Breaking News

ಬೆಂಗಳೂರು

ಸರ್ಕಾರ  ನಾಲ್ವರು  ಶಾಸಕರ ಅಧ್ಯಕ್ಷ ಸ್ಥಾನವನ್ನು ವಾಪಸ್ ಪಡೆದು ಆದೇಶ ಹೊರಡಿಸಿದೆ.

ಬೆಂಗಳೂರು: ಕೆಲ ಹಿರಿಯ ಶಾಸಕರು ನಿಗಮ ಸ್ಥಾನಕ್ಕೆ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ  ರಾಜ್ಯ ಸರ್ಕಾರ  ನಾಲ್ವರು  ಶಾಸಕರ ಅಧ್ಯಕ್ಷ ಸ್ಥಾನವನ್ನು ವಾಪಸ್ ಪಡೆದು ಆದೇಶ ಹೊರಡಿಸಿದೆ. ಶಾಸಕರಾದ ಜಿ.ಎಚ್. ತಿಪ್ಪಾರಡ್ಡಿ, ಲಾಲನ್ ಮಂಡೆನ್, ಬಸವರಾಜ ದಡೆಸಗೂರು,  ಪರಣ್ಣ ಮುನವಳ್ಳಿ  ಅವರಿಗೆ ನೀಡಲಾದ ನಿಗಮ ಮಂಡಳಿ ಸ್ಥಾನವನ್ನು ವಾಪಸ್ ಪಡೆಯಲಾಗಿದೆ.  ಇಂದು ಮುಂಜಾನೆ  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 24 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಿದ್ದರು.  ಸಚಿವ …

Read More »

ಮಧ್ಯರಾತ್ರಿ ‘ಬಿಗ್‍ಬಾಸ್’ ಖ್ಯಾತಿಯ ಕವಿತಾ ಗೌಡ ಮನೆಗೆ ಹೋಗಿ ಚಂದನ್ ಸರ್ಪ್ರೈಸ್

ಬೆಂಗಳೂರು: ರಿಯಾಲಿಟಿ ಶೋ ‘ಬಿಗ್‍ಬಾಸ್’ ಖ್ಯಾತಿಯ ಕಿರುತೆರೆ ನಟಿ ಕವಿತಾ ಗೌಡ ಮನೆಗೆ ಮಧ್ಯರಾತ್ರಿ ನಟ ಚಂದನ್ ಹೋಗಿ ಸರ್ಪ್ರೈಸ್ ಕೊಟ್ಟಿದ್ದಾರೆ. ಭಾನುವಾರ ಕವಿತಾ ಗೌಡ ಹುಟ್ಟುಹಬ್ಬ ಇತ್ತು. ಕೊರೊನಾ ಇರುವುದರಿಂದ ಮನೆಯಲ್ಲಿಯೇ ಸರಳವಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಇದೇ ವೇಳೆ ನಟ ಚಂದನ್ 12 ಗಂಟೆಗೆ ಸರಿಯಾಗಿ ಕವಿತಾ ಗೌಡ ಮನೆಗೆ ಹೋಗಿ ಅವರಿಗೆ ಸರ್ಪ್ರೈಸ್ ನೀಡಿದ್ದಾರೆ. ಅಷ್ಟೇ ಅಲ್ಲದೇ ಕವಿತಾ ಗೌಡ ಹುಟ್ಟುಹಬ್ಬಕ್ಕೆ ಉಡುಗೊರೆಯನ್ನು ಕೊಟ್ಟಿದ್ದಾರೆ. “ಸ್ನೇಹಿತರ ಹುಟ್ಟುಹಬ್ಬದ …

Read More »

ಮನೆಯಲ್ಲಿದ್ದುಕೊಂಡೇ ಒಟಿಟಿಯಲ್ಲಿ ಕನ್ನಡ ಸಿನಿಮಾಗಳ ಮೇಲೆ ಅಪಾರ ಪ್ರೀತಿ ತೋರುತ್ತಿದ್ದಾರೆ.

ಕೊರೊನಾ ಎಫೆಕ್ಟ್ ನಿಂದ ಸಿನಿಮಾ ರಿಲೀಸ್ ಆಗ್ತಿಲ್ಲ. ಚಿತ್ರಮಂದಿರಕ್ಕೆ ಬಂದು ಸಿನಿಮಾ ಕಣ್ತುಂಬಿಕೊಳ್ಳೋ ಭಾಗ್ಯ ಸಿನಿರಸಿಕರ ಪಾಲಿಗೆ ಸದ್ಯಕ್ಕಿಲ್ಲ. ಹಾಗಂತ ನಮ್ಮ ಸಿನಿ ಪ್ರೇಮಿಗಳು ಸಿನಿಮಾ ನೋಡೋದು ಬಿಟ್ಟಿಲ್ಲ. ಮನೆಯಲ್ಲಿದ್ದುಕೊಂಡೇ ಒಟಿಟಿಯಲ್ಲಿ ಕನ್ನಡ ಸಿನಿಮಾಗಳ ಮೇಲೆ ಅಪಾರ ಪ್ರೀತಿ ತೋರುತ್ತಿದ್ದಾರೆ. ನಿಜ ಹೇಳ್ಬೇಕು ಅಂದ್ರೆ ಥಿಯೇಟರ್ ಅಂಗಳದಲ್ಲೂ ಸಿಗದ ಅದ್ಭುತ ರೆಸ್ಪಾನ್ಸ್ ಒಟಿಟಿ ಪ್ಲಾಟ್ ಫಾರ್ಮ್ ನಲ್ಲಿ ಕನ್ನಡ ಸಿನಿಮಾಗಳಿಗೆ ಸಿಕ್ತಿದೆ. ಇದಕ್ಕೆ ಬೆಸ್ಟ್ ಎಕ್ಸಾಂಪಲ್ ಅಂದ್ರೆ ‘ನಮ್ ಗಣಿ …

Read More »

“ಯಾರು ಎಷ್ಟೇ ಟೀಕೆ ಮಾಡಿದರೂ ನಾನೆಂದೂ ದ್ವೇಷ ರಾಜಕಾರಣ ಮಾಡಲ್ಲ” : ಸಿಎಂ ಬಿಎಸ್ವೈ

ಬೆಂಗಳೂರು,ಜು.27- ನನ್ನನ್ನು ಎಷ್ಟೇ ಟೀಕೆ ಮಾಡಿದರೂ ನಾನು ಯಾರ ಬಗ್ಗೆಯೂ ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಸವಾಲುಗಳ ವರ್ಷ, ಪರಿಹಾರದ ಸ್ಪರ್ಶ, ಸರ್ಕಾರದ ಪ್ರಗತಿ ವರದಿಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ನನ್ನನ್ನು ಎಷ್ಟೇ ಟೀಕೆ ಮಾಡಲಿ. ಇದರ ಬಗ್ಗೆ ಗಮನಹರಿಸುವುದಿಲ್ಲ. ನಾನು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ತೀರ್ಮಾನಿಸಿದ್ದೇನೆ. ಪ್ರತಿಪಕ್ಷಗಳು ಎಷ್ಟೇ ಟೀಕೆ ಮಾಡಿದ್ದರೂ ಎಂದಿಗೂ ದ್ವೇಷ ರಾಜಕಾರಣ …

Read More »

ಡಿಸಿಎಂ ಲಕ್ಷ್ಮಣ ಸವದಿ ದೆಹಲಿ ಭೇಟಿ ತೀವ್ರ ಕುತೂಹಲ

ಬೆಂಗಳೂರು: ಡಿಸಿಎಂ ಲಕ್ಷ್ಮಣ ಸವದಿ ದೆಹಲಿ ಭೇಟಿ ತೀವ್ರ ಕುತೂಹಲ ಮೂಡಿಸಿದ್ದು ರಾಜಕೀಯ ಮೊಗಸಾಲೆಯಲ್ಲಿ ಬಿಸಿ ಬಿಸಿ ಚರ್ಚೆಗೆ ಗ್ರಾಸವಾಗಿದೆ.  ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ವರ್ಷ ತುಂಬುತ್ತಿದ್ದಂತೆ ದೆಹಲಿಗೆ ಹಾರಿರುವ ಲಕ್ಷ್ಮಣ ಸವದಿ ಇಂದು ಬಿಜೆಪಿ ವರಿಷ್ಠರ ಜೊತೆ ಸಭೆ ನಡೆಸಲಿದ್ದಾರೆ. ಮೊನ್ನೆಯಷ್ಟೇ ರಾಜ್ಯಪಾಲ ವಜೂಭಾಯ್ ವಾಲಾ ಕರೆಗೆ ಓಗೊಟ್ಟು ಸವದಿ ರಾಜಭವನಕ್ಕೆ ತೆರಳಿದ್ದರು. ಈ ವೇಳೆ ರಾಜ್ಯಪಾಲರು, ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿಯಾಗುವಂತೆ ಸವದಿಗೆ …

Read More »

ಸರ್ ನೀವು ನನ್ನ ಬದುಕಿಸಿದ್ದೀರಿ’ – ಕಿಚ್ಚನಿಗೆ ಜಯಶ್ರೀ ಧನ್ಯವಾದ

ಬೆಂಗಳೂರು: ಇತ್ತೀಚೆಗೆ ‘ಬಿಗ್‍ಬಾಸ್ ಸೀಸನ್ 3’ ರಲ್ಲಿ ಸ್ಪರ್ಧಿಯಾಗಿದ್ದ ಜಯಶ್ರೀ ರಾಮಯ್ಯ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ಗೊಂದಲ ಸೃಷ್ಟಿಸುತ್ತಿದ್ದಾರೆ. ಇದೀಗ ಕಿಚ್ಚ ಸುದೀಪ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ನಟಿ ಜಯಶ್ರೀ ಫೇಸ್‍ಬುಕ್‍ನಲ್ಲಿ ಬರೆದುಕೊಳ್ಳುವ ಮೂಲಕ ಸುದೀಪ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ. “ನಿಮ್ಮ ಕಾಳಜಿಗೆ ಧನ್ಯವಾದಗಳು ಸುದೀಪ್ ಸರ್. ನೀವು ನನ್ನನ್ನು ಬದುಕಿಸಿದ್ದೀರಿ. ಸುದೀಪ್ ಅವರ ತಂಡದ ಸದಸ್ಯರು, ನನ್ನ ಸ್ನೇಹಿತರು ಮತ್ತು ಅಭಿಮಾನಿಗಳನ್ನು ನಾನು ತುಂಬಾ ಪ್ರೀತಿಸುತ್ತೇನೆ. …

Read More »

ಲೆಕ್ಕದ ವಿಚಾರದಲ್ಲಿ ಕಿತ್ತಾಟಕ್ಕಿಳಿದ ಕಾಂಗ್ರೆಸ್‌ ಮತ್ತು ಬಿಜೆಪಿಗೆ H.D.K.ಪಂಚ ಪ್ರಶ್ನೆ

ಬೆಂಗಳೂರು,-ಕೋವಿಡ್‌ ಹಗರಣದ ವಿಚಾರದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಐದು ಪ್ರಶ್ನೆಗಳನ್ನು ಕೇಳಿದ್ದಾರೆ. ಕೊರೊನಾ ವೈರಸ್‌ನಿಂದ ಜನ ಮತ್ತು ಅವರ ಜೀವನ ಸಂಕಷ್ಟದಲ್ಲಿದೆ. ಇಂಥ ಸಂದಿಗ್ಧ ಸನ್ನಿವೇಶದಲ್ಲೂ ಕೋವಿಡ್‌ ಭ್ರಷ್ಟಾಚಾರದಂಥ ಗಂಭೀರ ಆರೋಪ ಕೇಳಿ ಬಂದಿರುವುದು ರಾಜ್ಯದ ದುರ್ದೈವ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಡಳಿತ ಪಕ್ಷದ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿರುವ ಕಾಂಗ್ರೆಸ್‌, ಹಗರಣದ ಬಗ್ಗೆ ಈ ವರೆಗೆ ಯಾವುದೇ ತನಿಖಾ ಸಂಸ್ಥೆಗೆ ದೂರು ನೀಡದೇ …

Read More »

ನಾಳೆ ನೇರಪ್ರಸಾರವಾಗಲಿದೆ ರಾಜ್ಯ ಸರ್ಕಾರದ ವರ್ಷಾಚರಣೆ ಸಮಾರಂಭ

ಬೆಂಗಳೂರು, ಜು.26- ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರ್ಣಗೊಳಿಸಿರುವ ಸುಸಂದರ್ಭದಲ್ಲಿ ರಾಜ್ಯ ಮಟ್ಟದ ಸಮಾರಂಭವು ಜುಲೈ 27ರ ಸೋಮವಾರದಂದು ಬೆಳಗ್ಗೆ 11.00 ಗಂಟೆಗೆ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನಡೆಯಲಿದೆ. ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜನಸ್ನೇಹಿ ಆಡಳಿತ, ಒಂದು ವರ್ಷ; ಸವಾಲುಗಳ ವರ್ಷ; ಪರಿಹಾರದ ಸ್ಪರ್ಶ ಕಾರ್ಯಕ್ರಮವು ಏಕಕಾಲಕ್ಕೆ ಬಿತ್ತರಗೊಳ್ಳಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ …

Read More »

ಕಾರ್ಗಿಲ್ ಹುತಾತ್ಮ ಯೋಧರ ಕುಟುಂಬದೊಂದಿಗೆ ನಾವಿದ್ದೇವೆ: ಸಿಎಂ

ಬೆಂಗಳೂರು: ಇಂದು 21ನೇ ಕಾರ್ಗಿಲ್ ವಿಜಯ್ ದಿವಸ್ ಆದ ಹಿನ್ನೆಲೆ, ಹುತಾತ್ಮ ಯೋಧರಿಗೆ ಮುಖ್ಯಮಂತ್ರಿ ಬಿಎಎಸ್​ ಯಡಿಯೂರಪ್ಪ ನಮನ‌ ಸಲ್ಲಿಸಿದ್ರು. ರಾಷ್ಟ್ರೀಯ ಮಿಲಿಟರಿ ಸ್ಮಾರಕದಲ್ಲಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಬಿಎಸ್​ವೈ ಭಾಗಿಯಾದ್ರು. ಇದೇ ವೇಳೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಕೂಡ ಉಪಸ್ಥಿತರಿದ್ರು. ಕಾರ್ಯಕ್ರಮದಲ್ಲಿ ಮಾತನಾಡಿದ ಯಡಿಯೂರಪ್ಪ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಆಯೋಜಿಸಿರುವ ಕಾರ್ಗಿಲ್ ವಿಜಯ್ ದಿವಸ್​ನಲ್ಲಿ ಹೆಮ್ಮೆಯಿಂದ ಪಾಲ್ಗೊಂಡಿದ್ದೇನೆ. ಭಾರತ …

Read More »

ಪೊಲೀಸರು ಅನಗತ್ಯವಾಗಿ ಓಡಾಡುತ್ತಿದ್ದವರ ವಾಹಗಳನ್ನು ಸೀಜ್ ಮಾಡುತ್ತಿದ್ದಾರೆ.

ಬೆಂಗಳೂರು: ಸಂಡೇ ಲಾಕ್‍ಡೌನ್ ಆದರೂ ನಗರದಲ್ಲಿ ಜನರು ಸುಮ್ಮನೇ ಓಡಾಡುತ್ತಿದ್ದಾರೆ. ಇದರಿಂದ ಎಚ್ಚೆತ್ತ ಪೊಲೀಸರು ಅನಗತ್ಯವಾಗಿ ಓಡಾಡುತ್ತಿದ್ದವರ ವಾಹಗಳನ್ನು ಸೀಜ್ ಮಾಡುತ್ತಿದ್ದಾರೆ. ಕೆಂಗೇರಿ ಪೊಲೀಸರು ಅನಗತ್ಯವಾಗಿ ಓಡಾಟ ಮಾಡುವವರಿಗೆ ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ. ಈ ಮೂಲಕ ಕೆಂಗೇರಿ ಚೆಕ್‍ಪೋಸ್ಟ್ ನಲ್ಲಿ ಅನಗತ್ಯವಾಗಿ ಓಡಾಡುತ್ತಿರುವ ವಾಹನಗಳನ್ನ ಪೊಲೀಸರು ಸೀಜ್ ಮಾಡುತ್ತಿದ್ದಾರೆ. ಪೊಲೀಸರು ರಸ್ತೆಯ ಎರಡು ಬದಿಯಲ್ಲಿ ಓಡಾಡುತ್ತಿರುವ ವಾಹನಗಳ ತಪಾಸಣೆ ಮಾಡುತ್ತಿದ್ದಾರೆ. ತಪಾಸಣೆ ವೇಳೆ ಅನಗತ್ಯವಾಗಿ ಓಡಾಟ ಮಾಡುತ್ತಿರುವುದು ಕಂಡು ಬಂದರೆ ಅಂತಹ …

Read More »