ಬೆಂಗಳೂರು: ಕೊರೊನಾ ಚಿಕಿತ್ಸಾ ಉಪಕರಣ ಖರೀದಿಯಲ್ಲಿ ಹಗರಣ ನಡೆದಿದೆ ಎಂದು ಗಂಭೀರ ಆರೋಪ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಸರ್ಕಾರದ ವಿರುದ್ಧ ಲೆಕ್ಕಕೊಡಿ ಅಭಿಯಾನ ಆರಂಭಿಸಿದ್ದರು. ಈಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ‘ಉತ್ತರ ಕೊಡಿ ಬಿಜೆಪಿ’ ಅಂತಾ ಸಮರ ಸಾರಿದ್ದಾರೆ. ಬಿಜೆಪಿ ಸರ್ಕಾರದ ವಿರುದ್ಧ ವೆಂಟಿಲೇಟರ್ ಹಗರಣದ ಆರೋಪ ಮಾಡಿದ್ದಾರೆ. ತಮಿಳುನಾಡು ಸರ್ಕಾರ ತಲಾ 4.78 ಲಕ್ಷ ರೂಪಾಯಿಗೆ ಖರೀದಿಸಿದ ವೆಂಟಿಲೇಟರ್ ಗೆ ಕರ್ನಾಟಕ ಸರ್ಕಾರ 18.20 ಲಕ್ಷ ರೂಪಾಯಿ …
Read More »ಬೆಂಗಳೂರಲ್ಲಿ ಲಾಕ್‍ಡೌನ್ ಮುಂದುವರಿಯುತ್ತಾ?- ಸಚಿವರಲ್ಲಿ ಗೊಂದಲವೋ, ಗೊಂದಲ
ಬೆಂಗಳೂರು: ಲಂಗು ಲಗಾಮಿಲ್ಲದೇ ಅಬ್ಬರಿಸಿ ಬೊಬ್ಬಿರಿಯುತ್ತಿರುವ ಕೊರೊನಾ ಮಾರಿ ಬೆಂಗಳೂರಲ್ಲಿ ಕಂಟ್ರೋಲ್ ಸಿಗುತ್ತಿಲ್ಲ. ಒಂದು ವಾರ ಸಾವಿರ ರೇಂಜ್‍ನಲ್ಲಿದ್ದ ಸೋಂಕು ಈಗ 2 ಸಾವಿರ ರೇಂಜ್‍ಗೆ ಬಂದಿದೆ. ಕಳೆದ ಮೂರು ದಿನಗಳಿಂದ 2 ಸಾವಿರಕ್ಕಿಂತ ಹೆಚ್ಚು ಪ್ರಕರಣಗಳು ದಾಖಲಾಗ್ತಿವೆ. ಇದನ್ನರಿತ ಸರ್ಕಾರ ಒಂದು ವಾರ ಬೆಂಗಳೂರಿಗೆ ಬೀಗ ಜಡಿದಿದೆ. ಅದರಲ್ಲಿ ಈಗ 3 ದಿನ ಕಳೆದು ಹೋಗಿದೆ. ಉಳಿದಿರೋದು ಇನ್ನೂ ನಾಲ್ಕು ದಿನ ಮಾತ್ರ. ಅಷ್ಟರಲ್ಲಿ ಕೊರೊನಾ ಕಂಟ್ರೋಲ್‍ಗೆ ಸಿಗುತ್ತಾ? …
Read More »ಚಿಕಿತ್ಸೆ ಸಿಗದೆ ಸಾವನ್ನಪ್ಪಿದ ಮಗುವಿನ ತಂದೆ ಮುಖ್ಯಮಂತ್ರಿ ಮನೆಯ ಮುಂದೆ ಪ್ರತಿಭಟನೆ
ಬೆಂಗಳೂರು: ಕೊರೊನಾ ನಡುವೆ ಸುಮಾರು 10 ಆಸ್ಪತ್ರೆಯನ್ನು ಸುತ್ತಿದರೂ ಚಿಕಿತ್ಸೆ ಸಿಗದೆ ಸಾವನ್ನಪ್ಪಿದ ಮಗುವಿನ ತಂದೆ ಮುಖ್ಯಮಂತ್ರಿ ಮನೆಯ ಮುಂದೆ ಪ್ರತಿಭಟನೆ ಮಾಡುತ್ತಿದ್ದರು. ಇದೀಗ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸಿಎಂ ಯಡಿಯೂರಪ್ಪ ಅವರ ಬೆಂಗಳೂರಿನ ಧವಳಗಿರಿ ನಿವಾಸದ ಮುಂದೆ ಮಗುವಿನ ತಂದೆ ಧರಣಿ ಕುಳಿತು ಪ್ರತಿಭಟನೆ ಮಾಡುತ್ತಿದ್ದರು. ತನಗಾದ ಅನ್ಯಾಯ ಬೇರೆಯವರಿಗೆ ಆಗದಿರಲಿ ಎಂದು ಖಾಸಗಿ ಆಸ್ಪತ್ರೆಗಳ ಮೇಲೆ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ ಮಾಡುತ್ತಿದ್ದರು. ಜುಲೈ 11 ರಂದು …
Read More »ನಾಲ್ಕು ಬಾರಿ ಕೋವಿಡ್ ಟೆಸ್ಟ್- ಯಡಿಯೂರಪ್ಪಗೆ ಕೊರೊನಾ ನೆಗೆಟಿವ್
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮತ್ತೊಮ್ಮೆ ಕೋವಿಡ್ ಟೆಸ್ಟ್‌ಗೆ ಒಳಗಾಗಿದ್ದು, ಈ ಬಾರಿಯೂ ವರದಿಯಲ್ಲಿ ಕೊರೊನಾ ನೆಗೆಟಿವ್ ಬಂದಿದೆ. ಸಿಎಂ ನಿವಾಸ ಮತ್ತು ಕೃಷ್ಣಾದಲ್ಲಿ ಕೆಲಸ ಮಾಡುತ್ತಿದ್ದವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಅವರು ಕೋವಿಡ್ ಟೆಸ್ಟ್ ಮಾಡಿಸಿದ್ದರು. ವರದಿಯಲ್ಲಿ ನೆಗೆಟಿವ್ ಬಂದಿದೆ. ಇದುವರೆಗೆ ಸುಮಾರು ನಾಲ್ಕು ಬಾರಿ ಸಿಎಂ ಯಡಿಯೂರಪ್ಪ ಕೋವಿಡ್ ಪರೀಕ್ಷೆ ಮಾಡಿಸಿದ್ದಾರೆ. ಈ ಎಲ್ಲಾ ಟೆಸ್ಟ್‌ಗಳಲ್ಲಿ ಸಿಎಂಗೆ ಕೊರೊನಾ ನೆಗೆಟಿವ್ ಬಂದಿದೆ. …
Read More »ಕೋವಿಡ್-19 | ಲಾಕ್‌ಡೌನ್ ವಿಸ್ತರಣೆ ಇಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ
ಬೆಂಗಳೂರು: ಲಾಕ್‌ಡೌನ್ ಮುಂದುವರಿಸಬೇಕು ಎಂಬ ಪ್ರಬಲ ಒತ್ತಡಗಳ ನಡುವೆಯೂ ಅದನ್ನು ಮತ್ತೊಂದು ಅವಧಿಗೆ ಮುಂದುವರಿಸದೇ ಇರಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಠಿಣ ನಿರ್ಧಾರ ತೆಗೆದುಕೊಂಡಿದ್ದಾರೆ. ‘ಕೋವಿಡ್ ನಿಯಂತ್ರಿಸಲು ಲಾಕ್‌ಡೌನ್‌ನಿಂದ ಹೆಚ್ಚಿನ ಪ್ರಯೋಜನ ಆಗದ ಕಾರಣ, ಅದನ್ನು ಮುಂದುವರಿಸುವ ಆಲೋಚನೆ ಸರ್ಕಾರಕ್ಕಿಲ್ಲ. ರೋಗಿಗಳಿಗೆ ಪರಿಣಾಮಕಾರಿ ಚಿಕಿತ್ಸೆಯೇ ಕೊರೊನಾ ಮಣಿಸಲು ಇರುವ ಏಕೈಕ ಮಾರ್ಗ’ ಎಂಬ ದೃಢ ಮಾತುಗಳನ್ನು ಅವರು ಆಡಿದ್ದಾರೆ. ಬೆಂಗಳೂರಿನ ಎಂಟು ವಲಯಗಳಲ್ಲಿ ಹೆಚ್ಚುತ್ತಿರುವ ಕೋವಿಡ್ ಪರಿಸ್ಥಿತಿ ನಿರ್ವಹಣೆಯ ಮಾಹಿತಿ …
Read More »ಬೆಂಗಳೂರಿನಲ್ಲಿ ಲಾಕ್‌ಡೌನ್ ವಿಸ್ತರಿಸಿʼ: ತಜ್ಞರ ಸಲಹೆ
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆ ಸಾವಿರ ದಾಟಿದರೆ ಮತ್ತೆ ಲಾಕ್‍ಡೌನ್ ಮಾಡಬೇಕಾಗುತ್ತದೆ ಎಂದು 15 ದಿನಗಳ ಹಿಂದೆಯೇ ಕೊರೊನಾ ತಜ್ಞರು ಸರ್ಕಾರಕ್ಕೆ ಸಲಹೆ ನೀಡಿದ್ದರು. ಈಗಲೂ ಕೂಡ ತಜ್ಞರು ಸರ್ಕಾರಕ್ಕೆ ಸಲಹೆ ನೀಡಿದ್ದು, ತಕ್ಷಣಕ್ಕೆ ಲಾಕ್‍ಡೌನ್ ತೆರವು ಬೇಡ ಬೇಡ ವಿಸ್ತರಿಸಿ ಎಂದಿದ್ದಾರೆ. ತಜ್ಞರ ಸಲಹೆ ಏನು? ದಿನದ ಸೋಂಕಿತರ ಸಂಖ್ಯೆ 2 ಸಾವಿರ ದಾಟಿದೆ. ಇಂತಹ ಸಂದರ್ಭಗಳಲ್ಲಿ ಮೈಮರೆಯಬಾರದು. ಈಗ ಲಾಕ್‍ಡೌನ್ ತೆರವು ಮಾಡಿದರೆ ಜುಲೈ ಅಂತ್ಯದಲ್ಲಿ ಕೇಸ್ …
Read More »ಬೆಳಗಾವಿಯಲ್ಲಿ 95 ಜನರಿಗೆ ಸೋಂಕು ಪತ್ತೆಯಾಗಿದೆ.
ಬೆಂಗಳೂರು – ರಾಜ್ಯದಲ್ಲಿ ಇಂದು 3693 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಬೆಳಗಾವಿಯಲ್ಲಿ 95 ಜನರಿಗೆ ಸೋಂಕು ಪತ್ತೆಯಾಗಿದೆ. ಬೆಂಗಳೂರಿನಲ್ಲಿ 2208, ಧಾರವಾಡದಲ್ಲಿ 157, ಬಳ್ಳಾರಿ 133, ವಿಜಯಪುರ 118, ಮೈಸೂರು 93, ಕಲಬುರಗಿ 89, ಉಡುಪಿ 80, ಉತ್ತರ ಕನ್ನಡ 75 ಜನರಿಗೆ ಸೋಂಕು ಪತ್ತೆಯಾಗಿದೆ.
Read More »ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೋಂ ಕ್ವಾರಂಟೈನ್
ಬೆಂಗಳೂರು: ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೋಂ ಕ್ವಾರಂಟೈನ್ ಆಗಿದ್ದಾರೆ. ಕಾರು ಚಾಲಕನಿಗೆ ಕೊರೊನಾ ಪಾಸಿಟಿವ್ ದೃಢ ಪಟ್ಟ ಹಿನ್ನೆಲೆಯಲ್ಲಿ ಭಾಸ್ಕರ್ ರಾವ್ ಹೋಂ ಕ್ವಾರಂಟೈನ್‌ನಲ್ಲಿದ್ದಾರೆ. ಭಾಸ್ಕರ್ ರಾವ್ ಕಾರು ಚಾಲಕ ಕೋವಿಡ್ ಪರೀಕ್ಷೆ ಮಾಡಿಸಿದ್ದರು. ಇಂದು ಪಾಸಿಟಿವ್ ಎಂದು ಗೊತ್ತಾದ ಬಳಿಕ ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಭಾಸ್ಕರ್ ರಾವ್, ಚಾಲಕನಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ 4 ದಿನಗಳ ಕಾಲ …
Read More »ಬೆಂಗ್ಳೂರಿನಲ್ಲಿ ಕೊರೊನಾಗೆ 507 ಮಂದಿ ಬಲಿ- ಸಾವಿನ ಸಂಖ್ಯೆ ಹೆಚ್ಚಾಗಲು ಕಾರಣ ತಿಳಿಸಿದ ವೈದ್ಯರು
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಮರಣ ನರ್ತನಕ್ಕೆ ಗುರುವಾರ 70 ಮಂದಿ ಬಲಿಯಾಗಿದ್ದು, ಬೆಂಗಳೂರಿನಲ್ಲಿ ಕೊರೊನಾಗೆ ಸಾವನ್ನಪ್ಪಿದ್ದವರ ಸಂಖ್ಯೆ 507ಕ್ಕೆ ಏರಿಕೆ ಆಗಿದೆ. ಬೆಂಗಳೂರಿನಲ್ಲಿ ಕೊರೊನಾಗೆ ದಿನೇ ದಿನೇ ಅಧಿಕ ಜನರು ಬಲಿಯಾಗುತ್ತಿದ್ದಾರೆ. ಕೊರೊನಾ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲಿಕೊಳ್ಳಲು ವಿಳಂಬವಾಗುತ್ತಿರುವುದರಿಂದ ಕೆಲವರು ಸಾಯುತ್ತಿದ್ದಾರೆ. ಇನ್ನೂ ಕೆಲವರು ಈಗಾಗಲೇ ಕಿಡ್ನಿ ಸಮಸ್ಯೆ, ಹೈಪರ್ ಟೆನ್ಶನ್, ಶುಗರ್, ಕ್ಯಾನ್ಸರ್‍ನಂತಹ ಕಾಯಿಲೆ ಬಳಲುತ್ತಿರುತ್ತಾರೆ. ಅಂತವಹರಿಗೆ ಕೊರೊನಾ ತಗುಲಿದ್ದು, ಬೇರೆ ಕಾಯಿಲೆ ಉಲ್ಬಣಗೊಂಡು ಮೃತಪಡುತ್ತಿದ್ದಾರೆ ಎಂದು …
Read More »ಕೊರೊನಾ ನಡುವೆ ಚಿಕಿತ್ಸೆ ಸಿಗದೇ ತಿಂಗಳ ಹಸುಗೂಸೊಂದು ಜೀವ ಬಿಟ್ಟಿದೆ.
ಬೆಂಗಳೂರು: ಕೊರೊನಾ ನಡುವೆ ಚಿಕಿತ್ಸೆ ಸಿಗದೇ ತಿಂಗಳ ಹಸುಗೂಸೊಂದು ಜೀವ ಬಿಟ್ಟಿದೆ. ಜುಲೈ 11ರಂದು ಹೃದಯದ ಸಮಸ್ಯೆಗೆ ತುತ್ತಾದ ಒಂದು ತಿಂಗಳ ಮಗುವನ್ನು ಉಳಿಸಿಕೊಳ್ಳಲು ಬೆಂಗಳೂರಿನ ಮಂಜುನಾಥನಗರದ ಪೋಷಕರು ಪಟ್ಟ ಪಾಡು ಅಷ್ಟಿಷ್ಟಲ್ಲ. ಬರೋಬ್ಬರಿ 36 ಗಂಟೆಗಳ ಕಾಲ 200 ಕಿಲೋಮೀಟರ್ ಸುತ್ತಿದ್ರೂ, ಹತ್ತಾರು ಆಸ್ಪತ್ರೆಗಳ ಮೆಟ್ಟಿಲನ್ನು ಹತ್ತಿಳಿದ್ರೂ, ನಿರ್ದಯಿ ಆಸ್ಪತ್ರೆ ಸಿಬ್ಬಂದಿ ಮಗುವನ್ನು ಪರೀಕ್ಷಿಸಿ ಅಡ್ಮಿಟ್ ಮಾಡಿಕೊಂಡಿಲ್ಲ.ಬೆಡ್ ಮತ್ತು ಕೊರೊನಾ ನೆಪ ಹೇಳಿದ ಆಸ್ಪತ್ರೆಗಳು ಮಗುವನ್ನು ಅಡ್ಮಿಟ್ ಮಾಡಿಕೊಳ್ಳಲು …
Read More »