Breaking News
Home / ಜಿಲ್ಲೆ / ಬೆಂಗಳೂರು (page 39)

ಬೆಂಗಳೂರು

ನಾನು ಜನ್ಮ ದಿನಾಚರಣೆ ಆಚರಿಸಲ್ಲ, ಜಾಹೀರಾತು ನೀಡೋದಾದ್ರೇ ಕಾಂಗ್ರೆಸ್ ಹೋರಾಟ, ಪ್ರತಿಭಟನೆ ಬಗ್ಗೆ ನೀಡಿ – ಡಿಕೆ ಶಿವಕುಮಾರ್

ಬೆಂಗಳೂರು: ಮೇ.15ರಂದು ನನ್ನ ಜನ್ಮ ದಿನಾಚರಣೆಯನ್ನು ನಾನು ಆಚರಿಸಿಕೊಳ್ಳೋದಿಲ್ಲ. ನನ್ನ ಮನೆ ಬಳಿಗೆ ಬರಬೇಡಿ. ನಾನು ಉದಯಪುರದಲ್ಲಿ ಇರುತ್ತೇನೆ. ನನ್ನ ಜನ್ಮ ದಿನಾಚರಣೆ ನಿಮಿತ್ತ ಮಾಧ್ಯಮಗಳಿಗೆ ಜಾಹೀರಾತು ಕೊಡೋ ಬದಲಾಗಿ ಕಾಂಗ್ರೆಸ್ ಪಕ್ಷದಿಂದ ( Congress Party ) ಸರ್ಕಾರದ ವಿರುದ್ಧ ನಡೆಸಿದಂತ ಹೋರಾಟ, ಪ್ರತಿಭಟನೆಗಳ ಬಗ್ಗೆ ನೀಡುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ( DK Shivakumar ) ಮನವಿ ಮಾಡಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ …

Read More »

P.S.I.ನೇಮಕಾತಿ ಹಗರಣದ ತನಿಖೆಯನ್ನು ಸಿಐಡಿಗೆ ನೀಡಿರುವುದರ ಹಿಂದೆ ಸತ್ಯ ಹೊರಬರುವುದನ್ನು ತಡೆಯುವ ಹುನ್ನಾರ: ಭಾಸ್ಕರ್ ರಾವ್

ಬೆಂಗಳೂರು: ಪಿಎಸ್‍ಐ ನೇಮಕಾತಿ ಹಗರಣದ ತನಿಖೆಯನ್ನು ಸಿಐಡಿಗೆ ನೀಡಿರುವುದರ ಹಿಂದೆ ಸತ್ಯ ಹೊರಬರುವುದನ್ನು ತಡೆಯುವ ಹುನ್ನಾರವಿದೆ ಎಂದು ಆಮ್ ಆದ್ಮಿ ಪಾರ್ಟಿ ಮುಖಂಡ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಹೇಳಿದರು.   ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರೇ ಆರೋಪಿಗಳಾಗಿರುವ ಹಗರಣವನ್ನು ಬಿಜೆಪಿ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ಸಿಐಡಿಯಿಂದಲೇ ತನಿಖೆ ಮಾಡಿಸುವುದು ಹಾಸ್ಯಾಸ್ಪದ. ಈ ತನಿಖೆಗೆ ಯಾವ ಬೆಲೆಯೂ ಇಲ್ಲ. ಅನುಮಾನಾಸ್ಪದ ಅಭ್ಯರ್ಥಿಯ ತನಿಖೆ ವೇಳೆ …

Read More »

ನನಗೆ 90 ವರ್ಷ ಆಯ್ತು ವಿಶ್ರಾಂತಿ ಬೇಕು: ಮಾಜಿ ಸಿಎಂ ಎಸ್ ಎಂ ಕೃಷ್ಣ

  ಬೆಂಗಳೂರು: ಚಿತ್ರಕಲಾ ಪರಿಷತ್​​ನಲ್ಲಿ ಇಂಡಿಯನ್ ಆರ್ಟ್ ಫೆಸ್ಟಿವಲ್ ಇಂದಿನಿಂದ ಶುರುವಾಗಿದ್ದು, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಚಾಲನೆ ಕೊಟ್ಟರು. ಬಳಿಕ ಮಾತಾನಾಡಿದ ಅವರು, ಕಲಾಕೃತಿಗಳು ಕಣ್ಣಿಗೆ ಹಾಗೂ ಮನಸ್ಸಿಗೆ ನೆಮ್ಮದಿ, ಸಂತೋಷ ಕೊಡುತ್ತವೆ. ನಮ್ಮ ದೇಶದ ಪ್ರಸಿದ್ಧ ಕಲಾವಿದರು, ಹೆಸರು ಮಾಡಿರುವ ಕಲಾವಿದರು ಬಂದಿದ್ದು, ಅವರ ಕಲಾಕೃತಿಗಳ ಪ್ರದರ್ಶನ ನಡೆಯುತ್ತಿದೆ. ಈ ಕಲಾಕೃತಿಗಳನ್ನು ನೋಡಲು ಸಂತೋಷವಾಗ್ತಿದೆ ಎಂದರು. ಈಗಿನ ರಾಜಕೀಯದಲ್ಲಿ ಆಗ್ತಿರುವ ಬೆಳವಣಿಗೆ ಕುರಿತು ನಿಮ್ಮ ಅಭಿಪ್ರಾಯವೇನು ಎಂಬ …

Read More »

532 ಕೋಟಿ ರೂ ವೆಚ್ಚದಲ್ಲಿ ಅನುಭವ ಮಂಟಪ ನಿರ್ಮಾಣಕ್ಕೆ ಸರ್ಕಾರ ಒಪ್ಪಿಗೆ

ಬೆಂಗಳೂರು, ಮೇ 6: ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ 532 ಕೋಟಿ ರೂಪಾಯಿ ವೆಚ್ಚದಲ್ಲಿ ಅನುಭವ ಮಂಟಪ ನಿರ್ಮಾಣ ಯೋಜನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಯಿತು.   ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿ ಕೈಗೆತ್ತಿಕೊಂಡಿರುವ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಸರ್ಕಾರ 532 ಕೋಟಿ ರೂ.ಗಳ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲು …

Read More »

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವಂತ 84 ಗ್ರಾಮಲೆಕ್ಕಿಗರ ಹುದ್ದೆಗಳ ನೇರ ನೇಮಕಾತಿ ಮೂಲಕ ಭರ್ತಿ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವಂತ 84 ಗ್ರಾಮಲೆಕ್ಕಿಗರ ಹುದ್ದೆಗಳನ್ನು ( Village Accountant ) ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು, ಸರ್ಕಾರ ಅನುಮತಿ ನೀಡಿದೆ.   ಈ ಕುರಿತಂತೆ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸಂಬಂಧ ಪಟ್ಟಂತ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದು, ಖಾಲಿ ಇರುವಂತ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ನೇರ ನೇಮಕಾತಿ ( VA Recruitment ) ಮೂಲಕ ಭರ್ತಿ ಮಾಡಿಕೊಳ್ಳು ಅನುಮತಿಸಲಾಗಿದೆ ಎಂದು …

Read More »

ಗುರುವಾರ ಬೆಳಿಗ್ಗೆ ನಡೆಯಬೇಕಿದ್ದ ಸಂಪುಟ ಸಭೆಯನ್ನು ಮೇ 11ಕ್ಕೆ‌

ಬೆಂಗಳೂರು: ಗುರುವಾರ ಬೆಳಿಗ್ಗೆ ನಡೆಯಬೇಕಿದ್ದ ಸಂಪುಟ ಸಭೆಯನ್ನು ಮೇ 11ಕ್ಕೆ‌ ಮುಂದೂಡಲಾಗಿದೆ. ವಿಧಾನಸೌಧದ ಸಚಿವ ಸಂಪುಟ ಸಭಾಂಗಣದಲ್ಲಿ ಗುರುವಾರ ಬೆಳಿಗ್ಗೆ 11.30ಕ್ಕೆ ಸಂಪುಟ ಸಭೆ ನಿಗದಿಯಾಗಿತ್ತು. ಅದನ್ನು ರದ್ದುಪಡಿಸಿ ಮೇ 11ರ ಬೆಳಿಗ್ಗೆ 11 ಗಂಟೆಗೆ ನಿಗದಿಪಡಿಸಲಾಗಿದೆ ಎಂದು ಸಚಿವ ಸಂಪುಟ ವಿಭಾಗದ ಜಂಟಿ ಕಾರ್ಯದರ್ಶಿ ಆರ್. ಚಂದ್ರಶೇಖರ್ ಬುಧವಾರ ಪರಿಷ್ಕೃತ ಸೂಚನಾ ಪತ್ರ ಹೊರಡಿಸಿದ್ದಾರೆ‌. ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನರ್ ರಚನೆ ಕುರಿತು ಬಿಜೆಪಿಯಲ್ಲಿ ಚರ್ಚೆ ನಡೆಯುತ್ತಿದೆ. ಮೇ …

Read More »

ಬಜೆಟ್ ಅನುಷ್ಠಾನಕ್ಕೆ ಎಲ್ಲ ಇಲಾಖೆಗಳಿಗೂ ವೇಳಾಪಟ್ಟಿ: ಸಿಎಂ ಬೊಮ್ಮಾಯಿ

ಬೆಂಗಳೂರು: ಬಜೆಟ್ ಅನುಷ್ಠಾನಕ್ಕೆ ಎಲ್ಲ ಇಲಾಖೆಗಳಿಗೂ ವೇಳಾಪಟ್ಟಿ ನಿಗದಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.   ಪ್ರಸಕ್ತ ಸಾಲಿನ ಬಜೆಟ್ ಅನುಷ್ಠಾನಕ್ಕೆ ವೇಗ ನೀಡುವುದಕ್ಕಾಗಿ ಬುಧವಾರ ಇಲಾಖಾವಾರು ಸಭೆಗಳನ್ನು ಆರಂಭಿಸುವ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಬಜೆಟ್ ಘೋಷಣೆಗಳ ಅನುಷ್ಠಾನಕ್ಕಾಗಿ ಈಗಾಗಲೇ ಶೇಕಡ 80ರಷ್ಟು ಆದೇಶಗಳನ್ನು ಹೊರಡಿಸಲಾಗಿದೆ. ಉಳಿದ ಕಾರ್ಯಕ್ರಮಗಳ ಅನುಷ್ಠಾನಕ್ಕೆ ತ್ವರಿತವಾಗಿ ಆದೇಶ ಹೊರಡಿಸಲಾಗುವುದು’ ಎಂದರು. ಎಲ್ಲ ಇಲಾಖೆಗಳಿಗೂ ಬಜೆಟ್ ಘೋಷಣೆಗಳ ಅನುಷ್ಠಾನಕ್ಕೆ ವೇಳಾಪಟ್ಟಿ ನೀಡಲಾಗುವುದು. …

Read More »

ಮೇ 10 ರಂದು ರಾಜ್ಯ ಸಚಿವ ಸಂಪುಟ ಪುನಾರಚನೆ ಸಾಧ್ಯತೆ ಬಗ್ಗೆ ಮಾಹಿತಿ ಲಭಿಸುತ್ತಿದ್ದು, ಮೂವರು ಡಿಸಿಎಂ ಸೃಷ್ಟಿಯಾಗಲಿದೆ. ‌ಜತೆಗೆ ಇನ್ನು‌ ಕೆಲವೇ ತಿಂಗಳಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸಬರ ನೇಮಕ..

ಬೆಂಗಳೂರು: ಮೇ 10 ರಂದು ರಾಜ್ಯ ಸಚಿವ ಸಂಪುಟ ಪುನಾರಚನೆ ಸಾಧ್ಯತೆ ಬಗ್ಗೆ ಮಾಹಿತಿ ಲಭಿಸುತ್ತಿದ್ದು, ಮೂವರು ಡಿಸಿಎಂ ಸೃಷ್ಟಿಯಾಗಲಿದೆ. ‌ಜತೆಗೆ ಇನ್ನು‌ ಕೆಲವೇ ತಿಂಗಳಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸಬರ ನೇಮಕವಾಗಲಿದೆ. ಈಗ ಲಭ್ಯವಾಗಿರುವ ಮಾಹಿತಿ‌ ಪ್ರಕಾರ, ಒಕ್ಕಲಿಗ, ಹಿಂದುಳಿದ, ಪರಿಶಿಷ್ಟ ಜಾತಿ/ ಪಂಗಡದ‌ ಪ್ರಭಾವಿ ನಾಯಕರಿಗೆ ಉಪ‌ಮುಖ್ಯಮಂತ್ರಿ ಸ್ಥಾನ ನೀಡಲು ವರಿಷ್ಠರು ಚಿಂತನೆ ನಡೆಸಿದ್ದಾರೆ. ಅದೇ ರೀತಿ ರಾಜ್ಯಾಧ್ಯಕ್ಷ ಸ್ಥಾನಕ್ಕೂ ಹೊಸಬರ ನೇಮಕ ಸಾಧ್ಯತೆ‌ ಇದೆ. ಅಲ್ಲಿಯೂ ಕೂಡಾ …

Read More »

ಅಮಿತ್ ಶಾ ಸಮ್ಮುಖದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

ಬೆಂಗಳೂರು: ಬಿಜೆಪಿ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಮಂಗಳವಾರ ಬೆಳಿಗ್ಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ‌ ಜಗದೀಶ್ ಶೆಟ್ಟರ್ ಜತೆ ಹೊರಟ್ಟಿ ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು. ನಂತರ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ಬಸವರಾಜ ಹೊರಟ್ಟಿ ಪ್ರತಿನಿಧಿಸುತ್ತಿರುವ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಇದುವರೆಗೆ …

Read More »

ನೆರೆಯ ರಾಜ್ಯಕ್ಕೆ ಕರ್ನಾಟಕ ತನ್ನ ಒಂದು ಇಂಚು ಭೂಮಿಯನ್ನು ಸಹ ಕೊಡುವುದಿಲ್ಲ

ಬೆಂಗಳೂರು: ಮಹಾರಾಷ್ಟ್ರದ ರಾಜಕಾರಣಿಗಳು ತಮ್ಮ ರಾಜಕೀಯ ಉಳಿವಿಗಾಗಿ ಭಾಷೆ ಅಥವಾ ಗಡಿ ವಿವಾದವನ್ನು ಬಳಸಿಕೊಳ್ಳಬೇಡಿ ಎಂದು ಒತ್ತಾಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನೆರೆಯ ರಾಜ್ಯಕ್ಕೆ ಕರ್ನಾಟಕ ತನ್ನ ಒಂದು ಇಂಚು ಭೂಮಿಯನ್ನು ಸಹ ಕೊಡುವುದಿಲ್ಲ ಎಂದು ಸೋಮವಾರ ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರು ಕರ್ನಾಟಕದ ಗಡಿ ವಿಚಾರದ ಬಗ್ಗೆ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ, ನಮ್ಮ‌ ಒಂದಿಂಚೂ ಜಾಗವನ್ನೂ ಬಿಟ್ಟು ಕೊಡುವುದಿಲ್ಲ. ಮಹಾರಾಷ್ಟ್ರದಲ್ಲಿ …

Read More »