ಬೆಂಗಳೂರು: ವಿಧಾನಸಭೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಬಂಗಾರಪೇಟೆ ತಾಲ್ಲೂಕಿನ ಯರಗೋಳ್ ಜಲಾಶಯ ಉದ್ಘಾಟನೆ ವಿಳಂಬ ಕುರಿತು ಮಾತನಾಡಿದ್ದ ಕೆ.ಆರ್. ರಮೇಶ್ ಕುಮಾರ್, ‘ನರಗಳ ದೌರ್ಬಲ್ಯ ಇದ್ದಾಗ ಮಕ್ಕಳು ಆಗುವುದು ವಿಳಂಬವಾಗುತ್ತದೆ’ ಎಂದು ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದರು. ರಮೇಶ್ ಕುಮಾರ್ ಹೇಳಿಕೆಗೆ ಟ್ವಿಟರ್‌ನಲ್ಲಿ ಆಕ್ಷೇಪ ವ್ಯಕ್ತಪಡಿಸಿರುವ ಕುಮಾರಸ್ವಾಮಿ, ‘ವಿಕೃತ, ಕೊಳಕು ಮನಃಸ್ಥಿತಿಯ ಮಾಜಿ ಸ್ಪೀಕರ್ ರಮೇಶ್ ಕುಮಾರ್, ನಾಲಿಗೆ ಮತ್ತು ಮಿದುಳಿನ …
Read More »ಸಾಹುಕಾರ ರಮೇಶ್ ಜಾರಕಿಹೊಳಿ ರಾಜಕೀಯ ನಡೆ ನಿಗೂಢ:
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಸಚಿವ ಸಂಪುಟ ವಿಸ್ತರಣೆಯ ನಿರೀಕ್ಷೆ ಇನ್ನೂ ಜೀವಂತವಾಗಿದ್ದು, ಪಕ್ಷದ ತೀರ್ಮಾವನ್ನು ನೋಡಿಕೊಂಡು ಕೆಲವು ನಾಯಕರು ತಮ್ಮ ರಾಜಕೀಯ ಭವಿಷ್ಯದ ನಿರ್ಧರಿಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ಮೈತ್ರಿ ಸರಕಾರ ಪತನವಾಗಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಗೋಕಾಕ್ ಶಾಸಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ರಾಜಕೀಯ ನಡೆ ನಿಗೂಢವಾಗಿದ್ದು, ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಕ್ಕಾಗಿ …
Read More »2023ರ ವಿಧಾನಸಭೆ ಚುನಾವಣೆಗೆ ತಾಲೀಮು
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ರಾಜ್ಯ ರಾಜಕಾರಣದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಜೆಡಿಎಸ್ ಜನತಾ ಜಲಧಾರೆ ಸಮಾವೇಶದ ಮೂಲಕ ಈಗಾಗಲೇ ಚುನಾವಣಾ ರಣಕಹಳೆ ಮೊಳಗಿಸಿದೆ. ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಆಚರಿಸುವ ಮೂಲಕ ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಸಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕರ್ನಾಟಕ ಭೇಟಿ ಚುನಾವಣಾ ಸಿದ್ಧತೆಗೆ ಮುನ್ನುಡಿ ಎಂದೇ ಅರ್ಥೈಸಬಹುದು. ಬಿಜೆಪಿ ಸರ್ಕಾರಕ್ಕೆ ಮೂರು ವರ್ಷ ಹಾಗೂ ಸಿಎಂ …
Read More »ಬಿಗ್‌ಬಾಸ್ ಕನ್ನಡ ಒಟಿಟಿ ಸೀಸನ್-1 ಇಂದು ಆರಂಭ ಮೊದಲ ಸ್ಪರ್ಧಿಯಾಗಿ ಆರ್ಯವರ್ಧನ್ ಗುರೂಜಿ
ಬಹುನಿರೀಕ್ಷಿತ ಬಿಗ್‌ಬಾಸ್ ಕನ್ನಡ ಒಟಿಟಿ ಸೀಸನ್-1 ಇಂದು ಆರಂಭವಾಗಿದ್ದು ಮೊದಲ ಸ್ಪರ್ಧಿಯಾಗಿ ಆರ್ಯವರ್ಧನ್ ಗುರೂಜಿ ಬಿಗ್‌ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಸಾಕಷ್ಟು ಕಾಂಟ್ರವರ್ಸಿ ಜೊತೆ ತಮ್ಮ ಜೋತಿಷ್ಯದ ಮೂಲಕ ಚಿರಪರಿಚಿತರಾದ ಆರ್ಯವರ್ಧನ್ ಗುರೂಜಿ ಈಗ ಬಿಗ್‌ಬಾಸ್ ಕನ್ನಡ ಒಟಿಟಿ ಸೀಸನ್-1ರ ಮೊದಲ ಸ್ಪರ್ಧಿಯಾಗಿದ್ದಾರೆ. ಇನ್ನೂಆರ್ಯವರ್ಧನ್ ಗುರೂಜಿಯನ್ನಸ್ಟೇಜ್ ಮೇಲೆ ಬರಮಾಡಿಕೊಂಡ ಅಭಿನಯ ಚಕ್ರವರ್ತಿ ಸುದೀಪ್ ಅವರು, ಆರ್ಯವರ್ಧನ್ ಜೊತೆ ಕೆಲಕಾಲ ಮಾತನಾಡಿದರು. ಈ ವೇಳೆ ಮಾತನಾಡೋದಕ್ಕೆ ತುಂಬಾ ಚಡಪಡಿಸುತ್ತಿದ್ದ ಆರ್ಯವರ್ಧನ್ …
Read More »BJP ಗೆ ಸೆಡ್ಡು ಹೊಡೆಯುತ್ತಾ ಹಿಂದೂಸ್ಥಾನ ಜನತಾ ಪಾರ್ಟಿ ಪಕ್ಷ ?
ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಬಿಜೆಪಿಗೆ ಸೆಡ್ದು ಹೊಡೆಯುವ ನಿಟ್ಟಿನಲ್ಲಿ ಹೊಸದೊಂದು ರಾಜಕೀಯ ಪಕ್ಷ ಉದಯವಾಗಲಿದ್ದು, ನಾಳೆ ನೂತನ ಪಕ್ಷಕ್ಕೆ ಚಾಲನೆ ದೊರೆಯಲಿದೆ. ವಿನಾಯಕ ಮಾಳದಕರ್ ನೇತೃತ್ವದಲ್ಲಿ ಹಿಂದೂಸ್ಥಾನ ಜನತಾ ಪಾರ್ಟಿ ಎಂಬ ಹೊಸ ಪಕ್ಷ ಅಸ್ತಿತ್ವಕ್ಕೆ ಬರಲಿದ್ದು, ಬೆಂಗಳೂರಿನ ರಾಜಾಜಿನಗರದಲ್ಲಿರುವ ಶರಣ ಸೇವಾ ಸಮಾಜದಲ್ಲಿ ನಾಳೆ ಉದ್ಘಾಟನಾ ಸಮಾರಂಭ ನಡೆಯಲಿದೆ. ನಾಳೆ ಶರಣ ಸೇವಾ ಸಮಾಜದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಸಭೆ ಬಳಿಕ ಮಠಾಧೀಶರಿಂದಲೇ ಹಿಂದೂಸ್ಥಾನ ಜನತಾ …
Read More »ಸಂಪುಟ ವಿಸ್ತರಣೆಗಾಗಿ ದಿಲ್ಲಿಗೆ ಬರುವುದು ಬೇಡ..: ರಾಜ್ಯ ನಾಯಕರಿಗೆ ಶಾ ಖಡಕ್ ಸಂದೇಶ
ಬೆಂಗಳೂರು: ಸಂಪುಟ ವಿಸ್ತರಣೆ ಬಗ್ಗೆ ಅನುಮತಿ ಕೇಳುವುದಕ್ಕಾಗಿ ಯಾರೂ ದಿಲ್ಲಿಗೆ ಬರುವುದು ಬೇಡ. ವಿಸ್ತರಣೆ ಮಾಡುವಾಗ ನಾವೇ ಹೇಳುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ರಾಜ್ಯ ನಾಯಕರಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ಅವರು ಈ ವಿಚಾರವನ್ನು ತಿಳಿಸಿದ್ದಾರೆ. ಸಿಎಂ ಬೊಮ್ಮಾಯಿ ಹಾಗೂ ಅವರ ಪ್ರತಿನಿಧಿಯಾಗಿ ಕಂದಾಯ ಸಚಿವ ಆರ್.ಅಶೋಕ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿರುವ ಅವರು, ಸಂಪುಟ …
Read More »ಕರಾವಳಿ ಘಟನೆ ಮಾಹಿತಿ ಪಡೆದ ಕೇಂದ್ರ ಗೃಹ ಸಚಿವ: ಆರಗ ವಿರುದ್ಧ ಶಾ ಗರಂ
ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಘಟನೆಗಳ ಕುರಿತು ಮಾಹಿತಿ ಪಡೆದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪ್ರಕರಣಗಳನ್ನು ಸರಿಯಾಗಿ ನಿರ್ವಹಿಸದಿರುವ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಗರಂ ಆಗಿದ್ದಾರೆ. ಕಾರ್ಯಕರ್ತರ ರಕ್ಷಣೆ ಮತ್ತು ವಿಶ್ವಾಸ ಗಳಿಸಲು ಪ್ರಯತ್ನಿಸುವಂತೆ ಸಿಎಂ ಬಸವ ರಾಜ ಬೊಮ್ಮಾಯಿಗೆ ಸೂಚಿಸಿದ್ದಾರೆ. ಕೇಂದ್ರ ಸಂಸ್ಕೃತಿ ಸಚಿವಾಲಯ ಆಯೋಜಿಸಿದ್ದ “ಸಂಕಲ್ಪ್ ಸೆ ಸಿದ್ಧಿ’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿದ್ದ ಶಾ, ಗುರುವಾರ ಬೆಳಗ್ಗೆ ಸಿಎಂ …
Read More »ಸಿದ್ದರಾಮಯ್ಯಗೆ ಶುಭ ಕೋರಿದವರ ಮೇಲೆ ಬಿತ್ತು ಕೇಸ್
ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಕಾಂಗ್ರೆಸ್ ಮುಖಂಡರಿಗೆ ಬಿಬಿಎಂಪಿ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಪಾಲಿಕೆಯಿಂದ ಅನುಮತಿ ಪಡೆಯದೆ ಬೃಹತ್ ಬ್ಯಾನರ್ ಅಳವಡಿಸಿದ್ದವರ ವಿರುದ್ಧ ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ. ವಸಂತನಗರ ಉಪ ವಿಭಾಗ ಪಾಲಿಕೆ ಸಹಾಯಕ ಕಂದಾಯ ಅಧಿಕಾರಿ ಬಿ.ವಿ. ವೀಣಾ, ದೂರು ನೀಡಿದ್ದಾರೆ. ಇದರ ಮೇರೆಗೆ ಕಾಂಗ್ರೆಸ್ ಮುಖಂಡರಾದ ಟಿ.ಎಸ್. ರಮೇಶ್ ಬಾಬು ಮತ್ತು ಜಯಬಾಲ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು …
Read More »ತಡರಾತ್ರಿ ಬೆಂಗಳೂರಿಗೆ ಆಗಮಿಸಿದ ಅಮಿತ್ ಶಾ
ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಧಿಕೃತ ಕಾರ್ಯಕ್ರಮದ ನಿಮಿತ್ತ ಬುಧವಾರ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಆಗಮಿಸಿದ ಅಮಿತ್ ಶಾ ಅವರನ್ನು ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬರಮಾಡಿಕೊಂಡಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಅಮಿತ್ ಶಾ ಅವರು ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಕೇಂದ್ರ ಸಂಸ್ಕೃತಿ …
Read More »ರಾಜ್ಯ ಸರ್ಕಾರದಿಂದ `SC-ST’ ಸಮುದಾಯಕ್ಕೆ ಸಿಹಿಸುದ್ದಿ : ಶೀಘ್ರವೇ ಉಚಿತ ವಿದ್ಯುತ್ ಅನುಷ್ಠಾನ
ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಳಿಗೆ ಉಚಿತವಾಗಿ 75 ಯೂನಿಟ್ ವಿದ್ಯುತ್ ನೀಡುವ ಯೋಜನೆಯನ್ನು ಶೀಘ್ರವೇ ಅನುಷ್ಠಾನಗೊಳಿಸಬೇಕೆಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದ್ದಾರೆ. ವಿಕಾಸಸೌಧದಲ್ಲಿ ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ಎಸ್ ಸಿ, ಎಸ್ ಟಿ ಸಮುದಾಯಕ್ಕೆ ಇಂಧನ ಇಲಾಖೆ ಜಾರಿಗೆ ತಂದಿರುವ ಉಚಿತ ವಿದ್ಯುತ್ ಯೋಜನೆಯನ್ನು ತ್ವರಿತವಾಗಿ ಜಾರಿಗೆ …
Read More »