Home / ಜಿಲ್ಲೆ / ಬೆಂಗಳೂರು (page 358)

ಬೆಂಗಳೂರು

ಸಿಂಧೂರ ಲಕ್ಷ್ಮಣನಾಗಿ ಅಬ್ಬರಿಸಲಿದ್ದಾರೆ ಡಿ ಬಾಸ್……………..

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಪೌರಾಣಿಕ ಪಾತ್ರಗಳಿಗೆ ಹೇಳಿ ಮಾಡಿಸಿದ ನಟ ಎನ್ನುವಂತಾಗಿದ್ದು, ಅದರಂತೆ ಸಂಗೊಳ್ಳಿ ರಾಯಣ್ಣ, ಕುರುಕ್ಷೇತ್ರ ಸಿನಿಮಾಗಳಲ್ಲಿ ತಮ್ಮ ಖದರ್ ತೋರಿಸಿದ್ದಾರೆ. ಅದೇ ರೀತಿ ರಾಜ ವೀರ ಮದಕರಿ ಸಿನಿಮಾದ ಚಿತ್ರೀಕರಣ ಸಹ ಆರಂಭವಾಗಿದೆ. ಹೀಗಿರುವಾಗಲೇ ಡಿ ಬಾಸ್‍ಗಾಗಿ ಮತ್ತೊಂದು ಐತಿಹಾಸಿಕ ಸಿನಿಮಾ ಸಿದ್ಧವಾಗುತ್ತಿದೆ. ಹೌದು ರಾಬರ್ಟ್ ಸಿನಿಮಾ ಚಿತ್ರೀಕಣ ಬಹುತೇಕ ಪೂರ್ಣಗೊಂಡಿದ್ದು, ಇನ್ನೇನು ಬಿಡುಗಡೆಗೆ ಸಿದ್ಧವಾಗಿದೆ. ಇದರ ಬೆನ್ನಲ್ಲೇ ಡಿ ಬಾಸ್ ರಾಜ ವೀರ ಮದಕರಿ …

Read More »

ಸಾರಿಗೆ ಸಿಬ್ಬಂದಿ ವೇತನ ತಡೆ ಹಿಡಿಯಲ್ಲ,ಕಟ್ ಮಾಡಲ್ಲ.

ಬಾಗಲಕೋಟೆ: ಯಾವುದೇ ಕಾರಣಕ್ಕೂ ಸಾರಿಗೆ ಸಿಬ್ಬಂದಿ ವೇತನ ತಡೆ ಹಿಡಿಯಲ್ಲ. ಸಂಬಳ ಕಟ್ ಮಾಡಲ್ಲ. ಪೂರ್ಣ ಸಂಬಳ ಕೊಡುತ್ತೇವೆ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಭರವಸೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾದಿಂದಾಗಿ ಸಾರಿಗೆ ಸಂಸ್ಥೆಗೆ ಬಹಳ ಹಾನಿಯಾಗಿದೆ. ಎರಡು ತಿಂಗಳು ಸಾರಿಗೆ ಸಿಬ್ಬಂದಿಗೆ ಸರ್ಕಾರ ಸಂಬಳ ಕೊಟ್ಟಿದೆ. ಸಿಬ್ಬಂದಿ ಸಂಬಳಕ್ಕಾಗಿ ರಾಜ್ಯ ಸರ್ಕಾರ 651 ಕೋಟಿ ರೂ. ಕೊಟ್ಟಿದೆ. ಮುಂದಿನ ತಿಂಗಳು ಸಂಬಳ ಕೊಡಲು ಕಷ್ಟಸಾಧ್ಯವಾಗಬಹುದು. …

Read More »

ಕೊರೊನಾ ಎಫೆಕ್ಟ್- ಬೆಂಗ್ಳೂರು ಪೊಲೀಸರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಭಾನುವಾರ ಅತಿ ಹೆಚ್ಚು ಕೊರೊನಾ ಪ್ರಕರಣಗಳು ಬೆಳಕಿಗೆ ಬಂದಿದ್ದು, 1,267 ಮಂದಿಗೆ ಹೆಮ್ಮಾರಿ ಸೋಂಕು ತಗುಲಿದೆ. ಇದೀಗ ಈ ಕೊರೊನಾ ಮಹಾಮಾರಿ ಎಫೆಕ್ಟ್‍ನಿಂದಾಗಿ ಬೆಂಗಳೂರು ಪೊಲೀಸರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದೆ. ನಗರದಲ್ಲಿ ಪೊಲೀಸರ ಸಂಖ್ಯೆಯೇ ಕಡಿಮೆ ಇರುವ ಪೊಲೀಸರಲ್ಲಿ 130 ಮಂದಿಗೂ ಅಧಿಕ ಸಿಬ್ಬಂದಿಗೆ ಸೋಂಕು ದೃಢವಾಗಿದೆ. ಸೋಂಕು ದೃಢಪಟ್ಟವರ ಪ್ರಾಥಮಿಕ ಸಂಪರ್ಕದಲ್ಲಿದ್ದ 900ಕ್ಕೂ ಹೆಚ್ಚು ಪೊಲೀಸರು ಕ್ವಾರಂಟೈನ್ ಆಗಿದ್ದಾರೆ. ಅಷ್ಟೇ ಅಲ್ಲದೇ 50 ವರ್ಷಕ್ಕೂ ಮೇಲ್ಪಟ್ಟ …

Read More »

ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ, ಖಾಸಗಿ ಆಸ್ಪತ್ರೆಗಳಿಗೆ CS ಖಡಕ್ ವಾರ್ನಿಂಗ್

ಬೆಂಗಳೂರು: ಕೊವಿಡ್ ಸೋಂಕಿತರಿಗೆ‌ ಚಿಕಿತ್ಸೆ ನಿರಾಕರಿಸುತ್ತಿರುವ ಖಾಸಗಿ ಆಸ್ಪತ್ರೆಗಳಿಗೆ ರಾಜ್ಯದ ಮುಖ್ಯ ಕಾರ್ಯದರ್ಶಿ ವಿಜಯ್​ ಭಾಸ್ಕರ್​ ಖಡಕ್ ವಾರ್ನಿಂಗ್ ನೀಡಿದ್ದಾರೆ. ರಾಜ್ಯದ ಖಾಸಗಿ ಆಸ್ಪತ್ರೆಗಳಿಗೆ ಆದೇಶ ಹೊರಡಿಸಿರುವ ವಿಜಯ್​ ಭಾಸ್ಕರ್,​ ಕೊವಿಡ್ ರೀತಿಯ ಲಕ್ಷಣ ಇರುವವರಿಗೂ ಪರೀಕ್ಷೆ ಹಾಗೂ ಚಿಕಿತ್ಸೆ ನಿರಾಕರಿಸುವಂತಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ಚಿಕಿತ್ಸೆ ಮತ್ತು ಪರೀಕ್ಷೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಅನ್ವಯ ಕೇಸ್ ದಾಖಲಿಸಲು ನಿರ್ಧರಿಸಿದ್ದಾರೆ. ಇದಲ್ಲದೆ …

Read More »

ಪಕ್ಕದ ಮನೆಯವರೆಗೆ ಕೊರೊನಾ ಸೋಂಕುಶಾಸಕ ಪ್ರಿಯಾಂಕ್ ಖರ್ಗೆ ಸ್ವತಃ ತಾವೇ ಐಸೊಲೇಷನ್‍ಗೆ

ಬೆಂಗಳೂರು: ಪಕ್ಕದ ಮನೆಯವರೆಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಶಾಸಕ ಪ್ರಿಯಾಂಕ್ ಖರ್ಗೆ ಸ್ವತಃ ತಾವೇ ಐಸೊಲೇಷನ್‍ಗೆ ಒಳಗಾಗಿದ್ದಾರೆ. ಈ ವಿಚಾರವಾಗಿ ತಮ್ಮ ಫೇಸ್‍ಬುಕ್‍ನಲ್ಲಿ ಪೋಸ್ಟ್ ಹಾಕಿರುವ ಪ್ರಿಯಾಂಕ್ ಖರ್ಗೆ, ಬೆಂಗಳೂರಿನ ನನ್ನ ನಿವಾಸದ ಪಕ್ಕದ ಮನೆಯವರಿಗೆ ಕೊರೊನಾ ಸೋಂಕು ದೃಢಪಟ್ಟಿರುವುದರಿಂದ ನಾನು ಕೂಡ ಐಸೊಲೇಷನ್‍ಗೆ ಒಳಪಡುವ ಅನಿವಾರ್ಯತೆ ಎದುರಾಗಿದೆ ಎಂದು ತಿಳಿಸಿದ್ದಾರೆ.ಈ ಸಮಯದಲ್ಲಿ ನಾನು ಯಾರನ್ನೂ ಖುದ್ದಾಗಿ ಭೇಟಿ ಮಾಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ತಮ್ಮ ಸುರಕ್ಷತೆಯ ದೃಷ್ಟಿಯಿಂದ ನನ್ನನ್ನು …

Read More »

ನಾನು ಚಿಕ್ಕಣ್ಣ ಅವರನ್ನು ಮದುವೆಯಾಗಿಲ್ಲಸುಳ್ಳು ಸುದ್ದಿಯನ್ನು ಹಬ್ಬಿಸಬೇಡಿ

ಬೆಂಗಳೂರು: ಕೆಲವು ದಿನಗಳಿಂದ ಹಾಸ್ಯನಟ ಚಿಕ್ಕಣ್ಣ ಮತ್ತು ‘ಟಗರು’ ಸಿನಿಮಾ ಖ್ಯಾತಿಯ ತ್ರಿವೇಣಿ ರಾವ್ ಅವರಿಗೆ ವಿವಾಹವಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಇದೀಗ ನಟಿ ತ್ರಿವೇಣಿ ರಾವ್ ಈ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ನಟಿ ತ್ರಿವೇಣಿ ರಾವ್ ‘ಟಗರು’ ಸಿನಿಮಾದಲ್ಲಿ ಸರೋಜ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಹೀಗಾಗಿ ಅಂದಿನಿಂದ ಟಗರು ಸರೋಜ ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಚಿಕ್ಕಣ್ಣ ಮತ್ತು ಟಗರು ಸರೋಜ ವಧು-ವರರ ಉಡುಪಿನಲ್ಲಿರುವ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ …

Read More »

ಆ ದಿನಗಳನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿರುವೆ:ಕಿಚ್ಚ ಸುದೀಪ್…………

ಬೆಂಗಳೂರು: ಕಿಚ್ಚ ಸುದೀಪ್ ತಮ್ಮ ಬಾಲ್ಯದಲ್ಲಿ ಕುಟುಂಬದ ಜೊತೆಗೆ ತೆಗೆಸಿಕೊಂಡ ಫೋಟೋವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಜೊತೆಗೆ ಆ ದಿನಗಳನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿರುವೆ ಎಂದು ಹೇಳಿದ್ದಾರೆ. ಸುದೀಪ್ ತಮ್ಮ ತಾಯಿ ಸರೋಜಾ, ಸಹೋದರಿಯರಾದ ಸುರೇಖಾ ಹಾಗೂ ಸುಜಾತಾ ಅವರೊಂದಿಗೆ ತೆಗೆಸಿಕೊಂಡ ಬ್ಲ್ಯಾಕ್ ಅಂಡ್ ವೈಟ್ ಫೋಟೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. “ಈಗಿನ ದಿನಗಳಲ್ಲಿ ಕುಟುಂಬದ ಜೊತೆಗೆ ಇಂತಹ ಅಪರೂಪದ ಫೋಟೋಗಳನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿಯಲು ಕಷ್ಟವಾಗುತ್ತಿದೆ. ಆ ಗಳಿಗೆಯನ್ನು ನಾನು …

Read More »

ಜುಲೈ 26 ರವರೆಗೆ 144 ಸೆಕ್ಷನ್ ಜಾರಿಗರಿಷ್ಟ 20 ಮಂದಿಗೆ ಮಾತ್ರ ಅವಕಾಶ:ಭಾಸ್ಕರ್ ರಾವ್ ಆದೇಶ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಮಹಾಸ್ಫೋಟವಾಗುತ್ತಿದ್ದಂತೆ ಮತ್ತೆ ಒಂದು ತಿಂಗಳು ಬೆಂಗಳೂರಿನಲ್ಲಿ 144 ಸೆಕ್ಷನ್ ಮುಂದುವರಿಕೆ ಮಾಡಲಾಗಿದೆ. ಜುಲೈ 26 ರವರೆಗೆ 144 ಸೆಕ್ಷನ್ ಜಾರಿ ಮಾಡಿ ಪೊಲೀಸ್ ಕಮೀಷನರ್ ಭಾಸ್ಕರ್ ರಾವ್ ಅವರು ಆದೇಶ ಹೊರಡಿಸಿದ್ದಾರೆ. ಬೆಂಗಳೂರು ನಗರದಲ್ಲಿ ಕೋವಿಡ್ 19 ಹರಡುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಮತ್ತೆ ಕಟ್ಟುನಿಟ್ಟಾಗಿ ಕ್ರಮಗಳನ್ನು ಜಾರಿಗೊಳಿಸಿದ್ದಾರೆ. 1. ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿ ವ್ಯಕ್ತಿಯು ಕಡ್ಡಾಯವಾಗಿ ಮಾಸ್ಕ್ ಧರಿಸುವುದು 2. ಸಾರ್ವಜನಿಕ ಸ್ಥಳದಲ್ಲಿ …

Read More »

ದಟ್ಟ ಕಾನನನದ ನಡುವೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಫ್ಯಾಂಟನ್ ನಿರ್ಮಾಣ

ಬೆಂಗಳೂರು: ದಟ್ಟ ಕಾನನನದ ನಡುವೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಫ್ಯಾಂಟನ್ ನಿರ್ಮಾಣವಾಗುತ್ತಿದೆ. ಈ ದಟ್ಟ ಕಾನನಕ್ಕಾಗಿ ಫ್ಯಾಂಟಮ್ ಅಖಾಡದಲ್ಲಿ ರಾಜಮಂಡ್ರಿಯಿಂದ ಗಿಡ-ಮರಗಳನ್ನು ತುಂಬಿಕೊಂಡ 22 ಲಾರಿಗಳು ಆಗಮಿಸಿವೆ. ಫ್ಯಾಂಟಮ್ ನಿರ್ಮಾಪಕರು ಸುಮಾರು 30 ರಿಂದ 40 ಲಕ್ಷ ಬಂಡವಾಳ ಹಾಕಿ ಈ ಗಿಡಮರಗಳನ್ನು ಖರೀದಿಸಿದ್ದಾರಂತೆ. ಲಾಕ್‍ಡೌನ್ ಮುನ್ನ ಈ ಗಿಡಗಳನ್ನು ತರಿಸಲಾಗಿತ್ತು. ಶೇಕಡ 70ರಷ್ಟು ಸೆಟ್ ವರ್ಕ್ ಕೂಡ ನಡೆದಿತ್ತು. ಈ ನಡುವೆ ಲಾಕ್‍ಡೌನ್ ಆಗಿದ್ರಿಂದ ಶೂಟಿಂಗ್ ಕ್ಯಾನ್ಸಲ್ …

Read More »

ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ದಿನೇ ದಿನೇ ಸ್ಫೋಟ,ಶನಿವಾರ ಬರೋಬ್ಬರಿ 596 ಪ್ರಕರಣ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ದಿನೇ ದಿನೇ ಸ್ಫೋಟವಾಗಿದೆ. ಇಷ್ಟು ದಿನ 100 ರಿಂದ 150 ಹೊಸ ಪ್ರಕರಣಗಳು ದಾಖಲಾಗುತ್ತಿದ್ದವು. ಆದರೆ ಶನಿವಾರ ಬರೋಬ್ಬರಿ 596 ಪ್ರಕರಣ ದಾಖಲಾಗಿವೆ. ಈ ಮೂಲಕ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 2,592ಕ್ಕೆ ಏರಿಕೆ ಆಗಿದೆ. ಜೂನ್ 6 ರವರೆಗೂ ನಿಯಂತ್ರಣದಲ್ಲಿದ್ದ ಕೊರೊನಾ ಜೂನ್ 6 ನಂತರ ಬೆಂಗಳೂರಿನಲ್ಲಿ ಸ್ಫೋಟವಾಗುತ್ತಿದೆ. ವಯಸ್ಸಾದವರಲ್ಲಿ, ಉಸಿರಾಟದ ಸಮಸ್ಯೆ ಇದ್ದವರಲ್ಲಿ, ನಾನಾ ಕಾಯಿಲೆಗಳಿಂದ ಬಳಲುತ್ತಾ ಇದ್ದವರಲ್ಲಿ ಸೋಂಕು ಪತ್ತೆಯಾಗುತ್ತಿದೆ. …

Read More »