Breaking News

ಬೆಂಗಳೂರು

ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ: ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ

ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ. ಸರ್ಕಾರಿ ನೌಕರರು, ದೊಡ್ಡ, ದೊಡ್ಡ ಐಟಿ ಕಂಪೆನಿಗಳಲ್ಲಿ ಕೆಲಸ ಮಾಡುತ್ತಾ ಇರುವವರು – ಹೀಗೆ ಬಹಳ ಜನ ನಮಗೆ ಗ್ಯಾರಂಟಿ ಯೋಜನೆಗಳು ಬೇಡ ಎಂದಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರದಂದು ಉತ್ತರಿಸಿದರು. ಸಿರಿವಂತರು ಗ್ಯಾರಂಟಿ ಯೋಜನೆಗಳ ಫಲಾನುಭವದಿಂದ ಹೊರಬರಲಿ ಎಂದು ಒಂದಷ್ಟು ಸಚಿವರು ಹೇಳುತ್ತಿರುವ ಬಗ್ಗೆ ಕೇಳಿದಾಗ, “ಒಂದಷ್ಟು ಸಿರಿವಂತರು ನಮಗೆ ಅವಶ್ಯಕತೆ ಇಲ್ಲ …

Read More »

ಇಂದಿನಿಂದ ದ್ವಿತೀಯ PUC ಪರೀಕ್ಷೆ; ಅಕ್ರಮ ತಡೆಗೆ ಕಟ್ಟೆಚ್ಚರ

ಬೆಂಗಳೂರು: ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆ-1  ಇಂದಿನಿಂದ ಶುರುವಾಗುತ್ತಿದ್ದು, ಈ ಬಾರಿ 7,10,363 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಮಾ.17 ರ ವರೆಗೆ ನಡೆಯುವ ಪರೀಕ್ಷೆಗೆ ರಾಜ್ಯಾದ್ಯಂತ 1,217 ಕೇಂದ್ರಗಳನ್ನು ಗುರುತಿಸಲಾಗಿದೆ. ಅಕ್ರಮ, ಗೊಂದಲಗಳಿಗೆ ಅವಕಾಶವಾಗದೇ ಸುಸೂತ್ರವಾಗಿ ಪರೀಕ್ಷೆ ನಡೆಸಲು ಇಲಾಖೆ ಪೂರ್ವ ಸಿದ್ಧತೆ ಹಾಗೂ ಭದ್ರತಾ ವ್ಯವಸ್ಥೆ ಮಾಡಿಕೊಂಡಿದೆ. ಮೊದಲ ದಿನವಾದ ಇಂದು ಕನ್ನಡ ಮತ್ತು ಅರೇಬಿಕ್ ವಿಷಯಗಳ ಪರೀಕ್ಷೆಗಳು ನಡೆಯಲಿದ್ದು, ಬೆಳಗ್ಗೆ …

Read More »

ಆರೋಗ್ಯಕರ ರಾಷ್ಟ್ರಕ್ಕೆ ಶಕ್ತಿಶಾಲಿಯಾದ ಭವಿಷ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಿಮತ

ಬೆಂಗಳೂರು: ಆರೋಗ್ಯಕರ ಕುಟುಂಬಗಳು ಆರೋಗ್ಯಕರ ರಾಷ್ಟ್ರವನ್ನು ನಿರ್ಮಿಸುತ್ತವೆ. ಆರೋಗ್ಯಕರ ರಾಷ್ಟ್ರವು ಶಕ್ತಿಶಾಲಿ ಭವಿಷ್ಯವನ್ನು ನಿರ್ಮಿಸುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಶುಕ್ರವಾರ ನಡೆದ ಮಹಿಳಾ ಮಾನಸಿಕ ಆರೋಗ್ಯ ಶೃಂಗಸಭೆಯನ್ನು  ಉದ್ಘಾಟಿಸಿ ಮಾತನಾಡಿದ ಸಚಿವರು, ಆರೋಗ್ಯಕರ ಮಹಿಳೆಯರು ಆರೋಗ್ಯಕರ ಕುಟುಂಬಗಳನ್ನು ನಿರ್ಮಿಸುತ್ತಾರೆ ಎಂದರು. ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಹತ್ತು ವರ್ಷಗಳಿಂದ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ Mpower ಸಂಸ್ಥೆಗೆ …

Read More »

ಸರ್ಕಾರಕ್ಕೆ ಹೊರೆಯಾದ್ರೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ: ಡಿಕೆಶಿ

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಹೊರೆಯಾಗುತ್ತಿದೆ. ಆದರೂ ನಾವು ಯಾವುದೇ ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದ್ದೇವೆ. ಯಾವುದೇ ರೀತಿಯ ಪರಿಷ್ಕರಣೆಯನ್ನೂ ಮಾಡುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್  ಅವರು ಸ್ಪಷ್ಟಪಡಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಸಂಜೆ ಪ್ರತಿಕ್ರಿಯೆ ನೀಡಿದರು. ಗ್ಯಾರಂಟಿ ಯೋಜನೆ ನಿಲ್ಲಿಸುವ ಬಗೆಗಿನ ಊಹಾಪೋಹಗಳ ಬಗ್ಗೆ ಕೇಳಿದಾಗ, “ಉದಾಹರಣೆಗೆ ಮೃತಪಟ್ಟಿರುವ ಕೆಲವರಿಗೆ ಗ್ಯಾರಂಟಿ ಯೋಜನೆಯ ಹಣ ಸಂದಾಯವಾಗಿದೆ. ಪಡಿತರ ಅಕ್ಕಿಯನ್ನೂ ಸಹ …

Read More »

ನಿರುದ್ಯೋಗಿಗಳ ಉಗ್ರ ಹೋರಾಟಕ್ಕೆ ಮಣಿದ ಸರ್ಕಾರ – 56 ಸಾವಿರ ನೇಮಕಾತಿಗೆ ಗ್ರೀನ್ ಸಿಗ್ನಲ್

ಬೆಂಗಳೂರು: ಉದ್ಯೋಗಕ್ಕಾಗಿ   ಧಾರವಾಡದಲ್ಲಿ  ಯುವಶಕ್ತಿ ನಡೆಸಿದ ಉಗ್ರ ಹೋರಾಟಕ್ಕೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಮೊದಲ ಹಂತದಲ್ಲಿ 56,432 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲು ಕ್ಯಾಬಿನೆಟ್ ತೀರ್ಮಾನಿಸಿದೆ. ಅಲ್ಲದೆ, ಸರ್ಕಾರಿ ಹೊಸ ನೇಮಕಾತಿಗಳಲ್ಲಿ ಸದ್ಯಕ್ಕೆ ಒಳಮೀಸಲಾತಿ ಜಾರಿ ಅಸಾಧ್ಯ ಎಂದು ಕ್ಯಾಬಿನೆಟ್ ತೀರ್ಮಾನಿಸಿದೆ. ಒಳಮೀಸಲಾತಿ ಸಂಬಂಧ ಕೋರ್ಟ್‌ನಲ್ಲಿ ಪ್ರಕರಣ ಇರುವುದರಿಂದ ಸದ್ಯ 50% ಮೀಸಲಾತಿ ಪ್ರಮಾಣದಲ್ಲೇ ಹೊಸ ನೇಮಕಾತಿಗೆ ಆದೇಶ ಹೊರಡಿಸಲು ಸರ್ಕಾರ ನಿರ್ಧರಿಸಿದೆ. ಇದರಿಂದಾಗಿ ಒಳಮೀಸಲಾತಿ ಜಾರಿ ಕಷ್ಟ ಸಾಧ್ಯವಾಗಿದೆ. …

Read More »

ನೇಮಕಾತಿ ಪ್ರಕ್ರಿಯೆಗೆ ತೊಡಕಾಗಿದ್ದ ಒಳ ಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

ಬೆಂಗಳೂರು: ನೇಮಕಾತಿ ಪ್ರಕ್ರಿಯೆಗೆ ತೊಡಕಾಗಿದ್ದ ಒಳ ಮೀಸಲಾತಿ ವಿಧೇಯಕ  ‘ಕರ್ನಾಟಕ ಪರಿಶಿಷ್ಟ ಜಾತಿಗಳ ಉಪ ವರ್ಗೀಕರಣ ವಿಧೇಯಕ 2025’ಕ್ಕೆ ಕೊನೆಗೂ ರಾಜ್ಯಪಾಲರು ಸಹಿ ಹಾಕಿದ್ದಾರೆ. ಸಚಿವರ ನಿಯೋಗ ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ರನ್ನು ಭೇಟಿಯಾಗಿ ವಿಧೇಯಕಕ್ಕೆ ಸಹಿ ಹಾಕುವಂತೆ ಮನವಿ ಮಾಡಿದ್ದರು. ಸರ್ಕಾರದ ಮನವಿ ಮೇರೆಗೆ ರಾಜ್ಯಪಾಲರು ಸಹಿ ಹಾಕಿದ್ದಾರೆ. ಧಾರವಾಡದಲ್ಲಿ ಉದ್ಯೋಗಾಂಕ್ಷಿಗಳು ನೇಮಕಾತಿ ಆಗುತ್ತಿಲ್ಲ ಅಂತ ದೊಡ್ಡ ಮಟ್ಟದ ಹೋರಾಟ ನಡೆಸಿದ್ದರು. ಈ ಹಿನ್ನಲೆಯಲ್ಲಿ ಸರ್ಕಾರ ನೇಮಕಾತಿ …

Read More »

ಖಾಸಗಿ ಹೋಟೆಲ್‌ನಲ್ಲಿ ಡಿಕೆಶಿ ಬೆಂಬಲಿಗ ಶಾಸಕರ ಸಭೆ

ಬೆಂಗಳೂರು: ಖಾಸಗಿ ಹೋಟೆಲ್‌ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಬೆಂಬಲಿಗ ಶಾಸಕರು ಸಭೆ ನಡೆಸಿರುವುದು ಕುತೂಹಲ ಮೂಡಿಸಿದೆ. ಮೇಖ್ರಿ ಸರ್ಕಲ್ ಬಳಿ ಖಾಸಗಿ ಹೋಟೆಲ್‌ನಲ್ಲಿ ಸಭೆ ನಡೆಸಲಾಗಿದೆ. ಒತ್ತಡ ಹೆಚ್ಚಿಸಲು ಡಿಕೆಶಿ ಬೆಂಬಲಿಗರ ಸಭೆ ನಡೆಸಿದ್ದಾರೆನ್ನಲಾಗಿದೆ. ಶಾಸಕ ಹೆಚ್.ಸಿ.ಬಾಲಕೃಷ್ಣ ಬರ್ತ್ ಡೇ ಪಾರ್ಟಿ ನೆಪದಲ್ಲಿ ಶಾಸಕರು ಸಭೆ ಸೇರಿದ್ದರು. ಸಿ.ಪಿ.ಯೋಗೇಶ್ವರ್, ಕುಣಿಗಲ್ ರಂಗನಾಥ್, ಆನೇಕಲ್ ಶಿವಣ್ಣ, ಪಾವಗಡ ವೆಂಕಟೇಶ್, ಮದ್ದೂರು ಉದಯ್ ಗೌಡ, ಮಂಥರ್ ಗೌಡ, ಬಸವರಾಜ ಶಿವಗಂಗಾ, ಶರತ್ ಬಚ್ಚೇಗೌಡ, ಗಣಿಗ …

Read More »

ಸಿಎಂ ಕುರ್ಚಿ ವಿಚಾರದಲ್ಲಿನ ಗೊಂದಲಗಳಿಗೆ ಹೈಕಮಾಂಡ್ ಉತ್ತರ ಕೊಡಬೇಕು: ಪರಮೇಶ್ವರ್

ಬೆಂಗಳೂರು: ಸಿಎಂ ಕುರ್ಚಿ ವಿಚಾರದಲ್ಲಿನ ಗೊಂದಲಗಳಿಗೆ ಹೈಕಮಾಂಡ್ ಉತ್ತರ ಕೊಡಬೇಕು ಅಂತ ಗೃಹ ಸಚಿವ ಪರಮೇಶ್ವರ್ ಪುನರುಚ್ಚಾರ ಮಾಡಿದ್ದಾರೆ. ಪರಮೇಶ್ವರ್ ಸಿಎಂ ಆಗಬೇಕು ಎಂಬ ಅಭಿಮಾನಿಗಳು ಕೂಗಿನ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಕುರ್ಚಿ ವಿಚಾರದಲ್ಲಿ ಸಾಕಷ್ಟು ಗೊಂದಲಗಳು ಆಗಿದೆ. ನಾನು ಅದಕ್ಕೆ ಹೆಚ್ಚು ಗೊಂದಲ ಮಾಡೋದಕ್ಕೆ ತಯಾರಿಲ್ಲ. ಅನೇಕರು ನನ್ನನ್ನ ಪ್ರಶ್ನೆ ಮಾಡ್ತಾರೆ, ಅಭಿಮಾನಿಗಳು ಅಲ್ಲಲ್ಲಿ ಸಿಎಂ  ಅಗಬೇಕು ಅಂತ ಅವರ ಭಾವನೆ ವ್ಯಕ್ತಪಡಿಸುತ್ತಾರೆ. ಸಿಎಂ ಆಗಬೇಕು …

Read More »

ಜಿಎಸ್‌ಟಿ ಅಧಿಕಾರಿಗಳ ಸೋಗಿನಲ್ಲಿ ವಂಚನೆ: ಆರೋಪಿಗಳಿಬ್ಬರ ಬಂಧನ

ಬೆಂಗಳೂರು: ಜಿಎಸ್‌ಟಿ ಅಧಿಕಾರಿಗಳ ಸೋಗಿನಲ್ಲಿ ಬೆದರಿಸಿ ಹಣ ವಸೂಲಿ ಮಾಡಿದ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ನಗರದ ಬನಶಂಕರಿಯಲ್ಲಿರುವ ಜಿಎಸ್‌ಟಿ ಪ್ರಧಾನ ಆಯುಕ್ತರ ಕಚೇರಿಯಲ್ಲಿ ಹೌಸ್‌ಕೀಪಿಂಗ್ ಕೆಲಸ ಮಾಡುತ್ತಿದ್ದ ನಾಗರಾಜ್ ಹಾಗೂ ದಾದಾಪೀರ್ ಅಧಿಕಾರಿಗಳ ಸೋಗಿನಲ್ಲಿ ವಂಚಿಸಿದ್ದಾರೆ. ಈ ಇಬ್ಬರೂ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವ್ಯಾಪಾರಿಯ ಬಳಿ ತಾವು ಜಿಎಸ್‌ಟಿ ಅಧಿಕಾರಿಗಳು ಎಂದು ಹೇಳಿಕೊಂಡು ಆತನನ್ನು ಬೆದರಿಸಿ ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡಿರುವ ಆರೋಪ ಕೇಳಿಬಂದಿದೆ. ಹೊರಗುತ್ತಿಗೆ ಆಧಾರದಲ್ಲಿ …

Read More »

ಬೆಂಗಳೂರು: ಅಕ್ರಮ ಬಾಂಗ್ಲಾ ವಲಸಿಗರ ನೆಲೆ ಮೇಲೆ ಖಾಕಿದಾಳಿ 20 ಮಂದಿ ವಶಕ್ಕೆ!

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ವಾಸವಾಗಿದ್ದ ಬಾಂಗ್ಲಾ ಪ್ರಜೆಗಳ ಅಡಗುತಾಣಗಳ ಮೇಲೆ ಪೊಲೀಸರು ಭರ್ಜರಿ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಸುಮಾರು 20 ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದಿದ್ದಾರೆ. ನಗರ ಪೊಲೀಸ್‌ ಆಯುಕ್ತ ಸೀಮಂತ್ ಕುಮಾ‌ರ್ ಸಿಂಗ್‌ ಅವರ ಆದೇಶದ ಮೇರೆಗೆ ಈ ವಿಶೇಷ ಕಾರ್ಯಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಾರ್ವಜನಿಕರಿಂದ ಬಂದ ಖಚಿತ ಮಾಹಿತಿ ಆಧರಿಸಿ, ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಬೆಂಗಳೂರಿನ ಹಲವು ಭಾಗಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಯಿತು. ರಾಮಮೂರ್ತಿ …

Read More »