Breaking News
Home / ಜಿಲ್ಲೆ / ಬೆಂಗಳೂರು (page 414)

ಬೆಂಗಳೂರು

ಬಿಬಿಎಂಪಿ ಬಜೆಟ್ ಪುಸ್ತಕದಲ್ಲಿ ಮೇಯರ್ ಗೆ ಅಪಮಾನ..!

ಬೆಂಗಳೂರು : ಲಾಕ್‍ಡೌನ್ ಹಿನ್ನೆಲೆಯಲ್ಲಿ ಅಳೆದು ತೂಗಿ ಮಂಡಿಸಲಾದ ಬಿಬಿಎಂಪಿ ಬಜೆಟ್ ಪುಸ್ತಕದಲ್ಲಿ ಮೇಯರ್ ಅವರ ಭಾವಚಿತ್ರವೇ ನಾಪತ್ತೆ..! ಬಜೆಟ್ ಪುಸ್ತಕದಲ್ಲಿ ಮೇಯರ್ ಭಾವಚಿತ್ರ ಪ್ರಕಟಿಸುವುದು ಶಿಷ್ಟಾಚಾರ. ಆದರೆ, ಈ ಬಾರಿಯ ಪುಸ್ತಕದಲ್ಲಿ ಮೇಯರ್ ಗೌತಮ್‍ಕುಮಾರ್ ಅವರ ಭಾವಚಿತ್ರ ಇಲ್ಲದೆ ಇರುವುದರಿಂದ ಅವರಿಗೆ ಉದ್ದೇಶಪೂರ್ವಕವಾಗಿಯೇ ಅಪಮಾನ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಬಜೆಟ್ ಪುಸ್ತಕದಲ್ಲಿ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಎಲ್.ಶ್ರೀನಿವಾಸ್ ಹಾಗೂ ಕಂದಾಯ ಸಚಿವ ಆರ್.ಅಶೋಕ್ …

Read More »

ಪ್ರಶಸ್ತಿಗಳ ಸುರಿಮಳೆ, ಅಣ್ಣಾವ್ರ ಕುಟುಂಬದ ದಾಖಲೆ..!

ವರನಟ ಡಾ.ರಾಜ್‍ಕುಮಾರ್ ಅವರ ಜನ್ಮ ದಿನ ಏಪ್ರಿಲ್ 24ರಂದು. ರಾಜ್ ಮತ್ತು ಅವರ ಕುಟುಂಬದ ಸಾಧನೆ ಅನನ್ಯ. ಈ ಕುರಿತು ಒಂದು ಪಕ್ಷಿನೋಟ ಇಲ್ಲಿದೆ. ಬಾಲಿವುಡ್ ಅಥವಾ ಹಿಂದಿ ಚಿತ್ರರಂಗದಲ್ಲಿ ರಾಜ್‍ಕಪೂರ್ ಕುಟುಂಬ ದೊಡ್ಡ ಹೆಸರು ಮಾಡಿದೆ. ಈ ಕುಟುಂಬದ ಪೃಥ್ವಿರಾಜ್ ಕಪೂರ್, ರಾಜ್‍ಕಪೂರ್, ಶಮ್ಮಿ ಕಪೂರ್, ಶಶಿಕಪೂರ್ ಈ ನಾಲ್ವರು ಸಿನಿಮಾ ರಂಗದ ಅತ್ಯುನ್ನತ ಪ್ರಶಸ್ತಿಯಾದ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವುದು ಭಾರತೀಯ ಚಿತ್ರರಂಗದಲ್ಲೇ ಒಂದು ಅಪೂರ್ವ …

Read More »

ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ …….

ಬೆಂಗಳೂರು, ಏ.24-ರಾಮನಗರ ಜೈಲ್ ಅನ್ನು ಸಂಪೂರ್ಣ ಕ್ವಾರಂಟೈನ್ ಮಾಡಬೇಕು. ಪೊಲೀಸರು ಸೇರಿದಂತೆ ಜೈಲಿನಲ್ಲಿ ಕಾರ್ಯನಿರ್ವಹಿಸಿದ ಅಡುಗೆ ಮತ್ತು ಸ್ವಚ್ಛತೆಯವರು ಸೇರಿದಂತೆ ಸಂಬಂಧಿಸಿದವರ ಆರೋಗ್ಯ ಕಾಪಾಡಲು ಸರ್ಕಾರ ತಕ್ಷಣವೇ ಕಾರ್ಯೋನ್ಮುಖವಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಸರ್ಕಾರ ತೆಗೆದುಕೊಂಡ ಎಡವಟ್ಟು ನಿರ್ಧಾರದಿಂದ ರಾಮನಗರದಲ್ಲೂ ಸೋಂಕು ಹರಡುವ ಭೀತಿ ಎದುರಾಗಿದೆ. ಸರ್ಕಾರ ಸಕಲ ಮುನ್ನೆಚ್ಚರಿಕೆಯಿಂದ ಪರಿಸ್ಥಿತಿ ನಿಭಾಯಿಸದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ. ರಾಮನಗರ ಕಾರಾಗೃಹದಲ್ಲಿ ಇರಿಸಲಾಗಿದ್ದ ಪಾದರಾಯನಪುರದ …

Read More »

ಯುವ ವಕೀಲರ ಬ್ಯಾಂಕ್ ಖಾಯತೆಗೆ ತಲಾ 5 ಸಾವಿರ ಹಣ ಜಮೆ

ಬೆಂಗಳೂರು : ಬೆಂಗಳೂರು ವಕೀಲರ ಸಂಘವು ಹಿರಿಯ ಹಾಗೂ ಇತರ ವಕೀಲರಿಂದ ದೇಣಿಗೆ ಸಂಗ್ರಹಿಸಿ, ಸಂಕಷ್ಟದಲ್ಲಿದ್ದ 368 ಅರ್ಹ ಯುವ ವಕೀಲರಿಗೆ ತಲಾ 5 ಸಾವಿರ ರೂ.ಗಳಂತೆ ಒಟ್ಟು 18,40,000 ರೂ. ಗಳನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ವರ್ಗಾಯಿಸಿದೆ. ಕೊರೋನಾದ ಸಂಕಷ್ಟದ ಕಾಲದಲ್ಲಿ ಹಿರಿಯ ಹಾಗೂ ಇತರೆ ವಕೀಲರಿಂದ 19,14,501 ರೂ.ಗಳನ್ನು ದೇಣಿಗೆ ಸಂಗ್ರಹಿಸಲಾಗಿತ್ತು ಎಂದು ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್ ತಿಳಿಸಿದ್ದಾರೆ. ಏಪ್ರಿಲ್ 6 ರಂದು ಸಂಘದ …

Read More »

ರಾಜ್ಯದಲ್ಲಿ ಲಾಕ್‍ಡೌನ್ ಮತ್ತಷ್ಟು ಸಡಿಲ- ನಗರ ಪ್ರದೇಶದಲ್ಲಿಯೂ ಕಟ್ಟಡ ನಿರ್ಮಾಣ

ಬೆಂಗಳೂರು: ಕೇಂದ್ರ ಸರ್ಕಾರದ ಬುಧವಾರ ನೀಡಿದ್ದ ಮಾರ್ಗಸೂಚಿಗಳ ಅನ್ವಯ ಒಂದಿಷ್ಟು ಕೊರೊನಾ ಲಾಕ್‍ಡೌನ್ ನಿಯಮಗಳನ್ನು ಸಡಿಲ ಮಾಡಿದ್ದ ರಾಜ್ಯ ಸರ್ಕಾರ, ಇವತ್ತು ಇನ್ನೊಂದಿಷ್ಟು ವಿನಾಯಿತಿ ನೀಡಿ ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದೆ. ಬೆಂಗಳೂರು ಸೇರಿದಂತೆ ನಗರ ಹಲವು ನಗರಗಳಲ್ಲಿ ಕೊರೊನಾ ಸೋಂಕಿನ ತೀವ್ರತೆ ಕಡಿಮೆ ಆಗದಿದ್ದರೂ ರಾಜ್ಯ ಸರ್ಕಾರ ರಿಸ್ಕ್ ತೆಗೆದುಕೊಂಡಂತೆ ಕಾಣುತ್ತಿದೆ. ಮೊಬೈಲ್ ಅಂಗಡಿ, ಜ್ಯೂಸ್ ಅಂಗಡಿ, ಕಟ್ಟಡ ನಿರ್ಮಾಣ ಹೀಗೆ ಹಲವುಗಳಿಗೆ ಮಹಾನಗರ, ನಗರಸಭೆಗಳ ವ್ಯಾಪ್ತಿಯಲ್ಲಿ ಷರತ್ತುಬದ್ಧ ಅನುಮತಿ …

Read More »

ಹೊಂಗಸಂದ್ರದಲ್ಲಿ ವ್ಯಕ್ತಿಯೊಬ್ಬ ಮನೆ,ಅಂಗಡಿಗಳ ಮುಂದೆ ಉಗುಳುವುದು, ಅನುಮಾನಾಸ್ಪದ

ಬೆಂಗಳೂರು: ಕೊರೊನಾ ಭೀತಿಯ ನಡುವೆಯೇ ಬೆಂಗಳೂರಿನ ಹೊಂಗಸಂದ್ರದಲ್ಲಿ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಓಡಾಡಿ ಜನರಲ್ಲಿ ಮತ್ತಷ್ಟು ಭಯ ಹುಟ್ಟಿಸಿದ್ದಾನೆ. ಹೊಂಗಸಂದ್ರದ ಕೊರೊನಾ ಪೀಡಿತ ಪ್ರದೇಶ ವಿದ್ಯಾಜ್ಯೋತಿ ನಗರದ ಸುತ್ತಮುತ್ತ ವ್ಯಕ್ತಿ ಓಡಾಟ ನಡೆಸುತ್ತಿದ್ದಾನೆ. ಅಲ್ಲಿ ಈಗಾಗಲೇ 9 ಜನರಿಗೆ ಪಾಸಿಟಿವ್ ಬಂದಿದ್ದು, ಪರಿಣಾಮ ಹೊಂಗಸಂದ್ರ ಸಂಪೂರ್ಣ ಸೀಲ್ ಡೌನ್ ಆಗಿದೆ. ಇದರ ಮಧ್ಯೆ ಈತನ ವರ್ತನೆ ಕಂಡು ಹೊಂಸಂದ್ರದ ನಿವಾಸಿಗಳು ಬೆಚ್ಚಿ ಬಿದ್ದಿದ್ದಾರೆ. ಈ ಅನುಮಾನಸ್ಪದ ವ್ಯಕ್ತಿ ಉಗುಳುವುದು, ಮನೆಗಳ ಮುಂದೆ, …

Read More »

ಬಿಹಾರಿ ಕಾರ್ಮಿಕನಿಂದ ಮತ್ತೆ ನಾಲ್ವರಿಗೆ ಕೊರೊನಾ – ನಂಜನಗೂಡಂತೆ ಆಗುತ್ತಾ ಬೆಂಗ್ಳೂರಿನ ಹೊಗಸಂದ್ರ

ಬೆಂಗಳೂರು: ಕೊರೊನಾ ಕೇಸ್‍ನಲ್ಲಿ ಬೆಂಗಳೂರಿನ ಹೊಗಸಂದ್ರ ನಂಜನಗೂಡು ಆಗುತ್ತಿದಿಯಾ ಅನ್ನೋ ಆತಂಕ ಎದುರಾಗಿದೆ. ಕಾರಣ ಬಿಹಾರ ಮೂಲದ ಕಾರ್ಮಿಕನೊಬ್ಬನಿಂದಲೇ ಈ ಏರಿಯಾದಲ್ಲಿ ಒಂದೇ ದಿನ ಬರೋಬ್ಬರಿ 13 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಬಿಹಾರ ಮೂಲದ ಕಾರ್ಮಿಕ ಬೊಮ್ಮನಹಳ್ಳಿ ವಲಯಕ್ಕೆ ಬರುವ ಹೊಗಸಂದ್ರದಲ್ಲಿ ವಾಸಿಸುತ್ತಿದ್ದ. ಈತ ನಮ್ಮ ಮೆಟ್ರೋ ಕಾಮಗಾರಿಗೆ ಕೆಲಸ ಮಾಡುತ್ತಿದ್ದು, ಬರೋಬ್ಬರಿ 13 ಮಂದಿಗೆ ಕೊರೊನಾ ಹಬ್ಬಿರುವುದು ಬೆಂಗಳೂರಲ್ಲಿ ಆತಂಕ ಹೆಚ್ಚಿಸಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಇಡೀ …

Read More »

ಬೆಂಗ್ಳೂರಿಗೆ ಲಾಕ್‍ಡೌನ್‍ನಿಂದ ಸದ್ಯಕ್ಕಿಲ್ಲ ರಿಲೀಫ್………

ಬೆಂಗಳೂರು: ಸರ್ಕಾರ ಮಹಾಮಾರಿ ಕೊರೊನಾ ವೈರಸ್ ಅನ್ನು ಹೊಡೆದೊಡಿಸಲು ಲಾಕ್‍ಡೌನ್ ಅಸ್ತ್ರವನ್ನು ಪ್ರಯೋಗಿಸಿದೆ. ಈ ಲಾಕ್‍ಡೌನ್ ಇಡೀ ದೇಶಾದ್ಯಂತ 3ರವರೆಗೂ ಮುಂದುವರಿಯಲಿದೆ. ಆದರೆ ಸಿಲಿಕಾನ್ ಸಿಟಿಗೆ ಮಾತ್ರ ಲಾಕ್‍ಡೌನ್‍ನಿಂದ ಮೇ 3ರಂದು ರಿಲೀಫ್ ಇಲ್ಲ. ರಾಜ್ಯದಲ್ಲೇ ಅತೀ ಹೆಚ್ಚು ಪ್ರಕರಣಗಳು ರಾಜಧಾನಿ ಬೆಂಗಳೂರಲ್ಲಿ ದಾಖಲಾಗಿವೆ. ಈ ಕೊರೊನಾ ಪಾಸಿಟಿವ್ ಪ್ರಕರಣಗಳ ನಿಯಂತ್ರಣಕ್ಕೆ ಬಿಬಿಎಂಪಿ 19 ಕಂಟೈನ್‍ಮೆಂಟ್ ಝೋನ್‍ಗಳೆಂದು ವಿಂಗಡಿಸಿ, ಬಿಗಿ ಭದ್ರತೆ ಒದಗಿಸುತ್ತಿದೆ. ಆದರೆ ಈ ಕಂಟೈನ್‍ಮೆಂಟ್ ಝೋನ್‍ಗಳು ನಾರ್ಮಲ್ …

Read More »

ರಾಮನಗರ ಜೈಲಿನಲ್ಲಿರುವ ಪಾದರಾಯನಪುರದ ಕೈದಿಗಳ ಪೈಕಿ ಇಬ್ಬರಿಗೆ ಕೊರೊನಾ ಸೋಂಕು

ಬೆಂಗಳೂರು: ರಾಮನಗರ ಜೈಲಿನಲ್ಲಿರುವ ಪಾದರಾಯನಪುರದ ಕೈದಿಗಳ ಪೈಕಿ ಇಬ್ಬರಿಗೆ ಕೊರೊನಾ ಸೋಂಕು ಬಂದಿದೆ ಎಂದು ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಹೇಳಿದ್ದಾರೆ. ಆರೋಗ್ಯ ಇಲಾಖೆ ಭೀತಿಗೊಂಡಿದ್ದು, ಇಬ್ಬರನ್ನು ಪರೀಕ್ಷೆಗೆ ಒಳಪಡಿಸಿ ಕ್ವಾರಂಟೈನ್ ಮಾಡಲಾಗಿದೆ. ತುರ್ತು ಅವಶ್ಯಕತೆ ಇದ್ದರೆ ಬೆಂಗಳೂರಿಗೆ ಶಿಫ್ಟ್ ಮಾಡುವ ಸಾಧ್ಯತೆಯಿದೆ. ಈಗಾಗಲೇ ಆರೋಗ್ಯ ಅಧಿಕಾರಿಗಳು ಜೈಲಿಗೆ ಭೇಟಿ ನೀಡಿದ್ದು ಎಲ್ಲರನ್ನು ಪರೀಕ್ಷೆಗೆ ಒಳಪಡಿಸಲು ಮುಂದಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈಗ ಇವರನ್ನು ಬಂಧಿಸಿದ್ದ ಪೊಲೀಸರನ್ನು ಕ್ವಾರಂಟೈನ್ ಮಾಡಲಾಗಿದೆ. …

Read More »

ಬೆಂಗಳೂರು: ಬೆಳ್ಳಂಬೆಳಗ್ಗೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆ……….

ಬೆಂಗಳೂರು: ಬೆಳ್ಳಂಬೆಳಗ್ಗೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಮೂರು ದಿನಗಳ ಕಾಲ ಪೂರ್ವಮುಂಗಾರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಇಂದು ಮುಂಜಾನೆಯಿಂದಲೇ ಗುಡುಗು ಮತ್ತು ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದೆ. ಯಶವಂತಪುರ, ಮಲ್ಲೇಶ್ವರಂ, ರಾಜಾಜಿನಗರ ಸೇರಿದಂತೆ ಅನೇಕ ಕಡೆ ಏಕಾಏಕಿ ಗುಡುಗು ಸಹಿತ ಮಳೆಯ ಅಬ್ಬರ ಶುರುವಾಗಿದೆ. ಇಂದು ಮೆಜೆಸ್ಟಿಕ್, ಚಿಕ್ಕಪೇಟೆ, ಎಂಜಿ ರಸ್ತೆ, ಸದಾಶಿವನಗರ ಸುತ್ತಮುತ್ತ ಭಾರಿ ಮಳೆಯಾಗುತ್ತಿದೆ. ಇನ್ನೂ ಎರಡು ದಿನ ಇದೇ …

Read More »