Breaking News
Home / ಜಿಲ್ಲೆ / ಬೆಂಗಳೂರು (page 438)

ಬೆಂಗಳೂರು

ನಾಳೆ ದೇಶವಾಸಿಗಳಿಗಾಗಿ ಮೋದಿ ವಿಡಿಯೋ ಸಂದೇಶ

ಬೆಂಗಳೂರು: ಪ್ರಧಾನಿ ಮೋದಿ ಅವರು ನಾಳೆ ದೇಶದ ಜನತೆಗಾಗಿ ವಿಡಿಯೋ ಸಂದೇಶವೊಂದನ್ನು ಹಂಚಿಕೊಳ್ಳುವುದಾಗಿ ಟ್ವೀಟ್ ಮಾಡಿದ್ದಾರೆ. ಕೊರೊನಾ ವೈರಸ್ ಭೀತಿಯಿಂದ ಈಗಾಗಲೇ ಮೋದಿ ಅವರು, ದೇಶವನ್ನು ಏಪ್ರಿಲ್ 14ರವರೆಗೆ ಲಾಕ್‍ಡೌನ್ ಮಾಡಿದ್ದಾರೆ. ಇಂದು ಕೂಡ ದೇಶದ ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಮೋದಿ ಅವರು ವಿಡಿಯೋ ಕಾನ್ಫೆರೆನ್ಸ್ ಮಾಡಿದ್ದರು. ಇದಾದ ನಂತರ ಅವರು ಟ್ವೀಟ್ ಮಾಡಿದ್ದು, ವಿಡಿಯೋ ಸಂದೇಶ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಮೋದಿ …

Read More »

ರಾಜ್ಯದಲ್ಲಿ 312 ಸ್ಲೀಪರ್​ ಕೋಚ್ ರೈಲು‌ ಬೋಗಿಗಳನ್ನು ಐಸೋಲೇಷನ್ ವಾರ್ಡ್​ಗಳಾಗಿ ಪರಿವರ್ತನೆ

ಬೆಂಗಳೂರು : ಕೊರೊನಾ ಚಿಕಿತ್ಸೆಗೆ ಐಸೋಲೇಷನ್ ವಾರ್ಡ್​ಗಳ ಕೊರತೆ ನೀಗಿಸಲು ಆರೋಗ್ಯ ಇಲಾಖೆ ಜೊತೆ ರೈಲ್ವೆ ಇಲಾಖೆ ಕೈಜೋಡಿಸಿದ್ದು, ರಾಜ್ಯದಲ್ಲಿ 312 ಸ್ಲೀಪರ್​ ಕೋಚ್ ರೈಲು‌ ಬೋಗಿಗಳನ್ನು ಐಸೋಲೇಷನ್ ವಾರ್ಡ್​ಗಳಾಗಿ ಪರಿವರ್ತಿಸುವ ಕೆಲಸ ಆರಂಭಿಸಲಾಗಿದೆ. ಕೋವಿಡ್ -19 ಮಹಾಮಾರಿಗೆ ಸಿಲುಕಿದವರ ಚಿಕಿತ್ಸೆಗೆ ಅಗತ್ಯವಾದ ಐಸೋಲೇಷನ್ ಕೊರತೆ ನೀಗಿಸಲು ರೈಲ್ವೆ ಇಲಾಖೆ ಮುಂದಾಗಿದ್ದು ದೇಶಾದ್ಯಂತ 5 ಸಾವಿರ ಬೋಗಿಗಳನ್ನು ಐಸೋಲೇಷನ್ ವಾರ್ಡ್​ಗಳಾಗಿ ಪರಿವರ್ತಿಸಲಾಗುತ್ತಿದೆ. ಅದರ ಭಾಗವಾಗಿ ಕೊರೊನಾ ಸೋಂಕಿತರನ್ನು ಇರಿಸಲು ನೈರುತ್ಯ …

Read More »

ಹಲ್ಲೆಗೊಳಗಾದ ಆಶಾ ಕಾರ್ಯಕರ್ತೆಯನ್ನು ಭೇಟಿಮಾಡಿದ ಡಿಸಿಎಂ ಅಶ್ವತ್ಥಾರಾಯಣ……

ಬೆಂಗಳೂರು, ಏ.2-ಜನರ ಆರೋಗ್ಯದ ಪರಿಶೀಲನೆಗೆ ಹೋಗಿದ್ದ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಉಪ ಮುಖ್ಯಮಂತ್ರಿ ಡಾ.ಸಿ.ಎ್.ಅಶ್ವತ್ಥಾರಾಯಣ ಅವರು ಪೊಲೀಸರಿಗೆ ಸೂಚಿಸಿದ್ದಾರೆ. ದೂರು ಸ್ವೀಕರಿಸದ ಪೊಲೀಸರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಹಲ್ಲೆಗೊಳಗಾದ ಆಶಾ ಕಾರ್ಯಕರ್ತೆ ಕೃಷ್ಣ ವೇಣಿ ಅವರನ್ನು ಹೆಗಡೆ ನಗರದ ಅವರ ಮನೆಯಲ್ಲಿ ಭೇಟಿ ಮಾಡಿ ಸಾಂತ್ವಾನ ಹೇಳಿದ ನಂತರ ಈ ಸೂಚನೆ ನೀಡಿದ್ದಾರೆ. ಆಶಾ ಕಾರ್ಯರ್ತೆಯರಿಗಾದ ನೋವು ಆಲಿಸಿದ ನಂತರ …

Read More »

ಹಸಿವಿನಿಂದ ಬಳಲುತಿದ್ದ ಮಂದಿಗೆ 4 ಟನ್ ಆಹಾರ ಸಾಮಗ್ರಿ ವಿತರಿಸಿದ ಕೌನ್ಸಿಲರ್

ಬೆಂಗಳೂರು: ಕೊರೊನಾ ವೈರಸ್ ಭೀತಿಯಿಂದ ದೇಶವೇ ಲಾಕ್‍ಡೌನ್ ಆಗಿದ್ದು, ಸರ್ಕಾರದ ಆದೇಶಕ್ಕೆ ಸ್ಪಂದಿಸಿ ಜನರು ಮನೆಯಲ್ಲಿ ಇದ್ದಾರೆ. ಆದರೆ ಹಸಿವಿನಿಂದ ಪರಿತಪಿಸುತ್ತಿದ್ದ ಬಡಾವಣೆ ಮಂದಿಗೆ ಕೌನ್ಸಿಲರ್ ನರಸಿಂಹ ಮೂರ್ತಿ ಸ್ಪಂದಿಸಿ ಮಾನವೀಯತೆಗೆ ಸಾಕ್ಷಿಯಾಗಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲದ ರಾಯನ್ ನಗರ ನಿವಾಸಿಗಳಿಗೆ ದಿನ ಬಳಕೆಯ ದಿನಸಿ ಪದಾರ್ಥಗಳನ್ನು ಕೌನ್ಸಿಲರ್ ನರಸಿಂಹ ಮೂರ್ತಿ ಅವರು ವಿತರಣೆ ಮಾಡಿದ್ದಾರೆ. ವಾರ್ಡಿನ ಪ್ರತಿ ಜನರಿಗೆ ದಿನ ಬಳಕೆಯ ದಿನಸಿ ಪದಾರ್ಥಗಳನ್ನು ಮನೆ ಮನೆಗೆ ತೆರಳಿ …

Read More »

ಬೆಂಗಳೂರು :7, 8 ಮತ್ತು 9ನೇ ತರಗತಿಯ ವಾರ್ಷಿಕ ಪರೀಕ್ಷೆಗಳು ರದ್ದು..!

ಬೆಂಗಳೂರು : ಕೊರೊನಾ ಸೋಂಕಿನ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಏಳು, ಎಂಟು ಮತ್ತು ಒಂಭತ್ತನೇ ತರಗತಿಯ ವಾರ್ಷಿಕ ಪರೀಕ್ಷೆಗಳನ್ನ ರದ್ದು ಮಾಡಲಾಗಿದ್ದು,ಈ ಮೂರು ವರ್ಗದ ಎಲ್ಲ ವಿದ್ಯಾರ್ಥಿಗಳನ್ನು ಉತ್ತೀರ್ಣ (ಪಾಸ್) ಮಾಡಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. ‌ ಗುರುವಾರ ತಮ್ಮ ಫೇಸ್ ಬುಕ್ ಲೈವ್ ನಲ್ಲಿ ಈ ವಿಷಯವನ್ನು ಸ್ಪಷ್ಟಪಡಿಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ,‌ಎಸ್.ಸುರೇಶ್ ಕುಮಾರ್ ಈ ಹಿಂದೆ …

Read More »

ಬೆಂಗಳೂರು:ಸರ್ವೇಗೆ ತೆರಳಿದ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತರ ಮೇಲೆ ಹಲ್ಲೆ

ಬೆಂಗಳೂರು: ನಗರದಲ್ಲಿ   ಕೊರೊನಾ ಸೋಂಕು ಸಂಬಂಧ ಸರ್ವೇಗೆ ತೆರಳಿದ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು  ಆಘಾತಕಾರಿ ಮಾಹಿತಿ ಲಭ್ಯವಾಗಿದೆ. ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತಲಿದ್ದು, ಈ ಹಿನ್ನೆಲೆಯಲ್ಲಿ  ನಗರದ ನಿವಾಸಿಗಳ ಪರೀಕ್ಷೆಗೆ  ಆರೋಗ್ಯ ಇಲಾಖೆ ಮುಂದಾಗಿದೆ. ಅದರಂತೆ ಇಂದು ಸಾಧಿಕ ನಗರದಲ್ಲಿ  ಪರೀಕ್ಷೆ ನಡೆಸಲು  ತೆರಳಿದ್ದ ಸಿಬ್ಬಂದಿ ಮೇಲೇ 10 ಜನರ ಗುಂಪು  ಏಕಾಏಕಿ ಹಲ್ಲೆ ನಡೆಸಿದ್ದಾರೆ. ಆಶಾ …

Read More »

Districts ರಾಮನವಮಿಗೂ ಕೊರೊನಾ ಬಿಸಿ- ಭಣಗುಡುತ್ತಿವೆ ದೇವಸ್ಥಾನಗಳು

ಬೆಂಗಳೂರು: ದೇವಸ್ಥಾನಗಳಲ್ಲಿ ರಾಮನವಮಿ ಸಂಭ್ರಮ, ಮಜ್ಜಿಗೆ, ಪಾನಕ, ಕೋಸಂಬರಿ ಘಮ ಘಮಿಸುತ್ತಿತ್ತು. ಆದರೆ ಕೊರೊನಾ ಭೀತಿಯಿಂದಾಗಿ ಎಲ್ಲ ದೇವಸ್ಥಾನಗಳಲ್ಲಿ ಸರಳವಾಗಿ ಪೂಜೆ ಮಾಡುವ ಮೂಲಕ ರಾಮನವಮಿ ಆಚರಿಸಲಾಗುತ್ತಿದೆ.ಬೆಂಗಳೂರು, ಮೈಸೂರು, ದಾವಣಗೆರೆ ಸೇರಿದಂತೆ ವಿವಿಧೆಡೆಗಳಲ್ಲಿ ರಾಮನವಮಿಯನ್ನು ಸರಳವಾಗಿ ಆಚರಿಸಲಾಗುತ್ತಿದೆ. ಮೈಸೂರಿನಲ್ಲಿ ಪೂಜೆಗೆ ಮಾತ್ರ ರಾಮನವಮಿ ಸೀಮಿತವಾಗಿದ್ದು, ಎಲ್ಲ ರಾಮ ಮಂದಿರಗಳಲ್ಲೂ ಸರಳವಾಗಿ ರಾಮನವಮಿ ಆಚರಿಸಲಾಗುತ್ತಿದೆ. ಮಂದಿರ ಸ್ವಚ್ಛಗೊಳಿಸಿ ಪೂಜೆ ಮಾಡಲಾಗುತ್ತಿದೆ. ಆದರೆ ಮಜ್ಜಿಗೆ, ಪಾನಕ, ಕೋಸಂಬರಿಗೆ ಬ್ರೇಕ್ ಹಾಕಲಾಗಿದೆ. ಕೇವಲ ದೇವಸ್ಥಾನದವರು …

Read More »

ಕಷ್ಟಕಾಲದಲ್ಲಿ ರಾಜ್ಯಕ್ಕೆ ಸಿಗುತ್ತಾ ಕೇಂದ್ರದ ನೆರವು?; ಮೋದಿ ಏರ್ಪಡಿಸಿರುವ ಸಿಎಂ ಗಳ ಸಭೆಯಲ್ಲಿ ಬಾಕಿ ಕೇಳಲಿರುವ ಬಿಎಸ್‌ವೈ

ಬೆಂಗಳೂರು (ಏಪ್ರಿಲ್ 02); ಮಾರಣಾಂತಿಕ ಕೊರೋನಾ ವೈರಸ್‌ ಇಡೀ ದೇಶಕ್ಕೆ ಬೆದರಿಕೆ ಒಡ್ಡಿದ್ದು ಇದನ್ನು ತಡೆಯುವ ಹಾಗೂ ಲಾಕ್‌ಡೌನ್ ಕುರಿತು ಚರ್ಚೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಇಂದು ವಿಡಿಯೋ ಕಾನ್ಫರೆನ್ಸ್‌ ಮೂಲಕ ಇಂದು ಬೆಳಗ್ಗೆ 11 ಗಂಟೆಗೆ ಸಿಎಂಗಳ ಸಭೆ ಕರೆದಿದ್ದಾರೆ. ಆದರೆ, ಈ ಸಭೆಯಲ್ಲಿ ಯಡಿಯೂರಪ್ಪ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿರುವ ಬಾಕಿ ಹಣ ಕೇಳಲಿದ್ದಾರೆ ಎನ್ನಲಾಗುತ್ತಿದೆ. ಈ ಹಿಂದೆ ರಾಜ್ಯಕ್ಕೆ ಬರ ಮತ್ತು ನೆರೆ ಒಂದರಹಿಂದೊಂದರಂತೆ ಅಪ್ಪಳಿಸಿತ್ತು. …

Read More »

ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡವರ ಬಗ್ಗೆ ಜನರೇ ಮಾಹಿತಿ ನೀಡಿ; ಶ್ರೀರಾಮುಲು ಮನವಿ

ಬೆಂಗಳೂರು (ಏಪ್ರಿಲ್ 01); ದೆಹಲಿಯ ನಿಜಾಮುದ್ದೀನ್‌ನಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಸುಮಾರು 2,000 ಜನ ಭಾಗವಹಿಸಿದ್ದಾರೆ. ಈ ಪೈಕಿ ಕರ್ನಾಟಕದಿಂದ 300 ಜನ ಭಾಗವಹಿಸಿದ್ದಾರೆ. ಹೀಗಾಗಿ ಈ ಸಭೆಯಲ್ಲಿ ಭಾಗವಹಿಸಿದವರ ಕುರಿತು ಜನ ಮಾಹಿತಿ ನೀಡಬೇಕಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಮನವಿ ಮಾಡಿದ್ದಾರೆ. ಇಂದು ಬಾಗಲಕೋಟೆಯಲ್ಲಿ ಮಾತನಾಡಿರುವ ಅವರು, “ರಾಜ್ಯದಲ್ಲಿ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಭಾಗಿಯಾದ 40 ಜನ ಪತ್ತೆಯಾಗಿದ್ದಾರೆ. ಇವರ ಮಾದರಿಯನ್ನು ಪರಿಶೀಲನೆಗೆ ಕಳುಹಿಸಲಾಗಿದೆ. ಉಳಿದವರ ಪತ್ತೆ …

Read More »

ಕೆಎಂಎಫ್ ಮೂಲಕ ಹಾಲು ಖರೀದಿಸಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿರುವ  ಬಡವರಿಗೆ ಗುರುವಾರದಿಂದಲೇ ಉಚಿತವಾಗಿ ವಿತರಿಸಲಾಗುವುದು

ಬೆಂಗಳೂರು: ಕೆಎಂಎಫ್ ಮೂಲಕ ೭.೫ ಲಕ್ಷ ಲೀಟರ್ ಹಾಲನ್ನು ಸರ್ಕಾರ ಖರೀದಿಸಿ ಸ್ಲಂ ಹಾಗೂ ಬಡಜನರು ವಾಸಿಸುವ ಪ್ರದೇಶಗಳಲ್ಲಿ ಉಚಿತವಾಗಿ ಏಪ್ರಿಲ್ ೧೪ರವರೆಗೆ ಹಾಲು ವಿತರಣೆಗೆ ನಿರ್ಧರಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕೆಎಂಎಫ್ ಅಧ್ಯಕ್ಷ, ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ ಸಲ್ಲಿಸಿದ್ದಾರೆ. ಕೊರೋನಾ ವೈರಾಣು ಸೋಂಕಿನ ತಡೆಗೆ ಲಾಕ್‌ಡೌನ್ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೆಎಂಎಫ್ ಮೂಲಕ ಹಾಲು ಖರೀದಿಸಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿರುವ  ಬಡವರಿಗೆ …

Read More »