Breaking News
Home / ಜಿಲ್ಲೆ / ಬೆಂಗಳೂರು (page 361)

ಬೆಂಗಳೂರು

ಐಎಎಸ್ ಅಧಿಕಾರಿವಿಜಯ್ ಶಂಕರ್ಆತ್ಮಹತ್ಯೆಗೆ ಶರಣಾಗಿದ್ದಾರೆ.

ias sucide

ಬೆಂಗಳೂರು: ಬಹುಕೋಟಿ ಐಎಂಎ ಹಗರಣದಲ್ಲಿ ಜೈಲು ವಾಸ ಅನುಭವಿಸಿದ್ದ ಐಎಎಸ್ ಅಧಿಕಾರಿ ವಿಜಯ್ ಶಂಕರ್ ಇಂದು ಬೆಂಗಳೂರಿನ ಜಯನಗರದ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಮಾನತುಗೊಂಡಿದ್ದ ವಿಜಯ್ ಶಂಕರ್ 20 ದಿನಗಳ ಹಿಂದೆ ಕೆಲಸಕ್ಕೆ ಮರಳಿದ್ದರು. ಇಂದು ಬೆಳಗ್ಗೆ ಕಚೇರಿಯಲ್ಲಿ ಸಾಲು ಸಾಲು ಸಭೆ ನಡೆಸಿದ್ದು, ಲವಲವಿಕೆಯಿಂದಲೇ ಕೆಲಸ ಮಾಡಿದ್ದರು ಎಂದು ತಿಳಿದು ಬಂದಿದೆ. 1.5 ಕೋಟಿ ಲಂಚದ ಆರೋಪ: ಐಎಂಎ ಪ್ರಕರಣದಲ್ಲಿ 1.5 ಕೋಟಿ ರೂ. ಲಂಚ …

Read More »

ಕೊರೊನಾ ಭಯದ ಮಧ್ಯೆನಾಳೆಯಿಂದ SSLC ಪರೀಕ್ಷೆ……….

ಬೆಂಗಳೂರು: ಕೊರೊನಾ ಭಯದ ಮಧ್ಯೆ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಆತಂಕ ಶುರುವಾಗಿದೆ. ಯಾವುದೇ ಕಾರಣಕ್ಕೂ ಪರೀಕ್ಷೆ ಮುಂದೂಡಿಕೆ ಸಾಧ್ಯವಿಲ್ಲ ಅಂತ ಶಿಕ್ಷಣ ಇಲಾಖೆ ಹೇಳಿದೆ. ಜೊತೆಗೆ ಸಿದ್ಧತೆ ಕೂಡ ನಡೆಸಿದೆ. ರಾಜ್ಯದಲ್ಲಿ ಕೊರೊನಾ ಹೆಮ್ಮಾರಿ ಆರ್ಭಟದ ನಡುವೆಯೂ ನಿಗದಿಯಂತೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮಾಡಿಯೇ ತೀರಲು ಶಿಕ್ಷಣ ಇಲಾಖೆ ಪಣ ತೊಟ್ಟಿದೆ. ನಾಳೆಯಿಂದ ರಾಜ್ಯಾದ್ಯಂತ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಆರಂಭವಾಗಲಿದೆ. ಕೊರೊನಾ ಆತಂಕದ ನಡುವೆಯೇ 8.5 ಲಕ್ಷ ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲಿದ್ದಾರೆ. …

Read More »

ಗ್ರಾಮದ ಜನರಲ್ಲಿ ಆತಂಕ ಮೂಡಿಸಿದ್ದ 8 ವರ್ಷದ ಚಿರತೆ ಸೆರೆ………

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಚಿರತೆಯೊಂದು ಇಂದು ಬೋನಿಗೆ ಬಿದ್ದಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದ ಬಳಿಯ ಸೀಗೆಪಾಳ್ಯ ಗ್ರಾಮ ಹಾಗೂ ಸುತ್ತಮುತ್ತಲಿನ ಗ್ರಾಮದಲ್ಲಿ ಅನೇಕ ದಿನಗಳಿಂದ ಉಪಟಳ ನೀಡುತ್ತಿದ್ದ ಸುಮಾರು 8 ವರ್ಷದ ಗಂಡು ಚಿರತೆಯನ್ನು ಅರಣ್ಯ ಅಧಿಕಾರಿಗಳು ಬೋನ್ ಇಟ್ಟು ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ. ಈ ಚಿರತೆ ಸೆರೆಯಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಚಿರತೆ ಸೆರೆಯಾದ ಸ್ಥಳಕ್ಕೆ ನೆಲಮಂಗಲ ವಲಯ ಅರಣ್ಯಾಧಿಕಾರಿಗಳು …

Read More »

ಮಾಜಿ ಶಾಸಕ ಹೆಚ್.ಸಿ.ಬಾಲಕೃಷ್ಣ ಪುತ್ರಿಗೆ ಕೊರೊನಾ ಸೋಂಕು…….

ಬೆಂಗಳೂರು: ಮಾಜಿ ಶಾಸಕ ಹೆಚ್.ಸಿ.ಬಾಲಕೃಷ್ಣ ಪುತ್ರಿಗೆ ಕೊರೊನಾ ಸೋಂಕು ತಗುಲಿದೆ. ಈ ಕುರಿತು ಬಾಲಕೃಷ್ಣ ಅವರೇ ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದಾರೆ. ನನ್ನ ಮಗಳು ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯೆ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಕೊರೊನಾ ಪರೀಕ್ಷೆ ಮಾಡಿಸಿದಾಗ ವರದಿಯಲ್ಲಿ ಸೋಂಕು ತಗುಲಿರೋದು ದೃಢಪಟ್ಟಿದೆ. ಈ ವಿಷಯವನ್ನು ನಿಮ್ಮೆಲ್ಲರ ಗಮನಕ್ಕೆ ಒಬ್ಬ ಜವಾಬ್ದಾರಿಯುತ ಜನಪ್ರತಿನಿಧಿಯಾಗಿ ಈ ಪ್ರಮುಖ ವಿಚಾರವನ್ನು ತಿಳಿಸಲು ಇಚ್ಛೆ ಪಡುತ್ತೇನೆ. …

Read More »

ಕೊರೊನಾ ಜಾಗೃತಿ ಮೂಡಿಸುತ್ತಾ ತರಕಾರಿ ವ್ಯಾಪಾರ- ವಿಡಿಯೋ ನೋಡಿ……

ಕೋಲಾರ: ಇಡೀ ವಿಶ್ವವನ್ನೇ ಹೆಮ್ಮಾರಿ ಕೊರೊನಾ ವೈರಸ್ ಭಾದಿಸುತ್ತಿದ್ದು, ಎಲ್ಲಿ ಹೋದ್ರೆ ಏನಾಗುತ್ತೊ, ಏನ್ ತಿಂದ್ರೆ ಏನ್ ಬರುತ್ತೊ ಅಂತಾ ಜನ ಭಯಭೀತರಾಗಿದ್ದಾರೆ. ಈ ನಡುವೆ ಕೋಲಾರದ ರೈತ ತಾನು ಬೆಳೆದ ತರಕಾರಿಯನ್ನ ಬೈಕ್ ನಲ್ಲಿ ಇಟ್ಟುಕೊಂಡು ಊರೂರು ಸುತ್ತಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸುತ್ತಾ ಮಾರಾಟ ಮಾಡುತ್ತಿದ್ದಾರೆ. ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ರಾಜೇನಹಳ್ಳಿಯ ರೈತ ಯಲ್ಲಪ್ಪ ಮೂರ್ನಾಲ್ಕು ಭಾಷೆಗಳಲ್ಲಿ ಜೋರಾಗಿ ಕೂಗುತ್ತಾ ಸೊಪ್ಪು ತರಕಾರಿ ಮಾರುತ್ತಿದ್ದಾರೆ. ಜಾದೂಗಾರನಂತೆ …

Read More »

ಉದ್ಯಾನ ನಗರಿಯಲ್ಲಿ ವರುಣನ ಸಿಂಚನ- ಅಲ್ಲಲ್ಲಿ ಟ್ರಾಫಿಕ್ ಜಾಮ್…………

ಬೆಂಗಳೂರು: ಉದ್ಯಾನ ನಗರಿಯ ಹಲವೆಡೆ ವರುಣನ ಸಿಂಚನವಾಗಿದ್ದು, ಸುಮಾರು ಅರ್ಧ ಗಂಟೆಗಳ ಕಾಲ ಮಳೆಯಾಗಿದೆ. ನಗರದ ಯಶವಂತಪುರ, ಪೀಣ್ಯ, ಮಲ್ಲೇಶ್ವರ ಸೇರಿದಂತೆ ಹಲವೆಡೆ ಸುಮಾರು ಅರ್ಧ ಗಂಟೆಗಳ ಕಾಲ ಮಳೆಯಾಗಿದೆ. ಮಳೆಯಿಂದಾಗಿ ಟ್ರಾಫಿಕ್ ಜಾಮ್ ಸಂಭವಿಸಿದ್ದು ವಾಹನ ಸವಾರರು ಪರದಾಡುವಂತಾಯಿತು. ಬೆಳಗಿನಿಂದಲೂ ಶೆಖೆ ವಾತಾವರಣವಿತ್ತು. ಅಲ್ಲದೆ ಮಧ್ಯಾಹ್ನ ಸಹ ಸ್ವಲ್ಪ ಪ್ರಮಾಣದಲ್ಲಿ ಬಿಸಿಲು ಇತ್ತು. ಆದರೆ ಸಂಹೆ ನಾಲ್ಕು ಗಂಟೆ ಸುಮಾರಿಗೆ ವರಣ ಸಿಂಚನವಾಗಿದೆ. ಮಳೆಯಿಂದಾಗಿ ತುಮಕೂರು ರಸ್ತೆ, ಯಶವಂತಪುರ, …

Read More »

ಸಚಿವ ಡಾ.ಸುಧಾಕರ್ ತಂದೆ ನಂತರ ಮನೆಗೆಲಸದವನಿಗೂ ಕೊರೊನಾ ಸೋಂಕು ದೃಢ……..

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಂದೆಯ ಬಳಿಕ ಮನೆಗೆಲಸದವನಿಗೂ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಡಾ.ಸುಧಾಕರ್ ತಂದೆ ಹಾಗೂ ಮನೆಗೆಲಸದವನಿಗೆ ಕೊರೊನಾ ಸೋಂಕು ತಗುಲಿದ ಹಿನ್ನೆಲೆ ಅವರ ಇಡೀ ಕುಟುಂಬವನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಸಚಿವ ಡಾ.ಸುಧಾಕರ್, ಡಾ.ಸುಧಾಕರ್ ಪತ್ನಿ, ಇಬ್ಬರು ಮಕ್ಕಳು, 10ಕ್ಕೂ ಹೆಚ್ಚು ಮನೆಗೆಲಸದವರನ್ನು ಸದ್ಯ ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಕಟ್ಟುನಿಟ್ಟಿನ ಹೋಮ್ ಕ್ವಾರಂಟೈನ್ ಮಾಡಿದ್ದಾರೆ. ಕೊರೊನಾ ಆತಂಕದ ಹಿನ್ನೆಲೆ ಸಚಿವರ …

Read More »

ವಿಧಾನಪರಿಷತ್‍ಗೆ ಏಳು ಅಭ್ಯರ್ಥಿಗಳು ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಪರಿಷತ್‍ಗೆ ಸ್ಪರ್ಧಿಸಿದ್ದ ಏಳು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿಯ ಎಂಟಿಬಿ ನಾಗರಾಜ್, ಆರ್ ಶಂಕರ್, ಸುನಿಲ್ ವಲ್ಯಾಪುರೆ, ಪ್ರತಾಪ್ ಸಿಂಹ ನಾಯಕ್, ಕಾಂಗ್ರೆಸ್‍ನ ಹರಿಪ್ರಸಾದ್, ನಸೀರ್ ಅಹ್ಮದ್ ಮತ್ತು ಜೆಡಿಎಸ್‍ನ ಗೋವಿಂದರಾಜು ಅವಿರೋಧ ಆಯ್ಕೆಯಾಗಿದ್ದಾರೆ. ಮಾಜಿ ಸಚಿವ ಹೆಚ್.ವಿಶ್ವನಾಥ್ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ ಕೊನೆ ಕ್ಷಣದಲ್ಲಿ ಟಿಕೆಟ್ ತಪ್ಪಿತ್ತು. ಏಳು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಏಳು ಮಂದಿಯಷ್ಟೇ ಕಣದಲ್ಲಿ ಇದ್ದ ಕಾರಣ ಎಲ್ಲರೂ ಅವಿರೋಧ ಆಯ್ಕೆ ಆಗಿದ್ದಾರೆ.

Read More »

……..ಮೇಲ್ಮನೆಗೆ 7 ಅಭ್ಯರ್ಥಿಗಳು ಅವಿರೋಧ ಆಯ್ಕೆ, ಅಧಿಕೃತ ಘೋಷಣೆ

ಬೆಂಗಳೂರು, ಜೂ.22-ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್‍ನ ಏಳು ಸದಸ್ಯ ಸ್ಥಾನಗಳಿಗೆ ನಡೆದ ದ್ವೈವಾರ್ಷಿಕ ಚುನಾವಣೆಯ ಕಣದಲ್ಲಿ ಏಳು ಮಂದಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಡಳಿತಾರೂಢ ಬಿಜೆಪಿ ಅಭ್ಯರ್ಥಿಗಳಾದ ಆರ್.ಶಂಕರ್, ಎಂಟಿಬಿ ನಾಗರಾಜು, ಕೆ.ಪ್ರತಾಪಸಿಂಹ ನಾಯಕ್, ಸುನೀಲ್ ವಲ್ಯಾಪುರ್, ಕಾಂಗ್ರೆಸ್ ಅಭ್ಯರ್ಥಿಗಳಾದ ಬಿ.ಕೆ.ಹರಿಪ್ರಸಾದ್, ನಸೀರ್ ಅಹ್ಮದ್ ಹಾಗೂ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರ ವಿಧಾನ ಪರಿಷತ್ ಚುನಾವಣೆಗೆ ಸಲ್ಲಿಸಿರುವ ನಾಮಪತ್ರ ವಾಪಸ್ ಪಡೆಯಲು ಇಂದು ಮಧ್ಯಾಹ್ನದವರೆಗೂ ಕಾಲಾವಕಾಶ ವಿತ್ತು. ಅಂತಿಮವಾಗಿ …

Read More »

ಮತ್ತೆ ಸಂಪುಟ ವಿಸ್ತರಣೆ ಆಗತ್ತಾ?…

ಬೆಂಗಳೂರು,ಜೂ.22- ಕಳೆದ ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿರುವ ಸಚಿವ ಸಂಪುಟ ವಿಸ್ತರಣೆಯಾಗಬೇಕೆಂಬ ಕೂಗು ಮತ್ತೆ ಬಿಜೆಪಿಯಲ್ಲಿ ಕೇಳಿಬಂದಿದೆ. ವಿಧಾನಪರಿಷತ್ ಚುನಾವಣೆಯಲ್ಲಿ ಎಲ್ಲಾ 7 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ. ಇವರಲ್ಲಿ ನಾಲ್ವರು ಬಿಜೆಪಿಯವರಾಗಿದ್ದಾರೆ. ವಿಧಾನ ಪರಿಷತ್ ಸದಸ್ಯರಾಗಲಿವರುವ ಎಂಟಿಬಿ ನಾಗರಾಜ್, ಆರ್. ಶಂಕರ್ ಯಡಿಯೂರಪ್ಪ ಸಂಪುಟ ಸೇರಲಿದ್ದಾರೆಯೇ? ಎಂಬುದು ಯಕ್ಷಪ್ರಶ್ನೆಯಾಗಿದೆ. ಸಂಪುಟದಲ್ಲಿ ಸದ್ಯ 5 ಸಚಿವ ಸ್ಥಾನಗಳು ಖಾಲಿ ಇವೆ. ಬಿಜೆಪಿಯ ಕೆಲವು ಶಾಸಕರು ಆಕಾಂಕ್ಷಿಗಳು ಎಂಬುದು ಗುಟ್ಟಾಗಿ ಉಳಿದಿಲ್ಲ. ಈಗ …

Read More »