Breaking News
Home / ಜಿಲ್ಲೆ / ಬೆಂಗಳೂರು (page 432)

ಬೆಂಗಳೂರು

ತಾನು ಬೆಳೆದ ಬೆಳೆಗಳನ್ನು ಮಾರಾಟ ಮಾಡಲು ಸಾಧ್ಯವಾಗದ ಕಾರಣ ಬೇಸತ್ತ ರೈತ ಆತ್ಮಹತ್ಯೆ

ಬೆಂಗಳೂರು: ಕೊರೊನಾ ವೈರಸ್ ನಿಂತ್ರಣಕ್ಕಾಗಿ ಜಾರಿಯಲ್ಲಿರುವ ಲಾಕ್​ಡೌನ್​ನಿಂದಾಗಿ ತಾನು ಬೆಳೆದ ಬೆಳೆಗಳನ್ನು ಮಾರಾಟ ಮಾಡಲು ಸಾಧ್ಯವಾಗದ ಕಾರಣ ಬೇಸತ್ತ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಗಂಗಾಧರ್ (60) ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ರೈತ. ತುಮಕೂರಿನ ಶಿರಾ ತಾಲ್ಲೂಕಿನ ದೇವರಹಳ್ಳಿಯಲ್ಲಿರುವ ತನ್ನ ಜಮೀನಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತ ಬ್ಯಾಂಕ್​ ಮತ್ತು ಸ್ಥಳೀಯ ಸಾಲಗಾರರ ಬಳಿ ಸುಮಾರು 4.4 ಲಕ್ಷ ರೂ ಸಾಲ ಮಾಡಿದ್ದರು. ಬಿಸಿಲಿನ ಪರಿಣಾಮ …

Read More »

ಒಟ್ಟು 18 ಜಿಲ್ಲೆಗಳಲ್ಲಿ ಸೀಲ್‍ಡೌನ್ ಮಾಡಲು ಸಿದ್ಧತೆ ನಡೆಯುತ್ತಿದೆ..

ಬೆಂಗಳೂರು: ಒಂದು ಕಡೆ ಸೀಲ್‍ಡೌನ್ ಮಾದರಿ ನಿರ್ಬಂಧ ಹಾಕುತ್ತಿರುವ ಬೆಂಗಳೂರು ಪೊಲೀಸರು, ಅಡ್ಡಾದಿಡ್ಡಿ ಓಡಾಡುತ್ತಿರುವವರಿಗೆ ಮತ್ತಷ್ಟು ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ. ಬೆಂಗಳೂರು ರಸ್ತೆಗಳನ್ನು ಸೀಲ್ ಮಾಡುವುದರ ಜೊತೆಗೆ ಕೆಲವೊಂದು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಉದ್ದೇಶಿಸಿದ್ದಾರೆ. ಈಗಾಗಲೇ ನೀಡಿರುವ ತುರ್ತು ಕೋವಿಡ್-19 ಪಾಸ್‍ಗಳನ್ನು ಶನಿವಾರದಿಂದ ರದ್ದು ಮಾಡಲು ಬಯಸಿದ್ದಾರೆ. ಬೆಂಗ್ಳೂರು ಪೊಲೀಸರ ಪ್ಲಾನ್: ನಗರದಲ್ಲಿ 70,000 ತುರ್ತು ಕೋವಿಡ್-19 ಪಾಸ್, ಆನ್‍ಲೈನ್ 1.30 ಲಕ್ಷ ಪಾಸ್ ವಿತರಣೆ ಮಾಡಲಾಗಿದೆ. ಆದರೆ ದಿನಕ್ಕೆ …

Read More »

ಏಪ್ರಿಲ್ 14ರಂದು ಬಾಬಾ ಸಾಹೇಬ್ ಅಂಬೇಡ್ಕರ್ ಜನ್ಮದಿನ ಸಾಮಾಜಿಕ ಅಂತರ ಕಾಯ್ದುಕೊಂಡು ನಡೆಸಬೇಕಿದೆ:ಡಿ.ಕೆ.ಶಿವಕುಮಾರ್

ಬೆಂಗಳೂರು: ಏಪ್ರಿಲ್ 14ರಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಜನಿಸಿ 129 ವರ್ಷವಾಗಿದೆ. ಜನ್ಮದಿನ ಆಚರಿಸಲು ಇಡೀ ದೇಶ ಬಹಳ ಉತ್ಸುಕವಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಹಿನ್ನೆಲೆಯಲ್ಲಿ ಅಂಬೇಡ್ಕರ್ ಅವರು ನಮಗೆ ನೀಡಿರುವ ಸಂವಿಧಾನದ ಪ್ರಸ್ತಾವನೆಯನ್ನು ನೀವುಗಳು ಇರುವ ಸ್ಥಳದಿಂದಲೇ ಅಂದು ಬೆಳಿಗ್ಗೆ 10 ಗಂಟೆಗೆ ಸಂವಿಧಾನ ಪಿಠೀಕೆ ಓದುವ ಮೂಲಕ ನಮ್ಮ ಐಕ್ಯತೆ, ಸಮಗ್ರತೆ, ಬ್ರಾತೃತ್ವವನ್ನು ಎತ್ತಿ ಹಿಡಿದು ಈ ದಿನವನ್ನು ವಿಶೇಷವಾಗಿ ಆಚರಿಸಬೇಕು ಎಂದು ರಾಜ್ಯ ಹಾಗೂ …

Read More »

ಬೆಂಗ್ಳೂರಿನ 2 ವಾರ್ಡ್‍ಗಳು ಸೀಲ್‍ಡೌನ್ – ಬಿಬಿಎಂಪಿಯಿಂದಲೇ ಆಹಾರ ವಿತರಣೆ

ಬೆಂಗಳೂರು: ಇಂದು ಮಧ್ಯರಾತ್ರಿಯಿಂದ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ಸಂಪೂರ್ಣವಾಗಿ ಸೀಲ್ ಮಾಡಲಾಗುತ್ತದೆ ಎನ್ನುವ ಸುದ್ದಿಗಳ ಮಧ್ಯೆ ನಗರದ ಮಧ್ಯೆ ಬಾಪೂಜಿನಗರ ಮತ್ತು ಪಾದರಾಯನಪುರ ವಾರ್ಡ್ ಅನ್ನು ಸಂಪೂರ್ಣ ಸೀಲ್ ಮಾಡಲು ಬಿಬಿಎಂಪಿ ಮುಂದಾಗಿದೆ. ಈ ಸಂಬಂಧ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಅವರು, ಬಾಪೂಜಿ ನಗರ ವಾರ್ಡ್ 134 & ಪಾದರಾಯನಪುರ ವಾರ್ಡ್ 135ರಲ್ಲಿ ಕೋವಿಡ್ -19  ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಯಿತು. ಪರಿಸ್ಥಿತಿಯನ್ನು ನಿಯಂತ್ರಣ …

Read More »

ದೂರದಿಂದಲೇ ಒಂದಾದ ಪ್ರೇಮಿಗಳು – ಬೆಂಗ್ಳೂರಿನ ಗಿರಿನಗರ ಠಾಣೆಯಲ್ಲೊಂದು ಅಪರೂಪದ ದೃಶ್ಯ

ಬೆಂಗಳೂರು: ಕೊರೊನಾ ಭೀತಿಯಿಂದ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಇದರಿಂದ ಅನೇಕ ಮದುವೆ ಸಮಾರಂಭಗಳಿಗೆ ಬ್ರೇಕ್ ಬಿದ್ದಿದೆ. ಆದರೂ ಕೆಲವು ಜೋಡಿಗಳು ಲಾಕ್‍ಡೌನ್ ನಿಯಮವನ್ನು ಪಾಲಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇದೀಗ ಕೊರೊನಾ ಲಾಕ್‍ಡೌನ್ ನಡುವೆಯೇ ಪ್ರೇಮಿಗಳಿಬ್ಬರು ಮದುವೆಯಾಗಿದ್ದಾರೆ. ಮುರುಗನ್ ಮತ್ತು ಮೇಘಶ್ರೀ ಮದುವೆಯಾದ ಪ್ರೇಮಿಗಳು. ಇವರಿಬ್ಬರು ಅನೇಕ ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಮನೆಯಲ್ಲಿ ಇವರ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಮರುಗನ್ ಮತ್ತು ಮೇಘಶ್ರೀ ಮನೆಯಿಂದ ಓಡಿ …

Read More »

ಕರ್ನಾಟಕ ನೆಲದಲ್ಲಿ ತಮಿಳುನಾಡು ಖಾಕಿ ಚೆಕ್‍ಪೋಸ್ಟ್ – ಬಸವರಾಜ್ ಬೊಮ್ಮಾಯಿ ಫುಲ್ ಗರಂ

ಬೆಂಗಳೂರು: ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಕೂಡ ಲಾಕ್‍ಡೌನ್ ಅನ್ನು ಸರಿಯಾಗಿ ಪಾಲನೆ ಮಾಡುತ್ತಿಲ್ಲ ಎನ್ನುವ ಬಗ್ಗೆ ಸ್ವತಃ ಗೃಹಮಂತ್ರಿಗಳು ಹಾಗೂ ಬೆಂಗಳೂರು ಕಮಿಷನರ್ ಖುದ್ದು ಚೆಕ್ ಪೋಸ್ಟ್ ಹಾಗೂ ಬಾರ್ಡರ್‌ಗಳಿಗೆ ಭೇಟಿ ನೀಡಿ ರಿಯಾಲಿಟಿ ಚೆಕ್ ನಡೆಸಿದ್ದಾರೆ. ನಕಲಿ ಪಾಸ್‍ಗಳನ್ನು ಬಳಸಿ ಹಾಗೂ ಅನವಶ್ಯಕವಾಗಿ ಓಡಾಟ ಮಾಡುತ್ತಿದ್ದವರ ಪಾಸ್‍ಗಳನ್ನು ವಶಕ್ಕೆ ಪಡೆದು ವಾಹನಗಳನ್ನು ಸೀಜ್ ಮಾಡಿದ್ದಾರೆ. ದೇಶಾದ್ಯಂತ ಲಾಕ್‍ಡೌನ್ ಹೇರಿದರೂ ಮಹಾಮಾರಿ ಕೊರೊನಾ ಅಟ್ಟಹಾಸ ಹೆಚ್ಚಾಗುತ್ತಲೇ …

Read More »

ಹೊಸದಾಗಿ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ರಮೇಶ್ ಜಾರಕಿಹೊಳಿ ಕೊಕ್ ಕೊಟ್ಟ B.S.Y

ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್ ಭೀತಿಯಿಂದ ರಾಜ್ಯದ ಜನತೆ ಆತಂಕಕ್ಕೆ ಒಳಗಾಗಿದ್ದಾರೆ. ಸರ್ಕಾರವು ಸೋಂಕು ಹರಡುವುದನ್ನು ತಡೆಯುವಲ್ಲಿ ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇಂತಹ ಸಂದರ್ಭದಲ್ಲಿಯೇ ಹೊಸದಾಗಿ ಜಿಲ್ಲೆಯ ಉಸ್ತುವಾರಿ ಸಚಿವರ ನೇಮಕ ಮಾಡಿದ್ದಾರೆ. ಆದರೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸೇರಿದಂತೆ ಮೂವರು ಸಚಿವರಿಗೆ ಕೋಕ್ ನೀಡಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೆಂಗಳೂರು ನಗರ ಜಿಲ್ಲಾ ಉಸ್ತವಾರಿಯನ್ನು ವಹಿಸಿಕೊಂಡಿದ್ದಾರೆ. ರಮೇಶ್ ಜಾರಕಿಹೊಳಿ, ಗೋಪಾಲಯ್ಯ, ಶ್ರೀಮಂತ ಪಾಟೀಲ್ ಅವರಿಗೆ ಯಾವುದೇ ಜಿಲ್ಲಾ …

Read More »

“SSLC-PUC ಪರೀಕ್ಷೆ ದಿನಾಂಕ ನಿಗದಿಯಾಗಿಲ್ಲ, ವದಂತಿಗಳಿಗೆ ಕಿವಿಗೊಡಬೇಡಿ”

,ಸದ್ಯಕ್ಕೆ ಎಸ್​ಎಸ್​ಎಲ್​ಸಿ ಹಾಗೂ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ದಿನಾಂಕ ನಿಗದಿಯಾಗಿಲ್ಲ. ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ. ಈ ಹಿಂದೆಯೇ ಸುರೇಶ್ ಕುಮಾರ್ 21 ದಿನಗಳ ನಂತರವಷ್ಟೇ ಪರೀಕ್ಷೆಗಳ ವಿಚಾರ ಚರ್ಚೆಯಾಗಲಿದೆ ಎಂದು ಹೇಳಿದ್ದರು. ಆದರೆ ಸೋಷಿಯಲ್ ಮೀಡಿಯಾಗಳಲ್ಲಿ ಪರೀಕ್ಷೆಗಳ ಕುರಿತು ಹಲವು ವದಂತಿಗಳು ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಈ ಮಾಹಿತಿ ನೀಡಿದ್ದಾರೆ. ಶಿಕ್ಷಣ ಇಲಾಖೆಯ ಹಿರಿಯ …

Read More »

ಟ್ರೇಟ್ರಾ/ಪ್ಲೆಕ್ಸಿಪ್ಯಾಕ್ ಹಾಲುಗಳು ದೀರ್ಘಕಾಲ ಬಾಳಿಕೆಗೆ ಬರುತ್ತಿದ್ದು, ಪ್ಯಾಕ್ ಮಾದರಿಯ ಹಾಲುಗಳಿಗೆ ಬೇಡಿಕೆ ಹೆಚ್ಚಾಗುತ್ತಿವೆ

ರಾಮನಗರ: ಕೊರೊನಾ ಹಿನ್ನಲೆಯಲ್ಲಿ ಲಾಕ್‍ಡೌನ್ ಜಾರಿಯಲ್ಲಿರುವುದರಿಂದ ಟ್ರೇಟ್ರಾ/ಪ್ಲೆಕ್ಸಿಪ್ಯಾಕ್ ಮಾದರಿಯ ಹಾಲುಗಳಿಗೆ ಬೇಡಿಕೆ ಹೆಚ್ಚಾಗುತ್ತಿವೆ. ಇವುಗಳನ್ನೇ ಹೆಚ್ಚಿನ ಪ್ರಮಾಣದಲ್ಲಿ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ದೊರೆಯುವಂತೆ ಮಾಡಲು ಮುಂದಿನ ದಿನಗಳಲ್ಲೂ ಸಹ ಸನ್ನದ್ಧರಾಗುವಂತೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು. ಇಲ್ಲಿನ ರಾಮನಗರದ ಹಾಲಿನ ಪುಡಿ ಘಟಕಕ್ಕೆ ಭೇಟಿ ನೀಡಿದ ಬಳಿಕ ಕೆಎಮ್‍ಎಫ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಅಧಿಕಾರಿಗಳು ತಕ್ಷಣವೇ ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಿದರು. ಟ್ರೇಟ್ರಾ/ಪ್ಲೆಕ್ಸಿಪ್ಯಾಕ್ …

Read More »

ರಾಜ್ಯದಲ್ಲಿ ಕೊರೊನಾ ವಿರುದ್ಧ ‘3ಟಿ’ ಅಸ್ತ್ರ!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 200ರ ಗಡಿ ಸಮೀಪಿಸಿರುವ ಹಿನ್ನೆಲೆಯಲ್ಲಿ ಮುಂದಿನ 5 ದಿನ ಫೈನಲ್ ವಾರ್ ಎಂದು ಪರಿಗಣಿಸಲಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯು ‘3ಟಿ’ ಅಸ್ತ್ರಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಿದೆ. ರಾಜ್ಯದಲ್ಲಿ ಒಟ್ಟು ಜನರಿಗೆ 197 ಕೊರೊನಾ ತಗುಲಿರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಗುರುವಾರ ಒಂದೇ ದಿನ 16 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಬಾಗಲಕೋಟೆಯಲ್ಲಿ 3 ಮಕ್ಕಳಲ್ಲೇ ಕೊರೊನಾ ಪತ್ತೆಯಾದರೆ, ಹೊಸ 3 ಪ್ರಕರಣಗಳಲ್ಲಿ ಮಕ್ಕಳಿಂದಲೇ …

Read More »