Breaking News
Home / ಜಿಲ್ಲೆ / ಬೆಂಗಳೂರು (page 391)

ಬೆಂಗಳೂರು

ಕೊರೊನಾ ಲಾಕ್‍ಡೌನ್‍ನಿಂದ 50 ದಿನಗಳ ಬಳಿಕ ದೆಹಲಿಯಿಂದ ಬೆಂಗಳೂರಿನ ಮೆಜೆಸ್ಟಿಕ್ ರೈಲು ನಿಲ್ದಾಣಕ್ಕೆ ವಿಶೇಷ ರೈಲು

ಬೆಂಗಳೂರು: ಕೊರೊನಾ ಲಾಕ್‍ಡೌನ್‍ನಿಂದ 50 ದಿನಗಳ ಬಳಿಕ ದೆಹಲಿಯಿಂದ ಬೆಂಗಳೂರಿನ ಮೆಜೆಸ್ಟಿಕ್ ರೈಲು ನಿಲ್ದಾಣಕ್ಕೆ ವಿಶೇಷ ರೈಲು ಬಂದಿದೆ. ಇಂದು ಬೆಳಗ್ಗೆ ಸುಮಾರು 7.15ಕ್ಕೆ ಬೆಂಗಳೂರು ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಆಗಮಿಸಿದೆ. ಕೇಂದ್ರ ಸರ್ಕಾರ ದೇಶಾದ್ಯಂತ 30 ವಿಶೇಷ ರೈಲು ಸಂಚಾರ ಆರಂಭಿಸಲು ಅವಕಾಶ ಮಾಡಿಕೊಟ್ಟಿತ್ತು. ಹೀಗಾಗಿ ಮಂಗಳವಾರ ರಾತ್ರಿ ದೆಹಲಿಯಿಂದ ಬೆಂಗಳೂರಿಗೆ ವಿಶೇಷ ರೈಲು ಹೊರಟಿತ್ತು. ರೈಲಿನಲ್ಲಿ ಸುಮಾರು 1,000ಕ್ಕೂ ಹೆಚ್ಚು ಪ್ರಯಾಣಿಕರು ಆಗಮಿಸಿದ್ದಾರೆ. ಪ್ಲಾಟ್ ಫಾರಂ …

Read More »

ಮುನಿರತ್ನ ನೇತೃತ್ವದಲ್ಲಿ ಸೇವಾ ಕಾರ್ಯ- ಮೆಚ್ಚುಗೆ ವ್ಯಕ್ತಪಡಿಸಿದ ಜನ………

ಬೆಂಗಳೂರು: ಕೊರೊನಾದಿಂದ ತತ್ತರಿಸಿ ಹೋಗಿರೋ ಅಸಹಾಯಕರ ಸಂಕಷ್ಟಕ್ಕೆ ಬಿಜೆಪಿ ಮುಖಂಡ ಮುನಿರತ್ನ ಹಗಲಿರುಳು ಸ್ಪಂದಿಸುತ್ತಿದ್ದಾರೆ. ರಾಜರಾಜೇಶ್ವರಿ ನಗರದ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರತಿನಿತ್ಯ ತಮ್ಮ ಕೈಲಾದ ಸೇವೆ ಮಾಡುತ್ತಾ ಇದ್ದಾರೆ. ಇಂದು ಕೊಟ್ಟಿಗೆ ಪಾಳ್ಯ ವಾರ್ಡ್ ನಂಬರ್ 73ರಲ್ಲಿ 10 ಸಾವಿರಕ್ಕೂ ಹೆಚ್ಚು ಮಂದಿಗೆ ಅಗತ್ಯ ದಿನಸಿ ವಸ್ತುಗಳನ್ನು ವಿತರಣೆ ಯೋಜನೆಗೆ ಚಾಲನೆ ನೀಡಿದ್ರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್‍ಕುಮಾರ್ ಜೊತೆಗಿದ್ದರು. ಮುನಿರತ್ನ ನೇತೃತ್ವದಲ್ಲಿ ನಡೆಯುತ್ತಿರೋ ಈ …

Read More »

ಪಾದರಾಯನಪುರದಲ್ಲಿ ಇಂದು ಮತ್ತೆ ಐದು ಕೊರೊನಾ ಪ್ರಕರಣ ಪತ್ತೆ……….

ಬೆಂಗಳೂರು: ಪಾದರಾಯನಪುರದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಇಂದು ಮತ್ತೆ ಐದು ಪ್ರಕರಣಗಳು ಪತ್ತೆಯಾಗಿವೆ. ಕ್ವಾರಂಟೈನ್ ಮಾಡಿದ್ದವರಲ್ಲಿ ಸೋಂಕು ಪತ್ತೆಯಾಗಿದ್ದು, ಸೋಂಕಿತ ವ್ಯಕ್ತಿಯೊಂದಿಗೆ ದ್ವಿತೀಯ ಸಂಪರ್ಕ ಹೊಂದಿದ್ದವರಲ್ಲಿ ಸೋಂಕು ಪತ್ತೆಯಾಗಿದೆ. ಒಟ್ಟು 22 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ ಐವರಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಈ  ಮೂಲಕ ಪಾದರಾಯನಪುರ ಒಂದರಲ್ಲೇ ಈ ವರೆಗೆ 55 ಪ್ರಕರಣಗಳು ಪತ್ತೆಯಾದಂತಾಗಿವೆ ಎಂದು ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಚಿದಾನಂದ್ ಪಬ್ಲಿಕ್ ಟಿವಿಗೆ ಮಾಹಿತಿ …

Read More »

ಕೇಂದ್ರ 20 ಲಕ್ಷ ಕೋಟಿಯನ್ನು ಕೇವಲ ಉದ್ಯಮಿಗಳಿಗೆ ನೀಡಿದೆ- ಎಚ್‍ಡಿಕೆ ಸರಣಿ ಟ್ವೀಟ್

ಬೆಂಗಳೂರು: ಕೇಂದ್ರ ಸರ್ಕಾರ ಘೋಷಿಸಿರುವ 20 ಲಕ್ಷ ಕೋಟಿ ರೂ. ಪ್ಯಾಕೇಜ್ ಕುರಿತು ರಾಜಕೀಯ ವಲಯದಲ್ಲಿ ಪರ ವಿರೋಧದ ಚರ್ಚೆ ನಡೆಯುತ್ತಿದ್ದು, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, 20 ಲಕ್ಷ ಕೋಟಿ ರೂ. ಪ್ಯಾಕೇಜ್ ಎಂಬುದು ಲಿಕ್ವಿಡಿಟಿ(ನಗದು) ಆಧಾರಿತವಲ್ಲ. ಇದರಿಂದ ಜನರಿಗೆ ಕನಿಷ್ಠ ಸಹಾಯವೂ ಆಗದು. ಇವು ಕಾಲ್ಪನಿಕ ಘೋಷಣೆಗಳು ಮಾತ್ರ. ಇದರಲ್ಲಿರುವುದು ಉದ್ಯಮ, …

Read More »

ಹಿರಿಯ ಹಾಸ್ಯ ನಟ ಮೈಕಲ್ ಮಧು ವಿಧಿವಶ……….

ಬೆಂಗಳೂರು: ವಿಭಿನ್ನ ಶೈಲಿಯ ಹೇರ್ ಸ್ಟೈಲ್ ಹಾಗೂ ಮ್ಯಾನರಿಸಂ ನಿಂದಲೇ ಗುರುತಿಸಿಕೊಂಡಿದ್ದ ಕನ್ನಡದ ಹಿರಿಯ ಹಾಸ್ಯ ನಟ ಮೈಕಲ್ ಮಧು ವಿಧಿವಶರಾಗಿದ್ದಾರೆ. ಇಂದು ಸಂಜೆ 6.30ರ ಸಮಯದಲ್ಲಿ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮೈಕಲ್ ಮಧು ವಿಧಿವಶರಾಗಿದ್ದಾರೆ. ಎರಡು ದಿನದ ಹಿಂದೆಯಷ್ಟೇ ಮಂಡ್ಯದಿಂದ ಬೆಂಗಳೂರಿಗೆ ವಾಪಸ್ಸಾಗಿದ್ದ ಮೈಕಲ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಕಾಲಿಗೆ ತೀವ್ರ ಪೆಟ್ಟು ಬಿದ್ದ ಕಾರಣದಿಂದ ನೋವಿನಲ್ಲಿ ನರಳುತ್ತಿದ್ದರು ಎಂಬ ಮಾಹಿತಿ ಲಭಿಸಿದೆ. ಉಶ್, ಭಜರಂಗಿ, AK 47, …

Read More »

ಲಾಕ್‍ಡೌನ್ ನಡುವೆ ಗ್ರಾಹಕರಿಗೆ ಕರೆಂಟ್ ಶಾಕ್ – ಹಿಂದೆ ಎಷ್ಟಿತ್ತು? ಈಗ ಎಷ್ಟು ಏರಿಕೆಯಾಗಿದೆ?

ಬೆಂಗಳೂರು: ಕೊರೊನಾ ಸಂಕಷ್ಟದ ಕಾಲದಲ್ಲಿ ಕರ್ನಾಟಕದ ಜನರಿಗೆ ರಾಜ್ಯ ಸರ್ಕಾರ ಬೇಕಾಬಿಟ್ಟಿ ವಿದ್ಯುತ್ ಬಿಲ್ ಶಾಕ್ ಕೊಟ್ಟಿದೆ. ಸರಾಸರಿ ಬಳಕೆ ಆಧಾರದ ಮೇಲೆ ವಿದ್ಯುತ್ ಸರಬರಾಜು ಕಂಪನಿಗಳು ಅವೈಜ್ಞಾನಿಕ ವಿದ್ಯುತ್ ಬಿಲ್ ವಸೂಲಿಗೆ ಇಳಿದಿವೆ. ದುರ್ಭಿಕ್ಷ ಕಾಲದಲ್ಲಿ ಅಧಿಕ ಮಾಸ ಎಂಬಂತೆ ಗ್ರಾಹಕರ ಮೇಲೆ ಬರೆ ಎಳೆಯುವ ಈ ಕ್ರಮಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಲಾಕ್‍ಡೌನ್ ಹಿನ್ನೆಲೆಯಲ್ಲಿ ವಿದ್ಯುತ್ ಸರಬರಾಜು ಕಂಪನಿಗಳು ಮಾರ್ಚ್ ತಿಂಗಳ ಬಿಲ್ ನೀಡಿರಲಿಲ್ಲ. ಮೇ ತಿಂಗಳಿನಲ್ಲಿ …

Read More »

ಜುಲೈ 30, 31 ರಂದು ಸಿಇಟಿ ಪರೀಕ್ಷೆ – ಸೆಪ್ಟೆಂಬರ್‌ನಲ್ಲಿ ಡಿಗ್ರಿ ಕಾಲೇಜ್ ಆರಂಭ

ಬೆಂಗಳೂರು: ಕೋವಿಡ್ 19 ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಸಿಇಟಿ ಪರೀಕ್ಷೆಗಳು ಜುಲೈ 30, 31ರಂದು ನಡೆಸಲು ಉನ್ನತ ಶಿಕ್ಷಣ ಇಲಾಖೆ ಮುಂದಾಗಿದೆ. ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವ ಅಶ್ವಥ್ ನಾರಾಯಣ್, ಜುಲೈ 30 ಮತ್ತು 31 ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ಎಂದಿನಂತೆ ಆಫ್ ಲೈನ್ ನಲ್ಲಿ ಈ ಬಾರಿಯೂ ಪರೀಕ್ಷೆ ನಡೆಯಲಿದ್ದು, ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಂಡು ಪರೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು. ಸಿಇಟಿ ಪರೀಕ್ಷೆ …

Read More »

ಖಗೋಳ ಪ್ರಿಯರಿಗೆ ಗುಡ್‍ನ್ಯೂಸ್. ಇಂದಿನಿಂದ ಮೇ 25ರವರೆಗೆ ನೀವು ಬರಿಗಣ್ಣಿನಲ್ಲಿ ಬೆಳಗಿನ ಜಾವ ಧೂಮಕೇತುವನ್ನು ವೀಕ್ಷಿಸಬಹುದು

ಬೆಂಗಳೂರು: ಖಗೋಳ ಪ್ರಿಯರಿಗೆ ಗುಡ್‍ನ್ಯೂಸ್. ಇಂದಿನಿಂದ ಮೇ 25ರವರೆಗೆ ನೀವು ಬರಿಗಣ್ಣಿನಲ್ಲಿ ಬೆಳಗಿನ ಜಾವ ಧೂಮಕೇತುವನ್ನು ವೀಕ್ಷಿಸಬಹುದು. ಸೂರ್ಯನ ಸುತ್ತ ಪ್ರದಕ್ಷಿಣೆ ಹಾಕುತ್ತಿರುವ ‘ಸ್ವಾನ್’ ಹೆಸರಿನ ಧೂಮಕೇತು ಭೂಮಿಯ ಸಮೀಪ ಬರುತ್ತಿದೆ. ಆರಂಭದ ದಿನದಲ್ಲಿ ಬೆಳಿಗ್ಗೆ 4.30ರ ವೇಳೆಗೆ `ಸ್ವಾನ್’ ಧೂಮಕೇತು ಕಾಣಿಸಿಕೊಳ್ಳಲಿದೆ ಎಂದು ನೆಹರೂ ತಾರಾಲಯದ ನಿರ್ದೇಶಕ ಪ್ರಮೋದ್ ಜಿ. ಗಲಗಲಿ ಮಾಧ್ಯಮಕ್ಕೆ ತಿಳಿಸಿದ್ದಾರೆ. ಆರಂಭದ ದಿನಗಳಲ್ಲಿ ಕತ್ತಲಿನಲ್ಲಿ ಇದು ಪ್ರಕಾಶಮಾನವಾಗಿ ಕಾಣುವುದರಿಂದ ಬರಿಗಣ್ಣಿನಲ್ಲಿ ವೀಕ್ಷಿಸಬಹುದು. ಸೂರ್ಯೋದಯದ ನಂತರ …

Read More »

ರಾಜ್ಯದಲ್ಲಿ ಇಂದು 26 ಜನರಿಗೆ ಕೊರೊನಾ- 951ಕ್ಕೆ ಏರಿದ ಸೋಂಕಿತರ ಸಂಖ್ಯೆ

ಬೆಂಗಳೂರು: ಹಾಸನ, ದಾವಣಗೆರೆ, ಬೀದರ್, ಕಲಬುರಗಿಯ ಜಿಲ್ಲೆಯ ಜನರನ್ನು ಕೊರೊನಾ ವೈರಸ್ ಮತ್ತಷ್ಟು ಆತಂಕಕ್ಕೆ ನೂಕಿದೆ. ಈ ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ಇಂದು ಒಂದೇ ದಿನದಲ್ಲಿ 26 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 951ಕ್ಕೆ ಏರಿಕೆಯಾಗಿದೆ. ಜೊತೆಗೆ ಕಲಬುರಗಿಯಲ್ಲಿ ಕೊರೊನಾ ಬಲಿಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಧ್ಯಾಹ್ನ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ, ಬೀದರ್ 11, ಹಾಸನ 4, ದಾವಣಗೆರೆ, ವಿಜಯಪುರ, ಕಲಬುರಗಿ, …

Read More »

ಆನ್​ಲೈನ್ ಶಿಕ್ಷಣದ ಹೆಸರಲ್ಲಿ ಶೋಷಣೆಯಾದರೆ ಕಠಿಣ ಕ್ರಮ: ಶಿಕ್ಷಣ ಸಂಸ್ಥೆಗಳಿಗೆ ಸುರೇಶ್ ಕುಮಾರ್ ಎಚ್ಚರಿಕೆ

ಬೆಂಗಳೂರು: ಲಾಕ್ ಡೌನ್ ಆಗಿ ಶಿಕ್ಷಣ ಸಂಸ್ಥೆಗಳನ್ನು ಬಂದ್ ಮಾಡಲಾದ ಬಳಿಕ ಆನ್​ಲೈನ್​ನಲ್ಲಿ ಪಾಠ ಮಾಡಲು ಅವಕಾಶ ಕೊಡಲಾಗಿದೆ. ಅದೇ ರೀತಿ ಹಲವು ಕಡೆ ಈಗಾಗಲೇ ಆನ್​ಲೈನ್​ನಲ್ಲೇ ತರಗತಿಗಳು ಪ್ರಾರಂಭವಾಗಿವೆ. ಕೆಲ ಶಿಕ್ಷಣ ಸಂಸ್ಥೆಗಳಂತೂ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಹಾಗೂ ಪೋಷಕರ ಮೇಲೆ ವಿಪರೀತ ಒತ್ತಡ ಹೇರುತ್ತಿವೆ. ದಿನವಿಡೀ ಆನ್​ಲೈನ್ ಕ್ಲಾಸ್ ಎಂದು ಹೈರಾಣಗೊಳಿಸುತ್ತಿವೆ ಎಂಬ ಆರೋಪ ಸಾಕಷ್ಟು ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು …

Read More »