Breaking News

ಬೆಂಗಳೂರು

ಕೊನೆಗೂ ಭೇಟಿಯಾಗಲು ಸಾಧ್ಯವಾಗಿಲ್ಲ- ಬುಲೆಟ್ ನಿಧನಕ್ಕೆ ಕಿಚ್ಚ ಸಂತಾಪ

ಬೆಂಗಳೂರು: ಸ್ಯಾಂಡಲ್‍ವುಡ್ ಹಾಸ್ಯ ನಟ ಬುಲೆಟ್ ಪ್ರಕಾಶ್ ನಿಧನಕ್ಕೆ ನಟ ಕಿಚ್ಚ ಸುದೀಪ್ ಸಂತಾಪ ಸೂಚಿಸಿದ್ದು, ಕೊನೆಯ ಬಾರಿಗೆ ಅವರನ್ನು ನೋಡಲು ಆಗಲಿಲ್ಲ ಎಂದು ಬೆಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕಿಚ್ಚ ಸುದೀಪ್, ನನ್ನ ಸ್ನೇಹಿತ ಬುಲೆಟ್ ಪ್ರಕಾಶ್ ಇನ್ನಿಲ್ಲ ಎಂದು ಕೇಳಿದಾಗ ಬೇಸರವಾಯಿತು. ಇನ್ನೂ ಹೆಚ್ಚು ದುಃಖಕರವಾದ ಸಂಗತಿಯೆಂದರೆ ಸಿನಿಮಾ ಉದ್ಯಮದ ಸ್ನೇಹಿತರು ಕೊನೆಯ ಬಾರಿಗೆ ಅವರನ್ನು ನೋಡಲು ಅವರ ಮನೆಗೆ ಭೇಟಿ ನೀಡಲು ಸಾಧ್ಯವಿಲ್ಲ. …

Read More »

ರಾಜಕೀಯ ಕನಸು ಕಂಡಿದ್ದ ಬುಲೆಟ್ ಪ್ರಕಾಶ್: ರಂಗಾಯಣ ರಘು

ಬೆಂಗಳೂರು: ಗೆಳೆಯ ಬುಲೆಟ್ ಪ್ರಕಾಶ್ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ನೋವು ತಡೆದುಕೊಳ್ಳುವ ಶಕ್ತಿಯನ್ನು ಅವರ ಕುಟುಂಬಸ್ಥರಿಗೆ ದೇವರು ನೀಡಲಿ ಎಂದು ಹಾಸ್ಯ ನಟ ರಂಗಾಯಣ ರಘು ಹೇಳಿದ್ದಾರೆ. ನಾನು ಹಾಗೂ ಬುಲೆಟ್ ಪ್ರಕಾಶ್ ಹೋಗೋ ಬಾರೋ ಫ್ರೆಂಡ್ಸ್. ಅವರಿಗೆ ನಾನಷ್ಟೇ ಅಲ್ಲ ದೊಡ್ಡ ಸಂಖ್ಯೆಯ ಸ್ನೇಹ ಬಳಗವೇ ಇದೆ. ಪ್ರಕಾಶ್ ಅವರ ಏರಿಯಾದಲ್ಲಿ ಅನೇಕ ಸ್ನೇಹಿತರಿದ್ದಾರೆ. ಎಲ್ಲರೊಂದಿಗೂ ಹಾಸ್ಯವಾಗಿ, ನಗು ಮುಖದಿಂದ ಇರುತ್ತಿದ್ದರು. ಎಲ್ಲವನ್ನೂ ತಮಾಷೆಯಾಗಿ ತೆಗೆದುಕೊಳ್ಳುತ್ತಿದ್ದ ಎಂದು …

Read More »

ಲಾಕ್‍ಡೌನ್‍ನಿಂದ ಕಾಂಡಿಮೆಂಟ್ಸ್, ಬೇಕರಿಗಳಿಗೆ ವಿನಾಯ್ತಿ ನೀಡಿದ ರಾಜ್ಯ ಸರ್ಕಾರ

ಭಾರತ ಲಾಕ್‍ಡೌನ್ ನಡುವೆ ರಾಜ್ಯದಲ್ಲಿ ಬೇಕರಿ, ಕಾಂಡಿಮೆಂಟ್ಸ್, ಮಿಠಾಯಿ ಹಾಗೂ ಸಿಹಿ ತಿನಿಸುಗಳ ತಯಾರಿಕಾ ಘಟಕಗಳಿಗೆ ರಾಜ್ಯ ಸರ್ಕಾರ ವಿನಾಯ್ತಿ ನೀಡಿ ಇಂದು ಆದೇಶ ಹೊರಡಿಸಿದೆ. ಬೇಕರಿಯ ತಿಂಡಿ ತಿನಿಸುಗಳು, ಅವುಗಳಲ್ಲಿ ಪ್ರಮುಖವಾಗಿ ಬ್ರೆಡ್ ಹಾಗೂ ಬಿಸ್ಕೆಟ್‍ಗಳನ್ನ ರಾಜ್ಯದಲ್ಲಿ ಆಸ್ಪತ್ರೆಗಳಲ್ಲಿನ ರೋಗಿಗಳು ಹಾಗೂ ವಯಸ್ಸಾದವರು ಸೇರಿದಂತೆ ಮಕ್ಕಳು ಹಾಗೂ ಸಾಮಾನ್ಯ ಜನ ಸಹ ತಿನ್ನುತ್ತಾರೆ. ಹೀಗಾಗಿ ಬೇಕರಿ ತಿಂಡಿ ತಿನಿಸುಗಳ ಅವಶ್ಯಕತೆ ಇರುವ ಕಾರಣ ಬೇಕರಿ ಹಾಗೂ ಕಾಂಡಿಮೆಂಟ್ಸ್ ಗಳಿಗೆ …

Read More »

ಕೊರೋನಾ ಸೋಂಕು‌ ಹರಡುವುದನ್ನು‌ ತಡೆಯುವ‌ ವಿಚಾರದಲ್ಲಿ‌ ಇನ್ನಷ್ಟು ಎಚ್ಚರಿಕೆ ಅಗತ್ಯ:H.D.D.

ಬೆಂಗಳೂರು, ಏ.6-ಕೊರೋನಾ ಸೋಂಕು‌ ಹರಡುವುದನ್ನು‌ ತಡೆಯುವ‌ ವಿಚಾರದಲ್ಲಿ‌ ಇನ್ನಷ್ಟು ಎಚ್ಚರಿಕೆ ಅಗತ್ಯ ಎಂದು‌ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ‌ ಬೇಕಾದ ಸಿದ್ಧತೆ ಮಾಡಿಕೊಳ್ಳುವುದರಲ್ಲಿ ಹಿಂದೆ ಬಿದ್ದಿದ್ದೇವೆ. ಮೆಡಿಕಲ್ ಕಿಟ್, ಔಷಧಿ ತರಿಸಿದ್ದಾರೆ. ಕೊರೊನಾ ಶಂಕಿತರಿಗೆ ಚಿಕಿತ್ಸೆ ಕೊಡುತ್ತಿದ್ದಾರೆ‌. ಮೂರನೇ ಹಂತ, ನಾಲ್ಕನೇ‌ ಹಂತ ಎನ್ನುತ್ತಿದ್ದಾರೆ. ಕಡಿಮೆಯಾದ ಜಿಲ್ಲೆಗಳಲ್ಲಿ ಲಾಕ್‌ಡೌನ್ ಸಡಿಲ ಮಾಡುತ್ತೇವೆ ಎಂದು ಸರ್ಕಾರ ಹೇಳಿದೆ ಎಂದರು.ಕೋವಿಡ್ -19 ಸುಮಾರು ಇನ್ನೂರು ದೇಶಗಳಲ್ಲಿ ಇದೆ. ಅತ್ಯಂತ …

Read More »

ಬೆಂಕಿಬಿದ್ದ ಮನೆಯಲ್ಲಿ ಸಿಗರೇಟ್ ಹಚ್ಚಿಕೊಳ್ಳುವ ಕೆಲಸ ಕೆಲವರು ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ಬೆಂಗಳೂರು: ಜಮಾತಿಗೆ ಹೋದವರಿಂದಲೇ ಕೊರೊನಾ ಹಬ್ಬತ್ತಿದೆ ಅನ್ನೋ ಚರ್ಚೆ, ಒಂದು ಸಮುದಾಯ ಗುರಿಯಾಗಿಸಿರುವ ವಿಚಾರವಾಗಿದೆ. ಬೆಂಕಿಬಿದ್ದ ಮನೆಯಲ್ಲಿ ಸಿಗರೇಟ್ ಹಚ್ಚಿಕೊಳ್ಳುವ ಕೆಲಸ ಕೆಲವರು ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿ ಒಂದು ಸಮುದಾಯವನ್ನು ಟಾರ್ಗೆಟ್ ಮಾಡುವುದು ಸರಿಯಲ್ಲ ಕೆಲವರು ಇದೇ ರೀತಿ ವರ್ತನೆ ಮಾಡುತ್ತಿದ್ದಾರೆ. ಇದರ ಬಗ್ಗೆ ಈಗಾಗಲೇ ಕಮೀಷನರ್ ಹೇಳಿದ್ದಾರೆ ಎಂದರು. ಅಂತೆಯೇ, ಇಂದಿರಾ ಕ್ಯಾಂಟಿನ್ ನಿಲ್ಲಿಸಬಾರದು, ಉದ್ಯೋಗ ಸಿಗುವವರೆಗೂ …

Read More »

ಬೆಂಗಳೂರು: ಏಪ್ರಿಲ್ 14ರ ತನಕ ಮದ್ಯ ನೀಡಲು ಸಾಧ್ಯವಿಲ್ಲ : ಸಿಎಂ ಯಡಿಯೂರಪ್ಪ

ಬೆಂಗಳೂರು: ಏಪ್ರಿಲ್ 14ರ ತನಕ ಮದ್ಯ ನೀಡಲು ಸಾಧ್ಯವಿಲ್ಲ ಎಂದು ಸಿಎಂ ಯಡಿಯೂರಪ್ಪ ಖಡಕ್ ಆಗಿ ಹೇಳಿದ್ದಾರೆ. ಪಬ್ಲಿಕ್ ಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ಏ.14ರ ವರಗೆ ಮದ್ಯದದಂಗಡಿ ತೆರೆಯಲು ಅನುಮತಿ ನೀಡುವುದಿಲ್ಲ. 14ರ ಬಳಿಕ ಪರಿಸ್ಥಿತಿ ನೋಡಿಕೊಂಡು ಮದ್ಯದಂಗಡಿ ತೆರೆಯಬೇಕೋ ಬೇಡ್ವೋ ಎಂಬುದನ್ನು ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು. ಹಿಂದೂ ಮುಸ್ಲಿಂ ಎಲ್ಲರಲ್ಲೂ ಒಂದೇ ಭಾವನೆ ಇದೆ. ಯಾರ ಬಗ್ಗೆಯೂ ಯಾರೂ ಮಾತಾಡಬಾರದು. ಜಮಾತ್ ಕಾರ್ಯಕ್ರಮಕ್ಕೆ …

Read More »

ಹಾಸ್ಯ ನಟ ಬುಲೆಟ್ ಪ್ರಕಾಶ್ ಇನ್ನಿಲ್ಲ

ಬೆಂಗಳೂರು: ಜನಪ್ರಿಯ ಹಾಸನ್ಯ ನಟ ಬುಲೆಟ್ ಪ್ರಕಾಶ್(44) ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಹಾಸ್ಯ ನಟ ಬುಲೆಟ್ ಪ್ರಕಾಶ್ ಆರೋಗ್ಯ ಸ್ಥಿತಿ ಕೆಲ ದಿನಗಳಿಂದ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ವೆಂಟಿಲೇಟರಿನಲ್ಲಿ  ಇಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಕಳೆದೊಂದು ತಿಂಗಳಿನಿಂದ ಬುಲೆಟ್ ಪ್ರಕಾಶ್ ಆರೋಗ್ಯದಲ್ಲಿ ಏರುಪೇರಾಗಿತ್ತು. ಒಂದು ತಿಂಗಳ ಹಿಂದೆ ಹೆಬ್ಬಾಳದ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಪ್ರಕಾಶ್ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿಂದ ಅಸ್ಕರ್ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಏ.4 …

Read More »

ದೀಪ ಹಚ್ಚುವ ಬದಲು ಸಿಗರೇಟ್ ಹಚ್ಚಿಫೋಟೋ ಟ್ವೀಟ್: ರಾಮ್ ಗೋಪಾಲ್ ವರ್ಮಾ

ಬೆಂಗಳೂರು: ಕೊರೊನಾ ಮಹಾಮಾರಿ ಪ್ರಪಂಚವನ್ನೇ ವ್ಯಾಪಿಸಿದ್ದು, ಭಾರತದಲ್ಲೂ ದಿನೇ ದಿನೇ ಆತಂಕ ಹೆಚ್ಚು ಮಾಡುತ್ತಿದೆ. ಸರ್ಕಾರ ಕೊರೊನಾ ನಿಯಂತ್ರಿಸಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದು, ಕೊರೊನಾ ವಿರುದ್ಧದ ಹೋರಾಟಕ್ಕೆ ಒಗ್ಗಟ್ಟು ಪ್ರದರ್ಶಿಸಲು ದೀಪ ಬೆಳಗುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದರು. ಇದಕ್ಕೆ ಹಲವು ನಟ, ನಟಿಯರು ಸಾಥ್ ನೀಡಿ, ದೀಪ ಬೆಳಗಿ ಎಲ್ಲರೂ ಒಗ್ಗಟ್ಟಾಗಿ ಕೊರೊನಾ ವಿರುದ್ಧ ಹೋರಾಡೋಣ ಎಂಬ ಸಂದೇಶ ನೀಡಿದ್ದಾರೆ. ಆದರೆ ಟಾಲಿವುಡ್ ನಿರ್ದೇಶಕ ರಾಮ್ ಗೋಪಾಲ್ …

Read More »

ಕೊರೊನಾ ನಿಯಂತ್ರಣಕ್ಕೆ ಬಂದರೆ 14ರ ನಂತರ ಆರ್ಥಿಕ ಚಟುವಟಿಕೆಗಳು ಆರಂಭ ಕೈಮುಗಿದು ಲಾಕ್‍ಡೌನ್ ನಿಯಮಗಳನ್ನು ಪಾಲಿಸಿ:B.S.Y

ಬೆಂಗಳೂರು: ಕೊರೊನಾ ವೈರಸ್‍ನಿಂದ ಆಗುತ್ತಿರುವ ಆರ್ಥಿಕ ಸಮಸ್ಯೆಯನ್ನು ಸರಿದೂಗಿಸಲು ಸರ್ಕಾರಿ ನೌಕರರ ಸಂಬಳ ಕಡಿತವಾಗುತ್ತಾ ಎನ್ನುವ ಪ್ರಶ್ನೆ ಎದ್ದಿದೆ. ಈ ಪ್ರಶ್ನೆಗೆ ಸಂಬಂಧಿಸಿದಂತೆ ಸಿಎಂ ಸದ್ಯಕ್ಕೆ ಇನ್ನೂ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಉತ್ತರಿಸಿದ್ದಾರೆ. ಪಬ್ಲಿಕ್ ಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ನಮ್ಮ ಹಣಕಾಸು ಪರಿಸ್ಥಿತಿ ಸರಿ ಇಲ್ಲ. ಆದರೂ ಸರ್ಕಾರಿ ನೌಕರರ ಏಪ್ರಿಲ್ ತಿಂಗಳ ಸಂಬಳ ನಿಲ್ಲಿಸಬೇಡಿ ಎಂದು ಸೂಚಿಸಿದ್ದೇನೆ. ಆದರೆ ಆ ನಂತರದ ತಿಂಗಳ ಬಗ್ಗೆ …

Read More »

ಏ.14ಕ್ಕೆ ಲಾಕ್‍ಡೌನ್ ಮುಗಿಯುತ್ತೆ ಅಂತಾ ಭಾವಿಸಬೇಡಿ: ಸಿಎಂ

ಬೆಂಗಳೂರು: ಏಪ್ರಿಲ್ 14ಕ್ಕೆ ಲಾಕ್ ಡೌನ್ ಮುಗಿಯುತ್ತೆ ಅಂತಾ ಭಾವಿಸಬೇಡಿ. ಲಾಕ್ ಡೌನ್ ಎಷ್ಟು ದಿನ ಮುಂದುವರಿಯುತ್ತದೆ ಎನ್ನುವುದು ಜನರ ಜವಾಬ್ದಾರಿ ಮೇಲಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಪಬ್ಲಿಕ್ ಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ಈ ತಿಂಗಳೇ ಲಾಕ್‍ಡೌನ್ ಮುಗಿಯುತ್ತದೆ ಎನ್ನುವಂತಿಲ್ಲ. ದಯಮಾಡಿ ಮನೆಯೊಳಗೆ ಇರಿ. ಹೊರಗಡೆ ಬಂದರೆ ಮತ್ತಷ್ಟು ದಿನ ಲಾಕ್ ಡೌನ್ ಅನುಭವಿಸಬೇಕಾಗುತ್ತದೆ ಎಂದು ತಿಳಿಸಿದರು. ಶೇ.75 ರಷ್ಟು ಈಗ ಲಾಕ್ ಡೌನ್ …

Read More »