Breaking News

ಬೆಂಗಳೂರು

ಬೆಳಗಾವಿಯಲ್ಲಿ ಒಬ್ಬನಿಂದಲೇ ಮೂವರಿಗೆ ಕೊರೊನಾ ಸೋಂಕು ಹರಡಿದ್ದು, ಇಂದು ಒಟ್ಟು ನಾಲ್ಕು ಪ್ರಕರಣಗಳು ಪತ್ತೆಯಾಗಿವೆ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಇಂದು ಒಂದೇ ದಿನದಲ್ಲಿ 11 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಅವರಲ್ಲಿ ಬೆಳಗಾವಿಯಲ್ಲಿ ಹೆಚ್ಚು ಪ್ರಕರಣ ಪತ್ತೆಯಾಗಿದೆ. ಬೆಳಗಾವಿಯಲ್ಲಿ ಒಬ್ಬನಿಂದಲೇ ಮೂವರಿಗೆ ಕೊರೊನಾ ಸೋಂಕು ಹರಡಿದ್ದು, ಇಂದು ಒಟ್ಟು ನಾಲ್ಕು ಪ್ರಕರಣಗಳು ಪತ್ತೆಯಾಗಿವೆ. ಬೆಳಗಾವಿ ಜಿಲ್ಲೆಯ ರಾಯಭಾಗದ ಮೂವರಿಗೆ ಮತ್ತು ಹೀರೇಬಾಗೆವಾಡಿಯ ಒಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ವಿಜಯಪುರದಲ್ಲಿ ಮೊದಲ ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಜನತೆಯಲ್ಲಿ ಆತಂಕ ಮನೆ ಮಾಡಿದೆ. …

Read More »

ರಮ್ಯಾ ಅಭಿಮಾನಿಗಳಿಗೆ ಗುಡ್ ನ್ಯೂಸ್ – ಮತ್ತೆ ಟ್ವಿಟ್ಟರ್‌ಗೆ ಮರಳಿದ ಪದ್ಮಾವತಿ

ಬೆಂಗಳೂರು: ಸ್ಯಾಂಡಲ್‍ವುಡ್ ಬ್ಯೂಟಿಕ್ವೀನ್ ರಮ್ಯ ಮತ್ತೆ ಸಾಮಾಜಿಕ ಜಾಲತಾಣಕ್ಕೆ ವಾಪಸ್ ಬಂದಿದ್ದು, ಅವರ ಟ್ವಿಟ್ಟರ್ ಖಾತೆ ಸಕ್ರಿಯವಾಗಿದೆ. ಒಂದು ಕಾಲದಲ್ಲಿ ಚಂದನವದ ಬುಹುಬೇಡಿಕೆಯ ನಟಿಯಾಗಿ ಮರೆದಿದ್ದ ರಮ್ಯಾ, ಸದ್ಯ ಇತ್ತೀಚಿನ ದಿನಗಳಲ್ಲಿ ಎಲ್ಲಿಯೂ ಕಾಣಿಸಿಕೊಳ್ಳುತ್ತಿಲ್ಲ. ಸಿನಿಮಾದ ಜೊತೆಗೆ ರಾಜಕೀಯದಲ್ಲೂ ಸಖತ್ ಸಕ್ರಿಯವಾಗಿ ಇದ್ದ ರಮ್ಯಾ ಅವರು, ಇದ್ದಕ್ಕಿದ್ದಂತೆ ಕಾಣೆಯಾಗಿದ್ದರು. ಆದರೆ ಈಗ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಆ್ಯಕ್ಟಿವ್ ಆಗಿ ಇಟ್ಟುಕೊಳ್ಳುವ ಮೂಲಕ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಈ …

Read More »

ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೂ ಸಿಗುತ್ತೆ ರೇಷನ್…

ಬೆಂಗಳೂರು: ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೂ ಪಡಿತರ ನೀಡುವ ಮಹತ್ವದ ಘೋಷಣೆಯನ್ನು ರಾಜ್ಯ ಸರ್ಕಾರ ಹೊರಡಿಸಿದೆ. ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿದವರಿಗೂ ಏಪ್ರಿಲ್‍ನಿಂದ ಜೂನ್‍ವರೆಗೆ ಅಕ್ಕಿ ವಿತರಣೆ ಮಾಡಲು ಸರ್ಕಾರ ಆದೇಶ ನೀಡಿದೆ. ಈ ಮೂಲಕ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿ ಸಿಗಲಿದೆ. ಆದರೆ ಎಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಸರ್ಕಾರ ಹಣ ನಿಗದಿ ಮಾಡಿದೆ. …

Read More »

ಇಂದು ಡಾ.ರಾಜ್‍ಕುಮಾರ್ ಪುಣ್ಯಸ್ಮರಣೆ…..

ಬೆಂಗಳೂರು: ಇಂದು ಚಂದನವನದ ಅಪ್ಪಾಜಿ, ನಟಸಾರ್ವಭೌಮ ಡಾ.ರಾಜ್‍ಕುಮಾರ್ ಅವರ ಪುಣ್ಯಸ್ಮರಣೆ. ಇಂದಿಗೆ ಡಾ. ರಾಜ್‍ಕುಮಾರ್ ನಮ್ಮನ್ನು ಅಗಲಿ 14 ವರ್ಷಗಳು ಆಯ್ತು. ಪ್ರತಿವರ್ಷ ರಾಜ್‍ಕುಮಾರ್ ಅವರ ಅಭಿಮಾನಿಗಳು ಅನ್ನಸಂತರ್ಪಣೆ, ಬಟ್ಟೆ ದಾನ, ರಕ್ತದಾನ ಸೇರಿದಂತೆ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದರು. ಲಾಕ್‍ಡೌನ್ ಹಿನ್ನೆಲೆಯಲ್ಲಿ ಇಂದು ರಾಜ್ ಕುಟುಂಬಸ್ಥರು ಸಮಾಧಿ ಸ್ಥಳಕ್ಕೆ ಆಗಮಿಸಿ ಪೂಜೆ ಸಲ್ಲಿಸಿದರು. ಬೆಳಗ್ಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕುಟುಂಬಸ್ಥರ ಸಮೇತವಾಗಿ ಆಗಮಿಸಿ ತಂದೆಯವರ ಸಮಾಧಿಗೆ ಪೂಜೆ …

Read More »

ರಾಜ್ಯದಲ್ಲಿ 8 ಹೊಸ ಕೊರೋನಾ ಕೇಸ್, ಸೋಂಕಿತರ ಸಂಖ್ಯೆ 215ಕ್ಕೇರಿಕೆ..!

ಬೆಂಗಳೂರು : ರಾಜ್ಯದಲ್ಲಿ ಕರೋನಾ ಸಂಕಿತರ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದ್ದು ಶುಕ್ರವಾರ ಸಂಜೆಯಿಂದ ಶನಿವಾರ ಸಂಜೆಯವರೆಗೆ 8 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ.ಇದರೊಂದಿಗೆ ರಾಜ್ಯದ ಕೋವಿಡ್-19 ಸೋಂಕಿತರ ಸಂಖ್ಯೆ 215ಕ್ಕೇರಿದೆ. ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ ಮತ್ತೋರ್ವ ಬಾಲಕನಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಸೋಂಕಿತ ಸಂಖ್ಯೆ 92ರ ವ್ಯಕ್ತಿಯ ಸಂಪರ್ಕಕ್ಕೆ ಬಂದ 10 ವರ್ಷದ ಮಗನಿಗೆ ಸೋಂಕು ತಾಗಿದೆ ಆರೋಗ್ಯ ಸಚಿವ ಬಿ.ಶ್ರೀ ರಾಮುಲು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಕರ್ನಾಟಕದಲ್ಲಿ …

Read More »

ನಾಳೆಯಿಂದ ಮನೆ-ಮನೆ ಕೊರೋನಾ ವೈರಸ್ ಸಮೀಕ್ಷೆ

ಬೆಂಗಳೂರು , ಏ 12 : ನಾಳೆಯಿಂದ ಪ್ರಾರಂಭವಾಗಿ ಏಪ್ರಿಲ್-30 ರವರೆಗೆ ಬೆಂಗಳೂರು ನಗರ ಜಿಲ್ಲೆಯಾದ್ಯಂತ ಕೋವಿಡ್ ಸರ್ವೇಕ್ಷಣಾ ತಂಡಗಳಿಂದ ಮನೆ ಮನೆ ಸಮೀಕ್ಷಾ ಕಾರ್ಯ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಎನ್. ಶಿವಮೂರ್ತಿ ಅವರು ತಿಳಿಸಿದ್ದಾರೆ. ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಾಲ್ಲೂಕು ಮಟ್ಟದ ವೈದ್ಯಾಧಿಕಾರಿಗಳು ಹಾಗೂ ಅಧಿಕಾರಿಗಳ ತರಬೇತಿ ಕುರಿತು ಅವರು ಮಾಹಿತಿ ನೀಡಿದರು. ಕೋವಿಡ್-19 ರ ಸೋಂಕನ್ನು ಸಮುದಾಯ ಮಟ್ಟದಲ್ಲಿ ಹರಡುವುದನ್ನು ತಡೆಯಲು ಕೇಂದ್ರ …

Read More »

“ಸಿಎಂ ರಿಲೀಫ್ ಫಂಡ್‍ಗೆ ಒಟ್ಟು 1.80 ಕೋಟಿ ರೂ. ಜಮೆ” ಸಚಿವ ಸುರೇಶ್ ಕುಮಾರ್

ರಾಜ್ಯದಲ್ಲಿ 215 ಜನರಿಗೆ ಕೊರೊನಾ- 39 ಜನ ಡಿಸ್ಚಾರ್ಜ್ – ಬೆಂಗ್ಳೂರಿನಲ್ಲಿ ಇಂದಿನಿಂದ ಒಂದು ತಿಂಗ್ಳು ಕಠಿಣ ಕ್ರಮ ಮುಖ್ಯಮಂತ್ರಿ ವಿಪತ್ತು ಪರಿಹಾರ ನಿಧಿಗೆ ಈವರೆಗೂ 1.80 ಕೋಟಿ ರೂ. ಜಮೆ ಬೆಂಗಳೂರು: ಮುಖ್ಯಮಂತ್ರಿ ವಿಪತ್ತು ಪರಿಹಾರ ನಿಧಿಗೆ ಈವರೆಗೂ 1.80 ಕೋಟಿ ರೂ. ಜಮೆಯಾಗಿದೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 215ಕ್ಕೆ …

Read More »

ಬೆಂಗಳೂರು,:ಮೊಬೈಲ್ ಸ್ಯಾನಿಟೈಸರ್ ಬಸ್ ‘ಸಾರಿಗೆ ಸಂಜೀವಿನಿ’ಗೆ ಚಾಲನೆ

ಬೆಂಗಳೂರು, ಏ.11- ಮೊಬೈಲ್ ಸ್ಯಾನಿಟೈಸರ್ ಬಸ್ ಸಾರಿಗೆ ಸಂಜೀವಿನಿಗೆ ಕೆಎಸ್‍ಆರ್‍ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ್ ಅವರು ಚಾಲನೆ ನೀಡಿದರು. ಕೆಎಸ್‍ಆರ್‍ಟಿಸಿಯ ಬೆಂಗಳೂರು ಕೇಂದ್ರೀಯ ವಿಭಾಗದ ಬಸ್ ಘಟಕ -2ರಲ್ಲಿ ತಾವೇ ಸ್ಯಾನಿಟೈಸರ್ ಸ್ಪ್ರೇಗೆ ಒಳಗಾಗುವ ಮೂಲಕ ಶಿವಯೋಗಿ ಕಳಸದ್ ಚಾಲನೆ ನೀಡಿದರು. ಸಾರ್ವಜನಿಕರ ಅನುಕೂಲಕ್ಕಾಗಿ ಇಂದಿನಿಂದ ಬೆಂಗಳೂರಿನಲ್ಲಿ ಸ್ಯಾನಿಟೈಸರ್ ಬಸ್ ಸಂಚರಿಸಲಿದೆ. ಹತ್ತು ವರ್ಷದ ಹಳೆಯ ಬಸ್‍ಅನ್ನು ಸ್ಯಾನಿಟೈಸರ್ ಬಸ್ ಆಗಿ ಪರಿವರ್ತಿಸಿದ ಕೆಎಸ್‍ಆರ್‍ಟಿಸಿ , ಸುಮಾರು …

Read More »

25 ಸಾವಿರ ಬ್ಯಾಗ್ ಪಡಿತರ ವಿತರಿಸಲಿದ್ದಾರೆ ಪ್ರಜ್ವಲ್ ರೇವಣ್ಣ

ಹಾಸನ: ಕೊರೊನಾ ಲಾಕ್‍ಡೌನ್‍ನಿಂದ ತೊಂದರೆ ಅನುಭವಿಸುತ್ತಿರುವ ಜನರಿಗೆ ಸಹಾಯ ಮಾಡುವ ಸಲುವಾಗಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಜಿಲ್ಲಾ ಪಂಚಾಯಿತಿ ಸದಸ್ಯೆ ಭವಾನಿ ರೇವಣ್ಣ ನೇತೃತ್ವದಲ್ಲಿ ಸುಮಾರು 25 ಸಾವಿರ ದವಸ, ಧಾನ್ಯದ ಬ್ಯಾಗ್ ರೆಡಿ ಮಾಡಲಾಗುತ್ತಿದೆ. ಪ್ರತಿ ಬ್ಯಾಗ್‍ನಲ್ಲಿ ಅಕ್ಕಿ, ಸಕ್ಕರೆ, ಎಣ್ಣೆ ಸೇರಿದಂತೆ ಸುಮಾರು 10 ದಿನಸಿ ಪದಾರ್ಥಗಳು ಇರಲಿವೆ. ಸೋಮವಾರದಿಂದ 25 ಸಾವಿರ ಆಹಾರ ಧಾನ್ಯದ ಬ್ಯಾಗ್‍ಗಳನ್ನು ಜಿಲ್ಲೆಯಾದ್ಯಂತ ಹಂಚಲು ತೀರ್ಮಾನಿಸಲಾಗಿದೆ. ಒಂದೊಂದು ಬ್ಯಾಗ್‍ನಲ್ಲೂ …

Read More »

ಮೂರು ಫಂಡ್‍ಗೆ ತಲಾ 1 ಲಕ್ಷ ಪಿಂಚಣಿ ದೇಣಿಗೆ ನೀಡಿದ ದೇವೇಗೌಡ್ರು

ಬೆಂಗಳೂರು: ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡರು ತಮ್ಮ ಪಿಂಚಣಿ ಹಣವನ್ನು ಕೊರೊನಾ ಪರಿಹಾರ ನಿಧಿಗೆ ದೇಣಿಗೆಯಾಗಿ ನೀಡಿದ್ದಾರೆ. ದೇವೇಗೌಡರು ಪಿಎಂ ಕೇರ್ಸ್ ಫಂಡ್, ಮುಖ್ಯಮಂತ್ರಿ ಪರಿಹಾರ ನಿಧಿ ಮತ್ತು ಕೇರಳ ಸಿಎಂ ಪರಿಹಾರ ನಿಧಿಗೆ ತಲಾ ಒಂದೊಂದು ಲಕ್ಷ ದೇಣಿಗೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ. “ಕೊರೊನಾ ನಿಯಂತ್ರಣ ನಿಧಿಗೆ ನಾನು ಪಡೆಯುವ ಪಿಂಚಣಿ ಹಣವನ್ನು ನೀಡುತ್ತಿದ್ದೇವೆ. ಪಿಎಂ ಕೇರ್ಸ್ ಫಂಡ್, ಕರ್ನಾಟಕ ಮುಖ್ಯಮಂತ್ರಿ …

Read More »