮೂಲಗಳು ಹೇಳಿವೆ. ಇದರಿಂದಾಗಿ ಈಗ ಶಿವಕುಮಾರ್ ಅವರ ಪದಗ್ರಹಣ ಸಮಾರಂಭದಲ್ಲಿ ಭಾಗಿಯಾಗಿರುವ ಹಲವಾರು ಮಂದಿ ನಾಯಕರಿಗೆ ಕೊರೋನಾ ಭೀತಿ ಶುರುವಾಗಿದೆ.

Read More »

ಅಂತಿಮ ತರಗತಿ ವಿದ್ಯಾರ್ಥಿಗಳಿಗೆ ಹೊರತು ಪಡಿಸಿ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಎಕ್ಸಾಂ ರದ್ದು

ಬೆಂಗಳೂರು: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರ ಕೈಕೊಂಡಿರುವ ರಾಜ್ಯ ಸರಕಾರವು, 2019-20ನೇ ಸಾಲಿನಲ್ಲಿ ಎಂಜಿನಿಯರಿಂಗ್ ಸೇರಿ ಇತರ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಧ್ಯಂತರ ಸೆಮಿಸ್ಟರ್ (intermediate Semester) ವಿದ್ಯಾರ್ಥಿಗಳನ್ನು ಅಂತಿಮ ಪರೀಕ್ಷೆ ಇಲ್ಲದೆಯೇ ಮುಂದಿನ ಹಂತಕ್ಕೆ ಉತ್ತೀರ್ಣಗೊಳಿಸುವುದಾಗಿ ಪ್ರಕಟಿಸಿದೆ. ಜೊತೆಗೆ ಪ್ರಸಕ್ತ ಶೈಕ್ಷಣಿಕ ವರ್ಷದ ಅಂತಿಮ ಸೆಮಿಸ್ಟರ್ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಯುಜಿಸಿ ಮಾರ್ಗಸೂಚಿ ಅನ್ವಯ ಸೆಪ್ಟೆಂಬರ್ ಅಂತ್ಯದೊಳಗೆ ಪರೀಕ್ಷೆ …

Read More »

ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರಿ ಉದ್ಯೋಗಿಗಳ ಬಳಕೆ ಮಾಡಿಕೊಳ್ಳಲು ಸರ್ಕಾರ ಮಹತ್ವ ನಿರ್ಧಾರ

ಬೆಂಗಳೂರು: ಅನ್‍ಲಾಕ್-2 ಅವಧಿಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರಿ ಉದ್ಯೋಗಿಗಳ ಬಳಕೆ ಮಾಡಿಕೊಳ್ಳಲು ಸರ್ಕಾರ ಮಹತ್ವ ನಿರ್ಧಾರವನ್ನು ಮಾಡಿದೆ. ಕೋವಿಡ್ ನಿಯಂತ್ರಣ ಮಾಡಲು ಉದ್ದೇಶಕ್ಕಾಗಿ ಕಣ್ಗಾವಲು ಮತ್ತು ಸಾರ್ವಜನಿಕ ಆರೋಗ್ಯ ಪ್ರಯತ್ನಗಳನ್ನು ಹೆಚ್ಚಿಸುವ ಅಗತ್ಯವಿರುವ ಕಾರಣ ಸರ್ಕಾರಿ ಉದ್ಯೋಗಿಗಳ ಬಳಕೆಗೆ ಸರ್ಕಾರ ಮುಂದಾಗಿದೆ. ಆದ್ದರಿಂದ ರಾಜ್ಯದ ಎಲ್ಲಾ ಇಲಾಖೆಯ, ಅನುದಾನಿತ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ 50 ವರ್ಷ ಒಳಗಿನ ಅಧಿಕಾರಿಗಳು, ಸಿಬ್ಬಂದಿಗಳ ಮಾಹಿತಿ ನೀಡಲು ಸೂಚನೆ ಇಲಾಖೆಗಳ ಮುಖ್ಯಸ್ಥರಿಗೆ ಸೂಚನೆ ನೀಡಿ ಮುಖ್ಯ …

Read More »

ಖಾಸಗಿ ಹೋಟೆಲ್ ನಲ್ಲಿ ಕೋವಿಡ್ ಕೇರ್ ಕೇಂದ್ರ ತೆರೆಯಲು ಆರೋಗ್ಯ ಇಲಾಖೆ ಸುತ್ತೋಲೆ

ಬೆಂಗಳೂರು: ಖಾಸಗಿ ಹೋಟೆಲ್ ನಲ್ಲಿ ಕೋವಿಡ್ ಕೇರ್ ಕೇಂದ್ರ ತೆರೆಯಲು ಆರೋಗ್ಯ ಇಲಾಖೆ ಸುತ್ತೋಲೆ ಪ್ರಕಟಿಸಿದೆ. ಈ ಮೂಲಕ ರೋಗ ಲಕ್ಷಣ ಇಲ್ಲದ ರೋಗಿಗಳು ಮನೆಯಲ್ಲೇ ಐಸೊಲೇಶನ್ ಆಗಬಹುದು. ಇದರ ಜೊತೆ ಸರ್ಕಾರಿ ಕೇಂದ್ರ ಅಲ್ಲದೇ ಖಾಸಗಿ ಹೋಟೆಲ್ ನಲ್ಲೂ ಐಸೊಲೇಶನ್ ಆಗಬಹುದು. ಹೋಟೆಲ್ ಐಸೋಲೇಷನ್ ಮೂರು ವಿಭಾಗ ಮಾಡಿರುವ ಸರ್ಕಾರ ದರವನ್ನು ನಿಗದಿ ಮಾಡಿದೆ. ಬಜೆಟ್‌ ಹೋಟೆಲಿಗೆ 8 ಸಾವಿರ ರೂ., 3 ಸ್ಟಾರ್‌ ಹೋಟೆಲಿಗೆ 10 ಸಾವಿರ …

Read More »

ನಟ ಶಿವರಾಜ್‍ಕುಮಾರ್ ಅವರ ಮನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ದಿಢೀರ್ ಭೇಟಿ

ಬೆಂಗಳೂರು: ನಟ ಶಿವರಾಜ್‍ಕುಮಾರ್ ಅವರ ಮನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ದಿಢೀರ್ ಭೇಟಿ ನೀಡಿದ್ದಾರೆ. ಇಂದು ಮಾನ್ಯತಾ ಟೆಕ್‍ಪಾರ್ಕ್ ಬಳಿ ಇರುವ ಶಿವಣ್ಣನ ಮನೆ ಹತ್ತಿರದಲ್ಲಿ ಸ್ನೇಹಿತರ ಮಗಳ ಮದುವೆಗೆ ಹಾಜರಾಗಿದ್ದ ಡಿಕೆ ಶಿವಕುಮಾರ್, ನಂತರ ಅಲ್ಲೇ ಶಿವಣ್ಣ ಅವರ ಮನೆಗೂ ಹೋಗಿ ಮಾತನಾಡಿಕೊಂಡು ಬಂದಿದ್ದಾರೆ. ಡಿಕೆಶಿ ಶಿವಣ್ಣ ಅವರ ಮನೆಗೆ ಹೋಗಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಇಂದು ಮಾನ್ಯತಾ ಟೆಕ್‍ಪಾರ್ಕ್ ಬಳಿ ನಡೆದ ಸ್ನೇಹಿತರ …

Read More »

ಕೊರೊನಾ ವಾರಿಯರ್ಸ್‌ ರಕ್ಷಣೆಗೆ ಎಂಟ್ರಿ ಕೊಡಲಿದ್ದಾರೆ ಯಂತ್ರ ಮಾನವರು……….

ಬೆಂಗಳೂರು: ಕೋವಿಡ್‌ 19 ನಿಯಂತ್ರಣದ ಜೊತೆಗೆ ಕೊರೊನಾ ವಾರಿಯರ್ಸ್‌ ರಕ್ಷಣೆಗೆ ಸರ್ಕಾರ ಮೆಗಾ ಪ್ಲಾನ್ ಮಾಡಿಕೊಂಡಿದ್ದು, ರಾಜಧಾನಿಗೆ ಯಂತ್ರ ಮಾನವರು ಎಂಟ್ರಿ ಕೊಡಲಿದ್ದಾರೆ. ಹೌದು. ಕೋವಿಡ್‌ ಕೇರ್‌ ಸೆಂಟರ್‌ಗೆ ಯಂತ್ರ ಮಾನವರನ್ನು ಕರೆ ತರಲು ಸರ್ಕಾರ ನಿರ್ಧಾರ ಮಾಡಿದೆ. ಬೆಂಗಳೂರಿನ ಬೃಹತ್ ಕೊರೊನಾ ಕೇರ್ ಸೆಂಟರ್ ಆಗಲಿರುವ ಅಂತರಾಷ್ಟ್ರೀಯ ವಸ್ತು ಪ್ರದರ್ಶನದ ಕೇಂದ್ರದಲ್ಲಿ ರೊಬೊಟ್‌ ಬಳಕೆ ಮಾಡಲು ಸರ್ಕಾರ ನಿರ್ಧಾರ ಮಾಡಿದೆ. ಮೊದಲ ಹಂತವಾಗಿ ವಸ್ತು ಪ್ರದರ್ಶನ ಕೇಂದ್ರದಲ್ಲಿ ಕೊರೊನಾ …

Read More »

ಬೆಂಗಳೂರಿನಲ್ಲಿ ಕೊರೊನಾ ತಡೆಗೆ ಅಷ್ಟದಿಗ್ಬಂಧನ?

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೊರೊನಾ ರಣಕೇಕೆಗೆ ಬ್ರೇಕ್ ಹಾಕಲು ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಮುಂದಾಗಿದ್ದು, ನಗರದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬೆಂಗಳೂರಿನ 8 ವಲಯಗಳಿಗೆ 8 ಸಚಿವರಿಗೆ ಉಸ್ತುವಾರಿ ವಹಿಸಲು ಚಿಂತನೆ ನಡೆಸಲಾಗಿದೆ. ಸದ್ಯ ಚಿಂತನೆ ಕಾರ್ಯ ರೂಪಕ್ಕೆ ತರಲು ಸಿಎಂ ಬಿಎಸ್‍ವೈ ಅವರು, ವಲಯವಾರು ಸಚಿವರಿಂದ ಅಧ್ಯಯನ ಮಾಡಿ ಸೋಮವಾರದ ವೇಳೆಗೆ ವರದಿ ಸಲ್ಲಿಸಲು ಸೂಚನೆ ನೀಡಿದ್ದಾರೆ. ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣದ …

Read More »