Breaking News
Home / ಜಿಲ್ಲೆ / ಬೆಂಗಳೂರು (page 370)

ಬೆಂಗಳೂರು

ಕರ್ನಾಟಕದಲ್ಲಷ್ಟೇ ಅಲ್ಲ ದೇಶಾದ್ಯಂತ ಈ ಬಾರಿ ರಾಜ್ಯಸಭೆಗೆ ಬಿಜೆಪಿ ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ:B.S.Y.

ಬೆಂಗಳೂರು,ಜೂ.9- ಕರ್ನಾಟಕದಲ್ಲಷ್ಟೇ ಅಲ್ಲ ದೇಶಾದ್ಯಂತ ಈ ಬಾರಿ ರಾಜ್ಯಸಭೆಗೆ ಬಿಜೆಪಿ ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ಮಾಡಿಕೊಟ್ಟಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ಕೆಲವು ಶಿಫಾರಸ್ಸುಗಳನ್ನು ಮಾಡಲಾಗಿತ್ತು. ಬಿಜೆಪಿ ರಾಷ್ಟ್ರೀಯ ವರಿಷ್ಠರು ನನ್ನ ಜೊತೆ ಮಾತನಾಡಿ ಈ ಬಾರಿ ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ಕೊಡಬೇಕಿದೆ ಎಂದು ಹೇಳಿದರು. ಅದರಂತೆ ಅಶೋಕ್ ಗಸ್ತಿ ಮತ್ತು ಈರಣ್ಣ ಕಡಾಡಿ ಅವರಿಗೆ …

Read More »

ರಂಗೇರಿದ ರಾಜ್ಯಸಭೆ ಚುನಾವಣೆ : ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಬೆಂಗಳೂರು, ಜೂ.9- ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುತ್ತಿರುವ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸುವುದರೊಂದಿಗೆ ಚುನಾವಣಾ ಕಾವು ರಂಗೇರಿದೆ. ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಬಿಜೆಪಿ ಅಭ್ಯರ್ಥಿಯಾಗಿ ಅಶೋಕ್ ಗಸ್ತಿ ಮತ್ತು ಈರಣ್ಣ ಕಡಾಡಿ ಅವರು ರಾಜ್ಯಸಭೆ ಚುನಾವಣಾ ಅಧಿಕಾರಿಯೂ ಆಗಿರುವ ಎಂ.ಕೆ.ವಿಶಾಲಾಕ್ಷಿ ಅವರಿಗೆ ತಮ್ಮ ತಮ್ಮ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿರುವ ಇಂದು ಯಾವುದೇ ಇತರೆ ಅಭ್ಯರ್ಥಿ …

Read More »

ರಾಜ್ಯಸಭಾ ಟಿಕೇಟ್ ಕೊಟ್ಟಿದ್ದು  ಪ್ರಭಾಕರ ಕೋರೆ, ರಮೇಶ ಕತ್ತಿ ಅವರಿಗೂ ಖುಷಿಯಾಗಿದೆ ಬೇಸರಗೊಂಡಿಲ್ಲ: ರಮೇಶ ಜಾರಕಿಹೊಳಿ

ಬೆಂಗಳೂರು: ಕಾರ್ಯಕರ್ತರಿಗೆ ರಾಜ್ಯಸಭಾ ಟಿಕೇಟ್ ಕೊಟ್ಟಿದ್ದು  ಪ್ರಭಾಕರ ಕೋರೆ, ರಮೇಶ ಕತ್ತಿ ಅವರಿಗೂ ಖುಷಿಯಾಗಿದೆ ಬೇಸರಗೊಂಡಿಲ್ಲ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.  ಬಿಜೆಪಿಯಿಂದ ರಾಜ್ಯಸಭಾ ಟಿಕೇಟ್ ಪ್ರಬಲ ಆಕಾಂಕ್ಷಿಗಳಾಗಿದ್ದ ರಮೇಶ್ ಕತ್ತಿ, ಉಮೇಶ್ ಕತ್ತಿ, ಪ್ರಭಾಕರ್ ಕೋರೆಗೆ ಅಸಮಾಧಾನ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ನಗರದಲ್ಲಿ  ಪ್ರತಿಕ್ರಿಯೆ ನೀಡಿದ ಅವರು, ಯಾರಿಗೂ ಅಸಮಾಧಾನ ಆಗಿಲ್ಲ, ಉಮೇಶ್ ಕತ್ತಿಗೆ ನಾಮಪತ್ರ ಬಳಿಕ ಭೇಟಿ ಮಾಡುತ್ತೇನೆ ಎಂದರು. ಸದ್ಯ ರಮೇಶ್ ಕತ್ತಿ, …

Read More »

ಜೂ. 29 ರಂದು ವಿಧಾನ ಪರಿಷತ್ 7 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ.

ಬೆಂಗಳೂರು: ಜೂ. 29 ರಂದು ವಿಧಾನ ಪರಿಷತ್ 7 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. ನಸೀರ್ ಅಹ್ಮದ್, ಜಯಮ್ಮ, ಎಚ್.ಎಂ. ರೇವಣ್ಣ, ಶರವಣ, ವೇಣುಗೋಪಾಲ, ಡಿ.ಯು. ಮಲ್ಲಿಕಾರ್ಜುನ್, ಎನ್.ಎಸ್. ಬೋಸರಾಜು ಅವರಿಂದ ತೆರವಾಗುವ ಏಳು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಜೂ. 11 ರಂದು ಅಧಿಸೂಸಚನೆ ಹೊರಡಿಸಲಿದ್ದು ಅಂದಿನಿಂದಲೇ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಜೂ.22 ರಂದು ನಾಮಪತ್ರ ಹಿಂಪಡೆಯಲು ಅವಕಾಶಕ್ಕೆ ದಿನಾಂಕ ನಿಗದಿಯಾಗಿದೆ. ಈ ಏಳು ಸ್ಥಾನಗಳ ಪೈಕಿ ಸದ್ಯದ ವಿಧಾನಸಭೆ ಬಲಾಬಲದ …

Read More »

ಪ್ರವಾಸಿಗರೇ ಗಮನಿಸಿ- ಹೊಗೆನಕಲ್ ಜಲಪಾತಕ್ಕಿಲ್ಲ ಪ್ರವೇಶ

ಚಾಮರಾಜನಗರ: ಹೊಗೆನಕಲ್ ಜಲಪಾತವನ್ನ ಪ್ರವಾಸಿಗರಿಗೆ ಮುಕ್ತ ಮಾಡಲು ಯಾವುದೇ ಆದೇಶ ಇದುವರೆಗೂ ಬಂದಿಲ್ಲ. ಆದ್ದರಿಂದ ಜಲಪಾತ ಭೇಟಿಗೆ ಪ್ರವಾಸಿಗರಿಗೆ ನಿರ್ಬಂಧ ಮುಂದುವರಿಸಲಾಗಿದೆ. ಭಾರತದ ನಯಾಗರ ಎಂದೇ ಕರೆಯುವ ಹೊಗೆನಕಲ್ ಜಲಪಾತಕ್ಕೆ ಪ್ರವಾಸಿಗರ ನಿರ್ಬಂಧ ಮುಂದುವರಿಸಲಾಗಿದೆ. ಈ ಬಗ್ಗೆ ಕಾವೇರಿ ವನ್ಯಜೀವಿ ಧಾಮದ ಡಿಎಫ್‍ಒ ಡಾ.ರಮೇಶ್ ಮಾತನಾಡಿ, ಹೊಗೆನಕಲ್ ಜಲಪಾತವನ್ನ ಪ್ರವಾಸಿಗರಿಗೆ ಮುಕ್ತ ಮಾಡಲು ಯಾವುದೇ ಆದೇಶ ಇದುವರೆಗೂ ಬಂದಿಲ್ಲ. ಹೀಗಾಗಿ ಸದ್ಯಕ್ಕೆ ಜಲಪಾತ ಭೇಟಿಗೆ ಪ್ರವಾಸಿಗರಿಗೆ ನಿರ್ಬಂಧ ಮುಂದುವರಿಸಲಾಗಿದೆ ಎಂದು …

Read More »

“ದೇವರಾಣೆಗೂ ಜಿಲ್ಲೆಯ ಅಭಿವೃದ್ಧಿಯೇ ನನ್ನ ಮೂಲಮಂತ್ರ”

ಹಾಸನ, ಜೂ.8- ದೇವರಾಣೆ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವುದಾಗಿ ಹಾಗೂ ಯಾವುದೇ ರಾಜಕೀಯ ಮಾಡುವ ಉದ್ದೇಶವಿಲ್ಲ ಎಂದು ನೂತನ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆಹಾರ ನಾಗರಿಕ ಮತ್ತು ವ್ಯವಹಾರಗಳ ಖಾತೆ ಸಚಿವ ಕೆ.ಗೋಪಾಲಯ್ಯ ತಿಳಿಸಿದರು. ಜಿಲ್ಲೆಯ ಚನ್ನರಾಯಪಟ್ಟಣದ ಹಿರೀಸಾವೆಯಲ್ಲಿ ಸಾಯಿಬಾಬಾ ಮಂದಿರಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಪ್ರಾಭಲ್ಯವಿರುವ ಜಿಲ್ಲಾಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಹಾಸನ ಜಿಲ್ಲಾಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. …

Read More »

ಅನಂತಕುಮಾರ್ ಕುಟುಂಬ ಕಡೆಗಣನೆ, ಬಿಜೆಪಿಯಲ್ಲಿ ಶುರುವಾಯ್ತು ಅಸಮಾಧಾನ

ಬೆಂಗಳೂರು,ಜೂ.8-ರಾಜ್ಯದಲ್ಲಿ ಬಿಜೆಪಿಯನ್ನು ತಳಮಟ್ಟದಿಂದ ಕಟ್ಟಿ ಪಕ್ಷವನ್ನು ಬೆಳೆಸಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ದಿ.ಅನಂತಕುಮಾರ್ ಅವರ ಕುಟುಂಬವನ್ನು ಕಡೆಗಣಿಸುತ್ತಿರುವುದಕ್ಕೆ ಪಕ್ಷದ ವಲಯದಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಹೊರತುಪಡಿಸಿದರೆ ಕರ್ನಾಟಕದಲ್ಲಿ ಬಿಜೆಪಿಯನ್ನು ನಗರಪ್ರದೇಶದಿಂದ ಹಳ್ಳಿಹಳ್ಳಿಗೂ ಕೊಂಡೊಯ್ದ ಕೀರ್ತಿ ಅನಂತ್‍ಕುಮಾರ್ ಅವರಿಗೆ ಸಲ್ಲುತ್ತದೆ. ಕಳೆದ ವರ್ಷ ಕ್ಯಾನ್ಸರ್ ಕಾಣಿಸಿಕೊಂಡು ಅನಂತ್‍ಕುಮಾರ್ ನಿಧನರಾದ ಮೇಲೆ ಅವರ ಕುಟುಂಬವನ್ನು ಸಂಪೂರ್ಣವಾಗಿ ಬಿಜೆಪಿ ನಾಯಕರು ನಿರ್ಲಕ್ಷ್ಯ ಮಾಡುತ್ತಾ …

Read More »

ಬ್ರೇಕ್ ಫೇಲ್- ಡಿಪೋದಿಂದ ಹೊರ ನುಗ್ಗಿದ ಬಸ್………..

ಬೆಂಗಳೂರು: ಬ್ರೀಕ್ ಫೇಲ್‍ನಿಂದಾಗಿ ಬಸ್‍ವೊಂದು ಡಿಪೋದಿಂದ ಹೊರ ನುಗ್ಗಿದ ಘಟನೆ ಪೂರ್ಣಪ್ರಜ್ಞ ನಗರದಲ್ಲಿ ನಡೆದಿದ್ದು, ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೂರ್ಣಪ್ರಜ್ಞ ನಗರದ ಡಿಪೋ 33ರಲ್ಲಿ ಇಂದು ಬೆಳಗ್ಗೆ 10:45 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಸಿಬ್ಬಂದಿ ನಿಲ್ಲಿಸಿದ್ದ 2 ಬೈಕ್, ಒಂದು ಸೈಕಲ್‍ಗೆ ಜಖಂಗೊಡಿವೆ. ಬಸ್ ಏನಾದ್ರು ಇನ್ನು ಸ್ವಲ್ಪ ಮುಂದೆ ಬಂದಿದ್ದರೆ ದೊಡ್ಡ ಹಳ್ಳಕ್ಕೆ ಬೀಳುತ್ತಿತ್ತು. ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿಪೋ 33ರ ಮ್ಯಾನೇಜರ್, ಅಪಘಾತ …

Read More »

ಕಂದನಿಗಾಗಿ ಕಾಯುತ್ತಿದ್ದ ಚಿರು, ಪತ್ನಿಗೆ ಗೊಂಬೆ ಗಿಫ್ಟ್

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಚಿರಂಜೀವಿ ಸರ್ಜಾ ಅವರು ಅಪ್ಪನಾಗುತ್ತಿರುವ ಸಂಭ್ರಮದಲ್ಲಿದ್ದರು. ಆದರೆ ಮುದ್ದು ಕಂದ ಬರುವ ಮೊದಲೇ ಚಿರು ಇಹಲೋಕ ತ್ಯಜಿಸಿದ್ದಾರೆ. ಚಿರಂಜೀವಿ ಸರ್ಜಾ ತಮ್ಮ ಮುದ್ದು ಕಂದನ ಬರುವಿಕೆಗಾಗಿ ಕಾತುರದಿಂದ ಕಾಯುತ್ತಿದ್ದರು. ಈ ಹಿನ್ನೆಲೆಯಲ್ಲಿ ಮುದ್ದು ಮಡದಿ ಮೇಘನಾಗೆ ಒಂದು ಗೊಂಬೆಯನ್ನು ಕೂಡ ಗಿಫ್ಟಾಗಿ ನೀಡಿದ್ದರು. ಈಗ ಮೇಘನಾ ಚಿರು ಇಲ್ಲದ ಹೊತ್ತಲ್ಲಿ ಆ ಮುದ್ದಾದ ಬೊಂಬೆಯನ್ನು ನೋಡುತ್ತಾ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಅಲ್ಲದೇ ಜೋಕಾಲಿ ಕಟ್ಟಿ ಬೊಂಬೆಗೆ …

Read More »

ರಾಜ್ಯಸಭೆ ಚುನಾವಣೆ : ಖರ್ಗೆಗೆ ಬಿ ಫಾರಂ ನೀಡಿದ ಡಿಕೆಶಿ

ಬೆಂಗಳೂರು,ಜೂ.8-ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಬಿ ಫಾರಂ ನೀಡಿದರು. ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಉಪಮುಖ್ಯಮಂತ್ರಿ ಪರಮೇಶ್ವರ್, ಕೆಪಿಸಿಸಿ ನಿರ್ಗಮಿತ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸೇರಿದಂತೆ ಸುಮಾರು 50 ಮಂದಿ ಖರ್ಗೆ ಅವರ ಬಿ ಫಾರಂಗೆ ಸಹಿ ಹಾಕಿದರು. ಐದು ನಾಮಪತ್ರಗಳನ್ನು ವಿಧಾನಸಭೆ ಮಾಜಿ ಅಧ್ಯಕ್ಷ ರಮೇಶ್‍ಕುಮಾರ್ ಪರಿಶೀಲನೆ ನಡೆಸಿ …

Read More »