ಬೆಂಗಳೂರು: ಹಲವು ವಿವಾದಗಳ ಬಳಿಕ ಚಾಮರಾಜಪೇಟೆ ಮೈದಾನದಲ್ಲಿ ಇಂದು ಬೆಳಿಗ್ಗೆ ಎಂಟು ಗಂಟೆಗೆ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿಲಾಯಿತು. ಇದೇ ಪ್ರಥಮ ಬಾರಿಗೆ ಈ ಮೈದಾನದಲ್ಲಿ ಸರ್ಕಾರದಿಂದ ಆಯೋಜಿಸಿದ್ದ ಧ್ವಜಾರೋಹಣವನ್ನು ಉಪವಿಭಾಗಾಧಿಕಾರಿಗಳಾದ ಡಾ.ಎಂ. ಜಿ. ಶಿವಣ್ಣ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಸದರಾದ ಪಿ.ಸಿ. ಮೋಹನ್, ಶಾಸಕರಾದ ಜಮೀರ್ ಅಹಮ್ಮದ್, ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಉಪ ಪೊಲೀಸ್ …
Read More »ಸ್ವಾತಂತ್ರ್ಯ ಹೋರಾಟಕ್ಕಾಗಿ ಬೊಮ್ಮಾಯಿ ಜೈಲುವಾಸ ಅನುಭವಿಸಿದ್ದರಾ?: ಸಿದ್ದರಾಮಯ್ಯ
ಬೆಂಗಳೂರು: ನೆಹರು ಬಗ್ಗೆ ಬಿಜೆಪಿ ನಾಯಕರ ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಬೊಮ್ಮಾಯಿ ಸ್ವಾತಂತ್ರ್ಯ ಹೋರಾಟಕ್ಕಾಗಿ ಜೈಲುವಾಸ ಅನುಭವಿಸಿದ್ದರಾ? ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಕ್ಕೆ ನೆಹರು ಅವರ ಕೊಡುಗೆಯಿದೆ. ನೆಹರು ಜೈಲು ವಾಸ ಅನುಭವಿಸಿದ್ದರು. ಈಶ್ವರಪ್ಪ ಸ್ವಾತಂತ್ರ್ಯಕ್ಕಾಗಿ ಜೈಲಿಗೆ ಹೋಗಿದ್ರಾ? ಬೊಮ್ಮಾಯಿ ಜೈಲುವಾಸ ಅನುಭವಿಸಿದ್ರಾ? ಅವನ್ಯಾವನೋ ರವಿಕುಮಾರ್ ಜೈಲಿಗೆ …
Read More »ಕಾಂಗ್ರೆಸ್ ಸ್ವಾತಂತ್ರ್ಯ ನಡಿಗೆಗೆ ಚಾಲನೆ ನೀಡಿದ ಸಿದ್ದರಾಮಯ್ಯ, ಡಿ.ಕೆ.ಶಿ.
ಬೆಂಗಳೂರು: 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಕಾಂಗ್ರೆಸ್ ಸ್ವಾತಂತ್ರ್ಯ ನಡಿಗೆಗೆ ಚಾಲನೆ ನೀಡಿದೆ. ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬೃಹತ್ ಪಾದಯಾತ್ರೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದ್ದಾರೆ. ಸಂಗೊಳ್ಳಿ ರಾಯಣ್ಣ ವೃತ್ತದಿಂದ ಆರಂಭವಾಗಿರುವ ಸ್ವಾತಂತ್ರ್ಯ ನಡಿಗೆ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದವರೆಗೂ ನಡೆಯಲಿದೆ. ಪಾದಯಾತ್ರೆಯಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್,ಡಿ,ಕೆ.ಸುರೇಶ್,ಜಮೀರ್ ಅಹ್ಮದ್, ರಾಮಲಿಂಗಾರೆಡ್ಡಿ, ಡಾ.ಜಿ.ಪರಮೇಶ್ವರ್, ಪ್ರಿಯಾಂಕ್ ಖರ್ಗೆ, ದಿನೇಶ್ ಗುಂಡೂರಾವ್, ಲಕ್ಷ್ಮಿ ಹೆಬ್ಬಾಳ್ಕರ್, ಚೆನ್ನರಾಜ ಹಟ್ಟಿಹೊಳಿ ಸೇರಿದಂತೆ …
Read More »ಸಿಎಂ ಇತಿಹಾಸದ ಸತ್ಯ ಎತ್ತಿ ಹಿಡಿಯಲಿ: ಡಿಕೆ ಶಿವಕುಮಾರ್
ಬೆಂಗಳೂರು: ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಸರ್ಕಾರ ಪ್ರತಿಕೆಗಳಿಗೆ ನೀಡಿರುವ ಜಾಹೀರಾತಿನಲ್ಲಿ ದೇಶದ ಪ್ರಥಮ ಪ್ರಧಾನಿ ನೆಹರೂ ಅವರನ್ನು ಕಡೆಗಣಿಸಿದ್ದು, ಆಗಿರುವ ಪ್ರಮಾದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕ್ಷಮೆಯಾಚಿಸಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ ಬಗ್ಗೆ ಭಾನುವಾರ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು, ದೇಶ ಸ್ವಾತಂತ್ರ್ಯ ಹೋರಾಟ ಮತ್ತು ನವಭಾರತ ನಿರ್ಮಾಣದಲ್ಲಿ ನೆಹರು ಅವರ ಪಾತ್ರ ಬಹಳ ಹಿರಿದು. ಇದು ನಿಮಗೂ ಗೊತ್ತಿದೆ. ಈ ಇತಿಹಾಸ ಓದಿಯೇ …
Read More »ನಾವು ಸರ್ಕಾರ ನಡೆಸುತ್ತಿಲ್ಲ, ಮ್ಯಾನೇಜ್ಮೆಂಟ್ ಮಾಡುತ್ತಿದ್ದೇವೆ? ಮಾಧುಸ್ವಾಮಿ
ಬೆಂಗಳೂರು: ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಚನ್ನಪಟ್ಡಣದ ಸಮಾಜ ಸೇವಕರೊಬ್ಬರ ಜೊತೆಗೆ ಮಾತನಾಡಿದ್ದಾರೆ ಎನ್ನಲಾದ ದೂರವಾಣಿ ಸಂಭಾಷಣೆ ಇದೀಗ ಚರ್ಚೆಗೆ ಗ್ರಾಸವಾಗಿದೆ. ದೂರವಾಣಿ ಸಂಭಾಷಣೆಯಲ್ಲಿ ತಮ್ಮದೇ ಸರ್ಕಾರದ ವಿರುದ್ಧ ಸಚಿವರು ಅಸಮಾಧಾನ ಹೊರಹಾಕಿದ್ದಾರೆ ಎನ್ನುವ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದೆ. ಸಚಿವ ಮಾಧುಸ್ವಾಮಿಯವರದ್ದು ಎನ್ನಲಾದ ಈ ದೂರವಾಣಿ ಸಂಭಾಷಣೆಯನ್ನು ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ಸರ್ಕಾರದ ನಿಷ್ಕ್ರೀಯತೆ, ಸಚಿವರುಗಳ ಅಸಾಮರ್ಥ್ಯ, ರೈತರಿಗೆ ಎಸಗುತ್ತಿರುವ ಅನ್ಯಾಯಗಳು ಸಚಿವ ಮಾಧುಸ್ವಾಮಿಯವರಿಂದ ಬಯಲಾಗಿದೆ. ಬಿಜೆಪಿ ಸರ್ಕಾರದಲ್ಲಿ …
Read More »ನಿಮ್ಮ ನಾಯಕರ ರಂಗಬಿರಂಗಿ ರಾತ್ರಿ ಬದುಕಿನ ಸಿಡಿ ಸಾಕಷ್ಟಿದೆ:ಪ್ರಿಯಾಂಕ್ ಗೆ ಬಿಜೆಪಿ ತಿರುಗೇಟು
ಬೆಂಗಳೂರು: ಇದು ಲಂಚ – ಮಂಚದ ಸರಕಾರ ಎಂದು ಆರೋಪಿಸಿದ್ದ ಮಾಜಿ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಬಿಜೆಪಿ ತಿರುಗೇಟು ನೀಡಿದ್ದು, ಕಾಂಗ್ರೆಸ್ ನಾಯಕರ ರಂಗಬಿರಂಗಿ ಬಗ್ಗೆ ಸಾಕಷ್ಟು ದಂತಕತೆ ಮಾತ್ರವಲ್ಲ, ಸಿಡಿಗಳೂ ಇವೆ ಎಂದು ಎಚ್ಚರಿಸಿದೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಬಿಜೆಪಿ ಪ್ರಿಯಾಂಕ್ ಖರ್ಗೆ ಅವರೇ, ಸಹಾಯ ಮಾಡುವುದಾಗಿ ನಂಬಿಸಿ ಅಸಹಾಯಕ ಹೆಣ್ಣೊಬ್ಬಳ ಮೇಲೆ ಮೇಟಿ ಲೈಂಗಿಕ ದೌರ್ಜನ್ಯ ಎಸಗಿದ್ದು ನಿಮ್ಮ ಕಾಲದಲ್ಲೇ ಅಲ್ಲವೇ? …
Read More »ಅಂಗಾಂಗ ದಾನಕ್ಕೆ ನಾನು ಹೆಸರು ನೋಂದಾಯಿಸಿದ್ದೇನೆ, ನೀವು ಕೂಡ ನೋಂದಾಯಿಸಿ: ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ವಿಶ್ವ ಅಂಗಾಂಗ ದಾನ ದಿನಾಚರಣೆ ಪ್ರಯುಕ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಅಂಗಾಂಗ ದಾನಕ್ಕೆ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ವಿಶ್ವ ಅಂಗಾಂಗ ದಾನ ದಿನಾಚರಣೆ ಹಿನ್ನೆಲೆ ಆರೋಗ್ಯ ಇಲಾಖೆಯಿಂದ ಆಯೋಜಿಸಲಾದ ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅಂಗಾಂಗ ದಾನ ಮಾಡಿದ ಕುಟುಂಬಸ್ಥರನ್ನು ಮುಖ್ಯಮಂತ್ರಿಯವರು ಸನ್ಮಾನ ಮಾಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಸತ್ತ ಮೇಲೆ ನಮ್ಮ ದೇಹದಾನದಿಂದ …
Read More »ನಳಿನ್ ಕುಮಾರ್ ಕಟೀಲ್ ನಿರ್ಗಮನ, ಕರ್ನಾಟಕ ಬಿಜೆಪಿಗೆ ಸಾರಥಿ ಯಾರು?
ಬೆಂಗಳೂರು, ಆಗಸ್ಟ್ 11: ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖುರ್ಚಿ ಅಲುಗಾಡುತ್ತಿರುವ ಬಗ್ಗೆ ಮಾತುಗಳು ಕೇಳಿಬರುತ್ತಿದೆ. ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸುತ್ತಿರುವ ಬಗ್ಗೆ ಊಹಾಪೋಹಗಳು ಎದ್ದಿವೆ ಎಂದು ಮೂಲಗಳು ತಿಳಿಸಿವೆ. ಬುಧವಾರ ಕರ್ನಾಟಕದ ಬಿಜೆಪಿ ನಾಯಕರು ನಳಿನ್ ಕುಮಾರ್ ಕಟೀಲ್ ಅವಧಿ ಮುಗಿದಾಗ ಆಗಸ್ಟ್ ಅಂತ್ಯದ ವೇಳೆಗೆ ಅಧಿಕಾರ ತ್ಯಜಿಸುತ್ತಾರೆ ಎಂದು ಸುಳಿವು ನೀಡಿದರು. ಆದಾಗ್ಯೂ ಕಟೀಲ್ ಮತ್ತು ಕೆಲವು …
Read More »ಯಶವಂತಪುರದಿಂದ ಬೆಳಗಾವಿಗೆ ಪ್ರತಿದಿನ ವಿಶೇಷ ರೈಲು
ಬೆಂಗಳೂರು,ಆಗಸ್ಟ್ 10: ಪ್ರತಿದಿನ ಒಂದು ಬಾರಿ ಬೆಂಗಳೂರಿನಿಂದ ಬೆಳಗಾವಿ ಮಧ್ಯೆ ಸೂಪರ್ ಫಾಸ್ಟ್ ವಿಶೇಷ ರೈಲನ್ನು ಓಡಿಸಲು ನೈರುತ್ಯ ರೈಲ್ವೆ ಇಲಾಖೆ ನಿರ್ಧರಿಸಿದೆ. ಕೃಷ್ಣಾ ಜನ್ಮಾಷ್ಟಾಮಿ, ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣೇಶ ಚತುರ್ಥಿ ಅಂಗವಾಗಿ ಈ ಸೂಪರ್ ಫಾಸ್ಟ್ ವಿಶೇಷ ರೈಲುಗಳ ಸೇವೆ ಓದಗಿಸಲು ನೈರುತ್ಯ ರೈಲ್ವೆ ಮುಂದಾಗಿದೆ. ಆಗಸ್ಟ್ 12ರಂದು ರಾತ್ರಿ 9.30ಕ್ಕೆ ಯಶವಂತಪುರದಿಂದ ಹೊರಡಲಿರುವ ಈ ರೈಲು ಮಾರನೇ ದಿನ ಬೆಳಗಾವಿಗೆ 8.25ಕ್ಕೆ ತಲುಪಲಿದೆ. ಯಶವಂತಪುರ- ಬೆಳಗಾವಿ …
Read More »ರಾಜ್ಯದಲ್ಲಿ ಹೆಚ್ಚುತ್ತಿದೆ ಹನಿಟ್ರ್ಯಾಪ್ ಹಾವಳಿ
ಬೆಂಗಳೂರು: ದಿಲ್ಲಿ, ಮುಂಬಯಿ, ಸೂರತ್‌ನಂತಹ ಬೃಹತ್ ನಗರಗಳಲ್ಲಿ ನಡೆಯುತ್ತಿದ್ದ ಹನಿಟ್ರ್ಯಾಪ್ ದಂಧೆ ಈಗ ರಾಜ್ಯಾದ್ಯಂತ ವಿಸ್ತರಿಸಿದೆ. ಶ್ರೀಮಂತರು, ರಾಜಕಾರಣಿಗಳು, ಉದ್ಯಮಿಗಳು, ಉನ್ನತ ಹುದ್ದೆಯಲ್ಲಿರುವ ಸರಕಾರಿ ಅಧಿಕಾರಿಗಳು, ಟೆಕ್ಕಿಗಳೇ ಈ ಗ್ಯಾಂಗ್‌ನ ಟಾರ್ಗೆಟ್! ರಾಜ್ಯದಲ್ಲಿ ಹನಿಟ್ರ್ಯಾಪ್ ದಂಧೆ ಎಗ್ಗಿಲ್ಲದೇ ನಡೆಯುತ್ತಿದ್ದು, ಸುಂದರ ಮಾನಿನಿಯರನ್ನು ಛೂ ಬಿಟ್ಟು ಶ್ರೀಮಂತ ಕುಳಗಳಿಗೆ ಗಾಳ ಹಾಕುವ ಹತ್ತಾರು ಗ್ಯಾಂಗ್‌ಗಳು ಸಕ್ರಿಯವಾಗಿದೆ. ಹನಿಟ್ರ್ಯಾಪ್ ಉರುಳಿಗೆ ಸಿಲುಕಿ ಲಕ್ಷಾಂತರ ರೂ. ಕಳೆದುಕೊಂಡ ಬಹಳಷ್ಟು ಮಂದಿ ಮಾನಕ್ಕೆ ಅಂಜಿ ಠಾಣೆ …
Read More »