ಬೆಂಗಳೂರು: ಇಂದು ಮಧ್ಯರಾತ್ರಿಯಿಂದ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ಸಂಪೂರ್ಣವಾಗಿ ಸೀಲ್ ಮಾಡಲಾಗುತ್ತದೆ ಎನ್ನುವ ಸುದ್ದಿಗಳ ಮಧ್ಯೆ ನಗರದ ಮಧ್ಯೆ ಬಾಪೂಜಿನಗರ ಮತ್ತು ಪಾದರಾಯನಪುರ ವಾರ್ಡ್ ಅನ್ನು ಸಂಪೂರ್ಣ ಸೀಲ್ ಮಾಡಲು ಬಿಬಿಎಂಪಿ ಮುಂದಾಗಿದೆ. ಈ ಸಂಬಂಧ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಅವರು, ಬಾಪೂಜಿ ನಗರ ವಾರ್ಡ್ 134 & ಪಾದರಾಯನಪುರ ವಾರ್ಡ್ 135ರಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಯಿತು. ಪರಿಸ್ಥಿತಿಯನ್ನು ನಿಯಂತ್ರಣ …
Read More »ದೂರದಿಂದಲೇ ಒಂದಾದ ಪ್ರೇಮಿಗಳು – ಬೆಂಗ್ಳೂರಿನ ಗಿರಿನಗರ ಠಾಣೆಯಲ್ಲೊಂದು ಅಪರೂಪದ ದೃಶ್ಯ
ಬೆಂಗಳೂರು: ಕೊರೊನಾ ಭೀತಿಯಿಂದ ಇಡೀ ದೇಶವೇ ಲಾಕ್ಡೌನ್ ಆಗಿದೆ. ಇದರಿಂದ ಅನೇಕ ಮದುವೆ ಸಮಾರಂಭಗಳಿಗೆ ಬ್ರೇಕ್ ಬಿದ್ದಿದೆ. ಆದರೂ ಕೆಲವು ಜೋಡಿಗಳು ಲಾಕ್ಡೌನ್ ನಿಯಮವನ್ನು ಪಾಲಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇದೀಗ ಕೊರೊನಾ ಲಾಕ್ಡೌನ್ ನಡುವೆಯೇ ಪ್ರೇಮಿಗಳಿಬ್ಬರು ಮದುವೆಯಾಗಿದ್ದಾರೆ. ಮುರುಗನ್ ಮತ್ತು ಮೇಘಶ್ರೀ ಮದುವೆಯಾದ ಪ್ರೇಮಿಗಳು. ಇವರಿಬ್ಬರು ಅನೇಕ ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಮನೆಯಲ್ಲಿ ಇವರ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಮರುಗನ್ ಮತ್ತು ಮೇಘಶ್ರೀ ಮನೆಯಿಂದ ಓಡಿ …
Read More »ಕರ್ನಾಟಕ ನೆಲದಲ್ಲಿ ತಮಿಳುನಾಡು ಖಾಕಿ ಚೆಕ್ಪೋಸ್ಟ್ – ಬಸವರಾಜ್ ಬೊಮ್ಮಾಯಿ ಫುಲ್ ಗರಂ
ಬೆಂಗಳೂರು: ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಕೂಡ ಲಾಕ್ಡೌನ್ ಅನ್ನು ಸರಿಯಾಗಿ ಪಾಲನೆ ಮಾಡುತ್ತಿಲ್ಲ ಎನ್ನುವ ಬಗ್ಗೆ ಸ್ವತಃ ಗೃಹಮಂತ್ರಿಗಳು ಹಾಗೂ ಬೆಂಗಳೂರು ಕಮಿಷನರ್ ಖುದ್ದು ಚೆಕ್ ಪೋಸ್ಟ್ ಹಾಗೂ ಬಾರ್ಡರ್ಗಳಿಗೆ ಭೇಟಿ ನೀಡಿ ರಿಯಾಲಿಟಿ ಚೆಕ್ ನಡೆಸಿದ್ದಾರೆ. ನಕಲಿ ಪಾಸ್ಗಳನ್ನು ಬಳಸಿ ಹಾಗೂ ಅನವಶ್ಯಕವಾಗಿ ಓಡಾಟ ಮಾಡುತ್ತಿದ್ದವರ ಪಾಸ್ಗಳನ್ನು ವಶಕ್ಕೆ ಪಡೆದು ವಾಹನಗಳನ್ನು ಸೀಜ್ ಮಾಡಿದ್ದಾರೆ. ದೇಶಾದ್ಯಂತ ಲಾಕ್ಡೌನ್ ಹೇರಿದರೂ ಮಹಾಮಾರಿ ಕೊರೊನಾ ಅಟ್ಟಹಾಸ ಹೆಚ್ಚಾಗುತ್ತಲೇ …
Read More »ಹೊಸದಾಗಿ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ರಮೇಶ್ ಜಾರಕಿಹೊಳಿ ಕೊಕ್ ಕೊಟ್ಟ B.S.Y
ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್ ಭೀತಿಯಿಂದ ರಾಜ್ಯದ ಜನತೆ ಆತಂಕಕ್ಕೆ ಒಳಗಾಗಿದ್ದಾರೆ. ಸರ್ಕಾರವು ಸೋಂಕು ಹರಡುವುದನ್ನು ತಡೆಯುವಲ್ಲಿ ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇಂತಹ ಸಂದರ್ಭದಲ್ಲಿಯೇ ಹೊಸದಾಗಿ ಜಿಲ್ಲೆಯ ಉಸ್ತುವಾರಿ ಸಚಿವರ ನೇಮಕ ಮಾಡಿದ್ದಾರೆ. ಆದರೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸೇರಿದಂತೆ ಮೂವರು ಸಚಿವರಿಗೆ ಕೋಕ್ ನೀಡಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೆಂಗಳೂರು ನಗರ ಜಿಲ್ಲಾ ಉಸ್ತವಾರಿಯನ್ನು ವಹಿಸಿಕೊಂಡಿದ್ದಾರೆ. ರಮೇಶ್ ಜಾರಕಿಹೊಳಿ, ಗೋಪಾಲಯ್ಯ, ಶ್ರೀಮಂತ ಪಾಟೀಲ್ ಅವರಿಗೆ ಯಾವುದೇ ಜಿಲ್ಲಾ …
Read More »“SSLC-PUC ಪರೀಕ್ಷೆ ದಿನಾಂಕ ನಿಗದಿಯಾಗಿಲ್ಲ, ವದಂತಿಗಳಿಗೆ ಕಿವಿಗೊಡಬೇಡಿ”
,ಸದ್ಯಕ್ಕೆ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ದಿನಾಂಕ ನಿಗದಿಯಾಗಿಲ್ಲ. ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ. ಈ ಹಿಂದೆಯೇ ಸುರೇಶ್ ಕುಮಾರ್ 21 ದಿನಗಳ ನಂತರವಷ್ಟೇ ಪರೀಕ್ಷೆಗಳ ವಿಚಾರ ಚರ್ಚೆಯಾಗಲಿದೆ ಎಂದು ಹೇಳಿದ್ದರು. ಆದರೆ ಸೋಷಿಯಲ್ ಮೀಡಿಯಾಗಳಲ್ಲಿ ಪರೀಕ್ಷೆಗಳ ಕುರಿತು ಹಲವು ವದಂತಿಗಳು ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಈ ಮಾಹಿತಿ ನೀಡಿದ್ದಾರೆ. ಶಿಕ್ಷಣ ಇಲಾಖೆಯ ಹಿರಿಯ …
Read More »ಟ್ರೇಟ್ರಾ/ಪ್ಲೆಕ್ಸಿಪ್ಯಾಕ್ ಹಾಲುಗಳು ದೀರ್ಘಕಾಲ ಬಾಳಿಕೆಗೆ ಬರುತ್ತಿದ್ದು, ಪ್ಯಾಕ್ ಮಾದರಿಯ ಹಾಲುಗಳಿಗೆ ಬೇಡಿಕೆ ಹೆಚ್ಚಾಗುತ್ತಿವೆ
ರಾಮನಗರ: ಕೊರೊನಾ ಹಿನ್ನಲೆಯಲ್ಲಿ ಲಾಕ್ಡೌನ್ ಜಾರಿಯಲ್ಲಿರುವುದರಿಂದ ಟ್ರೇಟ್ರಾ/ಪ್ಲೆಕ್ಸಿಪ್ಯಾಕ್ ಮಾದರಿಯ ಹಾಲುಗಳಿಗೆ ಬೇಡಿಕೆ ಹೆಚ್ಚಾಗುತ್ತಿವೆ. ಇವುಗಳನ್ನೇ ಹೆಚ್ಚಿನ ಪ್ರಮಾಣದಲ್ಲಿ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ದೊರೆಯುವಂತೆ ಮಾಡಲು ಮುಂದಿನ ದಿನಗಳಲ್ಲೂ ಸಹ ಸನ್ನದ್ಧರಾಗುವಂತೆ ಕೆಎಮ್ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು. ಇಲ್ಲಿನ ರಾಮನಗರದ ಹಾಲಿನ ಪುಡಿ ಘಟಕಕ್ಕೆ ಭೇಟಿ ನೀಡಿದ ಬಳಿಕ ಕೆಎಮ್ಎಫ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಅಧಿಕಾರಿಗಳು ತಕ್ಷಣವೇ ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಿದರು. ಟ್ರೇಟ್ರಾ/ಪ್ಲೆಕ್ಸಿಪ್ಯಾಕ್ …
Read More »ರಾಜ್ಯದಲ್ಲಿ ಕೊರೊನಾ ವಿರುದ್ಧ ‘3ಟಿ’ ಅಸ್ತ್ರ!
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 200ರ ಗಡಿ ಸಮೀಪಿಸಿರುವ ಹಿನ್ನೆಲೆಯಲ್ಲಿ ಮುಂದಿನ 5 ದಿನ ಫೈನಲ್ ವಾರ್ ಎಂದು ಪರಿಗಣಿಸಲಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯು ‘3ಟಿ’ ಅಸ್ತ್ರಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಿದೆ. ರಾಜ್ಯದಲ್ಲಿ ಒಟ್ಟು ಜನರಿಗೆ 197 ಕೊರೊನಾ ತಗುಲಿರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಗುರುವಾರ ಒಂದೇ ದಿನ 16 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಬಾಗಲಕೋಟೆಯಲ್ಲಿ 3 ಮಕ್ಕಳಲ್ಲೇ ಕೊರೊನಾ ಪತ್ತೆಯಾದರೆ, ಹೊಸ 3 ಪ್ರಕರಣಗಳಲ್ಲಿ ಮಕ್ಕಳಿಂದಲೇ …
Read More »ಏಪ್ರಿಲ್ 14ರವರಗೆ ಮದ್ಯದದಂಗಡಿ ತೆರೆಯಲು ಅನುಮತಿ ನೀಡುವುದಿಲ್ಲ. ಪರಿಸ್ಥಿತಿ ನೋಡಿ ತೀರ್ಮಾನ
ಬೆಂಗಳೂರು: ಲಾಕ್ಡೌನ್ ಮಧ್ಯೆ ಎಣ್ಣೆ ಬೇಕು ಎಣ್ಣೆ ಅಂತ ಗಲ್ಲಿಗಲ್ಲಿಯ ಸಂದಿ ಮೂಲೆಯಲ್ಲಿ ಸುತ್ತಾಡುತ್ತಿದ್ದ ಕುಡುಕರಿಗೆ ಅಬಕಾರಿ ಇಲಾಖೆ ಬಿಗ್ಶಾಕ್ ನೀಡಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇತ್ತೀಚೆಗೆ ಮಾತನಾಡಿ, ಏಪ್ರಿಲ್ 14ರವರಗೆ ಮದ್ಯದದಂಗಡಿ ತೆರೆಯಲು ಅನುಮತಿ ನೀಡುವುದಿಲ್ಲ. ಏ.14ರ ಬಳಿಕ ಪರಿಸ್ಥಿತಿ ನೋಡಿಕೊಂಡು ಮದ್ಯದಂಗಡಿ ತೆರೆಯಬೇಕೋ ಬೇಡ್ವೋ ಎಂಬುದನ್ನು ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದ್ದರು. ಆದರೆ ಕೆಲವರು ಅಕ್ರಮವಾಗಿ ಮದ್ಯ ಮಾರಾಟ ನಡೆಸಿದ್ದರು. ಇದಕ್ಕೆ ಬ್ರೇಕ್ ಹಾಕಲು ಅಬಕಾರಿ ಇಲಾಖೆ …
Read More »ಕೊರೋನಾ 3ನೇ ಹಂತಕ್ಕೆ ಕಾಲಿಡದಂತೆ ಕ್ರಮ : ಸಚಿವ ಬೊಮ್ಮಾಯಿ
ಬೆಂಗಳೂರು, ಏ. 9- ದೇಶದಲ್ಲಿ ಕೊರೋನ ಸೋಂಕು ಮೂರನೇ ಹಂತಕ್ಕೆ ಹೋಗದಂತೆ ತಡೆಯಲು ಹಾಗೂ ಸಮಯದಾಯಕ್ಕೆ ಹರಡದಂತೆ ನೋಡಿಕೊಳ್ಳಲು ಕೆಲವು ರಾಜ್ಯಗಳಲ್ಲಿ ಕಠಿಣ ಕ್ರಮ ಈಗಾಗಲೇ ಕೈಗೊಳ್ಳಲಾಗಿದ್ದು, ನಮ್ಮ ರಾಜ್ಯದಲ್ಲೂ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ನಿರ್ಧಾರ ಮಾಡ್ತುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನ ತಡೆಗಟ್ಟಲು ಪರಿಣಿತರ ತಂಡ ನಿನ್ನೆ ಮುಖ್ಯಮಂತ್ರಿಯವರಿಗೆ ವರದಿ ನೀಡಿದೆ. ಈ ಬಗ್ಗೆ ಇವತ್ತು ಚರ್ಚೆ ಮಾಡಿ …
Read More »ಇಂದು ನಡೆದ ಮಹತ್ವದ ಸಂಪುಟ ಸಭೆಯ ಹೈಲೈಟ್ಸ್ …”
ಬೆಂಗಳೂರು, ಏ.9-ರಾಜ್ಯದಲ್ಲಿ ಇನ್ನು ಹದಿನೈದು ದಿನಗಳ ಕಾಲ ಲಾಕ್ಡೌನ್ ವಿಸ್ತರಣೆಗೆ ಎಲ್ಲ ಸಚಿವರು ಸಲಹೆ ಮಾಡಿದ್ದು,ನಾಳೆ ಪ್ರಧಾನಿ ಜೊತೆ ಚರ್ಚಿಸಿದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಏ.14ರ ನಂತರ ಲಾಕ್ಡೌನ್ ವಿಸ್ತರಿಸಲು ಸಂಪುಟದ ಎಲ್ಲ ಸದಸ್ಯರು ಒತ್ತಾಯ ಮಾಡಿದ್ದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಾಳೆ ಚರ್ಚಿಸಿದ ಬಳಿಕ ತೀರ್ಮಾನಿಸಲಾಗುವುದು ಎಂದರು. ಲಾಕ್ಡೌನ್ ಸಂದರ್ಭದಲ್ಲಿ …
Read More »