Home / ಜಿಲ್ಲೆ / ಬೆಂಗಳೂರು (page 403)

ಬೆಂಗಳೂರು

ಲಾಕ್‍ಡೌನ್ ಹೊಸ ಗೈಡ್‍ಲೈನ್ಸ್- ಐಟಿ, ಬಿಟಿಯವರು ಪಾಸ್ ಪಡೆಯುವುದು ಕಡ್ಡಾಯ……..

ಬೆಂಗಳೂರು: ರಾಜ್ಯ ಸರ್ಕಾರ ಲಾಕ್‍ಡೌನ್ ನಿಯಮಗಳನ್ನು ಪರಿಷ್ಕರಿಸಿದ್ದು, ಹತ್ತು ಹಲವು ಮಾರ್ಪಾಡುಗಳನ್ನು ಮಾಡಿದೆ. ಐಟಿ, ಬಿಟಿ ಕಂಪನಿ ಉದ್ಯೋಗಿಗಳಿಗೆ ಪಾಸ್, ಸಾರ್ವಜನಿಕರ ಸಂಚಾರದ ಸಮಯ ಸೇರಿದಂತೆ ವಿವಿಧ ಬದಲಾವಣೆಗಳನ್ನು ಮಾಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರವನ್ನು ಒಂದೇ ಯೂನಿಟ್ ಎಂದು ಪರಿಗಣಿಸಿದ್ದು, ಈ ಎಲ್ಲ ಜಿಲ್ಲೆಗಳಲ್ಲಿ ಬೆಳಗ್ಗೆ 7ರಿಂದ ಸಂಜೆ 7 ಗಂಟೆವರೆಗೆ ಮಾತ್ರ ಸಾರ್ವಜನಿಕರಿಗೆ ಸಂಚಾರಕ್ಕೆ ಕಲ್ಪಿಸಿದೆ. ರಾತ್ರಿ ಆಫೀಸ್‍ಗೆ ಹೋಗುವವರು ಕಚೇರಿಯಿಂದ ಲೆಟರ್ …

Read More »

ಇಂದು ಒಂದೇ ದಿನ 34 ಮಂದಿಗೆ ಕೊರೊನಾ ಸೋಂಕು……..

ರಾಜ್ಯದಲ್ಲಿ 635ಕ್ಕೇರಿದ ಸೋಂಕಿತರ ಸಂಖ್ಯೆ ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ 34 ಮಂದಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಸೋಂಕಿತರ ಸಂಖ್ಯೆ 635ಕ್ಕೆ ಏರಿಕೆಯಾಗಿದೆ. ದಾವಣಗೆರೆ ಜಿಲ್ಲೆಯಲ್ಲಿಯೇ 21 ಪ್ರಕರಣಗಳು ಬೆಳಕಿಗೆ ಬಂದಿವೆ. ಇಂದು ಬೆಳಗ್ಗೆ ಬಿಡುಗಡೆಯಾದ ಆರೋಗ್ಯ ಇಲಾಖೆಯ ಬುಲೆಟಿನ್ ನಲ್ಲಿ 5 ಮಂದಿಗೆ ಸೋಂಕು ತಗುಲಿರೋದು ವರದಿಯಾಗಿತ್ತು. ಸಂಜೆಯ ಬುಲೆಟಿನ್ ನಲ್ಲ 8 ಮಂದಿಗೆ ಸೋಂಕು ತಗುಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಆದ್ರೆ ದಾವಣಗೆರೆಯ 21 …

Read More »

ಕಾರ್ಮಿಕರ ಉಚಿತ ಪ್ರಯಾಣಕ್ಕೆ ಕೆಪಿಸಿಸಿ ವತಿಯಿಂದ 1 ಕೋಟಿ ನೆರವು

ಬೆಂಗಳೂರು,ಮೇ 3- ವಲಸೆ ಕಾರ್ಮಿಕರಿಗೆ ಉಚಿತವಾಗಿ ಸಾರಿಗೆ ವ್ಯವಸ್ಥೆ ಕಲ್ಪಿಸಲು ಕೆಪಿಸಿಸಿ ವತಿಯಿಂದ ರಾಜ್ಯ ಸಾರಿಗೆ ಸಂಸ್ಥೆಗೆ ಒಂದು ಕೋಟಿ ರೂ. ಚೆಕ್ ನೀಡಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸಮರ್ಪಕ ಸಾರಿಗೆ ವ್ಯವಸ್ಥೆ ಕಲ್ಪಸದೆ ಇರುವುದರಿಂದ ಕಾರ್ಮಿಕರು ತಮ್ಮ ಊರುಗಳಿಗೆ ತಲುಪಲಾಗದೆ ಪರದಾಡುತ್ತಿದ್ದಾರೆ. ಮಕ್ಕಳು, ಮಹಿಳೆಯರು, ವೃದ್ಧರು ಸೇರಿ ಅನೇಕ ಮಂದಿ ಊಟ, ತಿಂಡಿ ವ್ಯವಸ್ಥೆ ಬಸ್ ಇಲ್ಲದೆ ಬಸ್ ನಿಲ್ದಾಣದಲ್ಲಿ ಅನಾಥರಾಗಿ …

Read More »

ಮೆಜಸ್ಟಿಕ್‍ನ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಸಾವಿರಾರು ಜನ ಗುಂಪು ಗುಂಪಾಗಿ ಓಡಾಡುವ ದೃಶ್ಯಗಳು

ಬೆಂಗಳೂರು: ಇಕ್ಕಟಿನಲ್ಲಿ ಸಿಲುಕಿದ್ದ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳನ್ನು ತವರು ಜಿಲ್ಲೆಗಳಿಗೆ ಕಳಿಸಲು ರಾಜ್ಯ ಸರ್ಕಾರ ಸಾರಿಗೆ ವ್ಯವಸ್ಥೆಯನ್ನ ಮಾಡಿದೆ. ಆದರೆ ಪ್ರಯಾಣಿಕರು ಮಾತ್ರ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಮೆಜಸ್ಟಿಕ್‍ನ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಸಾವಿರಾರು ಜನ ಗುಂಪು ಗುಂಪಾಗಿ ಓಡಾಡುವುದು, ನಿಂತುಕೊಂಡಿರುವ ದೃಶ್ಯಗಳು ಸಾಮಾನ್ಯವಾಗಿ ಕಂಡು ಬಂದವು. ಅನೇಕರು ಮಾಸ್ಕ್ ಧರಿಸದೇ ಬಸ್ ನಿಲ್ದಾಣದಲ್ಲಿ ಕುಳಿತಿದ್ದರು ಹಾಗೂ ಓಡಾಡುತ್ತಿದ್ದರು. ಸರ್ಕಾರ ಇಷ್ಟೇಲ್ಲ ಅನುಕೂಲ ಒದಗಿಸಿದರೂ ಸಾರ್ವಜನಿಕರು ಸಾಮಾಜಿಕ …

Read More »

ಕೊರೊನಾ ಜಾಗೃತಿಗಾಗಿ ಯೋಗರಾಜ್ ಭಟ್ಟರು ಹಾಡು …..ಒಂದಾದ ಯೋಗರಾಜ್ ಭಟ್, ಅರ್ಜುನ್ ಜನ್ಯ, ವಿಜಯ್ ಪ್ರಕಾಶ್

ಬೆಂಗಳೂರು: ಯೋಗರಾಜ್ ಭಟ್ಟರು ತಮ್ಮ ವಿಭಿನ್ನ ಸಾಹಿತ್ಯ, ನಿರ್ದೇಶನದ ಮೂಲಕವೇ ಪ್ರಸಿದ್ಧರು. ಅವರ ಸಾಹಿತ್ಯ ಯುವ ಸಮೂಹಕ್ಕೆ ಅಪ್ಯಾಯಮಾನ. ಹಲವು ವಿಶಿಷ್ಠ ಗೀತೆಗಳ ಮೂಲಕ ಯುವ ಸಮೂಹಕ್ಕೆ ಭಟ್ಟರು ಹುಚ್ಚು ಹಿಡಿಸುತ್ತಾರೆ. ಅದೇ ರೀತಿ ಇದೀಗ ಕೊರೊನಾ ಜಾಗೃತಿ ಗೀತೆಯನ್ನು ಕಟ್ಟಿಕೊಟ್ಟಿದ್ದಾರೆ. ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೊನಾ ವೈರಸ್ ಕುರಿತು ಈಗಾಗಲೇ ಹಲವು ಗಾಯಕರು ಹಾಗೂ ಬರಹಗಾರರು ಹಾಡು ರಚಿಸಿದ್ದು, ಇದೀಗ ಯೋಗರಾಜ್ ಭಟ್ಟರು ಹಾಡು ರಚಿಸಿದ್ದಾರೆ. ರಾಜ್ಯ ಸರ್ಕಾರ ಹಾಗೂ …

Read More »

ಒಂದು ದಿನ ಅಥವಾ ಒಂದು ಕಡೆಗೆ ಹೋಗಲು ಪಾಸ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.

ಬೆಂಗಳೂರು: ಲಾಕ್‍ಡೌನ್3 ಘೋಷಣೆಯಾಗಿರುವುರಿಂದ ವಿವಿಧ ಸ್ಥಳಗಳಲ್ಲಿ ಸಿಕ್ಕಿಹಾಕಿಕೊಂಡು ಊರಿಗೆ ಹೋಗಲು ಪರದಾಡುತ್ತಿರುವ ಕಾರ್ಮಿಕರು, ಯಾತ್ರಿಕರು, ವಿದ್ಯಾರ್ಥಿಗಳು ಮತ್ತಿತರರಿಗೆ ಅನುಕೂಲವಾಗುವಂತೆ ಒಂದು ದಿನ ಅಥವಾ ಒಂದು ಕಡೆಗೆ ಹೋಗಲು ಪಾಸ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಒಂದು ದಿನ, ಒಂದು ಕಡೆಗೆ ಹೋಗಲು ಮಾತ್ರ ಈ ಪಾಸ್ ಬಳಸಬಹುದು. ಅಂತರ್ ಜಿಲ್ಲೆಗಳಿಗೆ ಪ್ರಯಾಣಿಸಲು ಅವಕಾಶ ನೀಡಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ತಮ್ಮ ಆದೇಶದಲ್ಲಿ ಪ್ರಕಟಿಸಿದ್ದಾರೆ. ಪಾಸ್ ಬೇಕಾದವರು ತಮ್ಮ …

Read More »

ಹಸಿರು ವಲಯದಲ್ಲಿ ಬಸ್ ಸಂಚಾರಕ್ಕೆ ಹಸಿರು ನಿಶಾನೆ…..

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಿಲುಕಿಕೊಂಡಿದ್ದ ವಲಸೆ ಕಾರ್ಮಿಕರಿಗೆ ತಮ್ಮ ಊರುಗಳಿಗೆ ಹೋಗಲು ರಾಜ್ಯ ಸರ್ಕಾರ ಶನಿವಾರದಿಂದ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಬೆನ್ನಲ್ಲೇ ಹಸಿರು ವಲಯದಲ್ಲಿ ಬಸ್ ಸಂಚಾರಕ್ಕೆ ಹಸಿರು ನಿಶಾನೆ ತೋರಿದೆ. ಉಡುಪಿಯನ್ನು ಹೊರತುಪಡಿಸಿ ರಾಜ್ಯದ 12 ಹಸಿರು ವಲಯ ಜಿಲ್ಲೆಗಳಲ್ಲಿ ಸೋಮವಾರದಿಂದ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭವಾಗಲಿದೆ. ಆದರೆ ಜಿಲ್ಲೆಯ ಒಳಗೆ ಮಾತ್ರ ಬಸ್‍ಗಳು ಸಂಚರಿಸಲಿವೆ. ಅಂತರ್ ಜಿಲ್ಲೆಯ ಬಸ್ ಸಂಚಾರ ಇರುವುದಿಲ್ಲ. ಹಾವೇರಿ, ಯಾದಗಿರಿ, …

Read More »

ಯಾವ ಜಿಲ್ಲೆಯಲ್ಲಿ ಎಷ್ಟು ಕಂಟೈನ್‍ಮೆಂಟ್ ಝೋನ್?

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಂಟೈನ್‍ಮೆಂಟ್ ಝೋನ್‍ಗಳ ಸಂಖ್ಯೆಯೂ ಹೆಚ್ಚಾಗುತ್ತಲೇ ಇದೆ. ಆದರೆ ಬೆಂಗಳೂರಿನಲ್ಲಿ ಇಳಿಕೆ ಕಂಡಿದೆ. ರೆಡ್ ಝೋನ್ ಮೈಸೂರು ಜಿಲ್ಲೆಯಲ್ಲಿ ಒಟ್ಟು 28 ಕಂಟೈನ್‍ಮೆಂಟ್ ವಲಯಗಳಿವೆ. ಇದರಲ್ಲಿ ಮೈಸೂರು ನಗರದ ಕೆಲವು ಪ್ರದೇಶ, ನಂಜನಗೂಡಿನ ಕೆಲವು ಬಡಾವಣೆ, ಮೈಸೂರು ತಾಲೂಕು ಕೆಲವು ಏರಿಯಾ ಹಾಗೂ ಟೀ ನರಸೀಪುರದ 1 ಗ್ರಾಮ ಸೇರಿವೆ. …

Read More »

ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಮತ್ತೊಂದು ಬಲಿ……..

ಬೆಂಗಳೂರು: ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು. ಬೀದರ್ ನಲ್ಲಿ ತೀವ್ರ ಉಸಿರಾಟದ ತೊಂದರೆಯಿಂದ 82 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾಗೆ ಸಾವನ್ನಪ್ಪಿದವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಇಂದು 9 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ತುಮಕೂರು 2, ವಿಜಯಪುರದಲ್ಲಿ 2, ಬೆಳಗಾವಿ, ಬೆಂಗಳೂರು, ಬಾಗಲಕೋಟೆ, ಚಿಕ್ಕಬಳ್ಳಾಪುರದದಲ್ಲಿ ತಲಾ 1 ಪ್ರಕರಣ ಪತ್ತೆಯಾಗಿದೆ. …

Read More »

“ಬೆಂಗಳೂರಿನಲ್ಲಿ ನೆಲೆಸಿರುವ ಅನ್ಯ ರಾಜ್ಯಗಳ ಕಾರ್ಮಿಕರ ಹಿತ ಕಾಯಲು ಸರ್ಕಾರ ಬದ್ಧ”

ಬೆಂಗಳೂರು,ಮೇ.2- ಸದ್ಯದಲ್ಲಿಯೆ ನಗರದಲ್ಲಿ ಕಟ್ಟಡ ನಿರ್ಮಾಣ ಸೇರಿದಂತೆ ಎಲ್ಲಾ ಬೃಹತ್ ನಿರ್ಮಾಣ ಚಟುವಟಿಕೆಗಳು ಆರಂಭವಾಗುವುದಿದ್ದು, ಯಾವುದೇ ಆತಂಕಕ್ಕೊಳಗಾಗದೇ ತಮ್ಮ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕೆಂದು ಕಾರ್ಮಿಕರಿಗೆ ಸಚಿವ ಸುರೇಶ್‍ಕುಮಾರ್ ಸಲಹೆ ನೀಡಿದರು. ಯಶವಂತಪುರದ ಎಪಿಎಂಸಿ ಹಾಗೂ ಮಾಗಡಿ ರಸ್ತೆಯ ಕಾವೇರಿಪುರ ಗುಡ್ಡದಲ್ಲಿ ಬಹುವಸತಿ ಸಮುಚ್ಛಯ ನಿರ್ಮಾಣದಲ್ಲಿ ತೊಡಗಿಸಿಕೊಂಡಿರುವ ಕಾರ್ಮಿಕರನ್ನು ಭೇಟಿ ಮಾಡಿ ಮಾತನಾಡಿದ ಅವರು, ಸರ್ಕಾರವು ತಮ್ಮೆಲ್ಲರ ಹಿತ ಕಾಯಲು ಸದಾ ಬದ್ದವಾಗಿದೆ ಎಂದು ಹೇಳಿದರು. ಎಲ್ಲಾ ಕಾರ್ಮಿಕರಿಗೆ ನೀಡಬೇಕಿರುವ ಬಾಕಿಯನ್ನು ಕೂಡಲೇ …

Read More »