Breaking News

ಬೆಂಗಳೂರು

ನಾಳೆಯಿಂದ ಮನೆ-ಮನೆ ಕೊರೋನಾ ವೈರಸ್ ಸಮೀಕ್ಷೆ

ಬೆಂಗಳೂರು , ಏ 12 : ನಾಳೆಯಿಂದ ಪ್ರಾರಂಭವಾಗಿ ಏಪ್ರಿಲ್-30 ರವರೆಗೆ ಬೆಂಗಳೂರು ನಗರ ಜಿಲ್ಲೆಯಾದ್ಯಂತ ಕೋವಿಡ್ ಸರ್ವೇಕ್ಷಣಾ ತಂಡಗಳಿಂದ ಮನೆ ಮನೆ ಸಮೀಕ್ಷಾ ಕಾರ್ಯ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಎನ್. ಶಿವಮೂರ್ತಿ ಅವರು ತಿಳಿಸಿದ್ದಾರೆ. ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಾಲ್ಲೂಕು ಮಟ್ಟದ ವೈದ್ಯಾಧಿಕಾರಿಗಳು ಹಾಗೂ ಅಧಿಕಾರಿಗಳ ತರಬೇತಿ ಕುರಿತು ಅವರು ಮಾಹಿತಿ ನೀಡಿದರು. ಕೋವಿಡ್-19 ರ ಸೋಂಕನ್ನು ಸಮುದಾಯ ಮಟ್ಟದಲ್ಲಿ ಹರಡುವುದನ್ನು ತಡೆಯಲು ಕೇಂದ್ರ …

Read More »

“ಸಿಎಂ ರಿಲೀಫ್ ಫಂಡ್‍ಗೆ ಒಟ್ಟು 1.80 ಕೋಟಿ ರೂ. ಜಮೆ” ಸಚಿವ ಸುರೇಶ್ ಕುಮಾರ್

ರಾಜ್ಯದಲ್ಲಿ 215 ಜನರಿಗೆ ಕೊರೊನಾ- 39 ಜನ ಡಿಸ್ಚಾರ್ಜ್ – ಬೆಂಗ್ಳೂರಿನಲ್ಲಿ ಇಂದಿನಿಂದ ಒಂದು ತಿಂಗ್ಳು ಕಠಿಣ ಕ್ರಮ ಮುಖ್ಯಮಂತ್ರಿ ವಿಪತ್ತು ಪರಿಹಾರ ನಿಧಿಗೆ ಈವರೆಗೂ 1.80 ಕೋಟಿ ರೂ. ಜಮೆ ಬೆಂಗಳೂರು: ಮುಖ್ಯಮಂತ್ರಿ ವಿಪತ್ತು ಪರಿಹಾರ ನಿಧಿಗೆ ಈವರೆಗೂ 1.80 ಕೋಟಿ ರೂ. ಜಮೆಯಾಗಿದೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 215ಕ್ಕೆ …

Read More »

ಬೆಂಗಳೂರು,:ಮೊಬೈಲ್ ಸ್ಯಾನಿಟೈಸರ್ ಬಸ್ ‘ಸಾರಿಗೆ ಸಂಜೀವಿನಿ’ಗೆ ಚಾಲನೆ

ಬೆಂಗಳೂರು, ಏ.11- ಮೊಬೈಲ್ ಸ್ಯಾನಿಟೈಸರ್ ಬಸ್ ಸಾರಿಗೆ ಸಂಜೀವಿನಿಗೆ ಕೆಎಸ್‍ಆರ್‍ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ್ ಅವರು ಚಾಲನೆ ನೀಡಿದರು. ಕೆಎಸ್‍ಆರ್‍ಟಿಸಿಯ ಬೆಂಗಳೂರು ಕೇಂದ್ರೀಯ ವಿಭಾಗದ ಬಸ್ ಘಟಕ -2ರಲ್ಲಿ ತಾವೇ ಸ್ಯಾನಿಟೈಸರ್ ಸ್ಪ್ರೇಗೆ ಒಳಗಾಗುವ ಮೂಲಕ ಶಿವಯೋಗಿ ಕಳಸದ್ ಚಾಲನೆ ನೀಡಿದರು. ಸಾರ್ವಜನಿಕರ ಅನುಕೂಲಕ್ಕಾಗಿ ಇಂದಿನಿಂದ ಬೆಂಗಳೂರಿನಲ್ಲಿ ಸ್ಯಾನಿಟೈಸರ್ ಬಸ್ ಸಂಚರಿಸಲಿದೆ. ಹತ್ತು ವರ್ಷದ ಹಳೆಯ ಬಸ್‍ಅನ್ನು ಸ್ಯಾನಿಟೈಸರ್ ಬಸ್ ಆಗಿ ಪರಿವರ್ತಿಸಿದ ಕೆಎಸ್‍ಆರ್‍ಟಿಸಿ , ಸುಮಾರು …

Read More »

25 ಸಾವಿರ ಬ್ಯಾಗ್ ಪಡಿತರ ವಿತರಿಸಲಿದ್ದಾರೆ ಪ್ರಜ್ವಲ್ ರೇವಣ್ಣ

ಹಾಸನ: ಕೊರೊನಾ ಲಾಕ್‍ಡೌನ್‍ನಿಂದ ತೊಂದರೆ ಅನುಭವಿಸುತ್ತಿರುವ ಜನರಿಗೆ ಸಹಾಯ ಮಾಡುವ ಸಲುವಾಗಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಜಿಲ್ಲಾ ಪಂಚಾಯಿತಿ ಸದಸ್ಯೆ ಭವಾನಿ ರೇವಣ್ಣ ನೇತೃತ್ವದಲ್ಲಿ ಸುಮಾರು 25 ಸಾವಿರ ದವಸ, ಧಾನ್ಯದ ಬ್ಯಾಗ್ ರೆಡಿ ಮಾಡಲಾಗುತ್ತಿದೆ. ಪ್ರತಿ ಬ್ಯಾಗ್‍ನಲ್ಲಿ ಅಕ್ಕಿ, ಸಕ್ಕರೆ, ಎಣ್ಣೆ ಸೇರಿದಂತೆ ಸುಮಾರು 10 ದಿನಸಿ ಪದಾರ್ಥಗಳು ಇರಲಿವೆ. ಸೋಮವಾರದಿಂದ 25 ಸಾವಿರ ಆಹಾರ ಧಾನ್ಯದ ಬ್ಯಾಗ್‍ಗಳನ್ನು ಜಿಲ್ಲೆಯಾದ್ಯಂತ ಹಂಚಲು ತೀರ್ಮಾನಿಸಲಾಗಿದೆ. ಒಂದೊಂದು ಬ್ಯಾಗ್‍ನಲ್ಲೂ …

Read More »

ಮೂರು ಫಂಡ್‍ಗೆ ತಲಾ 1 ಲಕ್ಷ ಪಿಂಚಣಿ ದೇಣಿಗೆ ನೀಡಿದ ದೇವೇಗೌಡ್ರು

ಬೆಂಗಳೂರು: ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡರು ತಮ್ಮ ಪಿಂಚಣಿ ಹಣವನ್ನು ಕೊರೊನಾ ಪರಿಹಾರ ನಿಧಿಗೆ ದೇಣಿಗೆಯಾಗಿ ನೀಡಿದ್ದಾರೆ. ದೇವೇಗೌಡರು ಪಿಎಂ ಕೇರ್ಸ್ ಫಂಡ್, ಮುಖ್ಯಮಂತ್ರಿ ಪರಿಹಾರ ನಿಧಿ ಮತ್ತು ಕೇರಳ ಸಿಎಂ ಪರಿಹಾರ ನಿಧಿಗೆ ತಲಾ ಒಂದೊಂದು ಲಕ್ಷ ದೇಣಿಗೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ. “ಕೊರೊನಾ ನಿಯಂತ್ರಣ ನಿಧಿಗೆ ನಾನು ಪಡೆಯುವ ಪಿಂಚಣಿ ಹಣವನ್ನು ನೀಡುತ್ತಿದ್ದೇವೆ. ಪಿಎಂ ಕೇರ್ಸ್ ಫಂಡ್, ಕರ್ನಾಟಕ ಮುಖ್ಯಮಂತ್ರಿ …

Read More »

ಹೊಯ್ಸಳ ನಿಮ್ದು, ಪ್ಲೀಸ್ ತುರ್ತು ಪರಿಸ್ಥಿತಿಯಲ್ಲಿ ಉಪಯೋಗಿಸಿಕೊಳ್ಳಿ: ಭಾಸ್ಕರ್ ರಾವ್

ಬೆಂಗಳೂರು: ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಇಡೀ ದೇಶವನ್ನೇ ಲಾಕ್ ಡೌನ್ ಮಾಡಿ ಎಂದು ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅನೇಕ ಮಂದಿ ಮೆಡಿಸಿನ್ ಗಳಿಗೆ ಪರದಾಡುತ್ತಿದ್ದಾರೆ. ಹೀಗಾಗಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಎಲ್ಲರ ಕರೆಗಳನ್ನೂ ಗಂಭೀರವಾಗಿ ತೆಗೆದುಕೊಳ್ಳಲಾಗುತ್ತಿದೆ. ದಯವಿಟ್ಟು ನಿಮ್ಮ ಪೊಲೀಸ್ ಕಾರುಗಳನ್ನು ತುರ್ತು ಸಂದರ್ಭದಲ್ಲಿ ಬಳಸಿಕೊಳ್ಳಿ …

Read More »

ಏಪ್ರಿಲ್ 14ರ ಬಳಿಕ ಸಿಗುತ್ತಾ ಮದ್ಯ? – 2 ದಿನದಲ್ಲಿ ಮದ್ಯ ಪ್ರೇಮಿಗಳ ಈ ಪ್ರಶ್ನೆಗೆ ಶೀಘ್ರವೇ ಶುಭಸುದ್ದಿ ಸಿಗುವ ಲಕ್ಷಣ

ಬೆಂಗಳೂರು: ಏಪ್ರಿಲ್ 14ರ ನಂತರ ಮದ್ಯ ಸಿಗುತ್ತಾ? ಮದ್ಯ ಪ್ರೇಮಿಗಳ ಈ ಪ್ರಶ್ನೆಗೆ ಶೀಘ್ರವೇ ಶುಭಸುದ್ದಿ ಸಿಗುವ ಲಕ್ಷಣ ಕಾಣಿಸಿದೆ. ಏಪ್ರಿಲ್ 30ರವರೆಗೆ ಲಾಕ್‍ಡೌನ್ ವಿಸ್ತರಿಸುವ ಸಂಬಂಧ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸಿಎಂ ಯಡಿಯೂರಪ್ಪ, ಇನ್ನೆರಡು ದಿನದಲ್ಲಿ ನಿರ್ಧಾರವಾಗಲಿದೆ. ಮದ್ಯ ಮಾರಾಟದ ಬಗ್ಗೆಯೂ ಆಗಲೇ ನಿರ್ಧಾರ ಮಾಡುತ್ತೇವೆ. ಪ್ರಧಾನಿ ಮೋದಿ ಮಾರ್ಗಸೂಚಿ ಬಳಿಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ಬಾರ್‍ಗಳಿಗೆ ಅವಕಾಶ ನೀಡದೇ ಎಂಎಸ್‍ಐಎಲ್ ಅಂಗಡಿಗಳ ಮೂಲಕ …

Read More »

ವಿಭಿನ್ನವಾಗಿರಲಿದೆ ಲಾಕ್‌ಡೌನ್: b.s.y.

ವಿಭಿನ್ನವಾಗಿರಲಿದೆ ಲಾಕ್‌ಡೌನ್ ಇನ್ನು ರಾಜ್ಯದಲ್ಲಿ ಲಾಕ್‌ಡೌನ್ ಮುಂದುವರೆದಿದ್ದು ಈ ಎರಡು ವಾರದ ಲಾಕ್‌ಡೌನ್ ವಿಭಿನ್ನವಾಗಿರಲಿದೆ. ಹೇಗೆ ಲಾಕ್‌ಡೌನ್ ಜಾರಿಯಾಗಬೇಕು ಎಂಬುದು ಕೇಂದ್ರ ಮಾರ್ಗಸೂಚಿ ಸಿದ್ದಪಡಿಸಲಿದೆ. ಅದರ ಆಧಾರದ ಮೇಲೆ ಮುಂದಿನ ತೀರ್ಮಾನ ರಾಜ್ಯ ಸರ್ಕಾರ ಕೈಗೊಳ್ಳಲಿದೆ. ವೈದ್ಯರ ಮೇಲೆ ದೌರ್ಜನ್ಯ ನಡೆದರೆ ಕಠಿಣ ಕ್ರಮ ಇನ್ನು ಕೊರೊನಾ ವಿರುದ್ಧ ದುಡಿಯುತ್ತಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿಗಳ ಮೇಲೆ ದೌರ್ಜನ್ಯ ನಡೆದರೆ ಕಠಿಣ ಕ್ರಮ ಜರುಗಿಸಲು ಪ್ರಧಾನಿ ಮೋದಿ ಸೂಚನೆ ನೀಡಿದ್ದಾರೆ. ಕಾಳಸಂತೆಯಲ್ಲಿ …

Read More »

ರೈತರ ಉತ್ಪನ್ನಗಳನ್ನ ಸರ್ಕಾರವೇ ಖರೀದಿಸಿ ಮಾರಾಟ ಮಾಡಲಿ: ಎಚ್‍ಡಿಕೆ

ಸರ್ಕಾರ ಮೂಗಿಗೆ ತುಪ್ಪ ಸವರೋ ಬಗ್ಗೆ ಮಾತನಾಡ್ತಿದೆ – ತಕ್ಷಣವೇ ರೈತರ ನೆರವಿಗೆ ಧಾವಿಸಬೇಕು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.   ಬೆಂಗಳೂರು: ಕೊರೊನಾ ಲಾಕ್‍ಡೌನ್‍ನಿಂದ ರೈತರು ತಾವು ಬೆಳೆದ ಬೆಳೆಯನ್ನು ಮಾರಾಟ ಮಾಡಲಾಗದೇ ಸಂಕಷ್ಟ ಪಡುತ್ತಿದ್ದಾರೆ. ಹೀಗಾಗಿ ರೈತರ ಉತ್ಪನ್ನಗಳನ್ನು ಸರ್ಕಾರವೇ ಖರೀದಿಸಿ ಮಾರಾಟ ಮಾಡಲು ತಡಮಾಡದೇ ಕ್ರಮಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಕುಮಾರಸ್ವಾಮಿ ಈ ಬಗ್ಗೆ ಸರಣಿ ಟ್ವೀಟ್ ಮಾಡುವ ಮೂಲಕ …

Read More »

ಕರ್ನಾಟಕದಲ್ಲಿ ಏ.30ರವರೆಗೆ ಲಾಕ್‍ಡೌನ್ ವಿಸ್ತರಣೆ………..

ಬೆಂಗಳೂರು: ಕೊರೊನಾ ವೈರಸ್ ನಿಯಂತ್ರಿಸುವ ಸಂಬಂಧ ಏಪ್ರಿಲ್ 30ರವರೆಗೆ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಲಾಕ್‍ಡೌನ್ ಮುಂದುವರಿಯಲಿದೆ. ದೇಶಾದ್ಯಂತ ಹೇರಲಾಗಿರುವ 21 ದಿನಗಳ ಲಾಕ್‍ಡೌನ್ ಏ.14ಕ್ಕೆ ಅಂತ್ಯವಾಗಲಿರುವ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ಮೋದಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಈ ಸಂದರ್ಭದಲ್ಲಿ ಲಾಕ್‍ಡೌನ್ ವಿಧಿಸಿದ ಪರಿಣಾಮ ಕೊರೊನಾ ನಿಯಂತ್ರಣಕ್ಕೆ ಬರುತ್ತಿದೆ. ಹೀಗಾಗಿ ಏ.30ರವರೆಗೆ ಲಾಕ್‍ಡೌನ್ ವಿಸ್ತರಿಸಬೇಕೆಂದು ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಮನವಿ ಮಾಡಿದ್ದರು. ಮೋದಿ ಜೊತೆಗಿನ ವಿಡಿಯೋ …

Read More »