Breaking News
Home / ಜಿಲ್ಲೆ / ಬೆಂಗಳೂರು (page 404)

ಬೆಂಗಳೂರು

ವರದಿಯಿಂದ ಎಚ್ಚೆತ್ತ ಸರ್ಕಾರ- ದುಪ್ಪಟ್ಟು ದರ ವಸೂಲಿ ಮಾಡದಂತೆ ಸಿಎಂ ಆದೇಶ

ಬೆಂಗಳೂರು: ತಮ್ಮ ಊರುಗಳಿಗೆ ಹೋಗಲು ಮುಂದಾಗಿದ್ದ ವಲಸೆ ಕಾರ್ಮಿಕರಿಂದ ದುಪ್ಪಟ್ಟು ಬಸ್ ಟಿಕೆಟ್ ದರವನ್ನು ಪಡೆಯಲಾಗುತ್ತಿರುವ ಕುರಿತು  ವರದಿ ಮಾಡಿತ್ತು. ಈ ಬೆನ್ನಲ್ಲೇ ಎಚ್ಚೆತ್ತುಕೊಂಡ ಸರ್ಕಾರ, ದುಪ್ಪಟ್ಟು ದರ ವಸೂಲಿ ಮಾಡದಂತೆ ಆದೇಶ ಹೊರಡಿಸಿದೆ. ವಲಸೆ ಕಾರ್ಮಿಕರಿಂದ ದುಪಟ್ಟು ಹಣ ಪಡೆಯಬೇಡಿ. ಒನ್ ಸೈಡ್ ಬಸ್ ಟಿಕೆಟ್ ದರವನ್ನು ಮಾತ್ರ ತೆಗೆದುಕೊಳ್ಳಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದರಿಂದಾಗಿ ಸಂಕಷ್ಟದಲ್ಲಿ ಸಿಲುಕಿದ್ದ ಕಾರ್ಮಿಕರು …

Read More »

ರಾಜ್ಯದಲ್ಲಿ ಇಂದು 9 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಸೋಂಕಿತರ ಸಂಖ್ಯೆ 598ಕ್ಕೆ ಏರಿಕೆ……..

ಬೆಂಗಳೂರು: ರಾಜ್ಯದಲ್ಲಿ ಇಂದು 9 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಸೋಂಕಿತರ ಸಂಖ್ಯೆ 598ಕ್ಕೆ ಏರಿಕೆಯಾಗಿದೆ. ಇಂದು ಬೆಳಗ್ಗೆ ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ನಲ್ಲಿ ಬೀದರ್ 1, ತುಮಕೂರಿನಲ್ಲಿ 2, ಚಿಕ್ಕಬಳ್ಳಾಪುರದಲ್ಲಿ 1, ವಿಜಯಪುರದಲ್ಲಿ 2, ಬೆಳಗಾವಿಯಲ್ಲಿ 1, ಬಾಗಲಕೋಟೆಯ ಜಮಖಂಡಿಯಲ್ಲಿ 1 ಹಾಗೂ ಬೆಂಗಳೂರು ನಗರದಲ್ಲಿ 1 ಪ್ರಕರಣಗಳು ಪತ್ತೆಯಾಗಿರುವುದಾಗಿ ವರದಿಯಾಗಿದೆ. ಬೆಂಗಳೂರಿನಲ್ಲಿ ರೋಗಿ ನಂಬರ್ 557, 63ವರ್ಷದ ವೃದ್ಧ ಹಾಗೂ ಬೀದರ್ ನಲ್ಲಿ 83 …

Read More »

ಬೇಕಾಬಿಟ್ಟಿ ಹಣ ವಸೂಲಿಗೆ ಕಾರ್ಮಿಕರ ಆಕ್ರೋಶ – ಎಲ್ಲಿಗೆ ಎಷ್ಟು ದರ..?……..

ಬೆಂಗಳೂರು: ಲಾಕ್‍ಡೌನ್ ಘೋಷಣೆಯಿಂದ ಇಕ್ಕಟ್ಟಿಗೆ ಸಿಲುಕಿದ್ದ ವಲಸೆ ಕಾರ್ಮಿಕರು ಹಾಗೂ ಇತರರಿಗೆ ಗುಡ್‍ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ ಜೊತೆಗೆ ಶಾಕ್ ಕೂಡ ನೀಡಿದೆ. ಹೌದು. ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ಪ್ರಯಾಣ ಆರಂಭಿಸಿದ ಬಸ್ಸುಗಳಿಗೆ ಡಬಲ್ ದರವನ್ನು ಪಡೆಯಲಾಗುತ್ತಿದೆ. ಒಂದೂವರೆ ತಿಂಗಳಿಂದ ಸಂಬಳವೂ ಇಲ್ಲದೆ, ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿರುವ ಕಾರ್ಮಿಕರಿಗೆ ಬಸ್ಸುಗಳ ಟಿಕೆಟ್ ದರ ಗಾಯದ ಮೇಲೆ ಬರೆ ಹಾಕಿದಂತಾಗಿದೆ. ಬಸ್ ಸಂಚಾರ ಆರಂಭದ ಸುದ್ದಿ ಕೇಳುತ್ತಿದ್ದಂತೆಯೇ ನೂರಾರು ವಲಸೆ …

Read More »

ಮಧ್ಯರಾತ್ರಿ ರೈತರ ಸಮಸ್ಯೆ ಆಲಿಸಿದ ಡಿ.ಕೆ ಶಿವಕುಮಾರ್………

ಬೆಂಗಳೂರು: ಕೊರೊನಾ ವೈರಸ್ ಹರಡುವ ಭೀತಿಯಿಂದ ಇದೀಗ ಮತ್ತೆ ಮೇ 17ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಿದ್ದು, ರೈತರು ತಾವು ಬೆಳೆದ ಉತ್ಪನ್ನಗಳನ್ನು ಮಾರಾಟ ಮಾಡಲು ಪರದಾಡುತ್ತಿದ್ದಾರೆ. ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ರಾತ್ರೋ ರಾತ್ರಿ ರೈತರ ಸಮಸ್ಯೆ ಆಲಿಸಿದ್ದಲ್ಲದೇ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬಳಿ ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರು ಹೊರವಲಯದ ಹೊಸಕೋಟೆ, ಕೋಲಾರ, ಮಾಲೂರು, ಚಿಂತಾಮಣಿ, ಚಿಕ್ಕಬಳ್ಳಾಪುರ ಹಾಗೂ ದೇವನಹಳ್ಳಿ ಮತ್ತಿತರ ಕಡೆಯ ರೈತರು ತಾವು …

Read More »

ಲಾಕ್‍ಡೌನ್ ಮುಗಿಯಲು ಇನ್ನೆರಡೇ ದಿನ ಬಾಕಿ ಇರುವಾಗಲೇಕಠಿಣ ರೂಲ್ಸ್……….

ಬೆಂಗಳೂರು: ಲಾಕ್‍ಡೌನ್ ಮುಗಿಯಲು ಇನ್ನೆರಡೇ ದಿನ ಬಾಕಿ ಇರುವಾಗಲೇ ಕೇಂದ್ರ ಸರ್ಕಾರ ಮೂರನೇ ಬಾರಿಗೆ ಲಾಕ್‍ಡೌನ್ ವಿಸ್ತರಿಸಿದೆ. ಆದರೆ ಲಾಕ್‍ಡೌನ್ ಮೂರರಲ್ಲಿ ಹೆಚ್ಚುವರಿ ನಿರ್ಬಂಧಗಳಿದ್ದು, ಈ ಬಾರಿ ಸಾರ್ವಜನಿಕ ಪ್ರದೇಶಗಳಲ್ಲೂ ರೂಲ್ಸ್ ಜಾರಿ ಮಾಡಲಾಗಿದೆ. ಕೊರೊನಾದ ಮೂರನೇ ಲಾಕ್‍ಡೌನ್‍ನಲ್ಲಿ ಸಾರ್ವಜನಿಕ ಸ್ಥಳಗಳಲ್ಲೂ ಕಠಿಣ ನಿರ್ಬಂಧ ಹೇರಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಬೇಕಾಬಿಟ್ಟಿ ಓಡಾಡುವಂತಿಲ್ಲ. ಓಡಾಡಿದರೆ ಮಾಸ್ಕ್ ಧರಿಸಿರಲೇಬೇಕು, ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಂಡಿರಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ …

Read More »

ರಾಯಚೂರು, ಬೆಳಗಾವಿ, ಬಾಗಲಕೋಟೆ, ಕಲಬುರಗಿ, ಶಿವಮೊಗ್ಗ, ಮೈಸೂರು ಸೇರಿದಂತೆ 28 ಜಿಲ್ಲೆಗಳಿಗೆ ಬಸ್ ಸಂಚಾರ ಆರಂಭ

ಬೆಂಗಳೂರು: ಮಹಾಮಾರಿ ಕೊರೊನಾ ಕಂಟ್ರೋಲ್‍ಗೆ ಇನ್ನೂ 2 ವಾರ ಲಾಕ್‍ಡೌನ್ ವಿಸ್ತರಣೆಯಾಗಿದೆ. ದೇಶಾದ್ಯಂತ ಮೇ 17ವರೆಗೆ ಲಾಕ್‍ಡೌನ್ ಮುಂದುವರಿಯಲಿದೆ. ಆದರೆ ಇದೇ ವೇಳೆ ವಲಸೆ ಕಾರ್ಮಿಕರು, ತುರ್ತು ಪ್ರಯಾಣಿಕರಿಗೆ ಗುಡ್‍ನ್ಯೂಸ್ ಜೊತೆಗೆ ಕೇಂದ್ರ ಸರ್ಕಾರ ಶಾಕ್ ಕೂಡ ಕೊಟ್ಟಿದೆ. ಕೊರೊನಾ ತೊಲಗಿಸಲು ಕೇಂದ್ರ ಸರ್ಕಾರ 4 ಝೋನ್‍ಗಳಾಗಿ ವಿಂಗಡಣೆ ಮಾಡಿದೆ. ಕಂಟೈನ್‍ಮೆಂಟ್, ರೆಡ್, ಆರೆಂಜ್, ಗ್ರೀನ್ ಝೋನ್ ಅಂತ ವಿಂಗಡಣೆ ಮಾಡಿದ್ದು, ಕೇಂದ್ರ ಸರ್ಕಾರದಿಂದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ವಲಸೆ …

Read More »

ಕ್ಯಾಮೆರಾ ಹಿಂದಿನ ಕಾಣದ ಕೈಗಳಿಗೆ ಗಿಫ್ಟ್ ಕೊಟ್ಟ ‘ರಾಬರ್ಟ್’

ಬೆಂಗಳೂರು: ಕ್ಯಾಮೆರಾ ಹಿಂದೆ ಕಾಣದ ಕೈಗಳಿಗಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಚಿತ್ರತಂಡದಿಂದ ಮೇಕಿಂಗ್ ವಿಡಿಯೋವೊಂದನ್ನು ಬಿಡುಗಡೆ ಮಾಡಲಾಗಿದೆ. ಮೇ 1ರಂದು ಕಾರ್ಮಿಕರ ದಿನಾಚರಣೆಗೆ ಒಂದು ಸಾಂಗ್ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿತ್ತು. ಅಂತಯೇ ಇಂದು ಮೇಕಿಂಗ್ ಸಾಂಗ್ ಬಿಡುಗಡೆ ಮಾಡಿದೆ. ಈ ವಿಚಾರವನ್ನು ದರ್ಶನ್ ಮತ್ತು ಚಿತ್ರದ ನಿರ್ದೇಶಕ ತರುಣ್ ಸುಧೀರ್ ಅವರು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ. ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ದರ್ಶನ್, ಸರ್ವರಿಗೂ …

Read More »

ಆರ್ಥಿಕ ನಷ್ಟವನ್ನು ಸರಿದೂಗಿಸಲು ವಾರಕ್ಕೆ 60 ಗಂಟೆಗಳ ಕಾಲ ಭಾರತೀಯರು ದುಡಿಯುವ ಪ್ರತಿಜ್ಞೆ ಕೈಗೊಳ್ಳಬೇಕು: ನಾರಾಯಣ ಮೂರ್ತಿ

ಬೆಂಗಳೂರು: ಲಾಕ್‍ಡೌನ್‍ನಿಂದ ಆಗಿರುವ ಆರ್ಥಿಕ ನಷ್ಟವನ್ನು ಸರಿದೂಗಿಸಲು ವಾರಕ್ಕೆ 60 ಗಂಟೆಗಳ ಕಾಲ ಭಾರತೀಯರು ದುಡಿಯುವ ಪ್ರತಿಜ್ಞೆ ಕೈಗೊಳ್ಳಬೇಕು ಎಂದು ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಹೇಳಿದ್ದಾರೆ. ವಾಹಿನಿಗೆ ಸಂದರ್ಶನ ನೀಡಿದ ಅವರು, ಮುಂದೆ ಭಾರತ ವೇಗವಾಗಿ ಅಭಿವೃದ್ಧಿ ಹೊಂದಬೇಕಾದರೆ ವಾರದ 6 ದಿನ 10 ಗಂಟೆಗಳ ಕಾಲ ಕೆಲಸ ಮಾಡುವ ಪ್ರತಿಜ್ಞೆ ಕೈಗೊಳ್ಳಬೇಕು. ವಾರದಲ್ಲಿ 40 ಗಂಟೆ ಕೆಲಸ ಮಾಡದೇ 60 ಗಂಟೆಗೆ ಕೆಲಸದ ಅವಧಿ ಏರಿಸಿದರೆ ದೇಶ …

Read More »

ಲಾಕ್‍ಡೌನ್ 3 – ಯಾವ ವಲಯದಲ್ಲಿ ಏನಿರುತ್ತೆ? ಏನಿರಲ್ಲ? ಷರತ್ತುಗಳು ಏನು?

ಮೇ 17ರವರೆಗೆ ಲಾಕ್‍ಡೌನ್ ಮುಂದುವರಿಕೆ – ಮದ್ಯ, ಮದುವೆಗೆ ಷರತ್ತುಬದ್ಧ ಅನುಮತಿ ಒಂದೊಂದು ಝೋನ್‍ಗೂ ಪ್ರತ್ಯೇಕವಾದ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ರೂಪಿಸಿದೆ. ನವದೆಹಲಿ: ಎಲ್ಲರ ನಿರೀಕ್ಷೆಗಳನ್ನು ಹುಸಿಯಾಗಿಸದಂತೆ ಕೇಂದ್ರ ಸರ್ಕಾರ ಬಿಗ್ ರಿಲೀಫ್ ನೀಡಿದೆ. ಲಾಕ್‍ಡೌನ್ ಮುಗಿಯಲು ಇನ್ನೆರಡೇ ದಿನ ಬಾಕಿ ಇರುವಾಗಲೇ ಕೇಂದ್ರ ಸರ್ಕಾರ ಮೂರನೇ ಬಾರಿಗೆ ಲಾಕ್‍ಡೌನ್ ವಿಸ್ತರಿಸಿದೆ. ಆದ್ರೆ, ಲಾಕ್‍ಡೌನ್ ವ್ಯಾಪ್ತಿ ಮತ್ತು ಸ್ವರೂಪದಲ್ಲಿ ಅಮುಲಾಗ್ರ ಬದಲಾವಣೆಗಳು ಆಗಿವೆ. ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅದನ್ನು ತಡೆಗಟ್ಟಲೆಂದು …

Read More »

ಆರ್ಥಿಕ ಪರಿಸ್ಥಿತಿ ಉತ್ತಮಗೊಳಿಸಲು ಸಿಎಂ ಬಿಎಸ್ವೈ ಮಾಸ್ಟರ್ ಪ್ಲಾನ್..!

ಬೆಂಗಳೂರು : ಕೊರೊನಾ ಲಾಕ್‍ಡೌನ್‍ನಿಂದಾಗಿ ರಾಜ್ಯ ಸರ್ಕಾರದ ಆದಾಯಕ್ಕೆ ಭಾರೀ ಹೊಡೆತ ಬಿದ್ದಿದೆ. ಹೀಗಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಉತ್ತಮಗೊಳಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರವು ಭರ್ಜರಿ ಪ್ಲಾನ್ ರೂಪಿಸಿದೆ. ಮೇ 3ರ ನಂತರ ಆರ್ಥಿಕ ಮಿತವ್ಯಯಕ್ಕಾಗಿ ಇಲಾಖೆಗಳಿಗೆ ಮೇಜರ್ ಸರ್ಜರಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಇಲಾಖೆಗಳ ವಿಲೀನ, ಮತ್ತೆ ಕೆಲವು ಬರ್ಖಾಸ್ತು ನಿರ್ಣಯಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಈಗಾಗಲೇ ಸಚಿವ ಸಂಪುಟ ಉಪಸಮಿತಿಯ …

Read More »