Breaking News

ಬೆಂಗಳೂರು

……..ಮೇಲ್ಮನೆಗೆ 7 ಅಭ್ಯರ್ಥಿಗಳು ಅವಿರೋಧ ಆಯ್ಕೆ, ಅಧಿಕೃತ ಘೋಷಣೆ

ಬೆಂಗಳೂರು, ಜೂ.22-ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್‍ನ ಏಳು ಸದಸ್ಯ ಸ್ಥಾನಗಳಿಗೆ ನಡೆದ ದ್ವೈವಾರ್ಷಿಕ ಚುನಾವಣೆಯ ಕಣದಲ್ಲಿ ಏಳು ಮಂದಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಡಳಿತಾರೂಢ ಬಿಜೆಪಿ ಅಭ್ಯರ್ಥಿಗಳಾದ ಆರ್.ಶಂಕರ್, ಎಂಟಿಬಿ ನಾಗರಾಜು, ಕೆ.ಪ್ರತಾಪಸಿಂಹ ನಾಯಕ್, ಸುನೀಲ್ ವಲ್ಯಾಪುರ್, ಕಾಂಗ್ರೆಸ್ ಅಭ್ಯರ್ಥಿಗಳಾದ ಬಿ.ಕೆ.ಹರಿಪ್ರಸಾದ್, ನಸೀರ್ ಅಹ್ಮದ್ ಹಾಗೂ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರ ವಿಧಾನ ಪರಿಷತ್ ಚುನಾವಣೆಗೆ ಸಲ್ಲಿಸಿರುವ ನಾಮಪತ್ರ ವಾಪಸ್ ಪಡೆಯಲು ಇಂದು ಮಧ್ಯಾಹ್ನದವರೆಗೂ ಕಾಲಾವಕಾಶ ವಿತ್ತು. ಅಂತಿಮವಾಗಿ …

Read More »

ಮತ್ತೆ ಸಂಪುಟ ವಿಸ್ತರಣೆ ಆಗತ್ತಾ?…

ಬೆಂಗಳೂರು,ಜೂ.22- ಕಳೆದ ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿರುವ ಸಚಿವ ಸಂಪುಟ ವಿಸ್ತರಣೆಯಾಗಬೇಕೆಂಬ ಕೂಗು ಮತ್ತೆ ಬಿಜೆಪಿಯಲ್ಲಿ ಕೇಳಿಬಂದಿದೆ. ವಿಧಾನಪರಿಷತ್ ಚುನಾವಣೆಯಲ್ಲಿ ಎಲ್ಲಾ 7 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ. ಇವರಲ್ಲಿ ನಾಲ್ವರು ಬಿಜೆಪಿಯವರಾಗಿದ್ದಾರೆ. ವಿಧಾನ ಪರಿಷತ್ ಸದಸ್ಯರಾಗಲಿವರುವ ಎಂಟಿಬಿ ನಾಗರಾಜ್, ಆರ್. ಶಂಕರ್ ಯಡಿಯೂರಪ್ಪ ಸಂಪುಟ ಸೇರಲಿದ್ದಾರೆಯೇ? ಎಂಬುದು ಯಕ್ಷಪ್ರಶ್ನೆಯಾಗಿದೆ. ಸಂಪುಟದಲ್ಲಿ ಸದ್ಯ 5 ಸಚಿವ ಸ್ಥಾನಗಳು ಖಾಲಿ ಇವೆ. ಬಿಜೆಪಿಯ ಕೆಲವು ಶಾಸಕರು ಆಕಾಂಕ್ಷಿಗಳು ಎಂಬುದು ಗುಟ್ಟಾಗಿ ಉಳಿದಿಲ್ಲ. ಈಗ …

Read More »

ದಸರಾ ವರೆಗೂ ಶಾಲಾ ಕಾಲೇಜಿಗೆ ರಜೆ..

ಬೆಂಗಳೂರು,ಜೂ.22- ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವಿಕೆ ಹಾಗೂ ಸಾವಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಾರಣ ದಸರಾವರೆಗೂ ಶಾಲಾಕಾಲೇಜುಗಳನ್ನು ತೆರೆಯದಿರಲು ಸರ್ಕಾರ ತೀರ್ಮಾನಿಸಿದೆ. ದಸರಾ ಹಬ್ಬ ಮುಗಿದ ನಂತರವೇ ಪದವಿ,ಪದವಿಪೂರ್ವ, ಪ್ರೌಢಶಾಲೆ, ಹಿರಿಯ, ಕಿರಿಯ ಪ್ರಾಥಮಿಕ ಶಾಲೆಗಳನ್ನು ಪರಿಸ್ಥಿತಿಗನುಗುಣವಾಗಿ ಆರಂಭಿಸುವುದು ಹಾಗೂ ನರ್ಸರಿ ಶಾಲೆಗಳನ್ನು ಜನವರಿವರೆಗೂ ತೆರೆಯದಂತೆ ಶಾಲಾ ಆಡಳಿತ ಮಂಡಳಿಗಳಿಗೆ ಸದ್ಯದಲ್ಲೇ ಅಧಿಸೂಚನೆ ಹೊರಡಿಸಲಿದೆ ಸರ್ಕಾರಿ, ಅನುದಾನ ಹಾಗೂ ಅನುದಾನರಹಿತ ಶಾಲೆಗಳು 2020-21ನೇ ಸಾಲಿನ ಮೊದಲಾರ್ಧದ ಶೈಕ್ಷಣಿಕ ಅವಧಿಯನ್ನು …

Read More »

ಸಿಲಿಕಾನ್ ಸಿಟಿಯಲ್ಲಿಗಲ್ಲಿ ಗಲ್ಲಿಗೂ ಸದ್ದಿಲ್ಲದೇ ಎಂಟ್ರಿಯಾಗ್ತಿದೆ,ಕಿಲ್ಲರ್ ಕೊರೊನಾ……..

ನಿಮ್ಹಾನ್ಸ್ ಬಾಗಿಲು ತಟ್ಟಿದ ಕೊರೊನಾ- ಆಸ್ಪತ್ರೆಯ ಐಸಿಯು ಕಂಪ್ಲೀಟ್ ಕ್ಲೋಸ್   ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಿಲ್ಲರ್ ಕೊರೊನಾ ಅಟ್ಟಾಡಿಸ್ತಿದೆ. ಪರಿಸ್ಥಿತಿ ಬಿಗಡಾಯಿಸ್ತಿದ್ದು, ಗಲ್ಲಿ ಗಲ್ಲಿಗೂ ಈ ಹೆಮ್ಮಾರಿ ಸದ್ದಿಲ್ಲದೇ ಎಂಟ್ರಿಯಾಗ್ತಿದೆ. ನಿಮ್ಹಾನ್ಸ್ ಆಸ್ಪತ್ರೆಗೂ ಈ ಹೆಮ್ಮಾರಿ ಲಗ್ಗೆ ಇಟ್ಟಿದ್ದು, ಈ ವೈರಸ್ ನ ಆರ್ಭಟಕ್ಕೆ ಆಸ್ಪತ್ರೆಯ ಐಸಿಯು ವಾರ್ಡ್ ಕಂಪ್ಲೀಟ್ ಕ್ಲೋಸ್ ಆಗಿದೆ. ರಾಜ್ಯದಲ್ಲಿ ಕೊರೊನಾ ಆರ್ಭಟ ಹೆಚ್ಚಾಗಿದೆ. ಕ್ಷಣ ಕ್ಷಣಕ್ಕೂ ಪರಿಸ್ಥಿತಿ ಕೈ ಮೀರಿ ಹೋಗ್ತಿದೆ. ತಜ್ಞರು …

Read More »

ಕೊರೊನಾ ಸಮಯದಲ್ಲಿ ಕೆಎಸ್‍ಆರ್ ಟಿಸಿ ಹೊಸ ಆದೇಶ……!

ಬೆಂಗಳೂರು: ಕೊರೊನಾ ಸಮಯದಲ್ಲಿ ಕೆಎಸ್‍ಆರ್ ಟಿಸಿ ಹೊಸ ಆದೇಶವನ್ನು ಹೊರಡಿಸಿ ಸಿಬ್ಬಂದಿಯ ಆಕ್ರೋಶಕ್ಕೆ ಗುರಿಯಾಗಿದೆ. ಮೈಸೂರು ಜಿಲ್ಲೆಯ ಕೆ.ಆರ್.ನಗರ ಡಿಪೋ ನಿಗದಿತ ಆದಾಯ ತರುವಂತೆ ಆದೇಶ ಹೊರಡಿಸಿದೆ. ಕೊರೊನಾ ಆತಂಕದ ನಡುವೆಯೇ ಸಿಬ್ಬಂದಿ ಕೆಲಸಕ್ಕೆ ಹಾಜರಾಗುತ್ತಿದ್ದಾರೆ. ಈಗಾಗಲೇ ಬಿಎಂಟಿಸಿ ಸಿಬ್ಬಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಂತಹ ಸಂದರ್ಭದಲ್ಲಿ ಸಿಬ್ಬಂದಿ ತಮ್ಮ ಒಂದು ಶಿಫ್ಟ್ ನಲ್ಲಿ ನಿಗದಿತ ಆದಾಯ ತರಬೇಕು. ಇಲ್ಲವಾದಲ್ಲಿ ಸಿಬ್ಬಂದಿಗೆ ಹಾಜರಾತಿ ನೀಡಲ್ಲ. ಡೀಸೆಲ್ ದರ ಏರಿಕೆಯ ನಷ್ಟ ತಪ್ಪಿಸಲು …

Read More »

ಕೊರೊನಾ ಸೋಂಕು ಹೆಚ್ಚಾಗುತ್ತಿದ್ದಂತೆ ಎಚ್ಚೆತ್ತ ಆಯುಕ್ತ ಭಾಸ್ಕರ್ ರಾವ್ ಅವರು ಠಾಣೆಗಳಿಗೆ ಹತ್ತು ಸೂಚನೆ ರವಾನಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇತ್ತ ಕೊರೊನಾ ವಾರಿಯರ್ಸ್ ಪೊಲೀಸರಿಗೂ ಸೋಂಕು ತಗುಲುತ್ತಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರು ನಗರದಲ್ಲಿ ಪೊಲೀಸರಿಗೆ ಸೋಂಕು ಹೆಚ್ಚಾಗುತ್ತಿದ್ದಂತೆ ಎಚ್ಚೆತ್ತ ಆಯುಕ್ತ ಭಾಸ್ಕರ್ ರಾವ್ ಅವರು ಠಾಣೆಗಳಿಗೆ ಹತ್ತು ಸೂಚನೆ ರವಾನಿಸಿದ್ದಾರೆ. ಈ ಮೂಲಕ ಕೊರೊನಾ ವೈರಸ್‍ಗೆ ಇಲಾಖೆ ಮತ್ತಷ್ಟು ಸಿಬ್ಬಂದಿ ಒಳಗಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಏನು ಸೂಚನೆ?: 1. ಏನೇ ಸಮಸ್ಯೆ ಬಂದರೂ ಧೈರ್ಯವಾಗಿ ಎದುರಿಸಬೇಕು. ಗಾಬರಿಯಾಗಬೇಡಿ, …

Read More »

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರ ಜತೆ ನಾನು ಯಾವುದೇ ಪೈಪೋಟಿ ನಡೆಸುವುದಿಲ್ಲ: ಡಿ.ಕೆ.ಶಿವಕುಮಾರ್

ಬೆಂಗಳೂರು, ಜೂ.21- ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರ ಜತೆ ನಾನು ಯಾವುದೇ ಪೈಪೋಟಿ ನಡೆಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ಪಕ್ಷವೇ ಒಂದು ಶಕ್ತಿ. ನಾನು ಅಧ್ಯಕ್ಷ ಹುದ್ದೆಯಲ್ಲಿದ್ದರೆ ಸಿದ್ದರಾಮಯ್ಯನವರು ಶಾಸಕಾಂಗ ಪಕ್ಷದ ನಾಯಕ ಸ್ಥಾನದಲ್ಲಿದ್ದಾರೆ. ಅವರ ಹಿರಿತನ ಹಾಗೂ ಅನುಭವವನ್ನು ನಾನು ಸಂಪೂರ್ಣವಾಗಿ ಗೌರವಿಸುತ್ತೇನೆ. ಅವರ ಜತೆ ನಾನು ಪೈಪೋಟಿಗಿಳಿಯುವುದಿಲ್ಲ ಎಂದು ಹೇಳಿದ್ದಾರೆ   ರಾಜಕೀಯದಲ್ಲಿ ಡಿ.ಕೆ.ಶಿವಕುಮಾರ್ ಅವರ ಈ …

Read More »

ಯಡಿಯೂರಿನಲ್ಲಿ ಸಿಎಂ ಕುಟುಂಬದವರಿಂದ ವಿಶೇಷ ಪೂಜೆ …………

ಕುಣಿಗಲ್,ಜೂ.21-ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಕುಟುಂಬ ಮನೆದೇವರಾದ ಯಡಿಯೂರು ಸಿದ್ದಲಿಂಗೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಮುಂಜಾನೆಯಿಂದಲೇ ವಿಶೇಷ ಪೂಜೆಯಲ್ಲಿ ತೊಡಗಿದರು. ನಿನ್ನೆಯೇ ಯಡಿಯೂರಿಗೆ ಭೇಟಿ ನೀಡಿ ದೇವಸ್ಥಾನದಲ್ಲಿ ತಂಗಿದ್ದ ಕುಟುಂಬ ಸದಸ್ಯರು ಹಲವು ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಂಡಿದ್ದ ವೃಶ್ಚಿಕ ರಾಶಿಗೆ ಅಶುಭ ಫಲವೆಂದು ಶಾಂತಿಗಾಗಿ ಜೋತಿಷ್ಯರ ಸಲಹೆಯಂತೆ ಸಿಎಂ ಕಿರಿಯ ಪುತ್ರ ವಿಜಯೇಂದ್ರ ದಂಪತಿ ಹೋಮ ಹನವನದಂತಹ ವಿಶೇಷ ಪೂಜೆಗಳನ್ನು ನಡೆಸಿದರು. ಆದರೆ ಮುಖ್ಯಮಂತ್ರಿ ಯಡಿಯೂರಪ್ಪನವರು ಬೆಂಗಳೂರಿನಲ್ಲೇ ಇದ್ದು, …

Read More »

ಅಮಾವಾಸ್ಯೆ ದಿನ ಭೀಕರ ಅಪಘಾತದಲ್ಲಿ ಮೂವರು ಸಾವು- ವ್ಹೀಲಿಂಗ್ ವೇಳೆ ಡಿಕ್ಕಿ ಶಂಕೆ….

ಬೆಂಗಳೂರು: ಅಮಾವಾಸ್ಯೆ ದಿನ ಭೀಕರ ಸಂಭವಿಸಿ ಮೂವರು ಯುವಕರು ಧಾರುಣ ಸಾವು ಕಂಡ ಘಟನೆ ಯಲಹಂಕದ ಜೆಕೆವಿಕೆ ಬಳಿ ಇಂದು ಬೆಳಗ್ಗೆ ನಡೆದಿದೆ. ಬೆಂಗಳೂರಿನ ನಿವಾಸಿಗಳಾದ ಮಹಮ್ಮದ್ ಆದಿ ಆಯಾನ್ (16), ಮಾಜ್ ಅಹಮ್ಮದ್ ಖಾನ್(17) ಹಾಗೂ ಸಯ್ಯದ್ ರಿಯಾಜ್ (22) ಮೃತ ದುರ್ದೈವಿಗಳು. ವ್ಹೀಲಿಂಗ್ ಮಾಡುವ ವೇಳೆ ಬೈಕ್ ಮುಖಾ ಮುಖಿ ಡಿಕ್ಕಿ ಹೊಡೆದಿರುವ ಶಂಕೆ ವ್ಯಕ್ತವಾಗಿದೆ. ಯುವಕರು ಹೆಲ್ಮೆಟ್ ಇಲ್ಲದೆ ಬೈಕ್ ಸವಾರಿ ಮಾಡುತ್ತಿದ್ದರು. ಈ ವೇಳೆ ವೇಗವಾಗಿದ್ದ …

Read More »

ಜೂನ್ 21 ರಿಂದ 25ರವರೆಗೆ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಬೆಂಗಳೂರು: ಈಗಾಗಲೇ ಕರ್ನಾಟಕಕ್ಕೆ ಮುಂಗಾರು ಪ್ರವೇಶಿಸಿದೆ. ಹೀಗಾಗಿಯೇ ಕಳೆದ ಮೂರು ವಾರಗಳಿಂದ ಜೋರು ಮಳೆಯಾಗುತ್ತಿದೆ. ಇತ್ತೀಚೆಗಂತೂ ಸುರಿದ ಭಾರೀ ಮಳೆಗೆ ಶಿವಮೊಗ್ಗದ ಗಾಜನೂರು ಸೇರಿದಂತೆ ಇತರ ಜಲಾಶಯಗಳು ಭರ್ತಿಯಾಗಿವೆ. ಇದರ ಪರಿಣಾಮ ನೀರಿನ ಪ್ರಮಾಣವೂ ಹೆಚ್ಚಾಗಿದೆ. ಹೀಗಿರುವಾಗಲೇ ರಾಜ್ಯ ಹವಾಮಾನ ಇಲಾಖೆ ಮಳೆ ಕುರಿತಾದ ಮತ್ತೊಂದು ಮಹತ್ತರ ಮಾಹಿತಿ ನೀಡಿದೆ.ಹೌದು, ಇಂದಿನಿಂದ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 21 ರಿಂದ 25ರವರೆಗೆ …

Read More »