Breaking News

ಬೆಂಗಳೂರು

ಬೆಂಗಳೂರು:ಎಣ್ಣೆ ಸೀಜ್ ಮಾಡಿದ್ದಕ್ಕೆ ಎಸಿಪಿಯೇ ಅಮಾನತು………

ಬೆಂಗಳೂರು: ಸರ್ಕಾರಿ ವಾಹನದಲ್ಲಿ ಸಾಗಿಸುತ್ತಿದ್ದ ಮದ್ಯವನ್ನು ಸೀಜ್ ಮಾಡಿದ್ದ ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಎಸಿಪಿಯನ್ನೇ ಅಮಾನತು ಮಾಡಲಾಗಿದೆ. ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಎಸಿಪಿ ವಾಸು ಅವರನ್ನು ಅಡಿಷನಲ್ ಕಮಿಷನರ್ ಮುರುಗನ್ ಅಮಾನತುಗೊಳಿಸಿದ್ದಾರೆ. ತನ್ನ ಮಾತಿಗೆ ಬೆಲೆ ಕೊಟ್ಟಿಲ್ಲವೆಂದು ನನ್ನನ್ನು ಅಡಿಷನಲ್ ಕಮಿಷನರ್ ಮುರುಗನ್ ಸಸ್ಪೆಂಡ್ ಮಾಡಿದ್ದಾರೆ ಎಂದು ಎಸಿಪಿ ವಾಸು ಆರೋಪಿಸಿದ್ದಾರೆ. ಅಡಿಷನಲ್ ಕಮಿಷನರ್ ಮುರುಗನ್ ವಿಶ್ವವನ್ನೇ ಬೆಚ್ಚಿಬೀಳಿಸಿರುವ ಕೊರೊನಾ ವೈರಸ್ ತಡೆಗೆ ದೇಶಾದ್ಯಂತ ಲಾಕ್‍ಡೌನ್ ಘೋಷಿಸಲಾಗಿದೆ. ಕೊರೊನಾ ಸೋಂಕಿನಿಂದ …

Read More »

ಬಿಹಾರಿ ಕಾರ್ಮಿಕನ ಡೇಂಜರ್ ಟ್ರಾವೆಲ್ ಹಿಸ್ಟರಿ-ಅರ್ಧ ಬೆಂಗಳೂರು ಸುತ್ತಾಟ

ಬೆಂಗಳೂರು: ನಂಜನಗೂಡು ನೌಕರನ ಮಾದರಿ ಬೆಂಗಳೂರಿಗೂ ಹೊಂಗಸಂದ್ರದ ಸೋಂಕಿತ ಕೂಲಿ ಕಾರ್ಮಿಕನಿಂದ ಕಂಟಕ ಎದುರಾಗಿದೆ. ಕೂಲಿ ಕಾರ್ಮಿಕನಿಂದ ಇಂದೂ ಐವರಿಗೆ ಸೋಂಕು ಹರಡಿರುವುದು ಧೃಡಪಟ್ಟಿದ್ದು, ಈವರೆಗೂ ಈತನೊಬ್ಬನಿಂದಲೇ ಬೆಂಗಳೂರಿನ 14 ಮಂದಿಗೆ ಕೊರೊನಾ ತಗುಲಿದೆ. ಬಿಹಾರ ಮೂಲದ ಕೂಲಿ ಕಾರ್ಮಿಕನ ಟ್ರಾವೆಲ್ ಹಿಸ್ಟರಿ ಬಯಲಾಗುತ್ತಿದ್ದಂತೆ ಅರ್ಧ ಬೆಂಗಳೂರಿಗೆ ಈತ ಸೋಂಕು ಹಂಚಿರುವ ಸಾಧ್ಯತೆ ದಟ್ಟವಾಗಿದೆ. ಬೆಂಗಳೂರಿನ ಯಾವೆಲ್ಲಾ ಜಾಗಗಳಿಗೆ ಸೋಂಕಿತ ಹೋಗಿದ್ದ, ಯಾರೊಂದಿಗೆಲ್ಲಾ ಸಂಪರ್ಕದಲ್ಲಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಅರ್ಧ …

Read More »

KSRTC ವಾಣಿಜ್ಯ ಮಳಿಗೆಗಳಿಗೆ ಬಾಡಿಗೆ ವಿನಾಯಿತಿ

ಬೆಂಗಳೂರು: ಕೊರೊನಾ ಮಹಾಮಾರಿಯಿಂದಾಗಿ ಜನರ ಬಳಿ ಹಣ ಇಲ್ಲದಂತಾಗಿದ್ದು, ಜೀವನ ಸಾಗಿಸುವುದೇ ದುಸ್ತರವಾಗಿದೆ. ಹೀಗಾಗಿ ಕೆಎಸ್‍ಆರ್ ಟಿಸಿ ತನ್ನ ಬಾಡಿಗೆದಾರರು ಹಾಗೂ ಜಾಹೀರಾತುದಾರರಿಗೆ ವಿನಾಯಿತಿ ನೀಡಿ ಸುತ್ತೋಲೆ ಹೊರಡಿಸಿದೆ. ಲಾಕ್‍ಡೌನ್ ಆದಾಗಿನಿಂದ ಎಲ್ಲ ಮಳಿಗೆಗಳು ಬಂದ್ ಆಗಿದ್ದು, ವ್ಯಾಪಾರವಿಲ್ಲದೆ ಜನ ಪರದಾಡುತ್ತಿದ್ದಾರೆ. ಹೀಗಾಗಿ ಕೆಎಸ್‍ಆರ್ ಟಿಸಿಯಿಂದ ವಾಣಿಜ್ಯ ಮಳಿಗೆಗಳು, ಹೋಟೆಲ್‍ಗಳು ಹಾಗೂ ಜಾಹಿರಾತುದಾರರಿಗೆ ವಿನಾಯಿತಿ ನೀಡಲಾಗಿದೆ. ಲಾಕ್‍ಡೌನ್ ಆರಂಭವಾದ ದಿನದಿಂದ ಮುಗಿಯುವವರೆಗೂ ಬಾಡಿಗೆ ಕಟ್ಟುವುದರಿಂದ ವಿನಾಯಿತಿ ನೀಡಲಾಗಿದೆ. ಮಾನವೀಯತೆ ದೃಷ್ಟಿಯಿಂದ …

Read More »

ಕೊರೊನಾ ಕೋಲಾಹಲ- ಕೆಪಿಎಸ್‍ಸಿ ಪರೀಕ್ಷೆಗಳು ಮುಂದೂಡಿಕೆ……….

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಯಬೇಕಿದ್ದ ವಿವಿಧ ವಿಭಾಗಗಳ ಪರೀಕ್ಷೆಗಳನ್ನು ಮುಂದೂಡಿ ಆದೇಶ ಹೊರಡಿಸಲಾಗಿದೆ. ಕೊರೊನಾ ಅವಾಂತರದಿಂದಾಗಿ ಲಾಕ್‍ಡೌನ್ ಜಾರಿಯಲ್ಲಿರುವುದರಿಂದ ಮೇ, ಜೂನ್ ತಿಂಗಳಲ್ಲಿ ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ನಾಲ್ಕು ವಿಭಾಗಗಳ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಲಾಕ್‍ಡೌನ್ ಮುಗಿದ ಬಳಿಕ ಪರೀಕ್ಷಾ ದಿನಾಂಕ ನಿಗದಿ ಮಾಡುವುದಾಗಿ ಕರ್ನಾಟಕ ಲೋಕಸೇವಾ ಆಯೋಗದಿಂದ ಹೊರಡಿಸಲಾದ ಪ್ರಕಟಣೆಯಲ್ಲಿ ತಿಳಿಸಿದಲಾಗಿದೆ. ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಹೀಗಾಗಿ ಅನಗತ್ಯವಾಗಿ ಸಂಚರಿಸುವುದನ್ನು ನಿಷೇಧಿಸಲಾಗಿದೆ. ಇವತ್ತು ಒಂದೇ …

Read More »

ಬರಿದಾದ ರಾಜ್ಯ ಸರ್ಕಾರದ ಬೊಕ್ಕಸ ಖಜಾನೆ ತುಂಬಿಸಲು ರಾಜ್ಯ ಸರ್ಕಾರ ನಾನಾ ಕಸರತ್ತು .! B.S.Y.

ಬೆಂಗಳೂರು, ಏ.24- ಕೊರೊನಾ ಲಾಕ್‍ಡೌನ್‍ನಿಂದ ವ್ಯಾಪಾರ-ವಹಿವಾಟು ಸ್ಥಗಿತವಾಗಿ ಬೊಕ್ಕಸ ಖಾಲಿಯಾಗಿದ್ದು, ಖಜಾನೆ ತುಂಬಿಸಲು ರಾಜ್ಯ ಸರ್ಕಾರ ನಾನಾ ಕಸರತ್ತು ಆರಂಭಿಸಿದೆ. ಆರ್ಥಿಕ ವರ್ಷದಲ್ಲಿ ಸರ್ಕಾರ ಭಾರೀ ಆದಾಯ ಖೋತಾ ಕಂಡಿದ್ದು, ಇತ್ತ ಜಿಎಸ್‍ಟಿ ತೆರಿಗೆ ನಷ್ಟವೂ ದುಪ್ಪಟ್ಟು ಆಗಿದೆ. ಈ ಮಧ್ಯೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅಲ್ಪಸ್ವಲ್ಪ ಆರ್ಥಿಕ ನೆರವು ಬಂದಿದ್ದು, ಇನ್ನಷ್ಟು ನೆರವಿನ ನಿರೀಕ್ಷೆಯಲ್ಲಿದೆ. ಆರ್ಥಿಕ ಸಂಕಷ್ಟವನ್ನು ಸ್ವಲ್ಪ ಮಟ್ಟಿಗೆ ಸರಿದೂಗಿಸಲು ಲಾಕ್ ಡೌನ್ ಸಡಿಲಿಕೆ ಮಾಡುವ ಕೆಲವು …

Read More »

ಇಬ್ಬರಲ್ಲಿ ಕೊರೊನಾ ಪತ್ತೆ, ಪಾದರಾಯನಪುರ ಪುಂಡರು ಬೆಂಗಳೂರಿಗೆ ಶಿಫ್ಟ್ :,,,,,,

ರಾಮನಗರ, ಏ.24- ಪಾದರಾಯನಪುರದಲ್ಲಿ ದಾಂಧಲೆ ಮಾಡಿದ್ದ ಆರೋಪಿಗಳನ್ನು ರಾಮನಗರ ಜೈಲಿಗೆ ಶಿಫ್ಟ್ ಮಾಡಿದ್ದು, ಮತ್ತೆ ಅವರನ್ನು ಬೆಂಗಳೂರಿಗೆ ಕರೆತರಲಾಗಿದೆ. ರಾಮನಗರ ಜೈಲಿನಲ್ಲಿದ್ದ 121 ಆರೋಪಿಗಳ ಪೈಕಿ ಇಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿಗೆ ಶಿಫ್ಟ್ ಮಾಡಲಾಗುತ್ತಿದೆ. ಸೋಂಕು ಕಾಣಿಸಿಕೊಂಡ ಇಬ್ಬರನ್ನು ಬೆಂಗಳೂರಿನ ಆಸ್ಪತ್ರೆಗೆ ಕರೆತರಲಾಗಿದ್ದು, ಉಳಿದ 119 ಮಂದಿ ಆರೋಪಿಗಳನ್ನು 14 ಬಸ್‍ಗಳ ಮೂಲಕ ಬೆಂಗಳೂರಿಗೆ ಕರೆತರಲಾಯಿತು. ಬಸ್‍ನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮುನ್ನೆಚ್ಚರಿಕೆ ವಹಿಸಲಾಗಿತ್ತು.ಪಾದರಾಯನಪುರ ಗಲಭೆಯಲ್ಲಿ …

Read More »

ರಂಜಾನ್ ಮಾಸಾಚರಣೆ ಪಾಲಿಸಬೇಕಾದ ಮಾರ್ಗಸೂಚಿ…….

ಮಸೀದಿಯ ಸಿಬ್ಬಂದಿಗಳು ಯಾವುದೇ ತರಹದ ಧ್ವನಿವರ್ಧಕಗಳನ್ನು ಮಸೀದಿಯಲ್ಲಿ ಐದು ಹೊತ್ತಿನ ಪ್ರಾರ್ಥನೆ(ನಮಾಜ್) ಯನ್ನು ಶುಕ್ರವಾರ (ನಮಾಜ್) ಪ್ರಾರ್ಥನೆ ಸಹ ಒಳಗೊಂಡಂತೆ ಮತ್ತು ತರ್ಹಾವಿ (ನಮಾಜ್) ಪ್ರಾರ್ಥನೆಗೆ ಬಳಸಲು ನಿರ್ಬಂಧಿಸಲಾಗಿದೆ. ಬೆಂಗಳೂರು: ಮುಸ್ಲಿಂ ಬಾಂಧವರ ಪವಿತ್ರ ರಂಜಾನ್ ಮಾಸ ಪ್ರಾರಂಭವಾಗಲಿದ್ದು, ಮೇ 3ರವರೆಗೆ ಅನ್ವಯವಾಗುವಂತೆ ಸರ್ಕಾರದ ಮಾರ್ಗದರ್ಶನಗಳನ್ನು ಮುಂದುವರೆಸುತ್ತಾ ದಾವಣಗೆರೆ ಜಿಲ್ಲೆಯಾದ್ಯಂತ ಬರುವ ಎಲ್ಲಾ ಮಸೀದಿ, ದರ್ಗಾಗಳಲ್ಲಿ ದೈನಂದಿನ ಮತ್ತು ರಂಜಾನ್ ಮಾಸದ ಸಾಮೂಹಿಕ ಪ್ರಾರ್ಥನೆಗಳನ್ನು ಸಾರ್ವಜನಿಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ …

Read More »

ಬಿಬಿಎಂಪಿ ಬಜೆಟ್ ಪುಸ್ತಕದಲ್ಲಿ ಮೇಯರ್ ಗೆ ಅಪಮಾನ..!

ಬೆಂಗಳೂರು : ಲಾಕ್‍ಡೌನ್ ಹಿನ್ನೆಲೆಯಲ್ಲಿ ಅಳೆದು ತೂಗಿ ಮಂಡಿಸಲಾದ ಬಿಬಿಎಂಪಿ ಬಜೆಟ್ ಪುಸ್ತಕದಲ್ಲಿ ಮೇಯರ್ ಅವರ ಭಾವಚಿತ್ರವೇ ನಾಪತ್ತೆ..! ಬಜೆಟ್ ಪುಸ್ತಕದಲ್ಲಿ ಮೇಯರ್ ಭಾವಚಿತ್ರ ಪ್ರಕಟಿಸುವುದು ಶಿಷ್ಟಾಚಾರ. ಆದರೆ, ಈ ಬಾರಿಯ ಪುಸ್ತಕದಲ್ಲಿ ಮೇಯರ್ ಗೌತಮ್‍ಕುಮಾರ್ ಅವರ ಭಾವಚಿತ್ರ ಇಲ್ಲದೆ ಇರುವುದರಿಂದ ಅವರಿಗೆ ಉದ್ದೇಶಪೂರ್ವಕವಾಗಿಯೇ ಅಪಮಾನ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಬಜೆಟ್ ಪುಸ್ತಕದಲ್ಲಿ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಎಲ್.ಶ್ರೀನಿವಾಸ್ ಹಾಗೂ ಕಂದಾಯ ಸಚಿವ ಆರ್.ಅಶೋಕ್ …

Read More »

ಪ್ರಶಸ್ತಿಗಳ ಸುರಿಮಳೆ, ಅಣ್ಣಾವ್ರ ಕುಟುಂಬದ ದಾಖಲೆ..!

ವರನಟ ಡಾ.ರಾಜ್‍ಕುಮಾರ್ ಅವರ ಜನ್ಮ ದಿನ ಏಪ್ರಿಲ್ 24ರಂದು. ರಾಜ್ ಮತ್ತು ಅವರ ಕುಟುಂಬದ ಸಾಧನೆ ಅನನ್ಯ. ಈ ಕುರಿತು ಒಂದು ಪಕ್ಷಿನೋಟ ಇಲ್ಲಿದೆ. ಬಾಲಿವುಡ್ ಅಥವಾ ಹಿಂದಿ ಚಿತ್ರರಂಗದಲ್ಲಿ ರಾಜ್‍ಕಪೂರ್ ಕುಟುಂಬ ದೊಡ್ಡ ಹೆಸರು ಮಾಡಿದೆ. ಈ ಕುಟುಂಬದ ಪೃಥ್ವಿರಾಜ್ ಕಪೂರ್, ರಾಜ್‍ಕಪೂರ್, ಶಮ್ಮಿ ಕಪೂರ್, ಶಶಿಕಪೂರ್ ಈ ನಾಲ್ವರು ಸಿನಿಮಾ ರಂಗದ ಅತ್ಯುನ್ನತ ಪ್ರಶಸ್ತಿಯಾದ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವುದು ಭಾರತೀಯ ಚಿತ್ರರಂಗದಲ್ಲೇ ಒಂದು ಅಪೂರ್ವ …

Read More »

ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ …….

ಬೆಂಗಳೂರು, ಏ.24-ರಾಮನಗರ ಜೈಲ್ ಅನ್ನು ಸಂಪೂರ್ಣ ಕ್ವಾರಂಟೈನ್ ಮಾಡಬೇಕು. ಪೊಲೀಸರು ಸೇರಿದಂತೆ ಜೈಲಿನಲ್ಲಿ ಕಾರ್ಯನಿರ್ವಹಿಸಿದ ಅಡುಗೆ ಮತ್ತು ಸ್ವಚ್ಛತೆಯವರು ಸೇರಿದಂತೆ ಸಂಬಂಧಿಸಿದವರ ಆರೋಗ್ಯ ಕಾಪಾಡಲು ಸರ್ಕಾರ ತಕ್ಷಣವೇ ಕಾರ್ಯೋನ್ಮುಖವಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಸರ್ಕಾರ ತೆಗೆದುಕೊಂಡ ಎಡವಟ್ಟು ನಿರ್ಧಾರದಿಂದ ರಾಮನಗರದಲ್ಲೂ ಸೋಂಕು ಹರಡುವ ಭೀತಿ ಎದುರಾಗಿದೆ. ಸರ್ಕಾರ ಸಕಲ ಮುನ್ನೆಚ್ಚರಿಕೆಯಿಂದ ಪರಿಸ್ಥಿತಿ ನಿಭಾಯಿಸದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ. ರಾಮನಗರ ಕಾರಾಗೃಹದಲ್ಲಿ ಇರಿಸಲಾಗಿದ್ದ ಪಾದರಾಯನಪುರದ …

Read More »