Breaking News

ಬೆಂಗಳೂರು

ಒಂದೇ ದಿನ ರಾಜ್ಯದಲ್ಲಿ ಅತಿ ಹೆಚ್ಚು 34 ಮಂದಿಗೆ ಕೊರೊನಾ……….

ಕರ್ನಾಟಕದಲ್ಲಿ ಸೊಂಕಿತರ ಸಂಖ್ಯೆ 313ಕ್ಕೆ ಏರಿಕೆ – ಬೆಳಗಾವಿಯಲ್ಲಿ ಒಟ್ಟು 36, ಮೈಸೂರಿನಲ್ಲಿ 61ಕ್ಕೆ ಏರಿಕೆ ಒಂದೇ ದಿನ ರಾಜ್ಯದಲ್ಲಿ ಅತಿ ಹೆಚ್ಚು 34 ಮಂದಿಗೆ ಕೊರೊನಾ ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ ಅತಿ ಹೆಚ್ಚು 34 ಪ್ರಕರಣಗಳು ಬೆಳಕಿಗೆ ಬಂದಿದ್ದು, ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 313ಕ್ಕೆ ಏರಿಕೆಯಾಗಿದೆ. ಬೆಳಗಾವಿಯಲ್ಲಿ 12, ವಿಜಯಪುರದಲ್ಲಿ 7, ಬೆಂಗಳೂರು 5, ಮೈಸೂರು 3, ಕಲಬುರಗಿ, ಗದಗ್ ಜಿಲ್ಲೆಯಲ್ಲಿ ಒಂದೊಂದು ಪ್ರಕರಣ …

Read More »

ಕೊರೊನಾ ಮಧ್ಯೆ ಏಕವಚನದಲ್ಲೇ ಸಚಿವರ ಕಿತ್ತಾಟ………

ಬೆಂಗಳೂರು: ಸಚಿವರ ಸಭೆಯಲ್ಲಿ ಏರು ಧ್ವನಿಯಲ್ಲಿ, ಏಕವಚನದಲ್ಲೇ ಸಚಿವ ಎಸ್.ಟಿ ಸೋಮಶೇಖರ್ ಹಾಗೂ ನಾರಾಯಣಗೌಡ ಕಿತ್ತಾಡಿಕೊಂಡಿದ್ದಾರೆ. ವಿಕಾಸಸೌಧದಲ್ಲಿ ನಡೆದ ಸಚಿವರ ಸಭೆಯಲ್ಲಿ ಈ ಇಬ್ಬರು ಸಚಿವರು ಕಿತ್ತಾಡಿಕೊಂಡಿದ್ದಾರೆ. ತಮ್ಮ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸೋಮಶೇಖರ್ ಹಾಗೂ ನಾರಾಯಣಗೌಡ ಒಬ್ಬರ ಮೇಲೊಬ್ಬರು ವಾಗ್ದಾಳಿ ನಡೆಸಿದ್ದಾರೆ. ಲಾಕ್‍ಡೌನ್ ವಿಚಾರದಲ್ಲಿ ಕೃಷಿ, ತೋಟಗಾರಿಕೆ ಉತ್ಪನ್ನಗಳ ಸುಗಮ ಸಾಗಾಟ ಸಂಬಂಧ ನಡೆಯುತ್ತಿರುವ ಸಭೆಯಲ್ಲಿ ಹೋಗೋ, ಬಾರೋ ಎಂದು ಏಕವಚದಲ್ಲಿ ಸಚಿವರು ಜಗಳವಾಡಿದ್ದಾರೆ. ಇತ್ತ …

Read More »

ದೇಶದಲ್ಲಿ 1,118 ಕ್ಕೂ ಹೆಚ್ಚು ಹೊಸ ಕೊರೋನಾ ಪ್ರಕರಣ ದಾಖಲಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 12,000ದ ಗಡಿ ಸಮೀಪಿಸಿದೆ

ಬೆಂಗಳೂರು : ದೇಶಾದ್ಯಂತ ಎರಡನೇ ಅವಧಿ ಲಾಕ್ ಡೌನ್ ಜಾರಿಗೆ ಬಂದಿದ್ದರೂ ಕೂಡ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಈ ವರೆಗೆ ದೇಶದಲ್ಲಿ 1,118 ಕ್ಕೂ ಹೆಚ್ಚು ಹೊಸ ಕೊರೋನಾ ಪ್ರಕರಣ ದಾಖಲಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 12,000ದ ಗಡಿ ಸಮೀಪಿಸಿದೆ. ಭಾರತದಲ್ಲಿ ಈವರೆಗೆ 11,933 ಪ್ರಕರಣ ದಾಖಲಾಗಿದೆ. ಈ ಪೈಕಿ 10,197 ರೋಗಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 1,343 ಜನರು ಗುಣಮುಖರಾಗಿದ್ದಾರೆ. 24 ಗಂಟೆಯಲ್ಲಿ ಒಟ್ಟು 40 …

Read More »

ಇಂದು ಬೆಂಗಳೂರಿನಲ್ಲಿ ಡೆಡ್ಲಿ ಕೊರೊನಾ ಮತ್ತೊಂದು ಬಲಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮರಣ ಮೃದಂಗ ಮುಂದುವರೆದಿದೆ. ಇಂದು ಬೆಂಗಳೂರಿನಲ್ಲಿ ಡೆಡ್ಲಿ ಕೊರೊನಾ ಮತ್ತೊಂದು ಬಲಿ ಪಡೆದುಕೊಂಡಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆತಿಹೆಚ್ಚು ಕೊರೊನಾ ಸೋಂಕು ಪತ್ತೆಯಾಗುತ್ತಿದ್ದು, ಬೆಂಗಳೂರು ಕೊರೊನಾ ಹಾಟ್ ಸ್ಪಾಟ್ ಎಂದು ಈಗಾಗಲೇ ಘೋಷಿಸಲಗಿದೆ. ಎಷ್ಟೇ ಮುಂಜಾಗೃತ ಕ್ರಮಗಳನ್ನು ಕೈಗೊಂಡರೂ ಕೂಡ ಕೊರೊನ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಇಂದು ಬೆಂಗಳೂರಿನಲ್ಲಿ 66 ವರ್ಷದ ವ್ಯಕ್ತಿಯೊಬ್ಬರು …

Read More »

ಚಾಮರಾಜನಗರ:ಆಹಾರ ಕಿಟ್ ವಿತರಿಸಿ ಮಾನವೀಯತೆ ಮೆರೆದ ಟಿಬೇಟಿಯನ್ ಕ್ಯಾಂಪ್ ಜನತೆ

ಚಾಮರಾಜನಗರ: ಕೊರೊನಾ ತುರ್ತು ಪರಿಸ್ಥಿತಿ ಹಿನ್ನೆಲೆ ಮುಂದಿನ ಜೀವನ ನಿರ್ವಹಣೆಗೆ ಹೇಗೆ ಎಂದು ಕಂಗಾಲಾಗಿರುವ ಗಿರಿಜನ ಹಾಡಿಗಳ ಜನರಿಗೆ ಜಿಲ್ಲೆಯ ಹನೂರು ತಾಲೂಕಿನ ಒಡೆಯರಪಾಳ್ಯ ಸಮೀಪದ ಟಿಬೇಟಿಯನ್ ಸೆಟ್ಲೆಮೆಂಟ್ ಯೂನಿಯನ್ ಸಿಬ್ಬಂದಿ ಆಹಾರ ಸಾಮಗ್ರಿಗಳ ಕಿಟ್ ವಿತರಿಸಿ ಮಾನವೀಯತೆ ಮೆರೆದಿದ್ದಾರೆ. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶವನ್ನೇ ಲಾಕ್‍ಡೌನ ಮಾಡಿದೆ. ಇದರಿಂದ ದಿನಗೂಲಿ ಕಾರ್ಮಿಕರಿಗೆ ಜೀವನ ನಡೆಸುವುದು ಕಷ್ಟಕರವಾಗಿದೆ. ತುತ್ತು ಅನ್ನಕ್ಕೂ ಪರದಾಡುವಂತಾಗಿದೆ. ಪರಿಸ್ಥಿತಿ ಅರಿತ ಹನೂರು ತಾಲೂಕಿನ …

Read More »

ಸುಮಲತಾ ಮಾಡಬೇಕಾದ ಕೆಲಸ ಮಾಡಿದ ಡಿಕೆ ಬ್ರದರ್ಸ್​:

ಬೆಂಗಳೂರು(ಏ.15): ಲಾಕ್​​ಡೌನ್​​ನಿಂದಾಗಿ ಮಂಡ್ಯದಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಂಕಷ್ಟ ಸಿಲುಕಿರುವ ಮಂಡ್ಯ ರೈತರಿಗೆ ಇದೀಗ ಪಕ್ಕದ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಆಪತ್ಬಾಂಧವ ಆಗಿದ್ದಾರೆ. ತಮ್ಮ ಕ್ಷೇತ್ರದಲ್ಲಿ ರೈತರ ಪರಿಸ್ಥಿತಿ ಕಂಡು ಅನ್ನಾದತರು ಬೆಳೆದ ಬೆಳೆಗಳನ್ನು ತಮ್ಮ ಟ್ರಸ್ಟ್ ವತಿಯಿಂದ ಖರೀದಿಸಿ ಜನರಿಗೆ ಸಂಸದ ಸುರೇಶ್ ಉಚಿತವಾಗಿ ಹಂಚಿ ಮಾನವೀಯತೆ ಮೆರೆಯುತ್ತಿದ್ಧಾರೆ. ಈ ಮೂಲಕ ಬೆಳೆ ಬೆಳೆದ ರೈತರ ನೆರವಿಗೂ ನಿಂತಿದ್ದಾರೆ. ಸಂಸದ ಸುರೇಶ್ ರೈತರಿಂದ ಬೆಳೆ ಖರೀದಿಸುತ್ತಿರುವ …

Read More »

ಔಷಧಿ ಆಮದು: ಕೊರೋನಾ ಬಳಿಕ ಭಾರತದಿಂದ ಚೀನಾಗೆ ತೆರಳಿದ ಮೊದಲ ವಿಮಾನ ಸ್ಪೇಸ್ ಜೆಟ್!

ನವದೆಹಲಿ(ಏ.15): ಭಾರತದಲ್ಲಿ ಕೊರೋನಾ ವೈರಸ್​ ಆರ್ಭಟ ಮುಂದುವರಿದಿದೆ. ಈ ಮಾರಕ ಕೋವಿಡ್​​​-19 ತಡೆಗೆ ಭಾರತ ಸರ್ಕಾರವೂ ಭಾರೀ ಕಸರತ್ತು ನಡೆಸುತ್ತಿದೆ. ಹಾಗಾಗಿಯೇ ಇಂದು ಚೀನಾದಿಂದ ಔಷಧಿ ಆಮದು ಮಾಡಿಕೊಳ್ಳಲು ಭಾರತದಿಂದ ಸ್ಪೇಸ್​​ ಜೆಟ್​​ ವಿಮಾನ ಪ್ರಯಾಣ ಬೆಳೆಸಿದೆ. ಕೊರೋನಾ ನಂತರ ಭಾರತದ ಕೋಲ್ಕತ್ತಾದ ಮೂಲಕ ಚೀನಾದ ಶಾಂಘೈಗೆ ತೆರಳಿದ ಮೊದಲ ವಿಮಾನ ಇದಾಗಿದೆ. ಇಂದು ಬೆಳಿಗ್ಗೆ 8 ಗಂಟೆಗೆ ಕೋಲ್ಕತ್ತಾದಿಂದ ತೆರಳಿದ ವಿಮಾನ ಮಧ್ಯಾಹ್ನ 3 ಗಂಟೆ ಚೀನಾದ ಶಾಂಘೈಗೆ …

Read More »

ಕರ್ನಾಟಕದಿಂದ ದೆಹಲಿಯ ತಬ್ಲಿಘಿ ಜಮಾತ್ ಕಾರ್ಯಕ್ರಮಕ್ಕೆ ತೆರಳಿದವರು ಎಷ್ಟು?

ಬೆಂಗಳೂರು: ಕರ್ನಾಟಕದಿಂದ ದೆಹಲಿಯ ತಬ್ಲಿಘಿ ಜಮಾತ್ ಕಾರ್ಯಕ್ರಮಕ್ಕೆ ತೆರಳಿದವರು ಎಷ್ಟು? ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಈ ಪ್ರಶ್ನೆಗೆ ಸರ್ಕಾರದ ಬಳಿ ಈಗಲೂ ಸ್ಪಷ್ಟವಾದ ಉತ್ತರವಿಲ್ಲ. ಹೌದು, ತಬ್ಲಿಘಿ ಜಮಾತ್ ಧಾರ್ಮಿಕ ಸಭೆಗೆ ಕರ್ನಾಟಕದಿಂದ 1,300 ಮಂದಿ ಭಾಗಿಯಾಗಿದ್ದರು ಎಂದು ಸರ್ಕಾರ ಅಧಿಕೃತ ಮಾಹಿತಿಯನ್ನು ಕಳೆದ ಬುಧವಾರ ಬಿಡುಗಡೆಗೊಳಿತ್ತು. ಕರ್ನಾಟಕದಿಂದ 1,300 ಮಂದಿ ಜಮಾತ್ ಕಾರ್ಯಕ್ರಮಕ್ಕೆ ತೆರಳಿದ್ದು, 50 ಮಂದಿಗೆ ಪಾಸಿಟಿವ್ ಬಂದಿದೆ. ಬೆಂಗಳೂರಿನಲ್ಲಿ 269 ಮಂದಿ, ಇತರ …

Read More »

ಏ.20ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಬಿಎಂಪಿ ಬಜೆಟ್ ಮಂಡನೆ

ಬೆಂಗಳೂರು, ಏ.15- ಲಾಕ್‍ಡೌನ್ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಬಿಬಿಎಂಪಿ ಬಜೆಟ್ ಏ.20ರಂದು ಮಂಡನೆಯಾಗಲಿದೆ. ಹನ್ನೊಂದು ಸಾವಿರ ಕೋಟಿ ರೂ.ಗಳ ಅಂದಾಜು ಮೊತ್ತದ ಬಿಬಿಎಂಪಿ ಬಜೆಟನ್ನು ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಎಲ್.ಶ್ರೀನಿವಾಸ್ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಂಡನೆ ಮಾಡಲಿದ್ದಾರೆ. ಈ ಬಾರಿಯ ಬಜೆಟ್‍ನಲ್ಲಿ ಯಾವುದೇ ಹೊಸ ಕಾಮಗಾರಿಗಳಿಗೆ ಅನುಮೋದನೆ ನೀಡುವುದಿಲ್ಲ. ಬದಲಿಗೆ ಜನರಿಗೆ ಸಹಕಾರಿಯಾಗುವಂತಹ ಹಲವಾರು ಯೋಜನೆಗಳನ್ನು ಮಂಡಿಸುವ ಸಾಧ್ಯತೆಗಳಿವೆ.ರಾಜ್ಯ ಸರ್ಕಾರದ ಬಜೆಟ್ ಮಂಡನೆ ಮಾಡಿದ ಕೆಲವು …

Read More »

ಮಾ.1ರಿಂದ ನಿನ್ನೆಯವರೆಗೆ ಕೆಎಸ್ಆರ್‌ಟಿಸಿಗೆ 253 ಕೋಟಿ ನಷ್ಟ..!

ಬೆಂಗಳೂರು, ಏ. 15- ಕೋರೋನಾ ವೈರಾಣು ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಬಸ್ ಸಂಚಾರ ರದ್ದು ಮಾಡಿರುವುದರಿಂದ ಕೆಎಸ್‍ಆರ್‍ಟಿಸಿಗೆ 253 ಕೋಟಿ ರೂ.ಗೂ ಹೆಚ್ಚು ನಷ್ಟ ಉಂಟಾಗಿದೆ. ಮಾರ್ಚ್ 1ರಿಂದ ನಿನ್ನೆಯವರೆಗೆ ಕೆಎಸ್‍ಆರ್‍ಟಿಸಿ ಆದಾಯದಲ್ಲಿ 253,24,19,256 ರೂ. ನಷ್ಟವಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಲಾಕ್‍ಡೌನ್ ಮಾಡಿರುವುದರಿಂದ ಕೆಎಸ್‍ಆರ್‍ಟಿಸಿ ಬಸ್ ಸಂಚಾರವನ್ನು ನಿಲ್ಲಿಸಲಾಗಿದ್ದು, ಅಗತ್ಯ ಸೇವೆಗಳಿಗೆ ಮಾತ್ರ ಕೆಲವು ಬಸ್‍ಗಳನ್ನು ಒದಗಿಸಲಾಗಿದೆ. ಈಗಾಗಲೇ ಮುಂಗಡ ಟಿಕೆಟ್ ಕಾಯ್ದಿರಿಸುವುದನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದ್ದು, ಟಿಕೆಟ್ …

Read More »