Breaking News
Home / ಜಿಲ್ಲೆ / ಬೆಂಗಳೂರು (page 453)

ಬೆಂಗಳೂರು

ದೇಶದ್ರೋಹದ ಹೇಳಿಕೆಯನ್ನು ಬೇರು ಸಮೇತ ಕಿತ್ತು ಹಾಕಲು ಕ್ರಮ: ಬೊಮ್ಮಾಯಿ

ಹಾವೇರಿ: ದೇಶ ದ್ರೋಹದ ಹೇಳಿಕೆ ನೀಡುವ ಪ್ರಕರಣಗಳ ಕುರಿತು ಸರ್ಕಾರ ನಿಗಾ ವಹಿಸಲಿದೆ. ಇಂತಹ ಪ್ರಕರಣಗಳನ್ನು ರಾಜ್ಯದಿಂದ ಬೇರು ಸಮೇತ ಕಿತ್ತು ಹಾಕುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಹಾವೇರಿಯಲ್ಲಿ ಮಾತನಾಡಿದ ಅವರು, ಇಂತಹ ಪ್ರಕರಣಗಳನ್ನು ಕರ್ನಾಟಕದಿಂದ ಬೇರು ಸಮೇತ ಕಿತ್ತು ಹಾಕಲು ಕ್ರಮ ಕೈಗೊಳ್ಳುತ್ತೆವೆ. ಬೆಂಗಳೂರಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ಸಭೆ ಕರೆಯಲಾಗಿದೆ. ಈ ಕುರಿತು ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ. …

Read More »

ನೋಟು ಅಮಾನೀಕರಣದ ನಂತರ ದೇಶದಲ್ಲಿ ಭ್ರಷ್ಟಾಚಾರ ತಗ್ಗಿದ್ದು, ಕಪ್ಪ ಹಣದ ಬಳಕೆ ನಿಯಂತ್ರಣದಲ್ಲಿದೆ:ಸಚಿವ ಡಿ.ವಿ.ಸದಾನಂದಗೌಡ

ಬೆಂಗಳೂರು, ಫೆ.22- ನೋಟು ಅಮಾನೀಕರಣದ ನಂತರ ದೇಶದಲ್ಲಿ ಭ್ರಷ್ಟಾಚಾರ ತಗ್ಗಿದ್ದು, ಕಪ್ಪ ಹಣದ ಬಳಕೆ ನಿಯಂತ್ರಣದಲ್ಲಿದೆ ಎಂದು ಕೇಂದ್ರ ರಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು. ನಗರದ ಎಫ್‍ಕೆಸಿಸಿಐನಲ್ಲಿ ಭಾರತ ವೆಚ್ಚ ಲೆಕ್ಕಿಗರ ಸಂಸ್ಥೆಯ ವಾರ್ಷಿಕೋತ್ಸವ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಐದು ಟ್ರಿಲಿಯನ್ ಆರ್ಥಿಕತೆಯ ಗುರಿಯೊಂದಿಗೆ ಮುನ್ನುಗ್ಗುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಆರ್ಥಿಕತೆಯ ಶಿಸ್ತು ತಹಬದಿಗೆ ಬರುತ್ತಿದೆ ಎಂದರು. 130 ಕೋಟಿ ಜನಸಂಖ್ಯೆ …

Read More »

ದೇಶದೆಲ್ಲೆಡೆ ಸಡಗರದ ಮಹಾ ಶಿವರಾತ್ರಿ, ದೇಗುಲಗಳಲ್ಲಿ ಮಹಾದೇವನಿಗೆ ವಿಶೇಷ ಪೂಜೆ

ಫೆ.21- ಮಹಾಶಿವರಾತ್ರಿ ಹಬ್ಬವನ್ನು ದೇಶದಾದ್ಯಂತ ಸಂಭ್ರಮ-ಸಡಗರದಿಂದ ಆಚರಿಸಲಾಗುತ್ತಿದ್ದು, ದೇಶದೆಲ್ಲೇಡೆ ಇರುವ ಶಿವ ದೇವಾಲಯಗಳು ಮತ್ತು ಭವ್ಯ ಪ್ರತಿಮೆಗಳ ಸ್ಥಳಗಳಲ್ಲಿ ವಿಶೇಷ ಪೂಜೆ-ಪುನಸ್ಕಾರಗಳು ನಡೆಯುತ್ತಿವೆ. ಮಹಾ ಶಿವರಾತ್ರಿ ಪ್ರಯುಕ್ತ ದೇಶಾದ್ಯಂತ ಹಲವಾರು ಧಾರ್ಮಿಕ ಮತ್ತು ಆಧ್ಯಾತ್ಮಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಜಾಗರಣೆ ನಿಮಿತ್ತ ಅಹೋರಾತ್ರಿವಿವಿಧ ಸಮಾರಂಭಗಳು ಆಯೋಜಿತವಾಗಿವೆ. ಶಿವನ ದೇಗುಲಗಳಲ್ಲಿ ಭಕ್ತರು ಉಪವಾಸ ಮತ್ತು ಜಾಗರಣೆ ಮೂಲಕ ಶಿವ ಸ್ಮರಣೆ ಮಾಡಲು ವ್ಯವಸ್ಥೆ ಮಾಡಲಾಗುತ್ತಿದೆ. ವಿಶ್ವವಿಖ್ಯಾತ ಕಾಶಿ ವಿಶ್ವನಾಥ ದೇವಾಲಯ, ಕರ್ನಾಟಕದ ಕಾಡು …

Read More »

ನೀರು ಹಂಚಿಕೆ ವಿಚಾರದಲ್ಲಿ ಗೆಜೆಟ್ ಅಧಿಸೂಚನೆ ಹೊರಡಿಸಲು ಸುಪ್ರಿಂ ಕೋರ್ಟ ಮ್ಮತಿಸಿರುವುದನ್ನು ನಾನು ಸ್ವಾಗತಿಸುತ್ತೇನೆ:ಸಚಿವರಾದ ರಮೇಶ್ ಜಾರಕಿಹೊಳಿ

ಮಹದಾಯಿ ನೀರು ಹಂಚಿಕೆ: ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿದ ಸಚಿವ ರಮೇಶ್ ಜಾರಕಿಹೊಳಿ… ಬೆಳಗಾವಿ: ಉತ್ತರ ಕರ್ನಾಟಕದ ಬಹುದಿನದ ಬೇಡಿಕೆಯಾದ ಮಹದಾಯಿ ಯೋಜನೆಯ ನದಿ ನೀರು ಹಂಚಿಕೆ ವಿಚಾರದಲ್ಲಿ ಗೆಜೆಟ್ ಅಧಿಸೂಚನೆ ಹೊರಡಿಸಲು ಸುಪ್ರಿಂ ಕೋರ್ಟ ಮ್ಮತಿಸಿರುವುದನ್ನು ನಾನು ಸ್ವಾಗತಿಸುತ್ತೇನೆ ಎಂದು ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಕರ್ನಾಟಕ ಸರ್ಕಾರವು ಮಹದಾಯಿ ಯೋಜನೆ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸಲೇಬೇಕೆಂದು ಈ ಹಿಂದೆ …

Read More »

(ಸಿಎಎ) ವಿರೋಧಿಸಿ ಪ್ರತಿಭಟನೆ ನಡೆಸುವ ಸಂಘಟಿತರು ಹಾಗೂ ಸಂಘಟನೆಗಳ ಮೇಲೆ ರಾಜ್ಯ ಸರ್ಕಾರ ಬ್ರಹ್ಮಾಸ್ತ್ರ ಬಳಸಲು ಮುಂದಾಗಿದೆ

ಸಂಘಟನೆಗಳ ಮೇಲೆ ರಾಜ್ಯ ಸರ್ಕಾರ ಬ್ರಹ್ಮಾಸ್ತ್ರ 10 ಲಕ್ಷ ಭದ್ರತಾ ಠೇವಣಿ ಹಾಗೂ ಕಾರ್ಯಕ್ರಮದ ಹೊಣೆಗಾರಿಕೆಯನ್ನು ಆಯೋಜಕರೇ ಹೊತ್ತುಕೊಳ್ಳಬೇಕು ಶಾಂತಿಯುತ ಪ್ರತಿಭಟನೆ ನೆಪದಲ್ಲಿ ಕಾನೂನು ಉಲ್ಲಂಘಿಸಿದವರಿಗೆ ಮೂಗುದಾರ ಹಾಕಲು ಸರ್ಕಾರ ಮುಂದಾಗಿದೆ. ಬೆಂಗಳೂರು,ಫೆ.21-ಕೇಂದ್ರ ಸರ್ಕಾರದ ನಾಗರಿಕ ತಿದ್ದುಪಡಿ ಕಾಯ್ದೆ(ಸಿಎಎ) ವಿರೋಧಿಸಿ ಪ್ರತಿಭಟನೆ ನಡೆಸುವ ಸಂಘಟಿತರು ಹಾಗೂ ಸಂಘಟನೆಗಳ ಮೇಲೆ ರಾಜ್ಯ ಸರ್ಕಾರ ಬ್ರಹ್ಮಾಸ್ತ್ರ ಬಳಸಲು ಮುಂದಾಗಿದೆ. ನಿನ್ನೆ ಫ್ರೀಡಂಪಾರ್ಕ್‍ನಲ್ಲಿ ಸಿಎಎ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಅಮೂಲ್ಯ ಲಿಯೋನ …

Read More »

ಅಮೂಲ್ಯ ಲಿಯೋನಾ ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಫೋಷಣೆ ಕೂಗಿದ ಬಳಿಕ ಏನು ಹೇಳುತ್ತಿದ್ದಳು ಅದನ್ನ ಪೂರ್ತಿ ಹೇಳಲು ಅವಕಾಶ ಕೊಡಬೇಕಿತ್ತು:ಡಿ.ಕೆ ಶಿವಕುಮಾರ್

ಬೆಂಗಳೂರು: ಅಮೂಲ್ಯ ಲಿಯೋನಾ ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಫೋಷಣೆ ಕೂಗಿದ ಬಳಿಕ ಏನು ಹೇಳುತ್ತಿದ್ದಳು ಅದನ್ನ ಪೂರ್ತಿ ಹೇಳಲು ಅವಕಾಶ ಕೊಡಬೇಕಿತ್ತು ಅಂತ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಅಮೂಲ್ಯ ಲಿಯೋನಾ ಪಾಕಿಸ್ತಾನಕ್ಕೆ ಜಿಂದಾಬಾದ್ ಕೂಗಿದ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ಆಕೆಯ ಭಾಷಣಗಳನ್ನು ನಾನು ನೋಡಿದ್ದೇನೆ. ಅದರಲ್ಲಿ ಆಕೆ ಈಗ ಹೇಳಿದ ಮಾತನ್ನು ಕೇಳಿರಲಿಲ್ಲ. ಅಮೂಲ್ಯಗೆ ಪೂರ್ತಿ ಮಾತನಾಡಲು ಅವಕಾಶ ನೀಡಬೇಕಿತ್ತು. ಆದರೆ ಮಧ್ಯದಲ್ಲಿ ಏನೋ …

Read More »

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಪ್ರತಿಷ್ಠಿತ ಅಂತರರಾಷ್ಟ್ರೀಯ ಪ್ರಶಸ್ತಿಯ…………

ಮುಂಬೈ: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಪ್ರತಿಷ್ಠಿತ ಅಂತರರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ, ಗೌರವಿಸಲಾಗಿದೆ. ದಾದಾ ಸಾಹೇಬ್ ಪಾಲ್ಕೆ ಹಾಗೂ ಮಹಾತ್ಮ ಗಾಂಧೀಜಿ ಅವರ 150ನೇ ವರ್ಷದ ಜನ್ಮದಿನೋತ್ಸವದ ಅಂಗವಾಗಿ ಮುಂಬೈನಲ್ಲಿ ಗುರುವಾರ ಅದ್ದೂರಿಯಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸುದೀಪ್ ಅವರಿಗೆ ದಾದಾ ಸಾಹೇಬ್ ಪಾಲ್ಕೆ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್ 2020ರ ‘ಮೋಸ್ಟ್ ಪ್ರಾಮಿಸಿಂಗ್ ಆಕ್ಟರ್ ಪ್ರಶಸ್ತಿ’ ಪ್ರದಾನ ಮಾಡಿ ಗೌರವಿಸಲಾಯಿತು. ದಬಾಂಗ್ 3′ ಸಿನಿಮಾದ …

Read More »

ರಾಜ್ಯದಲ್ಲಿ ಪ್ರವಾಹದಿಂದ ಹಾನಿಗೊಳಗಾಗಿರುವ 6,648 ಶಾಲೆಗಳ ಮರು ನಿರ್ಮಾಣಕ್ಕೆ 758 ಕೋಟಿ ರೂ. ಬಿಡುಗಡೆ ಮಾಡಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‍ಕುಮಾರ್ ತಿಳಿಸಿದರು

ಬೆಂಗಳೂರು, ಫೆ.20- ರಾಜ್ಯದಲ್ಲಿ ಪ್ರವಾಹದಿಂದ ಹಾನಿಗೊಳಗಾಗಿರುವ 6,648 ಶಾಲೆಗಳ ಮರು ನಿರ್ಮಾಣಕ್ಕೆ 758 ಕೋಟಿ ರೂ. ಬಿಡುಗಡೆ ಮಾಡಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‍ಕುಮಾರ್ ತಿಳಿಸಿದರು. ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲೆ ವಂದನಾ ನಿರ್ಣಯ ಸಲ್ಲಿಸುವ ಸಲುವಾಗಿ ಮಾತನಾಡಿದ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು 7,770 ಶಾಲಾ ಕೊಠಡಿಗಳು ಬಿದ್ದು ಹೋಗಿವೆ. ಅವುಗಳ ರಿಪೇರಿಗೆ 1500 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಬೇಕಾಗಿದೆ ಎಂದಾಗ ಸಚಿವ ಸುರೇಶ್‍ಕುಮಾರ್ ಮಾತನಾಡಿ, 7,770 …

Read More »

ಬಿಎಸ್‍ವೈ ಅವರ 78ನೇ ಹುಟ್ಟು ಹಬ್ಬ 1 ಲಕ್ಷ ಮಂದಿಗೆ ಆಯುಷ್ಮಾನ್ ಕಾರ್ಡ್ ವಿತರಣೆ

ಶಿವಮೊಗ್ಗ: ಪ್ರೇರಣಾ ಎಜುಕೇಶನಲ್ ಮತ್ತು ಸೋಷಿಯಲ್ ಟ್ರಸ್ಟ್ ಹಾಗೂ ಬಿ.ಎಸ್ ಯಡಿಯೂರಪ್ಪನವರ ಅಭಿಮಾನಿ ಬಳಗದವರ ವತಿಯಿಂದ ಬಿಎಸ್‍ವೈ ಅವರ 78ನೇ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆ ಫೆ. 27ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದ್ದಾರೆ. ನಗರದ ತಮ್ಮ ನಿವಾಸದಲ್ಲಿ ಇಂದು ಸುದ್ದಿಗೊಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದ ಅವರು, ನಗರದ ವೀರಶೈವ ಕಲ್ಯಾಣ ಮಂದಿರದಲ್ಲಿ ಈ …

Read More »

ಸಾರಿಗೆ ನೌಕರರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ: ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ,

ಬೆಂಗಳೂರು,ಫೆ.20- ಸಾರಿಗೆ ನೌಕರರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದು ಇಂದಿಲ್ಲಿ ಹೇಳಿರುವ ಸಾರಿಗೆ ಸಚಿವರೂ ಆದ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡುವುದಾಗಿ ಭರವಸೆ ನೀಡಿದರು. ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು, ವೇತನ ತಾರತಮ್ಯ ನಿವಾರಣೆ ಮಾಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ಫ್ರೀಡಂಪಾರ್ಕ್‍ನಲ್ಲಿ ಇಂದು ಕೈಗೊಂಡ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ತೆರಳಿದ ಸಚಿವ ಲಕ್ಷ್ಮಣ್ ಸವದಿ …

Read More »