ಬೆಂಗಳೂರು: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಅವರ ನಿವಾಸದಲ್ಲಿ ನಡೆದಿದ್ದ ಕಳವು ಪ್ರಕರಣದ ಆರೋಪಿಯನ್ನು ಪೊಲೀಸರು ಒಡಿಶಾದಲ್ಲಿ ಬಂಧಿಸಿ, ನಗರಕ್ಕೆ ಕರೆತಂದಿದ್ದಾರೆ. ಶಾಸಕರ ಮನೆಯಲ್ಲಿ ಲಾಂಡ್ರಿ ಕೆಲಸ ಮಾಡುತ್ತಿದ್ದ ಜಯಂತ್ ದಾಸ್ ಬಂಧಿತ ಆರೋಪಿ. ಆರೋಪಿಯನ್ನು ಐದು ದಿನಗಳ ಕಾಲ ವಶಕ್ಕೆ ಪಡೆದಿರುವ ಸದಾಶಿವನಗರದ ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ. ‘ಐದು ವರ್ಷಗಳಿಂದ ಶಾಸಕರ ಮನೆಯಲ್ಲಿ ಆರೋಪಿ ಕೆಲಸಕ್ಕಿದ್ದ. ಆತನ ಮೇಲೆಯೇ ಅನುಮಾನ ವ್ಯಕ್ತಪಡಿಸಿ ದೂರು ನೀಡಲಾಗಿತ್ತು. …
Read More »ಪ್ರವೀಣ್ ನೆಟ್ಟಾರು ಕೊಂದು ಬೆಂಗಳೂರಿನಲ್ಲಿ ಬಚ್ಚಿಟ್ಟುಕೊಂಡಿದ್ದ ಹಂತಕರು..!
ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಸೋಮವಾರ ಬಂಧನವಾಗಿರುವ ಇಬ್ಬರು ಆರೋಪಿಗಳು ಹಲವು ವರ್ಷಗಳಿಂದ ಬೆಂಗಳೂರಿನ ಬೇಕರಿಯಲ್ಲಿಯೇ ಕೆಲಸ ಮಾಡಿಕೊಂಡಿದ್ದರು ಎಂಬುದು ತಿಳಿದುಬಂದಿದೆ. ಮಾನ್ಯತಾ ಟೆಕ್‌ಪಾರ್ಕ್ ಬಳಿಯ ಬೇಕರಿಯಲ್ಲಿ ಡೆಲಿವರಿ ಬಾಯ್ಸ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿಗಳಾದ ಅಲ್ತಾಫ್ ಹಾಗೂ ಇರ್ಫಾನ್ ಬೆಳ್ಳಾರೆಯಲ್ಲಿ ಪ್ರವೀಣ್ ಹತ್ಯೆ ನಡೆಸಿ, ತಲೆಮರೆಸಿಕೊಳ್ಳಲು ವಾಪಸ್ ಬೆಂಗಳೂರಿಗೆ ಬಂದಿದ್ದರು. ಬಳಿಕ ಏನೂ ಗೊತ್ತಿಲ್ಲದವರಂತೆ ಬೇಕರಿಯಲ್ಲಿ ಕೆಲಸ ಮಾಡಿಕೊಂಡಿದ್ದರು ಎಂದು ವರದಿಯಾಗಿದೆ. ಮೂಲತಃ ಸುಳ್ಯ …
Read More »ಕಾಳಿ ಸ್ವಾಮಿ ವಿರುದ್ಧ ಕಾನೂನು ಕ್ರಮ: ಎಡಿಜಿಪಿ ಅಲೋಕ್ ಕುಮಾರ್
ಬೆಂಗಳೂರು: ಪ್ರಚೋದನಕಾರಿ ಭಾಷಣ ಮಾಡಿರುವ ಹಿನ್ನೆಲೆಯಲ್ಲಿ ಕಾಳಿ ಸ್ವಾಮಿ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಕೆಲವರು ಸಾಮಾಜಿಕ ಮಾಧ್ಯಮದಲ್ಲಿ ಕಾನೂನು ಸುವ್ಯವಸ್ಥೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಪ್ರಚೋದನಕಾರಿ ವಿಷಯಗಳನ್ನು ಪೋಸ್ಟ್ ಮಾಡುತ್ತಿರುವುದನ್ನು ಗಮನಿಸಲಾಗಿದೆ. ನಾವು ಅಂತಹ ಪೋಸ್ಟ್‌ಗಳನ್ನು ಪರಿಶೀಲಿಸುತ್ತಿದ್ದೇವೆ. ಅಲ್ಲದೇ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳುತ್ತೇವೆ. ಪ್ರಚೋದನಕಾರಿ ಭಾಷಣ ಮಾಡಿದ ಕಾಳಿ ಸ್ವಾಮಿ ವಿರುದ್ಧ ಕಾನೂನು ಕ್ರಮ …
Read More »3.17 ಲಕ್ಷ ಅನರ್ಹ ಬಿಪಿಎಲ್ ಪಡಿತರ ಚೀಟಿ ರದ್ದು: ಅನರ್ಹರಲ್ಲಿ ಸರ್ಕಾರಿ ನೌಕರರೇ ಹೆಚ್ಚು
ಬೆಂಗಳೂರು: ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿ ಆರ್ಥಿಕವಾಗಿ ಸಬಲರಾಗಿರುವವರು ಪಡೆದಿದ್ದ 3,17,441 ಬಿಪಿಎಲ್ ಪಡಿತರ ಚೀಟಿಗಳನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಳೆದ ಒಂದೂವರೆ ವರ್ಷದಿಂದ ರದ್ದುಪಡಿಸುತ್ತಿದೆ. ಇಂಥ ಅನರ್ಹರಿಂದ 11. 91 ಕೋಟಿ ರೂ. ದಂಡವನ್ನೂ ವಸೂಲಿ ಮಾಡಲಾಗಿದೆ. ಆರ್ಥಿಕವಾಗಿ ಸಬಲರಾಗಿರುವವರೂ ಪಡಿತರ ಚೀಟಿ ಪಡೆದು ಸರ್ಕಾರಿ ಸೌಲಭ್ಯಗಳನ್ನು ದುರುಪಯೋಗ ಮಾಡುತ್ತಿದ್ದಾರೆ. ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿಸುವವರು, ವಾರ್ಷಿಕ 1.20ಲಕ್ಷ ರೂ. ಆದಾಯ ಗಳಿಸುವವರು, ಮೂರು ಹೆಕ್ಟೇರ್‌ಗಿಂತ …
Read More »ಸರ್ಕಾರದ ವಿರುದ್ಧ ಕಾರ್ಯಕರ್ತರ ಆಕ್ರೋಶ: ಡ್ಯಾಮೇಜ್ ಕಂಟ್ರೋಲ್‌ಗೆ ಫೀಲ್ಡ್ ಗಿಳಿತಾರಾ ಅಮಿತ್ ಶಾ?
ಬೆಂಗಳೂರು: ಪಕ್ಷದ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಘಟನೆಯಿಂದ ಕಾರ್ಯಕರ್ತರಲ್ಲಿ ಆಕ್ರೋಶದ ಕಟ್ಟೆ ಹೊಡೆದಿದೆ. ಡ್ಯಾಮೇಜ್ ಕಂಟ್ರೋಲ್ ಮಾಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಲಿದ್ದಾರೆ ಎನ್ನಲಾಗುತ್ತಿದೆ. ಇದೇ ಮೊದಲ ಬಾರಿ ಬಿಜೆಪಿ ಕಾರ್ಯಕರ್ತರು ತನ್ನದೇ ಸರ್ಕಾರದ ವಿರುದ್ಧ ಬೀದಿಗಿಳಿದಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷರು, ಮುಖ್ಯಮಂತ್ರಿಗಳ ಮುತ್ತಿಗೆ, ಗೃಹ ಸಚಿವರ ಮುತ್ತಿಗೆಯಂತಹ ಚಟುವಟಿಕೆ ನಡೆಸಿದ್ದಾರೆ. ರಾಜ್ಯಾದ್ಯಂತ ಆಡಳಿತ ಪಕ್ಷದ ಸರ್ಕಾರದ ವಿರುದ್ಧ ಅವರ ಕಾರ್ತಕರ್ತರೇ ದೊಡ್ಡ ಮಟ್ಟದಲ್ಲಿ …
Read More »ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಸರ್ಕಾರದಿಂದ ‘ಅರಿಶಿನ-ಕುಂಕುಮ’ ವಿತರಣೆ
ಬೆಂಗಳೂರು : ಈ ಬಾರಿಯ ಶ್ರೀ ವರಮಹಾಲಕ್ಷ್ಮಿ ವ್ರತವನ್ನು ಮುಜರಾಯಿ ಇಲಾಖೆಯ ವತಿಯಿಂದ ವಿಶೇಷವಾಗಿ ಆಚರಿಸಲು ನಿರ್ಧರಿಸಲಾಗಿದೆ. ಅಂದಿನ ದಿನ ಮುಜರಾಯಿ ವ್ಯಾಪ್ತಿಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆಯನ್ನು ನೆರವೇರಿಸಿ, ದೇವಾಲಯಗಳಿಗೆ ಆಗಮಿಸುವಂತಹ ಮಹಿಳೆಯರಿಗೆ ಉತ್ತಮ ಗುಣಮಟ್ಟದ ಕಸ್ತೂರಿ ಅರಿಶಿಣ-ಕುಂಕುಮ ಮತ್ತು ಹಸಿರು ಬಳೆಗಳನ್ನು ಗೌರವ ಸೂಚಕವಾಗಿ ನೀಡಬೇಕು ಎಂದು ಮುಜರಾಯಿ ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಅ ಜೊಲ್ಲೆ ( Minister Shashikala Jolle ) ಅವರ ನಿರ್ದೇಶನದ …
Read More »ನಾಲಿಗೆ ಹರಿಬಿಟ್ಟು ಕುರ್ಚಿಗೆ ಕುತ್ತು ತಂದುಕೊಂಡ ತೇಜಸ್ವಿ ಸೂರ್ಯ
ಬೆಂಗಳೂರು,ಆ.1- ಸರ್ಕಾರ ಹಾಗೂ ಪಕ್ಷಕ್ಕೆ ಭಾರೀ ಮುಜುಗರ ಸೃಷ್ಟಿಸಿರುವ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾದ ಅಧ್ಯಕ್ಷ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರನ್ನು ಬದಲಾವಣೆ ಮಾಡುವ ಸಂಭವವಿದೆ. ದಕ್ಷಿಣಕನ್ನಡ ಜಿಲ್ಲೆ ಸುಳ್ಯದ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾದ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನಟ್ಟಾರ್ ಕೊಲೆಯಾದ ಸಂದರ್ಭದಲ್ಲಿ ಕಾರ್ಯಕರ್ತರೊಬ್ಬರೊಂದಿಗೆ ತೇಜಸ್ವಿ ಸೂರ್ಯ ದೂರವಾಣಿಯಲ್ಲಿ ಮಾತನಾಡಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಕಾಂಗ್ರೆಸ್ ಸರ್ಕಾರ ಇದ್ದರೆ ನಾವು …
Read More »ದೇವೇಗೌಡರ ಬಳಿ 4 ಪಂಚೆ – ಜುಬ್ಬಾ ಬಿಟ್ಟರೆ ಇರಲು ಸ್ವಂತ ಮನೆಯೂ ಇಲ್ಲ: ಸಿ.ಎಂ. ಇಬ್ರಾಹಿಂ
ಮಾಜಿ ಪ್ರಧಾನಿ ದೇವೇಗೌಡರು ಈ ನಾಡಿನ ರೈತರ ಕುರಿತು ಅಪಾರ ಕಾಳಜಿ ಹೊಂದಿದ್ದಾರೆ. ಪ್ರತಿ ದಿನ 4 ಗಂಟೆಗಳ ಕಾಲ ಕಾಲ ಭೈರವನಿಗೆ ಪೂಜೆ ಸಲ್ಲಿಸುವ ಅವರು ರಾಜ್ಯದ ಪ್ರಗತಿಯ ಬಗ್ಗೆಯೇ ಯಾವಾಗಲೂ ಚಿಂತನೆ ನಡೆಸುತ್ತಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. ಪ್ರತಿ ದಿನ 4 ಗಂಟೆಗಳ ಕಾಲ ಕಾಲ ಭೈರವನಿಗೆ ಪೂಜೆ ಸಲ್ಲಿಸುವ ಅವರು ರಾಜ್ಯದ ಪ್ರಗತಿಯ ಬಗ್ಗೆಯೇ ಯಾವಾಗಲೂ ಚಿಂತನೆ ನಡೆಸುತ್ತಾರೆ ಎಂದು ಜೆಡಿಎಸ್ …
Read More »ಡಿಸೆಂಬರ್‌ನಲ್ಲೇ ವಿಧಾನಸಭೆ ಚುನಾವಣೆ: H.D.K.
ಬೀದರ್: ಇಂದಿನ ರಾಜಕೀಯ ಪರಿಸ್ಥಿತಿಯನ್ನು ಅವಲೋಕಿಸಿದರೆ ರಾಜ್ಯದಲ್ಲಿ ಡಿಸೆಂಬರ್‌ನಲ್ಲೇ ವಿಧಾನಸಭೆ ಚುನಾವಣೆ ನಡೆಯುವ ಲಕ್ಷಣಗಳು ಕಂಡು ಬರುತ್ತಿವೆ. ಹೀಗಾಗಿ ಮೊದಲ ಹಂತದಲ್ಲಿ ಜೆಡಿಎಸ್ ಗೆಲ್ಲಲು ಸಾಧ್ಯವಿರುವ 134 ಕ್ಷೇತ್ರಗಳಲ್ಲಿ ಸಿದ್ಧತೆ ಆರಂಭಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಬೀದರ್ ಜಿಲ್ಲಾ ಮಟ್ಟದಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಹೊಣೆಯನ್ನು ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕ ಬಂಡೆಪ್ಪ ಕಾಶೆಂಪೂರ ಅವರಿಗೆ ವಹಿಸಲಾಗಿದೆ. 10, 12 ದಿನಗಳಲ್ಲಿ ಅಭ್ಯರ್ಥಿಗಳನ್ನು ಆಯ್ಕೆ …
Read More »ನಿಮ್ಮ ಜಮೀನಿನಲ್ಲಿ ಉಚಿತ ಕೊಳವೇ ಬಾವಿ ಕೊರೆಸಬೇಕೇ: ಈಗಲೇ ಅರ್ಜಿ ಸಲ್ಲಿಸಿ
ಬೆಂಗಳೂರು: ಹಲವಾರು ರೈತರು ಇಂದಿಗೂ ಮಳೆಯನ್ನೇ ಆಶ್ರಯಿಸಿಕೊಂಡು ಜಮೀನು ಕಾರ್ಯದಲ್ಲಿ ತೊಡಗಿದ್ದಾರೆ. ಕಾರಣ ಅವರಲ್ಲಿ ಕೊಳವೆ ಬಾವಿ ತೋಡಿಸುವಷ್ಟು ಆರ್ಥಿಕ ಶಕ್ತಿ ಇಲ್ಲದಿರುವುದು. ಈ ಕಾರಣಕ್ಕೆ ಸರ್ಕಾರವೇ ಉಚಿತವಾಗಿ ಈ ಸೌಲಭ್ಯಗಳನ್ನು ರೈತರಿಗೆ ನೀಡುತ್ತಿದೆ. ನೀವು ಸದುಪಯೋಗಪಡಿಸಿಕೊಳ್ಳಿ. ಯೋಜನೆ ಏನು? : ಕೊಳವೆ ಬಾವಿ (ಬೋರ್ ವೆಲ್) ಕೊರೆಯುವ ಮತ್ತು ತೆರೆದ ಬಾವಿ ತೋಡುವ ಮೂಲಕ ಕೃಷಿ ಭೂಮಿಗೆ ನೀರನ್ನು ಪೂರೈಸುವುದೇ ಗಂಗಾ ಕಲ್ಯಾಣ ಯೋಜನೆ. ವಿದ್ಯುತ್ ಸಂಪರ್ಕ ಕಲ್ಪಿಸಿ ಪಂಪ್ …
Read More »