Breaking News

ಬೆಂಗಳೂರು

ಕೊರೊನಾ ಆತಂಕ- ಮಗುವಿಗೆ ಹಾಲುಣಿಸುವ ಮುನ್ನ ತಾಯಂದಿರು ತೆಗೆದುಕೊಳ್ಳಬೇಕಾದ ಕ್ರಮಗಳು

ಬೆಂಗಳೂರು: ಕೊರೊನಾ ಆತಂಕ ಮಾತ್ರ ಕಡಿಮೆ ಆಗುತ್ತಲೇ ಇಲ್ಲ. ಪಕ್ಕದ ಬೀದಿಯಲ್ಲಿ ಬಂತು, ಮನೆಯ ಹಿಂದೆಯ ನಿವಾಸಿಗೆ ಸೋಂಕು ತಗುಲಿತು ಎಂಬ ವಿಷಯಗಳನ್ನು ನೀವು ಕೇಳಿರುತ್ತೀರಿ. ಕೊರೊನಾ ಭಯ ಬೇಡ ಮುಂಜಾಗ್ರತೆ ಇರಲಿ ಎಂದು ತಜ್ಞರು ಸೇರಿದಂತೆ ಸರ್ಕಾರ ಸಲಹೆಗಳನ್ನು ನೀಡುತ್ತಾ ಬಂದಿದೆ. ಆರೋಗ್ಯ ಇಲಾಖೆ ಸಹ ಕೊರೊನಾಗೆ ಸಂಬಂಧಿಸಿದ ಮಾಹಿತಿಯನ್ನು ಸಾರ್ವಜನಿಕರು ನೀಡುವ ಪ್ರಯತ್ನವನ್ನು ಮಾಡುತ್ತಿದೆ. ಮನೆಯಲ್ಲಿ ಮಕ್ಕಳು ಮತ್ತು ಹಿರಿಯರು ಇದ್ರೆ ಹೆಚ್ಚು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು …

Read More »

ಹಿಂದೂ ಸಂಪ್ರದಾಯದಂತೆ ಪತಿಗೆ ಪತ್ನಿ ಪಾದಪೂಜೆ………..

ಬೆಂಗಳೂರು: ಭೀಮನ ಅಮಸ್ಯೆ ದಂಪತಿಗೆ ಪವಿತ್ರ ದಿನವಾಗಿದ್ದು, ಹಿಂದೂ ಸಂಪ್ರದಾಯದಂತೆ ಪತಿಗೆ ಪತ್ನಿ ಪಾದಪೂಜೆ ಮಾಡುತ್ತಾರೆ. ಈ ಕ್ಷಣಗಳನ್ನು ನೆನಪಿರಲಿ ಪ್ರೇಮ್ ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ, ಪತ್ನಿಯ ಪಾದ ಪೂಜೆಯಿಂದ ಜಾಕ್‍ಪಾಟ್ ಹೊಡಿಯಲಿದೆ ಎಂದು ಬರೆದಿದ್ದಾರೆ. ಈ ಕುರಿತು ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿ ಸುಂದರ ಕ್ಷಣಗಳನ್ನು ಪ್ರೇಮ್ ಹಂಚಿಕೊಂಡಿದ್ದಾರೆ. ಇದಕ್ಕೆ ಸಾಲುಗಳನ್ನು ಬರೆದಿರುವ ಅವರು, ನಿನ್ನ ಪ್ರೀತ್ಸಿದ್ಮೇಲೆ ಆಯಸ್ಸು ಜಾಸ್ತಿ ಆಯಿತು. ಮದುವೆ ಆದ್ಮೇಲೆ ಅದೃಷ್ಟ ಕುಲಾಯಿಸ್ತು. …

Read More »

ಗೂಗ್ಲಿ ಸಿನಿಮಾ ತೆರೆಕಂಡ ನಿನ್ನೆಗೆ 7 ವರ್ಷವಾಗಿದೆ. ಈ ಸಮಯದಲ್ಲಿ ಚಿತ್ರತಂಡ ಸಿನಿಮಾದ ಯಶಸ್ಸನ್ನು ನೆನಪಿಸಿಕೊಂಡಿದೆ.

ಬೆಂಗಳೂರು: ಪವನ್ ಒಡೆಯರ್ ನಿರ್ದೇಶನ, ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬ್ಲಾಕ್ ಬಸ್ಟರ್ ಚಿತ್ರ ಗೂಗ್ಲಿ ಸಿನಿಮಾ ತೆರೆಕಂಡ ನಿನ್ನೆಗೆ 7 ವರ್ಷವಾಗಿದೆ. ಈ ಸಮಯದಲ್ಲಿ ಚಿತ್ರತಂಡ ಸಿನಿಮಾದ ಯಶಸ್ಸನ್ನು ನೆನಪಿಸಿಕೊಂಡಿದೆ. 2013ರ ಜುಲೈ 19ರಂದು ಗೂಗ್ಲಿ ಸಿನಿಮಾ ತೆರೆಕಂಡಿತ್ತು. ಯಶ್ ನಾಯಕನಾಗಿ, ಕೃತಿ ಕರಬಂಧ ನಾಯಕಿಯಾಗಿ ಮಿಂಚಿದ್ದರು. ಲವ್, ಕಾಲೇಜ್ ಲೈಫ್, ಸಕ್ಸಸ್ ಹೀಗೆ ಎಲ್ಲ ಅಂಶಗಳನ್ನು ಒಳಗೊಂಡಿದ್ದ ಸಿನಿಮಾ ಅಂದು ಕಾಲೇಜು ಯುವಕ-ಯುವತಿಯರಿಗೆ ಬಹಳ ಇಷ್ಟ ಆಗಿತ್ತು. …

Read More »

ದ್ರೋಣ ಅಂತಾ ಕಾಗೆ ಹಾರಸಿರೋ ಪ್ರತಾಪ ನನ್ನ ಪೊಲೀಸರು ಬಂಧಿಸಿದ್ದಾರೆ..

ಬೆಂಗಳೂರು(ಜು.20): ಕ್ವಾರಂಟೈನ್ ನಿಯಮ ಉಲ್ಲಂಘಿಸಿ ತಲೆಮರೆಸಿಕೊಂಡಿದ್ದ ಡ್ರೋನ್ ಪ್ರತಾಪ್​ ಈಗ ಬೆಂಗಳೂರು ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾನೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಿಕ್ಕಿಬಿದ್ದ ಡ್ರೋನ್​​ ಪ್ರತಾಪ್​​​​​ನನ್ನು ವಶಕ್ಕೆ ಪಡೆದ ಪೊಲೀಸರು ಈಗ ಬೆಂಗಳೂರು ಕರೆ ತಂದಿದ್ದಾರೆ. ಡ್ರೋನ್ ಪ್ರತಾಪ್ ಜುಲೈ 15ರಂದು ಹೈದರಾಬಾದ್​ನಿಂದ ಬೆಂಗಳೂರಿಗೆ ಬಂದಿದ್ದ. ತಲಘಟ್ಟಪುರದ ಅಪಾರ್ಟ್ಮೆಂಟ್​ವೊಂದರಲ್ಲಿ ಈತ ಕ್ವಾರಂಟೈನ್ ಆಗಿದ್ದ. ಆತನ ಕೈಗೆ ಬಿಬಿಎಂಪಿಯಿಂದ ಕ್ವಾರಂಟೈನ್ ಸ್ಟಿಕರ್ ಕೂಡ ಅಂಟಿಸಲಾಗಿತ್ತು. ಆದರೆ, ಅದಾಗಿ ಎರಡೇ ದಿನಕ್ಕೆ ಈತ ಖಾಸಗಿ …

Read More »

ಬುಧವಾರದಿಂದ ಬೆಂಗಳೂರಿನಲ್ಲಿ ಲಾಕ್‌ಡೌನ್‌ ಇರಲ್ಲ………..

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಲಾಕ್‌ಡೌನ್‌ ವಿಸ್ತರಿಸದೇ ಇರಲು ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಬೆಂಗಳೂರಿನ ಕೊರೊನಾ ನಿಯಂತ್ರಣ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಸ್ಪಷ್ಟವಾಗಿ ಈ ನಿರ್ಧಾರವನ್ನು ತಿಳಿಸಿದ್ದಾರೆ. ಲಾಕ್ ಡೌನ್ ವಿಸ್ತರಣೆ ಬಗ್ಗೆ ಮೊನ್ನೆಯೂ ಬೇಡ ಎಂದು ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಪದೇ ಪದೇ ಆ ಬಗ್ಗೆ ಚರ್ಚೆ ಮಾಡುವುದು ಬೇಡ ಎಂದು ಹೇಳಿದ್ದಾರೆ. ವಲಯಗಳಲ್ಲಿ ಸಮಸ್ಯೆಗಳನ್ನು ಬಗೆಹರಿಸುವತ್ತ ಗಮನಹರಿಸಿ. ಟ್ರೇಸಿಂಗ್, ಟೆಸ್ಟಿಂಗ್ ಬಗ್ಗೆ ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಸಚಿವರಿಗೆ ಸಿಎಂ …

Read More »

ಮಗು ಕೊಂದ ಆಸ್ಪತ್ರೆಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಿ:ಸಿದ್ದರಾಮಯ್ಯ

ಬೆಂಗಳೂರು: ಆಸ್ಪತ್ರೆ ಮುಂದೆ ಆಟೋದಲ್ಲಿಯೇ ಹೆರಿಗೆಯಾಗಿ ನವಜಾತ ಶಿಶು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಗಡುಕ ಆಸ್ಪತ್ರೆಗಳ ಮೇಲೆ ಕ್ರಮ ಕೈಗೊಳ್ಳಿ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ, ಹೆರಿಗೆಗಾಗಿ ಬೆಂಗಳೂರಿನ ಆಸ್ಪತ್ರೆಗಳೆಲ್ಲ ಸುತ್ತಾಡಿದ ಗರ್ಭಿಣಿಯೊಬ್ಬರು ಎಲ್ಲಿಯೂ ಸೇರಿಸಿಕೊಳ್ಳದೆ ಇದ್ದಾಗ ಕೊನೆಗೆ ಅಟೊರಿಕ್ಷಾದಲ್ಲಿಯೇ ಹಡೆದ ಪರಿಣಾಮ ಹಸುಕೂಸನ್ನು ಕಳೆದುಕೊಳ್ಳಬೇಕಾಯಿತು. ಹೀಗಾಗಿ ಮುಖ್ಯಮಂತ್ರಿಗಳೇ ಮೊದಲು ಈ ನತದೃಷ್ಟ ತಾಯಿಯ ಮಗುವಿನ …

Read More »

ರಾಜ್ಯ ಸರ್ಕಾರ ಖರೀದಿ ಮಾಡಿದ ಉಪಕರಣಗಳ ಲೆಕ್ಕ ಕೇಳಿದರೆ ಬಾಯಿ ಮಾತಿನಲ್ಲಿ ಹೇಳುತ್ತಾರೆ: ಸಿದ್ದರಾಮಯ್ಯ

ಬೆಂಗಳೂರು: ಕೊರೊನಾ ಚಿಕಿತ್ಸೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಖರೀದಿ ಮಾಡಿದ ಉಪಕರಣಗಳ ಲೆಕ್ಕ ಕೇಳಿದರೆ ಬಾಯಿ ಮಾತಿನಲ್ಲಿ ಹೇಳುತ್ತಾರೆ, ಬಾಯಿ ಮಾತಿನಲ್ಲಿ ಹೇಳಿದರೆ ನಡೆಯುವುದಿಲ್ಲ. ದಾಖಲೆ ತೋರಿಸಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಬಳಿಕ ಮಾತನಾಡಿದ ಅವರು,  ವೈದ್ಯಕೀಯ ಉಪಕರಣಗಳ ಖರೀದಿಯ ಖರ್ಚು ವೆಚ್ಚದ ಲೆಕ್ಕ ಕೊಡಿ ಎಂದರೆ ಹೀಗೆ ಇವರು ಬಾಯಿ ಮಾತಿನಲ್ಲಿ ಕೊಟ್ಟರೆ ಆಗುತ್ತಾ? ಏನೇನು ಖರೀದಿ …

Read More »

ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು

ಬೆಂಗಳೂರು: ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ನಗರದ ವಿವಿಧೆಡೆಯ ಸೋಮವಾರ ಐದು ಎಸ್​ಎಸ್​ಎಲ್​ಸಿ ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಿ ಮೌಲ್ಯಮಾಪನ ಪ್ರಕ್ರಿಯೆಯನ್ನು ವೀಕ್ಷಿಸಿದರು, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯಾದ್ಯಂತ 220 ಮೌಲ್ಯಮಾಪನ ಕೇಂದ್ರದಲ್ಲಿ ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ವಿವಿಧ ವಿಷಯಗಳ ಮೌಲ್ಯಮಾಪನ ನಡೆಯುತ್ತಿದೆ. ಇದರಲ್ಲಿ ಈಗಾಗಲೇ 120 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡಿದ್ದು, …

Read More »

ಬಿಜೆಪಿ ಕೊಟ್ಟ ಭರವಸೆಗಳು ಏನು, ಅಧಿಕಾರಕ್ಕೆ ಬಂದ ನಂತರ ಮಾಡಿರುವುದೇನು

ಬೆಂಗಳೂರು, ಜು.20- ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಜು.26ಕ್ಕೆ ಒಂದು ವರ್ಷ ಪೂರ್ಣಗೊಳ್ಳುತ್ತಿದೆ. ಅಧಿಕಾರಕ್ಕೆ ಬರುವ ಮುನ್ನ ಬಿಜೆಪಿ ಕೊಟ್ಟ ಭರವಸೆಗಳು ಏನು, ಅಧಿಕಾರಕ್ಕೆ ಬಂದ ನಂತರ ಮಾಡಿರುವುದೇನು ಎನ್ನುವ ಕುರಿತು ಒಂದು ವರದಿ. ಬಿಜೆಪಿ ಸರ್ಕಾರ ರಚನೆಯಾಗಿ ವರ್ಷ ಕಳೆಯುತ್ತಿದೆ. ಸಮ್ಮಿಶ್ರ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ರಚನೆಯಾಗಿ ವರ್ಷ ಕಳೆಯುತ್ತಿದೆ. ಕಾಲಮಿತಿಯೊಳಗೊಂಡಂತೆ ನೀಡಿದ್ದ ಭರವಸೆ ಈಡೇರಿಸಿದ್ದರೂ ಬಹುತೇಕ ಹಾಗೂ ಪ್ರಮುಖ …

Read More »

ಕೋವಿಡ್ ಪರಿಕರಗಳ ಖರೀದಿಯಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿದೆ:ಕಾಂಗ್ರೆಸ್ ನಾಯಕರು, 

ಬೆಂಗಳೂರು:  ಕೋವಿಡ್ ಪರಿಕರಗಳ ಖರೀದಿಯಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್ ನಾಯಕರು,  ಈ  ಹಿಂದೆ ಲೆಕ್ಕ ಕೊಡಿ ಎಂಬ ಅಭಿಯಾನ ಆರಂಭಿಸಿದ್ದರು. ಇದೀಗ ಈ ವಿಚಾರದಲ್ಲಿ ಸರ್ಕಾರದ ವಿರುದ್ದ ಬೀದಿಗಿಳಿದು ಹೋರಾಟ ನಡೆಸಲು ಮುಂದಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸೋಮವಾರ  ನಡೆದ ಸಭೆಯಲ್ಲಿ ಕೊರೊನಾ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾದ ಕುರಿತು ಪಕ್ಷದ ನಾಯಕರೊಂದಿಗೆ ಚರ್ಚಿಸಿದರು. ಕೊರೊನಾ ಹೆಸರಲ್ಲಿ ರಾಜ್ಯ ಸರ್ಕಾರ ಲೂಟಿ …

Read More »