ಬೆಂಗಳೂರು: ಪಾದರಾಯನಪುರ ಗಲಭೆಯ ಆರೋಪಿಗಳು ರಾಮನಗರದ ಜಿಲ್ಲಾ ಕಾರಾಗೃಹದಲ್ಲಿದ್ದ ವೇಳೆ ಅವರ ಮೇಲೆ ನಿಗಾವಹಿಸಿದ್ದ ವಿವಿಧ ಇಲಾಖೆಗಳ ಸಿಬ್ಬಂದಿ ಸೇರಿ ಒಟ್ಟು 68 ಮಂದಿಯ ಎರಡನೇ ಬಾರಿಯ ಕೊರೊನಾ ತಪಾಸಣಾ ಫಲಿತಾಂಶ ನೆಗಟಿವ್ ಬಂದಿದೆ. “ಸರ್ಕಾರ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮಗಳಿಂದ ಜಿಲ್ಲೆ ಈಗಲೂ ಗ್ರೀನ್ ಝೋನ್ ಆಗಿ ಉಳಿದಿದೆ ಎಂಬ ಈ ಸಂತಸದ ಸುದ್ದಿಯನ್ನು ಹಂಚಿಕೊಳ್ಳಲು ಖುಷಿ ಆಗುತ್ತಿದೆ, ” ಎಂದು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಉಪ …
Read More »ಸಿಎಂ ರಿಲೀಫ್ ಫಂಡ್‍ಗೆ 2 ಕೋಟಿ ರೂ. ದೇಣಿಗೆ ನೀಡಿದ ಕೋರೆ………
ಬೆಂಗಳೂರು: ಮುಖ್ಯಮಂತ್ರಿ ವಿಪತ್ತು ಪರಿಹಾರ ನಿಧಿಗೆ ರಾಜ್ಯಸಭಾ ಸದಸ್ಯ, ಕೆಎಲ್‍ಇ ಸಂಸ್ಥೆಯ ಅಧ್ಯಕ್ಷ ಪ್ರಭಾಕರ್ ಕೋರೆ 2 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಪ್ರಭಾಕರ್ ಕೋರೆ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಲ್ಲಿಸಿದ 2 ಕೋಟಿ ರೂ. ಚೆಕ್ ಸ್ವೀಕರಿಸಿದರು. ಈ ವೇಳೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವರಾದ ಜಗದೀಶ್ ಶೆಟ್ಟರ್, ರಮೇಶ್ ಜಾರಕಿಹೊಳಿ, ಶಾಸಕ ಮಹಾಂತೇಶ ಕವಟಗಿಮಠ ಇದ್ದರು. …
Read More »ಕೊರೊನಾ ವಾರಿಯರ್ಸ್‍ಗಾಗಿ ಪಿಪಿಇ ಕಿಟ್, ಮಾಸ್ಕ್ ತಯಾರಿಸ್ತಿದ್ದಾರೆ ಮಹಿಳೆಯರು
ಬೆಂಗಳೂರು: ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎನ್ನುವ ಹಾಗೆ ಮಹಿಳೆಯರೆಲ್ಲಾ ಸೇರಿ ಕೌಶಲ್ಯ ಪಡೆದು ಇಡೀ ಕುಟುಂಬದ ಆರ್ಥಿಕ ಮಟ್ಟ ಸುಧಾರಿಸಿ, ಮಾರಾಣಾಂತಿಕ ಕೋವಿಡ್-19 ಸಂದರ್ಭದಲ್ಲಿ ಕೊರೊನಾ ವಾರಿಯರ್ಸ್‍ಗೆ ಅಗತ್ಯವಾದ ಪಿಪಿಇ ಕಿಟ್ ತಯಾರಿಸಿ ನೆರವಾಗುತ್ತಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವರ ಸಮೀಪ ಬ್ಲಾಕ್ ಸ್ತ್ರೀ ಶಕ್ತಿ ಸೊಸೈಟಿ ಅಡಿಯಲ್ಲಿ ಮಹಿಳೆಯರು ಕೋವಿಡ್ 19 ವಾರಿಯರ್ಸ್‍ಗೆ ತಮ್ಮ ಅಳಿಲು ಸೇವೆ ಮಾಡಿ, ಕೊರೊನಾ ಸಂದರ್ಭದಲ್ಲಿ ನೆರವಾಗಿ ಸಾರ್ಥಕತೆ ಮೆರೆಯುತ್ತಿದ್ದಾರೆ. ಈ …
Read More »ಇಂದು 20 ಮಂದಿಗೆ ಕೊರೊನಾ- ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 693ಕ್ಕೆ ಏರಿಕೆ…….
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇಂದು ಒಂದೇ ದಿನ 20 ಮಂದಿಗೆ ಕೊರೊನಾ ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 693ಕ್ಕೆ ಏರಿಕೆಯಾಗಿದೆ. ಇಂದು ಒಂದೇ ದಿನ ಬಾಗಲಕೋಟೆಯಲ್ಲಿ 13 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಆರೋಗ್ಯ ಇಲಾಖೆ ಇಂದು ಸಂಜೆ ಬಿಡುಗಡೆ ಮಾಡಿದ ಬುಲೆಟಿನ್‍ನಲ್ಲಿ, ಬಾಗಲಕೋಟೆಯಲ್ಲಿ 13, ಬೆಂಗಳೂರು 2, ದಕ್ಷಿಣ ಕನ್ನಡ 3, ಕಲಬುರಗಿ ಹಾಗೂ ವಿಜಯಪುರದಲ್ಲಿ ಒಬ್ಬರಿಗೆ ಕೊರೊನಾ ಪ್ರಕರಣ …
Read More »ಜೈಜಗದೀಶ್ ವಿರುದ್ಧ ಕಾನೂನು ಹೋರಾಟ ಮಾಡ್ತೀನಿ : ಸಾ.ರಾ.ಗೋವಿಂದ್
ಬೆಂಗಳೂರು, ಮೇ6- ನಟ, ನಿರ್ಮಾಪಕ ಜೈಜಗದೀಶ್ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ನಿರ್ಮಾಪಕ, ವಿತರಕ ಹಾಗೂ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದ್ ತಿಳಿಸಿದ್ದಾರೆ. ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿ ಸಿಲುಕಿರುವ ನಿರ್ಮಾಪಕ, ವಿತರಕ ಹಾಗೂ ಪ್ರದರ್ಶಕರಿಗೆ ಉಚಿತ ಆಹಾರ ಕಿಟ್‍ಗಳನ್ನು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ನೀಡಲು ಮುಂದಾಗಿದ್ದರು. ಇದಕ್ಕೆ ಸಹಕಾರಿಯಾಗಿ ನಾನು ನಿಂತಿದ್ದೆ. ಈ ಕುರಿತು ನಟ ಜೈಜಗದೀಶ್ ನಮ್ಮ ಸೇವೆಯನ್ನು ಸಹಿಸದೆ ಅವಾಚ್ಯ ಶಬ್ದಗಳಿಂದ ನಿಂದಿಸಿ …
Read More »BREAKING : ಪಾನ ಪ್ರಿಯರಿಗೆ ಕಿಕ್ ಇಳಿಸೋ ಸುದ್ದಿ, ಶೇ.17ರಷ್ಟು ಮದ್ಯ ದರ ಏರಿಕೆ..!
ಬೆಂಗಳೂರು,ಮೇ 6- ಸರಿಸುಮಾರು 42 ದಿನಗಳ ನಂತರ ಮದ್ಯ ಮಾರಾಟಕ್ಕೆ ಅವಕಾಶ ನೀಡಿ ಎಣ್ಣೆ ಪ್ರಿಯರಿಗೆ ಖುಷಿ ಕೊಟ್ಟಿದ್ದ ರಾಜ್ಯ ಸರ್ಕಾರ ಇದೀಗ ಕಿಕ್ ಹೊಡೆಸಲು ಮುಂದಾಗಿದೆ. ಖಾಲಿಯಾಗಿರುವ ಸರ್ಕಾರದ ಬೊಕ್ಕಸವನ್ನು ಭರ್ತಿ ಮಾಡಲು ಆದಾಯ ಮೂಲ ಹೆಚ್ಚಿಸುವ ನಿಟ್ಟಿನಲ್ಲಿ ಮದ್ಯದ ಮೇಲಿನ ಮಾರಾಟ ದರವನ್ನು ಶೇ. 17ರಷ್ಟು ಹೆಚ್ಚಳ ಮಾಡಿ ಮದ್ಯ ಪ್ರಿಯರ ಕೈ ಸುಡುವಂತೆ ಮಾಡಿದೆ. ನೂತನ ದರವು ಒಂದೆರಡು ದಿನಗಳಲ್ಲಿ ಜಾರಿಯಾಗಲಿದೆ ಎಂದು ಮುಖ್ಯಮಂತ್ರಿ ಯಡಿಯುರಪ್ಪ …
Read More »BIG BREAKING : ಬಾದಾಮಿಯಲ್ಲಿ ಕೊರೋನಾ ಕುಣಿತ..! ರಾಜ್ಯದಲ್ಲಿ ಇಂದು 19 ಮಂದಿಗೆ ಪಾಸಿಟಿವ್..!
ಬೆಂಗಳೂರು, ಮೇ 6- ಐತಿಹಾಸಿಕ ಸ್ಥಳ ಬಾದಾಮಿಯಲ್ಲೂ ಕೊರೊನಾ ಸೋಂಕು ಅಟ್ಟಹಾಸ ಮೆರೆದಿದೆ. ಅಲ್ಲಿನ 13 ಮಂದಿ ಸೇರಿದಂತೆ ರಾಜ್ಯದಲ್ಲಿ 19 ಹೊಸ ಪ್ರಕರಣಗಳು ದಾಖಲಾಗಿದ್ದು , ಸೋಂಕಿತರ ಸಂಖ್ಯೆ 692ಕ್ಕೆ ಏರಿಕೆಯಾಗಿದೆ. ಕೊರೊನಾ ಹಾಟ್‍ಸ್ಪಾಟ್ ಆಗಿದ್ದ ಬೆಂಗಳೂರಿನಲ್ಲಿ ಇಂದು ಎರಡು ಹೊಸ ಪ್ರಕರಣಗಳು ಪತ್ತೆಯಾಗಿದ್ದು , ಮಂಗಮ್ಮನಪಾಳ್ಯದಲ್ಲಿ ನಿನ್ನೆ ಖಾಸಗಿ ಸಂಸ್ಥೆಯ ಡಿಲೆವೆರಿ ಬಾಯ್‍ಗೆ ಸೊಂಕು ತಗುಲಿದ್ದು , ಆತನಿಂದಲೇ ಇಂದು ಇಬ್ಬರಿಗೆ ಕೊರೊನಾ ಸೋಂಕು ತಗುಲಿದೆ. ಸೋಂಕಿತ …
Read More »ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒಟ್ಟೂ 1610 ಕೋಟಿ ರೂ. ಪ್ಯಾಕೇಜ್ ಘೋಷಿಸಿದ್ದಾರೆ.
ಬೆಂಗಳೂರು – ಕೊರೋನಾದಿಂದ ಸಂಕಷ್ಟಕ್ಕೊಳಗಾಗಿರುವ ಹಲವಾರು ರೀತಿಯ ವೃತ್ತಿನಿರತರಿಗೆ ಕರ್ನಾಟಕ ಸರಕಾರ ಪರಿಹಾರ ಘೋಷಿಸಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒಟ್ಟೂ 1610 ಕೋಟಿ ರೂ. ಪ್ಯಾಕೇಜ್ ಘೋಷಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಸಂಬಂಧ ಬುಧವಾರ ಮಾಹಿತಿ ನೀಡಿದ್ದಾರೆ. ಆಟೋ ರಿಕ್ಷಾ, ಟ್ಯಾಕ್ಸಿ ಚಾಲಕರಿಗೆ, ಕ್ಷೌರಿಕರು, ಮಡಿವಾಳರು ಸೇರಿದಂತೆ ಹಲವಾರು ವರ್ಗಗಳಿಗೆ ತಲಾ 5 ಸಾವಿರ ರೂ. ಪರಿಹಾರ ನೀಡುವ ಘೋಷಣೆ ಮಾಡಿದ್ದಾರೆ. 7.75 ಲಕ್ಷ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ಪರಿಹಾರ …
Read More »ಖಾಸಗಿ ಆಸ್ಪತ್ರೆಯಂತೆ ವಿಕ್ಟೋರಿಯದಲ್ಲೂ ಹೆರಿಗೆ ಸಾಧ್ಯವೇ? – ಸೋಂಕಿತ ಗರ್ಭಿಣಿಯ ಪತಿ ಪ್ರಶ್ನೆ
ಬೆಂಗಳೂರು: “ಪತ್ನಿಯನ್ನು ಖಾಸಗಿ ಆಸ್ಪತ್ರೆಗೆ ಕಳುಹಿಸಿಕೊಡಿ. ಇಂದು ಮಧ್ಯಾಹ್ನದ ನಂತರ ಡೆಲಿವರಿ ಅದರೆ ಒಕೆ. ಟೈಂ ಚೆನ್ನಾಗಿದೆ” ಹೀಗೆಂದು ಕೊರೊನಾ ಸೋಂಕು ಪೀಡಿತ ಗರ್ಭಿಣಿಯ ಪತಿ ವೈದ್ಯರ ಬಳಿ ಬೇಡಿಕೆ ಇಟ್ಟಿದ್ದಾರೆ. ಗರ್ಭಿಣಿಯನ್ನು(ರೋಗಿ ಸಂಖ್ಯೆ 652) ವಿಕ್ಟೋರಿಯಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ. ಈ ನಡುವೆ ಈ ಮೊದಲು ಪರೀಕ್ಷಿಸಿದ ಖಾಸಗಿ ಆಸ್ಪತ್ರೆಯವರು ಡೆಲಿವರಿಗೆ ಮೇ 9 ರಂದು ದಿನಾಂಕ ನೀಡಿದ್ದಾರೆ. ಆದರೆ ಈಗ ಸೋಂಕು ಬಂದಿರುವುದರಿಂದ ಕೋವಿಡ್ …
Read More »ಇಂದು ಬೆಳಿಗ್ಗೆ 11ಕ್ಕೆ ಯಡಿಯೂರಪ್ಪ ಸುದ್ದಿಗೋಷ್ಠಿ; ಮಹತ್ವದ ಮಾಹಿತಿ ನೀಡಲಿದ್ದಾರೆ ಸಿಎಂ?
ಬೆಂಗಳೂರು (ಮೇ 6): ಲಾಕ್ಡೌನ್ ಆರಂಭವಾದಾಗಿನಿಂದಲೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ತಿರುಗಾಡುತ್ತಲೇ ಇದ್ದಾರೆ. ಅಧಿಕಾರಿಗಳ ಜೊತೆ ಸಭೆ ನಡೆಸಿ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಸದ್ಯ ರಾಜ್ಯದ ಪರಿಸ್ಥಿತಿ ಹೇಗಿದೆ ಎನ್ನುವುದರ ಬಗ್ಗೆ ಬಿಎಸ್ವೈ ಇಂದು 11 ಗಂಟೆಯ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಲಿದ್ದಾರೆ. ಲಾಕ್ಡೌನ್ ಶುರುವಾದ ದಿನಾಂಕ ಅಂದರೆ ಮಾ.21 ನೇ ತಾರೀಕಿನಿಂದ ಇಲ್ಲಿಯವರೆಗಿನ ಪರಿಣಾಮ, ಕೋರೋನಾ ತಡೆಗಟ್ಟಲು ಲಾಕ್‌ಡೌನ್ ಎಷ್ಟರಮಟ್ಟಿಗೆ ಸಹಕಾರಿಯಾಗಿದೆ, ಕೊರೊನಾ ತಡೆಗಟ್ಟುವಲ್ಲಿ ಸರ್ಕಾರ …
Read More »
Laxmi News 24×7