Breaking News

ಬೆಂಗಳೂರು

ಕೊರೊನಾ ವಾರಿಯರ್ಸ್‌ ರಕ್ಷಣೆಗೆ ಎಂಟ್ರಿ ಕೊಡಲಿದ್ದಾರೆ ಯಂತ್ರ ಮಾನವರು……….

ಬೆಂಗಳೂರು: ಕೋವಿಡ್‌ 19 ನಿಯಂತ್ರಣದ ಜೊತೆಗೆ ಕೊರೊನಾ ವಾರಿಯರ್ಸ್‌ ರಕ್ಷಣೆಗೆ ಸರ್ಕಾರ ಮೆಗಾ ಪ್ಲಾನ್ ಮಾಡಿಕೊಂಡಿದ್ದು, ರಾಜಧಾನಿಗೆ ಯಂತ್ರ ಮಾನವರು ಎಂಟ್ರಿ ಕೊಡಲಿದ್ದಾರೆ. ಹೌದು. ಕೋವಿಡ್‌ ಕೇರ್‌ ಸೆಂಟರ್‌ಗೆ ಯಂತ್ರ ಮಾನವರನ್ನು ಕರೆ ತರಲು ಸರ್ಕಾರ ನಿರ್ಧಾರ ಮಾಡಿದೆ. ಬೆಂಗಳೂರಿನ ಬೃಹತ್ ಕೊರೊನಾ ಕೇರ್ ಸೆಂಟರ್ ಆಗಲಿರುವ ಅಂತರಾಷ್ಟ್ರೀಯ ವಸ್ತು ಪ್ರದರ್ಶನದ ಕೇಂದ್ರದಲ್ಲಿ ರೊಬೊಟ್‌ ಬಳಕೆ ಮಾಡಲು ಸರ್ಕಾರ ನಿರ್ಧಾರ ಮಾಡಿದೆ. ಮೊದಲ ಹಂತವಾಗಿ ವಸ್ತು ಪ್ರದರ್ಶನ ಕೇಂದ್ರದಲ್ಲಿ ಕೊರೊನಾ …

Read More »

ಬೆಂಗಳೂರಿನಲ್ಲಿ ಕೊರೊನಾ ತಡೆಗೆ ಅಷ್ಟದಿಗ್ಬಂಧನ?

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೊರೊನಾ ರಣಕೇಕೆಗೆ ಬ್ರೇಕ್ ಹಾಕಲು ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಮುಂದಾಗಿದ್ದು, ನಗರದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬೆಂಗಳೂರಿನ 8 ವಲಯಗಳಿಗೆ 8 ಸಚಿವರಿಗೆ ಉಸ್ತುವಾರಿ ವಹಿಸಲು ಚಿಂತನೆ ನಡೆಸಲಾಗಿದೆ. ಸದ್ಯ ಚಿಂತನೆ ಕಾರ್ಯ ರೂಪಕ್ಕೆ ತರಲು ಸಿಎಂ ಬಿಎಸ್‍ವೈ ಅವರು, ವಲಯವಾರು ಸಚಿವರಿಂದ ಅಧ್ಯಯನ ಮಾಡಿ ಸೋಮವಾರದ ವೇಳೆಗೆ ವರದಿ ಸಲ್ಲಿಸಲು ಸೂಚನೆ ನೀಡಿದ್ದಾರೆ. ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣದ …

Read More »

ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ಕೈ ಮೀರುತ್ತಿದೆ: ಸಿಎಂ ಬಿಎಸ್‍ವೈ

ಬೆಂಗಳೂರು-ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ಕೈ ಮೀರಿಹೋಗಿರುವ ಆಘಾತಕಾರಿ ವಿಷಯವನ್ನು ಖುದ್ದು ಮುಖ್ಯಮಂತ್ರಿ ಯಡಿಯೂರಪ್ಪನವರೇ ಬಹಿರಂಗಪಡಿಸಿದ್ದಾರೆ. ಕೆಲವು ಜಿಲ್ಲೆಗಳಲ್ಲಿ ಕೊರೊನಾ ಸೋಂಕು ನಮ್ಮ ಕೈ ಮೀರುವ ಹಂತಕ್ಕೆ ಬಂದಿದೆ. ಆದರೂ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಎಲ್ಲರೂ ಇದನ್ನು ತಡೆಯಲು ಸರ್ವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹಾಗೂ ಸಾವಿನ ಸಂಖ್ಯೆ ಏರಿಕೆಯಾಗುತ್ತಿರುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಈ ಹೇಳಿಕೆ ಜನತೆಯಲ್ಲಿ ಇನ್ನಷ್ಟು ಆತಂಕ …

Read More »

ರಾಜ್ಯದ ಹಲವೆಡೆ ಭಾರಿ ಮಳೆ………………..

ಬೆಂಗಳೂರು, ಜು.9- ಕೊಡಗು, ಮಂಗಳೂರು, ಕಾರವಾರ ಸೇರಿದಂತೆ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಕೆಲ ಭಾಗಗಳಲ್ಲಿ ಗುಡ್ಡ ಕುಸಿಯುವ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ತಿಂಗಳ ಆರಂಭದಿಂದ ಮುಂಗಾರು ಮಳೆ ಚುರುಕುಗೊಂಡಿದ್ದು, ರೈತರು ಸಂತಸಗೊಂಡಿದ್ದಾರೆ. ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆ ಒಂದೇ ಸಮನೆ ಸುರಿಯುತ್ತಿದ್ದು, ಕೃಷಿ ಚಟುವಟಿಕೆಗೆ ಸಹಕಾರಿಯಾಗಿದೆ. ದಕ್ಷಿಣ ಕನ್ನಡ, ಮಂಗಳೂರು, ಬೆಳ್ತಂಗಡಿ, ಉಡುಪಿ, ಕುಮಟ, ಕಾರವಾರ, ಶಿರಸಿ, ಸಾಗರ ಹಾಗೂ …

Read More »

ಮುತ್ತಪ್ಪ ರೈ ಸಾವಿನ ಬೆನ್ನಲ್ಲೇ ಶುರುವಾದ ಆಸ್ತಿ ವಿವಾದ – ಕೋರ್ಟ್ ಮೆಟ್ಟಿಲೇರಿದ ಪತ್ನಿ

ಬೆಂಗಳೂರು: ಮುತ್ತಪ್ಪ ರೈ ಸಾವಿನ ನಂತರ ಅವರ ಕುಟುಂಬದಲ್ಲಿ ಆಸ್ತಿ ವಿವಾದ ಶುರುವಾಗಿದ್ದು, ರೈ ಎರಡನೇ ಪತ್ನಿ ಆಸ್ತಿಯಲ್ಲಿ ಪಾಲು ಕೇಳಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಮುತ್ತಪ್ಪ ರೈ ಅವರು ಸಾಯುವ ಮುನ್ನವೇ ತನ್ನ ಆಸ್ತಿಯ ಬಗ್ಗೆ ವಿಲ್ ಬರೆದು ಇಟ್ಟಿದ್ದರು. ಇದರಲ್ಲಿ ಅವರ ಆಸ್ತಿ ಯಾರಿಗೇ ಸೇರಬೇಕು ಮತ್ತು ಎಷ್ಟು ಸೇರಬೇಕು ಎಂದು ತಿಳಿಸಿದ್ದರು. ಹೀಗಿದ್ದರೂ ಅವರ ಸಾವಿನ ಬಳಿಕ ಅವರ ಎರಡನೇ ಪತ್ನಿ ಅನುರಾಧ ಪಾಲು ಕೋರಿ ಕೋರ್ಟ್ …

Read More »

1.20 ಲಕ್ಷ ಮಂದಿ ಕೊರೋನಾ ಸೋಂಕಿಗೆ ತುತ್ತಾಗಬಹುದು

ಬೆಂಗಳೂರು: ಮನುಕುಲಕ್ಕೆ ಬೆನ್ನಿಗಂಟಿದ ಬೇತಾಳದಂತೆ ಮಾರ್ಪಟ್ಟಿರುವ ಕೊರೋನಾ ಹೆಮ್ಮಾರಿ ಸದ್ಯಕ್ಕೆ ಬಿಟ್ಟು ಹೋಗುವ ರೀತಿ ಕಾಣುತ್ತಿಲ್ಲ. ನವೆಂಬರ್‌ವರೆಗೆ ಅಲ್ಲ, ಡಿಸೆಂಬರ್‌ವರಗೆ ಅಲ್ಲ, ಫೆಬ್ರವರಿ ಕಳೆದರೂ ಕೂಡ ಸೋಂಕು ಕಡಿಮೆ ಆಗುವ ಲಕ್ಷಣವೂ ಇಲ್ಲ. ಅಕ್ಟೋಬರ್, ನವೆಂಬರ್ ಹೊತ್ತಿಗೆ ಅಂದ್ರೆ ದೀಪಾವಳಿ ವೇಳೆಗೆ ನೀವು ಊಹಿಸಲಾಗದ ಮಟ್ಟಕ್ಕೆ ಕೊರೋನಾ ಸೋಂಕು ವ್ಯಾಪಿಸುತ್ತದೆ. ಸೋಂಕು ಪೀಕ್‍ಗೆ ಹೋಗುತ್ತೆ. ಸಾವು ನೋವುಗಳು ಹೆಚ್ಚಾಗಬಹುದು ಎನ್ನಲಾಗುತ್ತಿದೆ. ಕೊರೋನಾ ಹಾಟ್‍ಸ್ಪಾಟ್ ಸಿಟಿಯಾಗಿ ಮಾರ್ಪಟ್ಟಿರುವ ಬೆಂಗಳೂರಿನಲ್ಲಿ ಫೆಬ್ರವರಿ ಹೊತ್ತಿಗೆ …

Read More »

ರಾಜ್ಯದ ಗ್ರೀನ್​ಜೋನ್​ಗಳಲ್ಲಿ ಶಾಲೆ ಪುನರಾರಂಭ?; ಸರ್ಕಾರಕ್ಕೆ ತಜ್ಞರ ಸಮಿತಿ ಮಾಡಿದ ಶಿಫಾರಸಿನ ವಿವರ ಇಲ್ಲಿದೆ

ಬೆಂಗಳೂರು : ಕರ್ನಾಟಕದಲ್ಲಿ ಕೊರೋನಾ ಅಟ್ಟಹಾಸ ಮಿತಿಮೀರುತ್ತಿದೆ. ಇದರಿಂದಾಗಿ ಹಳ್ಳಿಹಳ್ಳಿಗಳಲ್ಲೂ ಜನರು ಮನೆಯಿಂದ ಹೊರಗೆ ಬರಲು ಆತಂಕ ಪಡುವಂತಾಗಿದೆ. ಈ ಆತಂಕದ ನಡುವೆಯೇ ರಾಜ್ಯ ಸರ್ಕಾರ ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ಪರೀಕ್ಷೆಗಳನ್ನು ಮಾಡಿ ಮುಗಿಸಿದೆ. ಇದೀಗ ಹಸಿರು ವಲಯಗಳಲ್ಲಿ ಮೊದಲು ಶಾಲೆ ಆರಂಭಿಸಿ, ನಂತರ ಕಂಟೋನ್ಮೆಂಟ್​ ವಲಯವನ್ನು ಹೊರತುಪಡಿಸಿ, ಉಳಿದೆಡೆ ಶಾಲೆಗಳನ್ನು ತೆರೆಯಬಹುದು ಎಂದು ತಜ್ಞರ ತಂಡ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಶಾಲೆಗಳನ್ನು ಪುನರಾರಂಭಿಸುವ ಬಗ್ಗೆ ರಾಜ್ಯ ಸರ್ಕಾರ ತಜ್ಞರ …

Read More »

ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 600 ವೈದ್ಯರ ಸೇವೆಯನ್ನು ಖಾಯಂಗೊಳಿಸಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ

ಬೆಂಗಳೂರು,ಜು.7- ಕಳೆದ ಹಲವು ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 600 ವೈದ್ಯರ ಸೇವೆಯನ್ನು ಖಾಯಂಗೊಳಿಸಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ತಮ್ಮ ಸೇವೆಯನ್ನು ಖಾಯಂಗೊಳಿಸದಿದ್ದರೆ ನಾಳೆಯಿಂದಲೇ ಕರ್ತವ್ಯಕ್ಕೆ ಹಾಜರಾಗದೆ ಮುಷ್ಕರ ಪ್ರಾರಂಭಿಸುವುದಾಗಿ ಗುತ್ತಿಗೆ ವೈದ್ಯರುಎಚ್ಚರಿಕೆ ನೀಡಿದ ಬೆನ್ನಲ್ಲೆ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ 600 ವೈದ್ಯರ ಸೇವೆಯನ್ನು ಖಾಯಂಗೊಳಿಸಲು ಸೂಚನೆ ಕೊಟ್ಟಿದ್ದಾರೆ. ಯಾವುದೇ ಕಾರಣಕ್ಕೂ ಮುಷ್ಕರ …

Read More »

ಕೋವಿಡ್ ಪರೀಕ್ಷೆಗೆ ದುಬಾರಿ ಶುಲ್ಕ ವಸೂಲಿ ಆರೋಪ, ಅಪೋಲೋ ಆಸ್ಪತ್ರೆಗೆ ನೋಟಿಸ್

ಬೆಂಗಳೂರು, ಜು.7- ಕೋವಿಡ್ ಪರೀಕ್ಷೆಗೆ ದುಬಾರಿ ಶುಲ್ಕ ವಸೂಲಿ ಮಾಡುವ ಆಸ್ಪತ್ರೆ ಮತ್ತು ಲ್ಯಾಬ್‍ಗಳ ವಿರುದ್ಧ ನಿರ್ಧಾಕ್ಷೀಣ್ಯವಾಗಿ ಕ್ರಮ ಜರುಗಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಎಚ್ಚರಿಸಿದ್ದಾರೆ. ಜೊತೆಯಲ್ಲಿ ಅಪೋಲೋ ಆಸ್ಪತ್ರೆಗೆ ನೀಡಿರುವ ನೋಟಿಸ್‍ನ ಪ್ರತಿಯನ್ನು ಪ್ರಕಟಿಸಿದ್ದಾರೆ. ಕೇಂದ್ರ ಸರ್ಕಾರದ ಸೂಚನೆಯ ಮೇರೆಗೆ ಖಾಸಗಿ ಲ್ಯಾಬ್ ಮತ್ತು ಆಸ್ಪತ್ರೆಗಳಲ್ಲಿ ಒಬ್ಬ ವ್ಯಕ್ತಿಯ ಕೋವಿಡ್ ಪರೀಕ್ಷೆಗೆ ಗರಿಷ್ಠ 4500 ರೂಪಾಯಿಗಳ ದರ ನಿಗದಿ ಮಾಡಲಾಗಿದೆ. ನಿಗದಿತ ದರಕ್ಕಿಂತ ಹೆಚ್ಚಿನ ಹಣ ವಸೂಲಿ …

Read More »

ಪ್ರಥಮ ಪಿಯುಸಿ ಪೂರಕ ಪರೀಕ್ಷೆಗೆ ದಿನಾಂಕ ನಿಗದಿ…….

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆ ಪಿಯುಸಿ ಪೂರಕ ಪರೀಕ್ಷಾ ದಿನಾಂಕವನ್ನು ಪ್ರಕಟ ಮಾಡಿ ಪಿಯುಸಿ ಬೋರ್ಡ್ ಆದೇಶ ಹೊರಡಿಸಿದೆ. ಜುಲೈ 16 ರಿಂದ 27ರ ಒಳಗೆ ಪರೀಕ್ಷೆ ಮುಗಿಸಲು ಪಿಯುಸಿ ಬೋರ್ಡ್ ಸೂಚನೆ ನೀಡಿದೆ. ಜಿಲ್ಲಾ ಮಟ್ಟ ಮತ್ತು ತಾಲೂಕು ಮಟ್ಟದಲ್ಲಿ ಆಯಾ ಕಾಲೇಜುಗಳಲ್ಲಿ ಪರೀಕ್ಷೆ ನಡೆಸಲು ಅನುಮತಿ ನೀಡಲಾಗಿದೆ. ಜೊತೆಗೆ ಕಾಲೇಜುಗಳು ಅಗತ್ಯ ವೇಳಾಪಟ್ಟಿ ರಚನೆ ಮಾಡಿಕೊಂಡು ಪೂರಕ …

Read More »