Breaking News

ಬೆಂಗಳೂರು

ಯಾರ ಹೆಗಲಿಗೆ ಬೆಳಗಾವಿ ಜಿಲ್ಲಾ ಉಸ್ತುವಾರಿ? ಬೆಳಗಾವಿಯ ಜವಾಬ್ದಾರಿಯನ್ನು ರಮೇಶ ಜಾರಕಿಹೊಳಿ ಅವರಿಗೆ ಕೊಡಬಹುದು ಎನ್ನುವ ಸುದ್ದಿ ದಟ್ಟ

ಒಂದೆರಡು ದಿನದಲ್ಲೇ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನು ಪುನರ್ ಹಂಚಿಕೆ ಹುಬ್ಬಳ್ಳಿಯ ಜಗದೀಶ ಶೆಟ್ಟರ್ಅವರು ಬೆಳಗಾವಿಯನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದ್ದಾರೆ ಬೆಳಗಾವಿಯ ಜವಾಬ್ದಾರಿಯನ್ನು ರಮೇಶ ಜಾರಕಿಹೊಳಿ ಅವರಿಗೆ ಕೊಡಬಹುದು ಎನ್ನುವ ಸುದ್ದಿ ದಟ್ಟ   ಬೆಳಗಾವಿ – ಇನ್ನು ಒಂದೆರಡು ದಿನದಲ್ಲೇ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನು ಪುನರ್ ಹಂಚಿಕೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿರುವುದರಿಂದ ರಾಜ್ಯ ರಾಜಕೀಯ ಮತ್ತೆ ಕುತೂಹಲ ಮೂಡಿಸಿದೆ. ಕೊರೋನಾ ಗದ್ದಲದಿಂದಾಗಿ ಕಳೆದ ಕೆಲವು …

Read More »

ನಮ್ಮ ಸರಕಾರದ ಮರ್ಯಾದೆ ಉಳಿದಿದ್ದರೆ ಡಿಸಿ, ಎಸ್ಪಿಗಳಿಂದಲೇ ಹೊರತು ಮಂತ್ರಿಗಳಿಂದಲ್:ಬಿ.ಎಸ್.ಯಡಿಯೂರಪ್ಪ

ಬೆಂಗಳೂರು – ಕೆಲಸ ಮಾಡದೆ ಮನೆಯಲ್ಲೇ ಕುಳಿತಿರುವ ಮಂತ್ರಿಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಇನ್ನು ಒಂದೆರೆಡು ದಿನದಲ್ಲೇ ಮಂತ್ರಿಗಳ ಉಸ್ತುವಾರಿ ಬದಲಾವಣೆ ಮಾಡುವುದಾಗಿ ಘೋಷಿಸಿದ್ದಾರೆ. ಖಾಸಗಿ ಚಾನೆಲ್ ಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಯಡಿಯೂರಪ್ಪ, ಇಂತಹ ಸಂದರ್ಭದಲ್ಲಿ ಮಂತ್ರಿಗಳು ಮನೆಯಲ್ಲಿ ಮಕ್ಕಳು, ಮೊಮ್ಮಕ್ಕಳ ಜೊತೆ ಕುಳಿತು ಆಟ ಆಡುವುದಲ್ಲ. ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮಾಡಿ. ಕೊರೋನಾ ತಡೆಯಲು ಏನೇನು ಬೇಕೋ ಅದನ್ನು ಮಾಡಿ ಎಂದು ಕರೆ …

Read More »

ಕೊರೊನಾ ಪರೀಕ್ಷೆಗೆ ಕರ್ನಾಟಕದ 10 ಕಡೆ ವೈದ್ಯಕೀಯ ಲ್ಯಾಬ್

ಬೆಂಗಳೂರು,ಏ.6- ಕೊರೊನಾ ವಿರುದ್ಧ ಹೋರಾಟದಲ್ಲಿ ತೊಡಗಿರುವ ಭಾರತದಲ್ಲಿ ಸೋಂಕಿತರ ತಪಾಸಣೆಗಾಗಿ ಕರ್ನಾಟಕದ 10 ಕಡೆ ವೈದ್ಯಕೀಯ ಲ್ಯಾಬ್ ತೆರೆಯಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಪಟ್ಟಿ ಬಿಡುಗಡೆ ಮಾಡಿದೆ. ಇದರಂತೆ ಹಾಸನ ಇನ್ಸ್‍ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್, ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಶಿವಮೊಗ್ಗ ಇನ್ಸ್‍ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್, ಬೆಂಗಳೂರಿನ ಕಮಾಂಡೋ ಆಸ್ಪತ್ರೆ (ಭಾರತೀಯ ವಾಯುಪಡೆ), ನ್ಯಾಷನಲ್ ಇನ್ಸ್‍ಟಿಟ್ಯೂಟ್ ಆಫ್ ವೈರಾಲಜಿ, ಬೆಂಗಳೂರು ವಲಯ ಘಟಕ, …

Read More »

ರಾಜ್ಯದ ಕೆಲವೆಡೆ ಮಳೆರಾಯನ ಅಬ್ಬರ – ಸಿಡಿಲು ಬಡಿದು ರೈತ ಸಾವು

ಬೆಂಗಳೂರು: ಕೊರೊನಾ ಅಬ್ಬರದ ಮಧ್ಯೆ ವರುಣರಾಯ ಕೂಡ ರಾಜ್ಯದ ಕೆಲವೆಡೆ ಅಬ್ಬರಿಸಿದ್ದಾನೆ. ಧಾರವಾಡ, ಶಿವಮೊಗ್ಗ, ದಾವಣಗೆರೆ, ವಿಜಯಪುರ ಸೇರಿ ಹಲವೆಡೆ ಧಾರಕಾರ ಮಳೆಯಾಗಿದೆ. ವಿಜಯಪುರದ ಮುದ್ದೇಬಿಹಾಳ ತಾಲೂಕಿನ ಹಳ್ಳೂರಿನಲ್ಲಿ ಸಿಡಿಲು ಹೊಡೆದು ರೈತ ಗುಂಡಪ್ಪ ಸಾವನ್ನಪ್ಪಿದ್ದಾರೆ. ಶಿವಮೊಗ್ಗದಲ್ಲಿ ಗುಡುಗು, ಸಿಡಿಲ ಮಳೆಗೆ ಮೆಗ್ಗಾನ್ ಆಸ್ಪತ್ರೆಯ ಮಕ್ಕಳ ವಾರ್ಡ್ ನಲ್ಲಿ ವಿದ್ಯುತ್ ಅವಘಡ ಸಂಭವಿಸಿದ್ದು ಭಾರೀ ಅನಾಹುತ ತಪ್ಪಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆಸ್ಪತ್ರೆಯಲ್ಲಿದ್ದ ಮಕ್ಕಳನ್ನು ಸುರಕ್ಷಿತವಾಗಿ ಖಾಸಗಿ ಆಸ್ಪತ್ರೆಗೆ …

Read More »

ಬೆಂಗಳೂರು:ಅಂಬುಲೆನ್ಸ್‌ನಲ್ಲಿ ಗುಜರಿ ವಸ್ತುಗಳ ಸಾಗಾಟ

ಬೆಂಗಳೂರು: ಯಾರೂ ಹಿಡಿಯುವುದಿಲ್ಲ, ಪರಿಶೀಲನೆ ನಡೆಸುವುದಿಲ್ಲ ಎಂದು ಕಳ್ಳತನ ಮಾಡಿದ್ದ ಗುಜರಿ ವಸ್ತುಗಳನ್ನು ಅಂಬುಲೆನ್ಸ್ ನಲ್ಲಿ ಸಾಗಾಟ ಮಾಡುತ್ತಿದ್ದರು. ಶಿವಾಜಿ ನಗರದ ರೆಸಲ್ ಮಾರ್ಕೆಟ್‍ನಲ್ಲಿ ಸತೀಶ್, ಮಹೇಶ್ ಗುಜರಿ ಸಾಮಾನುಗಳನ್ನು ಹರ್ಷಿಣಿ ಹೆಸರಿನ ಅಂಬುಲೆನ್ಸ್ ಮೂಲಕ ಸಾಗಾಟ ಮಾಡುತ್ತಿದ್ದರು. ವಾಹನಗಳ ಟೈರ್, ಟ್ಯೂಬ್ ಸೇರಿದಂತೆ ಹಲವು ಗುಜರಿ ವಸ್ತುಗಳನ್ನು ಖದೀಮರು ಅಂಬುಲೆನ್ಸ್ ನಲ್ಲಿ ಸಾಗಿಸುತ್ತಿದ್ದರು. ಅನುಮಾನ ಬಂದು ಪೊಲೀಸರು ಅಂಬುಲೆನ್ಸ್ ತಡೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಗುಜರಿ ಸಾಮಾನು …

Read More »

ಕೊರೊನಾಗೆ 24 ಗಂಟೆಯಲ್ಲಿ 27 ಸಾವು – ಸೋಂಕಿತರ ಸಂಖ್ಯೆ 4,200ಕ್ಕೆ ಏರಿಕೆ

ಬೆಂಗಳೂರು: 27 ಜನರು ಕಳೆದ 24 ಗಂಟೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 100ಕ್ಕೆ ತಲುಪಿದೆ. ಭಾನುವಾರ ಸುಮಾರು 12 ಜನರನ್ನು ಕೊರೊನಾ ಬಲಿ ತೆಗೆದುಕೊಂಡಿದೆ ಎಂದು ವರದಿಯಾಗಿದೆ. ಇನ್ನು ಕೊರೊನಾ ಸೋಂಕಿತರ ಸಂಖ್ಯೆ 4 ಸಾವಿರದ ಗಡಿ ದಾಟಿದೆ. ಭಾನುವಾರ ಒಂದೇ ದಿನ ಸುಮಾರು 500ಕ್ಕೂ ಅಧಿಕ ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಕಳೆದ ನಾಲ್ಕು ದಿನಗಳಿಂದ ಸೋಂಕಿಂತರ ಸಂಖ್ಯೆ ದ್ವಿಗುಣವಾಗಿ ಏರಿಕೆಯಾಗ್ತಿರೋದು ಆತಂಕಕ್ಕೆ ಕಾರಣವಾಗಿದೆ. ಏಪ್ರಿಲ್ …

Read More »

ಶೀಘ್ರದಲ್ಲೇ ಟೊಮೋಟೊ ಸಂಸ್ಕರಣಾ ಘಟಕ ಆರಂಭ………..

ಬೆಂಗಳೂರು : ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಲಾಕ್ ಡೌನ್ ಆಗಿದ್ದರ ಪರಿಣಾಮ ಅನ್ನದಾತ ತೀವ್ರ ಸಂಕಷ್ಟಕ್ಕೆ ಸಿಲುಕಿರೋದು ನಿಜ. ಆದ್ರೆ ರೈತರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ತೋಟಗಾರಿಕಾ ಇಲಾಖೆ ಅವಿರತ ಶ್ರಮಿಸುತ್ತಿದೆ. ಸಚಿವ ಡಾ. ನಾರಾಯಣಗೌಡ ಅವರ ಸೂಚನೆಯಂತೆ ತರಕಾರಿ, ಹಣ್ಣು ಮಾರಾಟದ ಬಗ್ಗೆ ಈಗಾಗಲೆ ಕ್ರಮ ತೆಗೆದುಕೊಳ್ಳಲಾಗಿದ್ದು, ಸುಸೂತ್ರವಾಗಿ ಮಾರಾಟ ಕೂಡ ನಡೆಯುತ್ತಿದೆ. ಆದರೆ ಟೊಮೋಟೊ ಬೆಳೆಗಾರರ ಸಮಸ್ಯೆ ಮುಂದುವರೆದಿತ್ತು. ಬೆಲೆ ಪಾತಾಳಕ್ಕೆ ಕುಸಿದ ಪರಿಣಾಮ ರೈತರ ಸ್ಥಿತಿ …

Read More »

ಕೊರೊನಾ ವಿರುದ್ಧದ ಹೋರಾಟದಲ್ಲಿ ಮೋದಿಗೆ ನನ್ನ ಬೆಂಬಲವಿದೆ: ಹೆಚ್‍ಡಿಡಿ

ಬೆಂಗಳೂರು: ಕೊರೊನಾ ವಿರುದ್ಧದ ಹೋರಾಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನನ್ನ ಬೆಂಬಲವಿದೆ ಎಂದು ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡರು ಟ್ವೀಟ್ ಮಾಡಿದ್ದಾರೆ. ಕೊರೊನಾ ವೈರಸ್ ನಿಂದ ದೇಶ ಸಂಕಷ್ಟಕ್ಕೆ ಸಿಲುಕಿದೆ. ಈ ಹಿನ್ನೆಲೆಯಲ್ಲಿ ಮೋದಿ ಅವರು ಇಡೀ ದೇಶವನ್ನೇ ಲಾಕ್‍ಡೌನ್ ಮಾಡಿದ್ದಾರೆ. ಜೊತೆಗೆ ಇಂದು ದೇಶದ ಹಲವಾರು ನಾಯಕರಿಗೆ ಕರೆ ಮಾಡಿ ಕೊರೊನಾ ವಿರುದ್ಧದ ಹೋರಾಟದಲ್ಲಿ ಬೆಂಬಲ ಸೂಚಿಸುವಂತೆ ಕೋರುತ್ತಿದ್ದಾರೆ. ಅಂತಯೇ ದೇವೇಗೌಡರಿಗೂ ಕರೆ ಮಾಡಿದ್ದು, ನಾನು ಬೆಂಬಲ …

Read More »

ರಾಜ್ಯದಲ್ಲಿ 7 ಮಂದಿಗೆ ಕೊರೊನಾ, ಐವರಿಗೆ ಜಮಾತ್ ನಂಟು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 151ಕ್ಕೆ ಏರಿದೆ. ಶನಿವಾರ ಏಕಾಏಕಿ 16 ಮಂದಿ ಸೋಂಕಿತರು ಪತ್ತೆಯಾಗಿದ್ದರೆ, ಇಂದು 7 ಜನರಿಗೆ ಕೊರೊನಾ ತಗುಲಿರುವುದು ದೃಢವಾಗಿದೆ. ಈ ಪೈಕಿ 5 ಕೇಸ್‍ಗಳು ದೆಹಲಿಯ ತಬ್ಲಿಘಿ ಧರ್ಮ ಸಭೆಗೆ ಹೋಗಿ ಬಂದವರೇ ಆಗಿದ್ದಾರೆ. ಬೆಳಗಾವಿಯ ನಾಲ್ವರು, ಬಳ್ಳಾರಿಯ ಒಬ್ಬರ ಜೊತೆ ದುಬೈನಿಂದ ಬೆಂಗಳೂರಿಗೆ ಆಗಮಿಸಿದ ವೃದ್ಧ ದಂಪತಿಗೆ ಸೋಂಕು ಬಂದಿದೆ. ರೋಗಿ 145 – ಬೆಂಗಳೂರಿನ 68 ವರ್ಷದ ವೃದ್ಧ. ದುಬೈಗೆ …

Read More »

ಸರ್ಕಾರಕ್ಕೆ ವೈದ್ಯರಿಗೆ ಸಹಕಾರ ನೀಡದವರಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕು :ಸಂಸದೆ ಶೋಭಾ ಕರಂದ್ಲಾಜೆ

ಉಡುಪಿ: ದೇಶದಲ್ಲಿ ಕೊರೊನಾ ಜಿಹಾದ್ ನಡೆಯುತ್ತಿದೆ. ಸರ್ಕಾರಕ್ಕೆ ವೈದ್ಯರಿಗೆ ಸಹಕಾರ ನೀಡದವರಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕೊರೊನಾ ರೋಗಿ ವೈದ್ಯರನ್ನು ತಬ್ಬಿಕೊಳ್ಳುತ್ತಾರೆ. ನರ್ಸ್ ಗಳಿಗೆ ರೋಗ ಹಬ್ಬಿಸುವ ಧಮ್ಕಿ ಹಾಕಿದ್ದಾರೆ. ಇದು ಭಯೋತ್ಪಾದನೆಯ ಮುಂದುವರಿದ ಭಾಗ. ಕ್ವಾರಂಟೈನ್‍ನಲ್ಲಿ ಇರುವ ಜಿಹಾದಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕು. ಕಠಿಣವಾದ ಕಾನೂನು ದೇಶದಲ್ಲಿ ಜಾರಿಗೆ ಬರಬೇಕು ಎಂದು ಆಗ್ರಹಿಸಿದ್ದಾರೆ. ಕೊರೊನಾ ವಿಚಾರದಲ್ಲಿ …

Read More »