Breaking News
Home / ಜಿಲ್ಲೆ / ಬೆಂಗಳೂರು (page 439)

ಬೆಂಗಳೂರು

ಭಾರತದಲ್ಲಿ ಕೊರೊನಾ ಯಾವ ಪ್ರಮಾಣದಲ್ಲಿ ಹರಡುತ್ತಿದೆ?- ಸಂಪೂರ್ಣ ವಿವರ

ಬೆಂಗಳೂರು: ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಆದರೆ ಈ ಏರಿಕೆ ಪ್ರಮಾಣ ಜಗತ್ತಿನ ಇತರೆ ರಾಷ್ಟ್ರಗಳಿಗೆ ಹೋಲಿಸಿದಾಗ ತುಂಬಾ ಕಡಿಮೆ. ಇನ್‍ಸ್ಟಿಟ್ಯೂಟ್ ಆಫ್ ಮೆಥೆಮಟಿಕಲ್ ಸೈನ್ಸ್ ನ ಚೆನ್ನೈ ವಿಜ್ಞಾನಿ ಸಿತಾಭ್ರಾ ಸಿನ್ಹಾ ಪ್ರಕಾರ, ಮಾರ್ಚ್ 19ರ ವೇಳೆ ಭಾರತದಲ್ಲಿ ಕೊರೊನಾ ಪಾಸಿಟಿವ್ ರೋಗಿಯಿಂದ ಸೋಂಕು ಸರಾಸರಿ 1.7 ಜನರಿಗೆ ಹರಡುತ್ತಿತ್ತು. ಮಾರ್ಚ್ 26ಕ್ಕೆ ಈ ಸರಾಸರಿ 1.81ಕ್ಕೆ ಏರಿಕೆ ಕಂಡಿತ್ತು. ಈ ಸರಾಸರಿ …

Read More »

ತಾವು ಬೆಳೆದ ಫಸಲನ್ನು ನಾಶಪಡಿಸಬೇಡಿ : ರೈತರಲ್ಲಿ ಬಿ‌.ಸಿ.ಪಾಟೀಲ್ ಮನವಿ

ಬೆಂಗಳೂರು,ಏ 1-ರೈತರು ತಾವು ಬೆಳೆದ ಫಸಲನ್ನು ರಸ್ತೆಗೆ ಚೆಲ್ಲುವುದಾಗಲೀ, ನಾಶ ಮಾಡುವುದಾಗಲೀ ಮಾಡಬಾರದು. ಕೊರೋನಾ ರೋಗ ಜಗತ್ತಿಗೆ ಎದುರಾದ ಸಮಸ್ಯೆ. ಇದನ್ನು ಯಾರೂ ನಿರೀಕ್ಷಿಸಿರಲಿಲ್ಲ.ಹೀಗಾಗಿ ರೈತರು ಆತುರಕ್ಕೊಳಗಾಗದೇ ತಾಳ್ಮೆಯಿಂದ ಕೃಷಿ ಇಲಾಖೆ ನೀಡುವ ಸಲಹೆಗಳನ್ನು ಅನುಸರಿಸಿ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ರೈತರಿಗೆ ಮನವಿ ಮಾಡಿದ್ದಾರೆ. ರಾಯಚೂರು ಸೇರಿದಂತೆ ಬೇರೆ ಯಾವುದೇ ಭಾಗದಲ್ಲಿ ರೈತರ ಬೆಳೆ ಸಮೀಕ್ಷೆಯಾಗದೇ ಇದ್ದದ್ದು ಕಂಡುಬಂದಲ್ಲಿ ತಕ್ಷಣವೇ ಸಮೀಕ್ಷೆ ಕೈಗೊಳ್ಳಬೇಕು ಎಂದು ಕೃಷಿ ಅಧಿಕಾರಿಗಳಿಗೆ ಕೃಷಿ …

Read More »

ಕೊರೋನಾ ಪರಿಹಾರಕ್ಕೆ 100ಕೋಟಿ ರೂ. ದೇಣಿಗೆ ನೀಡಿದ ಇನ್ಫೋಸಿಸ್ ಫೌಂಡೇಷನ್‌

ಬೆಂಗಳೂರು, 31 ಮಾರ್ಚ್ 2020: ಇನ್ಫೋಸಿಸ್‌ನ ಸಿಎಸ್‌ಆರ್ ಮತ್ತು ಜನೋಪಕಾರಿ ಸಂಸ್ಥೆಯಾಗಿರುವ ಇನ್ಫೋಸಿಸ್ ಫೌಂಡೇಷನ್ ದೇಶದಲ್ಲಿ ಕೋವಿಡ್-19 ವಿರುದ್ಧ ಹೋರಾಟಕ್ಕೆ ಒಟ್ಟು 100 ಕೋಟಿ ರೂಪಾಯಿಗಳ ದೇಣಿಗೆಯನ್ನು ನೀಡುವುದಾಗಿ ಘೋಷಿಸಿದೆ. ಈ ಹಣದಲ್ಲಿ ಪಿಎಂ ಕೇರ್‍ಸ್ ನಿಧಿಗೆ 50 ಕೋಟಿ ರೂಪಾಯಿಗಳನ್ನು ನೀಡಲಿದೆ. ದೇಶಾದ್ಯಂತ ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡಲು ನೆರವಾಗಲು ಮತ್ತು ಈ ಚಿಕಿತ್ಸೆಗಾಗಿಯೇ ಆಸ್ಪತ್ರೆಗಳ ಸಾಮರ್ಥ್ಯವನ್ನು ವಿಸ್ತರಣೆ ಮಾಡಲು ಬಳಸಿಕೊಳ್ಳಲಾಗುತ್ತದೆ. ವಿಶೇಷವಾಗಿ ಸಮಾಜದಲ್ಲಿ ಆರ್ಥಿಕವಾಗಿ ದುರ್ಬಲ ವರ್ಗದ …

Read More »

ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕಿಂಗ್​ ಸುದ್ದಿ ಮದ್ಯ ಮಾರಾಟದ ಮೇಲಿನ ನಿರ್ಬಂಧ ಏಪ್ರಿಲ್ 14ರವರೆಗೆ ಮುಂದುವರಿಯಲಿದೆ.

ಬೆಂಗಳೂರು: ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕಿಂಗ್​ ಸುದ್ದಿಯನ್ನು ಕೊಟ್ಟಿದೆ. ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಏಪ್ರಿಲ್ 14 ರವರೆಗೆ ಮದ್ಯ ಮಾರಾಟ ಬಂದ್​​ ಮಾಡಿ ಆದೇಶ ಹೊರಡಿಸಿದೆ.  ಅಬಕಾರಿ ಇಲಾಖೆ ಆಯುಕ್ತರು ಮಾರ್ಚ್​ 21 ಹೊರಡಿಸಿದ್ದ ಆದೇಶದ ಪ್ರಕಾರ ಮಾರ್ಚ್​ 31ರ ಮಧ್ಯರಾತ್ರಿಗೆ ಮದ್ಯ ಮಾರಾಟ ನಿಷೇಧ ಅಂತ್ಯವಾಗಲಿತ್ತು. ಆದರೆ, ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ  ಹಿನ್ನೆಲೆಯಲ್ಲಿ ಮದ್ಯ ಮಾರಾಟದ ಮೇಲಿನ ನಿರ್ಬಂಧ ಏಪ್ರಿಲ್ …

Read More »

5 ಲಕ್ಷ ದೇಣಿಗೆ ನೀಡಿದ ಬಿಗ್‍ಬಾಸ್ ಸ್ಪರ್ಧಿ ದೀಪಿಕಾ ದಾಸ್

ಬೆಂಗಳೂರು: ಕೊರೊನಾ ಸೋಂಕಿತರ ನೆರವಿಗಾಗಿ ಈಗಾಗಲೇ ಕೆಲ ನಟ-ನಟಿಯರು ತಮ್ಮ ಕೈಲಾದ ಸಹಾಯವನ್ನು ಮಾಡುತ್ತಿದ್ದಾರೆ. ಇದೀಗ ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ರ ಸ್ಪರ್ಧಿ ದೀಪಿಕಾ ದಾಸ್ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಲಕ್ಷ ದೇಣಿಗೆ ನೀಡಿದ್ದಾರೆ. ದೀಪಿಕಾ ದಾಸ್ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಲಕ್ಷ ದೇಣಿಗೆ ನೀಡಿರುವ ಬಗ್ಗೆ ಇನ್‍ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. “ಮಾನವೀಯತೆಗಾಗಿ, ನಮ್ಮ ದೇಶ ಮತ್ತು ನಮ್ಮ ಸಹ ನಾಗರಿಕರಿಗಾಗಿ ಸಹಾಯ ಮಾಡುವ ಸಮಯ …

Read More »

ಮಾಸ್ಕ್ ಯಾರು ಧರಿಸಬೇಕು? ಎಲ್ಲರಿಗೂ ಕಡ್ಡಾಯವಲ್ಲ – ಆರೋಗ್ಯ ಇಲಾಖೆಯಿಂದ ಸ್ಪಷ್ಟನೆ

ಬೆಂಗಳೂರು: ಕೊರೊನಾ ಭೀತಿಯಿಂದಾಗಿ ಈಗ ರಸ್ತೆಗೆ ಇಳಿಯುವ ಮುನ್ನ ಮಾಸ್ಕ್ ಧರಿಸಿರಬೇಕೆಂಬ ಸುದ್ದಿ ಹರಿದಾಡುತ್ತಿದೆ. ಈ ಸುದ್ದಿಗೆ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದ್ದು, ಎಲ್ಲರೂ ಮಾಸ್ಕ್ ಧರಿಸುವ ಅಗತ್ಯವಿಲ್ಲ ಎಂದು ಹೇಳಿದೆ. ಕೆಲವು ಸೂಪರ್ ಮಾರ್ಕೆಟ್‍ಗಳಲ್ಲಿ, ದಿನಸಿ ಅಂಗಡಿಗಳಲ್ಲಿ ಮಾಸ್ಕ್ ಧರಿಸದ ವ್ಯಕ್ತಿಗಳಿಗೆ ಪ್ರವೇಶ ನಿರಾಕರಿಸುತ್ತಿರುವ ಹಿನ್ನೆಲೆಯಲ್ಲಿಯಲ್ಲಿ ಆರೋಗ್ಯ ಇಲಾಖೆ ಆಯುಕ್ತರು ಸುತ್ತೋಲೆ ಬಿಡುಗಡೆ ಮಾಡಿ ಯಾರು ಧರಿಸಬೇಕು? ಯಾರು ಮಾಸ್ಕ್ ಧರಿಸಬಾರದು ವಿಚಾರಕ್ಕೆ ಸ್ಪಷ್ಟನೆ ನೀಡಿದ್ದಾರೆ. ಅಷ್ಟೇ ಅಲ್ಲದೇ …

Read More »

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ದೇಣಿಗೆ ನೀಡಿದ್ದಾರೆ.

ರಾಜ್ಯದಲ್ಲಿ ಮಾರಣಾಂತಿಕ ಕೊರೊನಾ ವೈರಸ್ ಹೆಚ್ಚುತ್ತಿದ್ದು, ಕೊವಿಡ್-19 ಸೋಂಕಿನ ವಿರುದ್ಧ ಹೋರಾಡಲು ಹಲವರು ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಈ ನಡುವೆ ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ದೇಣಿಗೆ ನೀಡಿದ್ದಾರೆ. ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ನಟ ಪುನೀತ್ ರಾಜ್ ಕುಮಾರ್, ಮುಖ್ಯಮಂತ್ರಿಗಳಿಗೆ 50 ಲಕ್ಷ ಚೆಕ್ ಹಸ್ತಾಂತರಿಸಿದ್ದಾರೆ. ಈ ವೇಳೆ ಡಿಸಿಎಂ …

Read More »

ರೈತರ ಅನುಕೂಲಕ್ಕಾಗಿ ಕಂಟ್ರೋಲ್ ರೂಮ್ ಆರಂಭ …….”

ಬೆಂಗಳೂರು,ಮಾ.31-ರೈತರ ಅನುಕೂಲಕ್ಕಾಗಿ ಕೃಷಿ ಇಲಾಖೆಯು ಕೃಷಿ ನಿಯಂತ್ರಣ ಕೊಠಡಿ ಆರಂಭಿಸಿದ್ದು, ನಿರ್ವಹಣೆಗೆ ನಾಲ್ವರು ಸಿಬ್ಬಂದಿಯನ್ನು ನಿಯೋಜಿಸಿದೆ. ಕೃಷಿ ಇಲಾಖೆಯಲ್ಲಿನ ಮುಖ್ಯ ಕಚೇರಿಯಲ್ಲಿನ ನಿಯಂತ್ರಣ ಕೊಠಡಿ ಸಂಖ್ಯೆಗಳು 08022211764 ಮತ್ತು 08022212818. ಈ ಸಂಖ್ಯೆಗಳು ಇಂದು ಬೆಳಿಗ್ಗೆ 11.00 ರಿಂದ ಸಕ್ರಿಯವಾಗಿರುತ್ತವೆ. ನಿಯಂತ್ರಣ ಕೊಠಡಿಯಲ್ಲಿ ಸ್ಮಿತಾ ಮತ್ತು ವೀಣಾ ಎಂಬುವರು ಬೆಳಗ್ಗೆ 8.00 ರಿಂದ ಮಧ್ಯಾಹ್ನ 2.00 ಗಂಟೆವರೆಗೆ ಹಾಗೂ ರೇಮಗೌಡ ಮತ್ತು ವಿಶ್ವನಾಥ್ ಎಂಬುವರು ಮಧ್ಯಾಹ್ನ 2.00 ರಿಂದ ರಾತ್ರಿ …

Read More »

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 98ಕ್ಕೆ ತಲುಪಿದ್ದು, ಶತಕದ ಗಡಿಯಲ್ಲಿದೆ.

ಬೆಂಗಳೂರು, ಮಾ.31- ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 98ಕ್ಕೆ ತಲುಪಿದ್ದು, ಶತಕದ ಗಡಿಯಲ್ಲಿದೆ. ಈ ನಡುವೆ ನಿನ್ನೆ ಸಂಜೆಯಿಂದ ಇಂದು ಬೆಳಗ್ಗೆಯವರೆಗೆ ಹೊಸದಾಗಿ 10 ಮಂದಿ ಸೋಂಕಿತರು ಪತ್ತೆಯಾಗಿದ್ದಾರೆ. ಆರೋಗ್ಯ ಇಲಾಖೆ ಹೊರಡಿಸಿರುವ ಬುಲೇಟಿನ್‍ ಬಿಡುಗಡೆ ಮಾಡಿದ್ದು, ಅದರಲ್ಲಿ ನಿನ್ನೆ ಸಂಜೆಯವರೆಗೆ 88 ಮಂದಿ ಸೋಂಕಿತರಿದ್ದರು, ಅಲ್ಲಿಂದ ಇಂದಿನ ವರೆಗೆ 98 ಮಂದಿ ಸೋಂಕಿತರು ಪತ್ತೆಯಾಗಿದ್ದಾರೆ. ಈವರೆಗೆ ಮೂರು ಮಂದಿ ಸಾವನ್ನಪ್ಪಿದ್ದರೆ ಆರು ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಹೊಸದಾಗಿ ಪತ್ತೆಯಾದ …

Read More »

ಏಪ್ರಿಲ್ 12ರಿಂದ ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ

ಬೆಂಗಳೂರು: ಕೊರೊನಾ ಹರಡುವಿಕೆ ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ ಮಾಡಿದೆ. ಕೊರೊನಾ ವೈರಸ್ ದೇಶದಲ್ಲಿ ಜಾಸ್ತಿಯಾದ ಕಾರಣ ಈ ಮೊದಲೇ ಶಾಲೆಗಳಿಗೆ ಏಪ್ರಿಲ್ 11ರ ವರೆಗೆ ರಜೆ ಘೋಷಣೆ ಮಾಡಲಾಗಿತ್ತು. ಈಗ ಕೊರೊನಾ ವೈರಸ್ ಹರಡುವಿಕೆ ಹೆಚ್ಚಳವಾದ ಕಾರಣ ಏಪ್ರಿಲ್ 12ರಿಂದ ರಾಜ್ಯದ ಎಲ್ಲಾ ಶಾಲೆಗಳಿಗೆ ಬೇಸಿಗೆ ರಜೆಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಇದರ ಜೊತೆಗೆ ಸುತ್ತೋಲೆಯಲ್ಲಿ ಶಿಕ್ಷಕರಿಗೆ ಕೆಲ ನಿಯಮಗಳನ್ನು ಸೂಚಿಸಿರುವ …

Read More »