Breaking News
Home / ಜಿಲ್ಲೆ / ಬೆಂಗಳೂರು (page 385)

ಬೆಂಗಳೂರು

ಭಾನುವಾರ ಮದ್ವೆ ಸಮಾರಂಭಕ್ಕೆ ಅವಕಾಶ – ಷರತ್ತುಗಳು ಅನ್ವಯ………….

ಬೆಂಗಳೂರು: ಕೊರೊನಾ ವೈರಸ್ ಹರಡುವುದನ್ನು ತೆಗಟ್ಟಲು ಕೈಗೊಂಡಿದ್ದ ಲಾಕ್ ಡೌನ್ 4ನೇ ಹಂತದ ನಿಯಮಗಳ ಬಗ್ಗೆ ಸರ್ಕಾರ ಸ್ಪಷ್ಠೀಕರಣ ನೀಡಿದೆ. ಮೇ 31 ರವರೆಗೆ ಈ ನಿಯಮಗಳು ಜಾರಿಯಲ್ಲಿರಲಿದೆ. ಪ್ರತಿ ದಿನ ಬೆಳಗ್ಗೆ 7 ರಿಂದ ರಾತ್ರಿ 7 ಗಂಟೆವರೆಗೆ ಅವಶ್ಯಕವಲ್ಲದ ಚಟುವಟಿಕೆಗಳ ವ್ಯಕ್ತಿಗಳ ಸಂಚಾರ ಕಟ್ಟು ನಿಟ್ಟಾಗಿ ನಿಷೇಧ ಮಾಡಲಾಗಿದೆ. ಭಾನುವಾರ ಹೆಚ್ಚುವರಿಯಾಗಿ ಬೆಳಗ್ಗೆ 7 ರಿಂದ ಸಂಜೆ 7 ರವರೆಗೆ ಪೂರ್ತಿ ದಿನ ಲಾಕ್ ಡೌನ್ ಆಗಿರಲಿದೆ. …

Read More »

ಶನಿವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆಯವರೆಗೆ ಅಂಗಡಿಗಳೂ ತೆರೆಯುವಂತಿಲ್ಲ.

ಬೆಂಗಳೂರು – ರಾಜ್ಯದಲ್ಲಿ ಮೇ 31ರ ವರೆಗೂ 4ನೇ ಹಂತದ ಲಾಕ್ ಡೌನ್ ಮುಂದುವರಿಯಲಿದೆ. ಆದರೆ ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಕಟ್ಟುನಿಟ್ಟಾದ ಲಾಕ್ ಡೌನ್ ಇರುವುದಿಲ್ಲ. ಸಂಜೆ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ಕರ್ಫ್ಯೂ ಮಾದರಿಯಲ್ಲಿ ಲಾಕ್ ಡೌನ್ ಇರಲಿದೆ. ಎಲ್ಲಾ ಅಂಗಡಿಗಳೂ 7 ಗಂಟೆಗೆ ಬಾಗಿಲು ಹಾಕಬೇಕು. ವಾಹನ ಸಂಚಾರವೂ ಸ್ಥಗಿತವಾಗಬೇಕು. ಜನರೂ ಅನಗತ್ಯವಾಗಿ ಸಂಚರಿಸಬಾರದು. ಇದರ ಜೊತೆಗೆ ಪ್ರತಿ ಭಾನುವಾರ ಸಂಪೂರ್ಣ …

Read More »

ಮೇ 26ರಿಂದ ದೇವಾಲಯಗಳಲ್ಲಿ ಆನ್‍ಲೈನ್ ಸೇವೆ ಪ್ರಾರಂಭ:ಕೋಟಾ ಶ್ರೀನಿವಾಸ್ ಪೂಜಾರಿ

ಬೆಂಗಳೂರು: ಇಷ್ಟು ದಿನ ಕೊರೊನಾ ವೈರಸ್ ಭೀತಿಗೆ ಬಂದ್ ಆಗಿದ್ದ ದೇವಲಯಗಳಲ್ಲಿ ಈಗ ಭಕ್ತರಿಗೆ ಆನ್‍ಲೈನ್ ಮೂಲಕ ಹಣ ಪಾವತಿಸಿ ಪೂಜೆ ಮಾಡಿಸಲು ಅವಕಾಶ ನೀಡಲಾಗುತ್ತಿದೆ. ಮೇ 26, 27ರಿಂದ ದೇವಾಲಯಗಳಲ್ಲಿ ಆನ್‍ಲೈನ್ ಸೇವೆ ಪ್ರಾರಂಭ ಆಗಲಿದೆ ಎಂದು ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಆನ್‍ಲೈನ್‍ನಲ್ಲಿ ಭಕ್ತರು ದೇವಸ್ಥಾನಗಳಿಗೆ ಹಣ ಪಾವತಿ ಮಾಡಿ ಪೂಜೆ ಮಾಡಿಸಲು ಅವಕಾಶ ನೀಡಲಾಗುತ್ತದೆ. 15ರಿಂದ 20 …

Read More »

ಬೆಳಗ್ಗೆಯ ಬಸ್‍ಗೆ ಜನರು ರಾತ್ರಿಯೆಲ್ಲಾ ಮಕ್ಕಳ ಜೊತೆ ಬಸ್ ನಿಲ್ದಾಣದಲ್ಲಿ….

ಬೆಂಗಳೂರು: ಬೆಳಗ್ಗೆಯ ಬಸ್‍ಗೆ ಜನರು ರಾತ್ರಿ ಮಕ್ಕಳ ಜೊತೆ ಬಸ್ ನಿಲ್ದಾಣದಲ್ಲಿ ಕಳೆದಿದ್ದಾರೆ. ಸಂಜೆ ಆರು ಗಂಟೆಗೆ ಬಂದ ಬಹುತೇಕ ಜನಕ್ಕೆ ಬಸ್ ಸಿಕ್ಕಿರಲಿಲ್ಲ. ಇನ್ನು ವಾಪಸ್ ಮನೆಗೆ ಹೋಗಲು ಯಾವುದೇ ವಾಹನದ ವ್ಯವಸ್ಥೆ ಇಲ್ಲ. ಹಾಗಾಗಿ ಜನ ಬಸ್ ನಿಲ್ದಾಣದಲ್ಲಿಯೇ ರಾತ್ರಿ ಕಳೆದಿದ್ದಾರೆ. ಒಂದು ಬಸ್ ಗೆ ಕೇವಲ 30 ಜನರಿಗೆ ಮಾತ್ರ ಅವಕಾಶ ನೀಡಲಾಗ್ತಿದೆ. ಹಾಗಾಗಿ ಬಸ್ ಸಿಗದಿದ್ದರೆ ಹೇಗೆ ಅಂತ ಬಹುತೇಕರು ಪ್ರಯಾಣಿಕರು ನಿಲ್ದಾಣದಲ್ಲಿಯೇ ಇರುವಂತಾಯ್ತು. …

Read More »

ದಕ್ಷಿಣ ರೈಲ್ವೇ ಬೆಂಗಳೂರು – ಬೆಳಗಾವಿ ಮತ್ತು ಬೆಂಗಳೂರು ಮೈಸೂರು ಮಧ್ಯೆ ಎಕ್ಸ್ ಪ್ರೆಸ್ ರೈಲು ಓಡಿಸಲು ಮುಂದಾಗಿದೆ

ಬೆಂಗಳೂರು: ದಕ್ಷಿಣ ರೈಲ್ವೇ ಬೆಂಗಳೂರು – ಬೆಳಗಾವಿ ಮತ್ತು ಬೆಂಗಳೂರು ಮೈಸೂರು ಮಧ್ಯೆ ಎಕ್ಸ್ ಪ್ರೆಸ್ ರೈಲು ಓಡಿಸಲು ಮುಂದಾಗಿದೆ. ಈ ರೈಲುಗಳ ಸೇವೆ ಮೇ 22ರಿಂದ ಆರಂಭವಾಗಲಿದ್ದು, ಭಾರತೀಯ ರೈಲ್ವೇ ವೆಬ್‍ಸೈಟ್ ಮೂಲಕ ಟಿಕೆಟ್ ಬುಕ್ ಮಾಡಿದವರಿಗೆ ಮಾತ್ರ ಈ ರೈಲುಗಳನ್ನು ಪ್ರಯಾಣಿಸಲು ಅನುಮತಿ ನೀಡಲಾಗುತ್ತದೆ. ನಿಲ್ದಾಣದಲ್ಲಿನ ಕೌಂಟರ್ ಗಳಲ್ಲಿ ಟಿಕೆಟ್ ನೀಡುವುದಿಲ್ಲ. ಭಾನುವಾರ ರೈಲುಗಳು ಸಂಚರಿಸುವುದಿಲ್ಲ ಎಂದು ದಕ್ಷಿಣ ರೈಲ್ವೇ ತಿಳಿಸಿದೆ. ಬೆಂಗಳೂರಿನಿಂದ ಬೆಳಗಾವಿಗೆ ಸೋಮವಾರ, ಬುಧವಾರ, …

Read More »

ನಾಳೆಯಿಂದ ದ್ವಿತೀಯ ಪಿಯುಸಿ ಉತ್ತರಪತ್ರಿಕೆಗಳ ಮೌಲ್ಯಮಾಪನ ಆರಂಭ

ಬೆಂಗಳೂರು, ಮೇ 20- ನಾಳೆಯಿಂದ ದ್ವಿತೀಯ ಪಿಯುಸಿಯ ಉತ್ತರಪತ್ರಿಕೆಗಳ ಮೌಲ್ಯಮಾಪನವು ಆಯ್ದ ಕೇಂದ್ರಗಳಲ್ಲಿ ಆರಂಭವಾಗಲಿದೆ. ಮೌಲ್ಯಮಾಪನಕ್ಕೆ ಪದವಿಪೂರ್ವ ಶಿಕ್ಷಣ ಇಲಾಖೆ ಎಲ್ಲಾ ರೀತಿಯ ಸಿದ್ಧತೆಗಳನ್ನು ನಡೆಸಿದ್ದು, ಇಂಗ್ಲೀಷ್ ಹೊರತುಪಡಿಸಿ ಇತರ ಪತ್ರಿಕೆಗಳ ಮೌಲ್ಯಮಾಪನವನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಲು ಮುಂದಾಗಿದೆ. ದ್ವಿತೀಯ ಪಿಯುಸಿಯ ಇಂಗ್ಲೀಷ್ ಪರೀಕ್ಷೆಯ ದಿನಾಂಕ ಜೂನ್ 18ಕ್ಕೆ ನಿಗದಿಪಡಿಸಲಾಗಿದ್ದು, ಪರೀಕ್ಷೆಗೂ ಮುನ್ನವೇ ಮೌಲ್ಯಮಾಪನ ಪೂರ್ಣಗೊಳಿಸಲು ಇಲಾಖೆ ಉದ್ದೇಶಿಸಿದೆ ಎಂದು ತಿಳಿದುಬಂದಿದೆ. ಆದರೆ, ಶಿಕ್ಷಣ ಇಲಾಖೆ ಅಧಿಕೃತವಾಗಿ ಮೌಲ್ಯಮಾಪನಕ್ಕೆ ಯಾವುದೇ ರೀತಿಯ …

Read More »

ಇಂದು 67 ಮಂದಿಗೆ ಕೊರೊನಾ- ಸೋಂಕಿತರ ಸಂಖ್ಯೆ 1,462ಕ್ಕೆ

ಬೆಂಗಳೂರು: ರಾಜ್ಯದ ಜನರಿಗೆ ಮಂಗಳವಾರ ಆತಂಕ ಸೃಷ್ಟಿಸಿದ್ದ ಕೊರೊನಾ ಸೋಂಕಿತರ ಸಂಖ್ಯೆಯು ಇಂದು ಇಳಿಕೆ ಕಂಡಿದೆ. ಇಂದು ರಾಜ್ಯದಲ್ಲಿ 67 ಮಂದಿಗೆ ಕೋವಿಡ್-19 ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1,462ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿ ಪ್ರಕಾರ, ಇಂದು ಹಾಸನ 21, ಬೀದರ್ 10, ಮಂಡ್ಯ 8, ಉಡುಪಿ 6, ಕಲಬುರಗಿ 7, ಬೆಂಗಳೂರು, ತುಮಕೂರು, ರಾಯಚೂರಿನಲ್ಲಿ ತಲಾ 4, ಉತ್ತರ ಕನ್ನಡ, ದಕ್ಷಿಣ ಕನ್ನಡ, …

Read More »

ಇಂದು ಲಾಕ್ ಫ್ರೀ ಎರಡನೇ ದಿನ ಉತ್ತರ ಕರ್ನಾಟಕದ ಭಾಗಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಳ

ಬೆಂಗಳೂರು: ಇಂದು ಲಾಕ್ ಫ್ರೀ ಎರಡನೇ ದಿನವಾಗಿದ್ದು, ಉತ್ತರ ಕರ್ನಾಟಕದ ಭಾಗಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ. ಮೆಜೆಸ್ಟಿಕ್ ನಿಲ್ದಾಣದತ್ತ ಪ್ರಯಾಣಿಕರು ಅಗಮಿಸುತ್ತಿದ್ದು, ಟಿಕೆಟ್‍ಗಾಗಿ ಸರತಿಯಲ್ಲಿ ನಿಂತಿದ್ದಾರೆ. ಸೋಮವಾರ ರಾತ್ರಿಯೇ ಬಸ್ ವ್ಯವಸ್ಥೆ ಇಂದು ಮೆಜೆಸ್ಟಿಕ್ ನಿಲ್ದಾಣಕ್ಕೆ ಹಲವರು ಬಂದಿದ್ದರು. ಆದ್ರೆ ಬಸ್ ಸಿಗದೇ ಇಡೀ ರಾತ್ರಿಯನ್ನು ಪ್ರಯಾಣಿಕರು ನಿಲ್ದಾಣದಲ್ಲಿಯೇ ಕಳೆಯುವಂತಾಗಿತ್ತು. ಇಂದು ಬಸ್ ಸಂಚಾರದಲ್ಲಿ ಕೆಲ ಬದಲಾವಣೆ ತರಲಾಗಿದ್ದು, ಸಂಜೆ 5 ಗಂಟೆ ಬದಲು 7 ಗಂಟೆವರೆಗೂ ಬಸ್‍ಗಳ ವ್ಯವಸ್ಥೆ …

Read More »

ಬೆಂಗಳೂರಿನಲ್ಲಿ ಮಧ್ಯಾಹ್ನವಾಗುತ್ತಿದ್ದಂತೆಯೇ ಕೆಎಸ್ಸಾರ್ಟಿಸಿ ಬಸ್ ಪ್ರಯಾಣಿಕರ ಸಂಖ್ಯೆ ಇಳಿಮುಖ

ಬೆಂಗಳೂರು(ಮೇ.19): ದೇಶಾದ್ಯಂತ ನಾಲ್ಕನೇ ಹಂತದ ಲಾಕ್​ಡೌನ್​ ಮೇ 18ರಿಂದ ಜಾರಿಯಾಗಿದ್ದು, ಮೇ 31ರವರೆಗೂ ಇರಲಿದೆ. ಲಾಕ್​ಡೌನ್​ 4.0 ನಲ್ಲಿ ಭಾರಿ ಸಡಿಲಿಕೆ ನೀಡಲಾಗಿದ್ದು, ಬಹುತೇಕ ಎಲ್ಲ ವ್ಯಾಪಾರ- ವಹಿವಾಟು, ಸಂಚಾರ ವ್ಯವಸ್ಥೆ ಆರಂಭವಾಗಲಿದೆ. ಬಸ್ ಸಂಚಾರ ನಿರ್ಧಾರವನ್ನು ಕೇಂದ್ರ ಸರ್ಕಾರ ಆಯಾ ರಾಜ್ಯ ಸರ್ಕಾರಗಳಿಗೆ ವಹಿಸಿದ್ದರಿಂದ ಸೋಮವಾರ ಸಭೆ ನಡೆಸಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು ಇಂದಿನಿಂದ ಸಾರಿಗೆ ಸಂಚಾರ ಆರಂಭಿಸಲು ನಿರ್ಧರಿಸಿದ್ದಾರೆ. ಅದರಂತೆ ಇಂದಿನಿಂದ ಬಿಎಂಟಿಸಿ ಮತ್ತು ಕೆಎಸ್​ಆರ್​ಟಿಸಿ …

Read More »

ಕೇಂದ್ರ ಸರ್ಕಾರ ಘೋಷಿಸಿರುವ 21 ಲಕ್ಷ ಕೋಟಿ ರೂಪಾಯಿಯ ಪ್ಯಾಕೇಜ್ ಸಾಲಕೊಟ್ಟು ಜನರನ್ನು ಬಡ್ಡಿ ಮಕ್ಕಳನ್ನಾಗಿ ಮಾಡುವಂತಿದೆ: ಡಿ.ಕೆ.ಶಿವಕುಮಾರ್

ಬೆಂಗಳೂರು, ಮೇ 19- ಕೇಂದ್ರ ಸರ್ಕಾರ ಘೋಷಿಸಿರುವ 21 ಲಕ್ಷ ಕೋಟಿ ರೂಪಾಯಿಯ ಪ್ಯಾಕೇಜ್ ಸಾಲಕೊಟ್ಟು ಜನರನ್ನು ಬಡ್ಡಿ ಮಕ್ಕಳನ್ನಾಗಿ ಮಾಡುವಂತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾಜಿ‌ ಪದಾಧಿಕಾರಿಗಳ‌ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಸಂದರ್ಭದಲ್ಲಿ ಜನರ ನೋವು ನಲಿವಿಗೆ ಸರ್ಕಾರ ಸ್ಪಂದಿಸಲಿಲ್ಲ. ತಮ್ಮ ಪಕ್ಷದ ಮತ ಬ್ಯಾಂಕ್ ಹೆಚ್ಚಿಸಿಕೊಳ್ಳಲು‌ ಬಿಜೆಪಿಯ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಯಕ್ರಮ ನಡೆಸಿವೆ‌ …

Read More »