Breaking News
Home / ಜಿಲ್ಲೆ / ಬೆಂಗಳೂರು (page 441)

ಬೆಂಗಳೂರು

ಬ್ರೇಕಿಂಗ್ : ಏ.11ರವರೆಗೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ರಜೆ ವಿಸ್ತರಣೆ

ಬೆಂಗಳೂರು, ಮಾ.30- ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ನೀಡಲಾಗಿದ್ದ ರಜೆಯನ್ನು ಏಪ್ರಿಲ್‌ 11 ರವರೆಗೆ ವಿಸ್ತರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.ಆದರೆ, ರಜೆ ಅವಧಿಯಲ್ಲಿ ಯಾವುದೇ ಶಿಕ್ಷಕರು ಕೇಂದ್ರ ಸ್ಥಾನ ಬಿಡದಂತೆ ಸೂಚನೆ‌ ನೀಡಿದ್ದಾರೆ. ಕೆಲ ಖಾಸಗಿ ಶಾಲೆಗಳು 2020-21 ನೇ ಸಾಲಿನ ಶುಲ್ಕ ವಸೂಲಾತಿ ಪ್ರಕ್ರಿಯೆಯನ್ನು ಈಗಾಗಲೇ ಆರಂಭ ಮಾಡಿ‌ ಪೋಷಕರಿಗೆ ಅನಗತ್ಯ ಸಮಸ್ಯೆ …

Read More »

ಕೊರೋನಾ ಕುರಿತ ಸರ್ವ ಪಕ್ಷಗಳ ಸಭೆಯಲ್ಲಿ ಕೈಗೊಂಡ ನಿರ್ಣಯಗಳು ಇಲ್ಲಿವೆ “…

ಬೆಂಗಳೂರು, ಮಾ.29-ಕೊರೋನಾ ತಡೆಯಲು ತೆಗೆದುಕೊಂಡಿರುವ ಲಾಕ್ ಡೌನ್ ಕ್ರಮದಿಂದಾಗಿ ಗಡಿಗಳಲ್ಲಿ ಸಿಕ್ಕಿಕೊಂಡಿರುವ ಜನರ ವೈದ್ಯಕೀಯ ತಪಾಸಣೆ ನಡೆಸಿ, ಅವರಿಗೆ ಆಶ್ರಯ ಕಲ್ಪಿಸಲು ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ವಿಧಾನಸೌಧದಲ್ಲಿ ನಡೆದ ಸರ್ವಪಕ್ಷ ನಾಯಕರ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಂಕಿಗೆ ಒಳಗಾಗಿರುವ ಪ್ರಯಾಣಿಕರಿಗೆ ಕ್ವಾರಂಟೈನ್ ವ್ಯವಸ್ಥೆಗೆ ಒಳಪಡಿಸಲು ಹಾಗೂ ಆರೋಗ್ಯವಾಗಿರುವ ಪ್ರಯಾಣಿಕರನ್ನು ಅವರ ಸ್ಥಳಗಳಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರು, …

Read More »

ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ತ್ಯ 8 ಲಕ್ಷ ಲೀಟರ್ ಹಾಲು ಮಾರಾಟವಾಗದೇ ಉಳಿಯುತ್ತಿದೆ:ಶಾಸಕ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು: ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಲ್ಲಿ ಹೇರಲಾಗಿರುವ ಲಾಕ್‍ಡೌನ್‍ನಿಂದಾಗಿ ನಂದಿನಿ ಹಾಲು ಹಾಗೂ ಮೊಸರಿಗೆ ಬೇಡಿಕೆ ಕುಸಿದಿದೆ. ನಿತ್ಯ 8 ಲಕ್ಷ ಲೀಟರ್ ಹಾಲು ಮಾರಾಟವಾಗದೇ ಉಳಿಯುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದಲ್ಲಿ ಶನಿವಾರ ಕೆಎಂಎಫ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕೊರೊನಾ ವೈರಸ್ ಹರಡುವಿಕೆ ತಡೆಯಲು ಕೆಎಂಎಫ್ ಕೂಡ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಹಾಲು ಉತ್ಪಾದಕರ ಸಂಘಗಳಲ್ಲಿ …

Read More »

ಧಾರವಾಡಕ್ಕೆ ನೆರವು ಘೋಷಿಸಿದ ಸುಧಾಮೂರ್ತಿ

ಧಾರವಾಡ: ಕೊರೊನಾದಿಂದ ಉಂಟಾಗಿರುವ ಸಂಕಷ್ಟ ಪರಿಹಾರೋಪಾಯ ಕಾರ್ಯಕ್ಕಾಗಿ ಈಗಾಗಲೇ ಸಾಕಷ್ಟು ನೆರವು ನೀಡಿರುವ ಇನ್ಫೋಸಿಸ್ ಪ್ರತಿಷ್ಠಾನವು ಈಗ ಧಾರವಾಡ ಲೋಕಸಭಾ ಕ್ಷೇತ್ರಕ್ಕೆ 20 ಲಕ್ಷ ರೂ.ಗಳ ಪ್ರತ್ಯೇಕ ನೆರವು ಘೋಷಿಸಿದೆ. ಧಾರವಾಡ ಜಿಲ್ಲೆ ಹಾಗೂ ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕು ಒಳಗೊಂಡು ಪರಿಹಾರ ಕಾರ್ಯ ಕೈಗೊಳ್ಳುವುದಕ್ಕಾಗಿ ಸುಧಾಮೂರ್ತಿಯವರು ಈ ನೆರವು ನೀಡಿದ್ದು, ಸಾಫಲ್ಯ ಪ್ರತಿಷ್ಠಾನ ಮತ್ತು ಗ್ರಾಮ ವಿಕಾಸ ಸಂಸ್ಥೆಗಳ ಮೂಲಕ ಈ ಪರಿಹಾರ ಕಾರ್ಯಗಳು ನಡೆಯಲಿವೆ. ಈ ಹಣದಲ್ಲಿ …

Read More »

ಕೊರೋನಾ ಸೋಂಕು ನಿಯಂತ್ರಣ ಹಾಗೂ ಪರಿಸ್ಥಿತಿ ನಿರ್ವಹಣೆಗೆ ಕಾಂಗ್ರೆಸ್ ಕಾರ್ಯಪಡೆಯ ಮೊದಲ ಸಭೆ ಮಾ.31 ರಂದು

ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಣ ಹಾಗೂ ಪರಿಸ್ಥಿತಿ ನಿರ್ವಹಣೆಗೆ ರಚಿಸಲಾಗಿರುವ ಕಾಂಗ್ರೆಸ್ ಕಾರ್ಯಪಡೆಯ ಮೊದಲ ಸಭೆ ಮಾ.31 ರಂದು ಮಂಗಳವಾರ ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಕಾರ್ಯಪಡೆಯ ಮುಖ್ಯಸ್ಥ ರಮೇಶ್ ಕುಮಾರ್ ಅವರು ಶನಿವಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಅನೌಪಚಾರಿಕ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಹಿರಿಯ ನಾಯಕ ಹಸನಬ್ಬ ಅವರು ಉಪಸ್ಥಿತರಿದ್ದರು. ಕಾರ್ಯಪಡೆಯ ಮೊದಲ ಸಭೆ ಮುಂದಿನ ಮಂಗಳವಾರ ಬೆಳಗ್ಗೆ 11 …

Read More »

ಜನರ ನಿಯಂತ್ರಣಕ್ಕೆ ಬೆಂಗಳೂರಲ್ಲಿ ಬೀದಿಗಿಳಿಯಲಿದೆ ಅರೆ ಸೇನಾ ಪಡೆ..!

ಬೆಂಗಳೂರು, ಮಾ.28-ಎಷ್ಟೇ ಎಚ್ಚರಿಕೆ ನೀಡಿದರೂ ಜನ ಬೀದಿಗೆ ಬರುತ್ತಿರುವುದನ್ನು ನಿಲ್ಲಿಸದೇ ಇರುವ ಹಿನ್ನಲೆಯಲ್ಲಿ ನಗರಕ್ಕೆ ಅರೆ ಸೇನಾ ಪಡೆಯನ್ನು ನಿಯೋಜಿಸುವ ಕುರಿತಂತೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ನಗರದಲ್ಲಿ ದಿನೇ ದಿನೇ ಮಹಾಮಾರಿ ಕೊರೊನಾ ವೈರಸ್ ಹೆಚ್ಚುತ್ತಲೆ ಇರುವುದು ತಲೆ ನೋವಾಗಿ ಪರಿಣಮಿಸಿದೆ. ಪೊಲೀಸರು ಜನರ ಮೇಲೆ ಲಾಠಿ ಪ್ರಯೋಗಿಸಿ ಮನೆಗಳಿಂದ ಹೊರ ಬರದಂತೆ ಎಚ್ಚರಿಕೆ ನೀಡುತ್ತಿದ್ದರೂ ಜನ ತಲೆ ಕೆಡಿಸಿಕೊಳ್ಳುತ್ತಿಲ್ಲ. ಜನರ ಈ ನಿರ್ಲಕ್ಷ್ಯದಿಂದ ನಗರದಲ್ಲಿ ಕೊರೊನಾ ಸೋಂಕಿತರ …

Read More »

ಕೆ.ಆರ್.ಮಾರುಕಟ್ಟೆಯನ್ನು ನ್ಯಾಷನಲ್ ಕಾಲೇಜು ಮೈದಾನಕ್ಕೆ ಸ್ಥಳಾಂತರಿಸುವ ಐಡಿಯಾ ಫ್ಲಾಪ್

ಬೆಂಗಳೂರು,ಮಾ.28- ಕೆ.ಆರ್.ಮಾರುಕಟ್ಟೆಯನ್ನು ನ್ಯಾಷನಲ್ ಕಾಲೇಜು ಮೈದಾನಕ್ಕೆ ಸ್ಥಳಾಂತರಿಸುವ ಐಡಿಯಾ ಫ್ಲಾಪ್ ಆಗುತ್ತಿದ್ದಂತೆ ಕಲಾಸಿಪಾಳ್ಯ ಮಾರುಕಟ್ಟೆಯನ್ನು ಸಿಂಗೇನ ಅಗ್ರಹಾರಕ್ಕೆ ಸ್ಥಳಾಂತರಿಸಲು ಬಿಬಿಎಂಪಿ ಮುಂದಾಗಿದೆ. ಕಲಾಸಿಪಾಳ್ಯ ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯವಾಗದೆ ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಮಾರುಕಟ್ಟೆಯನ್ನು ಹೊಸೂರು ರಸ್ತೆಯ ಸಿಂಗೇನ ಅಗ್ರಹಾರ ಸ್ಥಳಾಂತರಿಸಲಾಗುತ್ತಿದೆ ಎಂದು ಆಯುಕ್ತ ಅನಿಲ್‍ಕುಮಾರ್ ತಿಳಿಸಿದ್ದಾರೆ. ಕಲಾಸಿಪಾಳ್ಯ ಮಾರುಕಟ್ಟೆಯನ್ನು ಈ ಹಿಂದೆಯೇ ಸಿಂಗೇನ ಅಗ್ರಹಕಾರಕ್ಕೆ ಸ್ಥಳಾಂತರಿಸಲು ತೀರ್ಮಾನಿಸಲಾಗಿತ್ತು. ಇದೀಗ ಕಲಾಸಿಪಾಳ್ಯ ಮಾರುಕಟ್ಟೆಯ 423ಕ್ಕೂ ಹೋಲ್‍ಸೇಲ್ …

Read More »

ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸಿದ್ದ ಪ್ರಯಾಣಿಕರಿಬ್ಬರಲ್ಲಿ ಕೊರೋನಾ ದೃಢ March 28, 2020 KSRTC Bus

ಬೆಂಗಳೂರು, ಮಾ28- ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಪ್ರಯಾಣಿಸಿದ ಪ್ರಯಾಣಿಕರಿಬ್ಬರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ. ಒಬ್ಬ ಪ್ರಯಾಣಿಕರು ಮಾ.21ರಂದು ಪ್ರಯಾಣಿಸಿದ ಕರ್ನಾಟಕ ಸಾರಿಗೆ ಬಸ್ಸು ನಂ.KA19 F3329, ಸಂಜೆ 4.30 ಕ್ಕೆ ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಮಂಗಳೂರಿಗೆ ಹೊರಟಿರುತ್ತದೆ. ಮತ್ತೊಬ್ಬ ಪ್ರಯಾಣಿಕರು ಪ್ರಯಾಣಿಸಿದ ರಾಜಹಂಸ ಬಸ್ಸು ನಂ.KA57F3802 ಮಾ.18 ರಂದು ಬೆಳಗ್ಗೆ 10 ಕ್ಕೆ ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ದಾವಣಗೆರೆಗೆ ಹೊರಟಿರುತ್ತದೆ. ಈ ಎರಡು …

Read More »

ಕಾಬೂಲ್ ಗುರುದ್ವಾರದ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಕಾಸರಗೋಡಿನ ಸೂಸೈಡ್ ಬಾಂಬರ್

ನವದೆಹಲಿ: ಇತ್ತೀಚೆಗೆ ಕಾಬೂಲ್‍ನಲ್ಲಿ ನಡೆದ ಸಿಖ್‍ರ ಮೇಲಿನ ದಾಳಿಯಲ್ಲಿ ಭಾಗಿಯಾಗಿದ್ದ ನಾಲ್ಕು ಜನ ಭಯೋತ್ಪಾದಕರಲ್ಲಿ ಓರ್ವ ಕೇರಳದ ಕಾಸರಗೋಡಿನ ಯುವಕನಿದ್ದ ಎಂದು ವರದಿಯಾಗಿದೆ. ಮಾರ್ಚ್ 25ರಂದು ಕಾಬೂಲ್‍ನ ಗುರುದ್ವಾರದಲ್ಲಿ ಪ್ರಾರ್ಥನೆ ಸಲ್ಲಿಸಲು ಬಂದಿದ್ದ ಸಿಖ್‍ರ ಮೇಲೆ ಆತ್ಮಾಹುತಿ ಬಾಂಬ್ ದಾಳಿ ಮಾಡಲಾಗಿತ್ತು. ಈ ದಾಳಿಯಲ್ಲಿ ನಾಲ್ಕು ಜನ ಸೂಸೈಡ್ ಬಾಂಬರ್ ಗಳು ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿತ್ತು. ಈಗ ಇದರಲ್ಲಿ ಓರ್ವ ಭಾರತದ ಮೂಲದವನಾಗಿದ್ದು, ಕೇರಳದಿಂದ 4 ವರ್ಷದ ಹಿಂದೆ …

Read More »

ಇಂದಿನಿಂದ ಲಾಠಿ ಇಲ್ಲದ ಕರ್ತವ್ಯ ನಿರ್ವಹಿಸುವಂತೆ ಪೊಲೀಸರಿಗೆ ಕಮಿಷನರ್ ಸೂಚನೆ

ಬೆಂಗಳೂರು: ಕೊರೋನಾ ಮಹಾಮಾರಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಏಪ್ರಿಲ್ 14ರವರೆಗೆ ದೇಶವನ್ನು ಲಾಕ್​ಡೌನ್​ ಮಾಡಲಾಗಿದೆ. ಮದ್ದಿಲ್ಲದ ಕೊರೋನಾ ಕಾಯಿಲೆಗೆ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮಾರಕ ಸೋಂಕನ್ನು ತಡೆಗಟ್ಟಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ. ಆದರೆ, ಇಡೀ ದೇಶವನ್ನು ಲಾಕ್​ಡೌನ್​ ಮಾಡಿದ್ದರು ಜನರು ರಸ್ತೆಗಳಲ್ಲಿ ಅಡ್ಡಾದಿಡ್ಡಿಯಾಗಿ ಓಡಾಡುತ್ತಿದ್ದಾರೆ. ಇಂತಹವರಿಗೆ ಪೊಲೀಸರು ಕಂಡಕಂಡಲ್ಲಿ ಲಾಠಿ ರುಚಿ ತೋರಿಸುತ್ತಿದ್ದಾರೆ. ಕೆಲವರು ಬೇಕಾಬಿಟ್ಟಿಯಾಗಿ ರಸ್ತೆಯಲ್ಲಿ ಅಡ್ಡಾಡುತ್ತಾರೆ. ಆದರೆ, ಕೆಲವಷ್ಟು ಮಂದಿ ತುರ್ತು ಕೆಲಸ ಮೇಲೆ ಹೊರಗೆ …

Read More »