ನವದೆಹಲಿ/ಮುಂಬೈ,ಏ.22-ವೈದ್ಯರು ಮತ್ತು ಆರೋಗ್ಯರಕ್ಷಕರ ನಿರಂತರ ಹೋರಾಟದ ನಡುವೆಯೂ ದೇಶಾದ್ಯಂತ ಕೊರೊನಾ ವೈರಸ್ ಅಟ್ಟಹಾಸ ಮತ್ತಷ್ಟು ತೀವ್ರಗೊಂಡಿದೆ. ಸಾವು ಮತ್ತು ಸೋಂಕು ಪ್ರಕರಣಗಳು ಹೆಚ್ಚಾಗುತ್ತಲೇ ಇದ್ದು, ಮುಂದೇನು ಎಂಬ ಆತಂಕ 135 ಕೋಟಿ ಭಾರತೀಯರಲ್ಲಿ ಮನೆ ಮಾಡಿದೆ. ಭಾರತದಲ್ಲಿ ಮೃತರ ಸಂಖ್ಯೆ 650ಕ್ಕೇರಿರುವುದು ಆತಂಕಕಾರಿಯಾಗಿದೆ. ಮತ್ತೊಂದಡೆ 20,000ಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವೂ ಇದೆ. ಕೇಂದ್ರ ಆರೋಗ್ಯ ಸಚಿವಾಲಯದ ನಿನ್ನೆ ಮಧ್ಯರಾತ್ರಿವರೆಗಿನ ಅಧಿಕೃತ ವರದಿ …
Read More »ಬ್ರೇಕಿಂಗ್ : ರಾಜ್ಯದಲ್ಲಿ 4 ತಿಂಗಳ ಮಗು ಸೇರಿ ಇಂದು 7 ಮಂದಿಗೆ ಕೊರೋನಾ, ಸೋಂಕಿತರ ಸಂಖ್ಯೆ 425ಕ್ಕೇರಿಕೆ
ಬೆಂಗಳೂರು, ಏ.22- ಕಲಬುರಗಿಯಲ್ಲಿ ನಾಲ್ಕು ತಿಂಗಳ ಗಂಡು ಮಗುವಿಗೆ ಕೊರೊನಾ ಸೋಂಕು ತಗುಲಿರುವುದು ಸೇರಿದಂತೆ ಇಂದು ಒಟ್ಟು 7 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಕೊರೊನಾ ಸೋಂಕಿತರ ಸಂಖ್ಯೆ 425ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆಯಾಗಿದ್ದು, 129 ಮಂದಿ ಕೋವಿಡ್-19ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬೆಂಗಳೂರು ನಗರದಲ್ಲಿ 54 ವರ್ಷದ ವ್ಯಕ್ತಿ ತೀವ್ರ ಉಸಿರಾಟದ ತೊಂದರೆಯಿಂದ ಕೊರೊನಾ ಸೋಂಕಿತರಾಗಿದ್ದು, ಇವರನ್ನು ನಿಗದಿತ ಆಸ್ಪತ್ರೆಗೆ ದಾಖಲಿಸಲಾಗಿದೆ.ಕೊರೊನಾ ಸೋಂಕಿತ ರೋಗಿ …
Read More »ಬೆಂಗಳೂರಲ್ಲಿ ಲಾಕ್‍ಡೌನ್ ಮತ್ತಷ್ಟು ಟೈಟ್ : ರಸ್ತೆಗಿಳಿದರೆ ವಾಹನ ಸೀಜ್ ಆಗುತ್ತೆ ಹುಷಾರ್..!
ಬೆಂಗಳೂರು, ಏ.22- ಬೇಕಾಬಿಟ್ಟಿ ವಾಹನ ಸಂಚಾರದಿಂದ ನಿನ್ನೆ ನಗರದಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಸಂಚಾರಿ ಪೊಲೀಸರು ಇಂದು ನಗರದಲ್ಲಿ ಲಾಕ್‍ಡೌನ್ ಬಿಗಿಗೊಳಿಸಿದ್ದಾರೆ. ಬೆಳ್ಳಂಬೆಳಗ್ಗೆ ಕಾರ್ಯಾಚರಣೆಗಿಳಿದ ಪೊಲೀಸರು ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್‍ಗಳನ್ನು ಹಾಕಿ ಪ್ರತಿಯೊಂದು ವಾಹನಗಳ ತಪಾಸಣೆ ನಡೆಸಿ ಅನಗತ್ಯವಾಗಿ ಓಡಾಡುತ್ತಿದ್ದ 1000ಕ್ಕೂ ಹೆಚ್ಚು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಇದುವರೆಗೂ 759 ವಾಹನಗಳನ್ನು ವಶಪಡಿಸಿಕೊಂಡಿದ್ದು, ತಪಾಸಣೆ ಮುಂದುವರಿಸಿರುವ ಪೊಲೀಸರು ರಸ್ತೆಯಲ್ಲಿ ಓಡಾಡುವ ಪ್ರತಿಯೊಂದು ವಾಹನಗಳ ನಂಬರ್ ನೋಟ್ ಮಾಡಿಕೊಳ್ಳುತ್ತಿದ್ದು, ವಾಹನ …
Read More »ರಂಜನಿ ಅವರ ಪೋಸ್ಟ್ ಇದೀಗ ಚರ್ಚೆಗೆ ಕಾರಣವಾಗಿದೆ. ಅದೇನಪ್ಪಾ ಅಂದ್ರೆ ಪುಟ್ಟಗೌರಿಗೆ ಕೆಲಸ ಬೇಕಂತೆ.
ಬೆಂಗಳೂರು: ಪುಟ್ಟಗೌರಿ ಮದುವೆ ನಂತರ ‘ಕನ್ನಡತಿ’ ಧಾರಾವಾಹಿ ಮೂಲಕ ಮನೆ ಮಾತಾಗಿರುವ ರಂಜನಿ ರಾಘವನ್ ಏನ್ ಮಾಡ್ತಿದ್ದಾರೆ ಅಂತ ಅಭಿಮಾನಿಗಳು ತಲೆ ಕೆಡಿಸಿಕೊಂಡಿದ್ದಾರೆ. ಲಾಕ್‍ಡೌನ್ ಹಿನ್ನೆಲೆ ಧಾರಾವಾಹಿಗಳ ಚಿತ್ರೀಕರಣಕ್ಕೆ ಬ್ರೇಕ್ ಬಿದ್ದಿದ್ದು, ಎಲ್ಲ ವಾಹಿನಿಗಳು ಸಂಚಿಕೆಗಳನ್ನು ಮರು ಪ್ರಸಾರ ಮಾಡುತ್ತಿವೆ. ಹೀಗಿರುವಾಗ ರಂಜನಿ ಅವರ ಪೋಸ್ಟ್ ಇದೀಗ ಚರ್ಚೆಗೆ ಕಾರಣವಾಗಿದೆ. ಅದೇನಪ್ಪಾ ಅಂದ್ರೆ ಪುಟ್ಟಗೌರಿಗೆ ಕೆಲಸ ಬೇಕಂತೆ. ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ಸಖತ್ ಬ್ಯುಸಿಯಾಗಿರುತ್ತಿದ್ದ ನಟಿ ರಂಜನಿ ರಾಘವನ್ ಇದೀಗ …
Read More »ಲಾಕ್‍ಡೌನ್ ನಡ್ವೆ ಪೊಲೀಸರ ಮೊಬೈಲ್ ಕದ್ದ ಕಳ್ಳರು………..
ಬೆಂಗಳೂರು: ಲಾಕ್‍ಡೌನ್ ನಡುವೆಯೇ ಕಳ್ಳರು ತಮ್ಮ ಕೈಚಳಕ ತೋರಿಸಿದ್ದು, ಪೊಲೀಸ್ ಪೇದೆಗಳಿಬ್ಬರ ಮೊಬೈಲ್ ಕದ್ದಿದ್ದಾರೆ. ಪಾದರಾಯನಪುರದಲ್ಲಿ ಅನಾವಶ್ಯಕವಾಗಿ ರಸ್ತೆಯಲ್ಲಿ ಓಡಾಡುತ್ತಿದ್ದ ಸ್ಥಳೀಯರನ್ನು ತಡೆದು ಪೊಲೀಸರು ವಾಪಸ್ ಕಳುಹಿಸುತ್ತಿದ್ದರು. ಈ ವೇಳೆ ಕೆಲವರು ಪೊಲೀಸರ ಜೊತೆ ವಾಗ್ವಾದಕ್ಕೆ ಇಳಿದಿದ್ರು. ಈ ಸಮಯದಲ್ಲಿಯೇ ಕಳ್ಳ ಪೇದೆಗಳಿಬ್ಬರ ಮೊಬೈಲ್ ಕದ್ದು ಪರಾರಿಯಾಗಿದ್ದಾನೆ. ಸದ್ಯ ಕಳ್ಳತನ ನಡೆದ ಸ್ಥಳದ ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ. ಲಾಕ್‍ಡೌನ್ ಇದ್ರೂ ಬೆಂಗಳೂರಿನ ರಸ್ತೆಗಳಲ್ಲಿ ಹೆಚ್ಚು ಬೈಕ್ ಗಳು ರಸ್ತೆಗಿಳಿದಿವೆ. ಬೆಂಗಳೂರು-ತುಮಕೂರು …
Read More »ಅನಗತ್ಯವಾಗಿ ಸಂಚರಿಸುತ್ತಿದ್ದವರ ವಾಹನ ಸೀಜ್- ಸಿಲಿಕಾನ್ ಸಿಟಿಯಲ್ಲಿ ಮಿಂಚಿನ ಕಾರ್ಯಾಚರಣೆ
ಬೆಂಗಳೂರು: ಕಳೆದ ಎರಡ್ಮೂರು ದಿನಗಳಿಂದ ಸಿಲಿಕಾನ್ ಸಿಟಿಯಲ್ಲಿ ವಾಹನ ಸಂಚಾರ ಹೆಚ್ಚಾಗಿದ್ದು, ವಿವಿಧೆಡೆ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಹೀಗಾಗಿ ಸರ್ಕಾರ ಲಾಕ್‍ಡೌನ್ ಬಿಗಿಗೊಳಿಸಿದ್ದು, ಪೊಲೀಸರೂ ಸಷ್ಟೇ ಕಾರ್ಯಪ್ರವೃತ್ತರಾಗಿದ್ದಾರೆ. ಅನಗತ್ಯವಾಗಿ ಸಂಚರಿಸುವ ವಾಹನಗಳನ್ನು ಸೀಜ್ ಮಾಡುತ್ತಿದ್ದಾರೆ. ಬೆಂಗಳೂರು ತುಮಕೂರು ಹೆದ್ದಾರಿಯ ಎಸ್‌ಆರ್‌ಎಸ್ ಬಸ್ ನಿಲ್ದಾಣದ ಬಳಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಮಿಂಚಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅನಗತ್ಯವಾಗಿ ಸಂಚರಿಸುವ ಬೈಕ್ ಹಾಗೂ ಕಾರುಗಳನ್ನು ಸೀಜ್ ಮಾಡುತ್ತಿದ್ದಾರೆ. ಮಂಗಳವಾರ ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್, ಆನಂದರಾವ್ ಸರ್ಕಲ್ …
Read More »ವಾರದಲ್ಲಿ ಎರಡು ದಿನ ಮದ್ಯ ಮಾರಾಟ ಮಾಡಿ: ಎಚ್.ವಿಶ್ವನಾಥ್
ಬೆಂಗಳೂರು: ವಾರದಲ್ಲಿ ಎರಡು ದಿನ ಮದ್ಯ ಮಾರಾಟ ಮಾಡುವ ಮೂಲಕ ವ್ಯಸನಿಗಳು ಸಾವನ್ನಪುವುದನ್ನು ತಪ್ಪಿಸಿ ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಮೈಸೂರಿನಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ವಾರದಲ್ಲಿ ಎರಡು ದಿನ ಮದ್ಯ ಮಾರಾಟಕ್ಕೆ ಅವಕಾಶ ನೀಡುವ ಮೂಲಕ ವ್ಯಸನಿಗಳು ಸಾವನ್ನಪ್ಪುವುದನ್ನು ತಪ್ಪಿಸಬಹುದು. ಅಲ್ಲದೆ ಕಾಳ ಸಂತೆಯಲ್ಲಿ ಮದ್ಯ ಮಾರಾಟ ಆಗುವುದನ್ನು ತಪ್ಪಿಸಬೇಕು. ವಾರದಲ್ಲಿ ಎರಡು ದಿನ ಎಲ್ಲ ವೈನ್ ಶಾಪ್, ಎಂಎಸ್‍ಐಎಲ್ ಮಳಿಗೆಗಳಲ್ಲಿ …
Read More »ಏ.30ರ ವರೆಗೆ ಉಚಿತ ಹಾಲು ವಿತರಣೆ …….
ಬೆಂಗಳೂರು : ಕೆ.ಎಂ.ಎಫ್ ನಿಂದ ರಾಜ್ಯದಲ್ಲಿ ವಾಸಿಸುತ್ತಿರುವ ಕೊಳಚೆ ಪ್ರದೇಶದ ಜನರಿಗೆ, ಅಲೆಮಾರಿಗಳಿಗೆ, ಬಡವರಿಗೆ, ಕೂಲಿ ಕಾರ್ಮಿಕರಿಗೆ ನಿತ್ಯ ಉಚಿತವಾಗಿ ಹಾಲು ವಿತರಣೆಯಾಗುತ್ತಿದ್ದು ಸದ್ಯ ಈ ತಿಂಗಳ ಅಂತ್ಯದವರೆಗೂ ಇದನ್ನು ವಿಸ್ತರಣೆ ಮಾಡಬೇಕು ಎಂದು ಮಾನ್ಯ ಮುಖ್ಯಮಂತ್ರಿಯವರಿಗೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೊರಿಕೊಂಡಿದ್ದೆ ಅದರಂತೆಯೇ ಎಪ್ರೀಲ್ 30ರ ವರೆಗೆ ಉಚಿತ ಹಾಲು ನೀಡಲು ನಿನ್ನೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಒಪ್ಪಿಗೆ ಸೂಚಿಸಿದ್ದು ಸಂತಸ ತಂದಿದೆ …
Read More »ಮೊಬೈಲ್ ಅವಾಂತರದ ಚಿತ್ರಣ ನೀಡಿದ ಕೆಜಿಎಫ್ ಸಂಗೀತ ನಿರ್ದೇಶಕ…….
ಬೆಂಗಳೂರು: ಲಾಕ್‍ಡೌನ್ ದಿನಗಳನ್ನು ಎಲ್ಲ ನಟ, ನಟಿಯರು ವಿಭಿನ್ನವಾಗಿ ಬಳಸಿಕೊಳ್ಳುತ್ತಿದ್ದು, ಕೆಲವರು ತಮ್ಮ ಹವ್ಯಾಸಗಳತ್ತ ತಿರುಗಿದರೆ, ಇನ್ನೂ ಕೆಲವರು ಮನರಂಜನೆ, ಸಾಮಾಜಿಕ ಕಾರ್ಯ, ಸಹಾಯದ ರೀತಿಯ ಕೆಲಸಗಳಲ್ಲಿ ತೊಡಗಿದ್ದಾರೆ. ಬಿಡುವಿದ್ದಾಗಲೆಲ್ಲ ಕಮ್ಮಾರಿಕೆ ಮಾಡುವ ಮೂಲಕ ತಂದೆಗೆ ನೆರವಾಗುತ್ತಿದ್ದ ಸಂಗೀತ ನಿರ್ದೇಶಕ ರವಿ ಬಸ್ರೂರ್ ಅವರು ಇಂದು ಮೊಬೈಲ್ ದುರ್ಬಳಕೆಯ ಅವಾಂತರಗಳ ಕುರಿತು ಗಮನ ಸೆಳೆದಿದ್ದಾರೆ. ಹೌದು ಯುವಕರಿಗೆ ಅಪ್ಯಾಯಮಾನವಾಗುವ ರೀತಿಯಲ್ಲಿ ಮೊಬೈಲ್ ಕುರಿತು ಜಾಗೃತಿ ಮೂಡಿಸಿರುವ ರವಿ ಬಸ್ರೂರ್, ಸಂಗೀತದ …
Read More »ಪಾದರಾಯನಪುರ ರಹಸ್ಯ ಬಯಲು – ಮಸೀದಿಯಲ್ಲಿ ವಿದೇಶಿ ತಬ್ಲಿಘಿಗಳಿಗೆ ಆಶ್ರಯ
ಬೆಂಗಳೂರು: ಈಗ ಎಲ್ಲಿ ನೋಡಿದ್ರೂ ಬೆಂಗಳೂರಿನ ಪಾದರಾಯನಪುರದ್ದೇ ಚರ್ಚೆ. ಕೊರೊನಾ ವಾರಿಯರ್ಸ್ ಮೇಲೆ ಸಾಮೂಹಿಕವಾಗಿ ದಾಳಿ ನಡೆಸಿದ ಬಳಿಕ ಪಾದರಾಯನಪುರದೊಳಗಿನ ಒಂದೊಂದೇ ರಹಸ್ಯಗಳು ಬಯಲಾಗ್ತಿವೆ. ಪಾದರಾಯನಪುರಕ್ಕೆ ವಿದೇಶಿ ತಬ್ಲಿಘಿಗಳ ನಂಟಿರುವ ಬಗ್ಗೆ ಮಾಹಿತಿ ಹೊರಬಿದ್ದಿದೆ. ಇಲ್ಲಿನ ಮಸೀದಿಯೊಂದರಲ್ಲಿ ಪಾಸ್‍ಪೋರ್ಟ್ ಅವಧಿ ಮುಗಿದ ಇಂಡೋನೇಷ್ಯಾ ಮತ್ತು ಕಿರ್ಗಿಸ್ಥಾನದ 19 ಮಂದಿಗೆ ಆಶ್ರಯ ನೀಡಲಾಗಿತ್ತು. ಈ ವಿಚಾರ ಶಾಸಕ ಜಮೀರ್ ಅಹ್ಮದ್ ಮತ್ತು ಕಾರ್ಪೋರೇಟರ್ ಇಮ್ರಾನ್ ಪಾಶಾಗೆ ಗೊತ್ತಿದ್ದರೂ ಮುಚ್ಚಿಟ್ಟಿದ್ದರು ಎಂಬ ಆರೋಪ …
Read More »