Home / ಜಿಲ್ಲೆ / ಬೆಂಗಳೂರು (page 46)

ಬೆಂಗಳೂರು

ವಿಚಾರಣೆಗೆ ಹಂಸಲೇಖ ಆಗಮನ; ಠಾಣೆ ಬಳಿ ಬೆಂಬಲಿಗರೊಂದಿಗೆ ನಟ ಚೇತನ್ ಧರಣಿ

ಬೆಂಗಳೂರು: ಪೇಜಾವರ ಶ್ರೀಗಳು ದಲಿತರ ಮನೆಗೆ ಹೋದಾಗ ಕೋಳಿ ತಿಂತಾರಾ? ಕುರಿ ರಕ್ತ ಹುರಿದು ಕೊಟ್ಟರೆ ತಿಂತಾರಾ? ಎಂದು ಪ್ರಶ್ನಿಸಿದ್ದ ಹಂಸಲೇಖಾ ಇಂದು ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ. ಇದ್ರ ಬೆನ್ನಲ್ಲೇ ಬೆಂಬಲಿಗರೊಂದಿಗೆ ಠಾಣೆಗೆ ಆಗಮಿಸಿದ ಚೇತನ್​ ಅವರನ್ನು ಇತರ ಪ್ರತಿಭಟನಾಕಾರರ ರೀತಿಯಲ್ಲೇ ತಡೆದಿದ್ದಾರೆ.  ಈ ವೇಳೆ ಆಕ್ರೋಶ ವ್ಯಕ್ತಪಡಿಸಿದ ಚೇತನ್ ತಮ್ಮ ಬೆಂಬಲಿಗರೊಂದಿಗೆ ಧರಣಿಗೆ ಕುಳಿತಿದ್ದಾರೆ. ಈಗಾಗಲೇ ಎರಡು ಬಾರಿ ವಿಚಾರಣೆ ತಪ್ಪಿಸಿಕೊಂಡಿದ್ದ ಹಂಸಲೇಖ, ಇಂದು ನಗರದ ಬಸವನಗುಡಿ …

Read More »

ಬಸವನಗುಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಂಸಲೇಖಾ:!?

ಬೆಂಗಳೂರು: ನಾದಬ್ರಹ್ಮ ಹಂಸಲೇಖಾ ಪೇಜಾವರ ಶ್ರೀಗಳ ಬಗ್ಗೆ ನೀಡಿದ್ದ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ಇಂದು ಬಸವನಗುಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಲಿದ್ದಾರೆ. ಈ ನಡುವೆ ಹಂಸಲೇಖಾ ಜೊತೆ ನಾನೂ ಪೊಲೀಸ್ ಠಾಣೆಗೆ ಬರುತ್ತೇನೆ ಎಂದು ನಟ ಚೇತನ್ ಪೋಸ್ಟ್ ಮಾಡಿದ್ದು, ಭಜರಂಗದಳ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆ ಎದುರು ಜಮಾವಣೆಗೊಂಡಿರುವ ಭಜರಂಗದಳ ಕಾರ್ಯಕರ್ತರು ಹಂಸಲೇಖಾ ಜೊತೆ ಠಾಣೆಗೆ ನಟ ಚೇತನ್ ಬಂದರೆ ಕಪ್ಪು ಬಾವುಟ ಪ್ರದರ್ಶನ ಮಾಡಿ …

Read More »

ಅಪೌಷ್ಟಿಕತೆ, ರಕ್ತಹೀನತೆ.. ರಾಜ್ಯದ 14 ಲಕ್ಷ ಶಾಲಾ ಮಕ್ಕಳಿಗೆ ಬಿಸಿಯೂಟದೊಂದಿಗೆ ಬೇಯಿಸಿದ ಮೊಟ್ಟೆ

ಬೆಂಗಳೂರು: ಅಪೌಷ್ಟಿಕತೆ, ರಕ್ತಹೀನತೆ ಮತ್ತು ಪ್ರೊಟೀನ್ ಕೊರತೆಯಿಂದ ಬಳಲುತ್ತಿರುವ ಆರರಿಂದ 15 ವರ್ಷದೊಳಗಿನ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಶಾಲಾ ಮಕ್ಕಳಿಗೆ ಬೇಯಿಸಿದ ಮೊಟ್ಟೆ, ಬಾಳೆಹಣ್ಣು ನೀಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆ ಬುಧವಾರ ಸುತ್ತೋಲೆ ಹೊರಡಿಸಿದೆ. ಉತ್ತರ ಕರ್ನಾಟಕ ಭಾಗದ 7 ಜಿಲ್ಲೆಗಳ ವಿದ್ಯಾರ್ಥಿಗಳು ಕೊರತೆಯ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದರಿಂದ ಕಾರ್ಯಕ್ರಮದ ಅಡಿ ಪ್ರಯೋಜನ ಪಡೆಯಲಿದ್ದಾರೆ. ಡಿಸೆಂಬರ್ 1ರಿಂದ ಕಾರ್ಯಕ್ರಮ ಆರಂಭ: ಬೀದರ್, ರಾಯಚೂರು, ಕಲಬುರಗಿ, …

Read More »

ಫಡಣವೀಸ್‌ ವಾಸ್ತವ್ಯವಿದ್ದ ಹೋಟೆಲ್‌ಗೆ ಕಾಂಗ್ರೆಸ್‌ ನಾಯಕ ಭೇಟಿ, ಕುತೂಹಲ

ಪಣಜಿ: ಗೋವಾದ ಬಿಜೆಪಿ ಚುನಾವಣಾ ಉಸ್ತುವಾರಿ ದೇವೇಂದ್ರ ಫಡಣವೀಸ್ ಅವರು ವಾಸ್ತವ್ಯವಿದ್ದ ಹೋಟೆಲ್‌ಗೆ ಗೋವಾ ಕಾಂಗ್ರೆಸ್‌ ಘಟಕದ ಕಾರ್ಯಾಧ್ಯಕ್ಷರು ಸೋಮವಾರ ಮಧ್ಯರಾತ್ರಿ ಭೇಟಿ ನೀಡಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ. ಗೋವಾ ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆದಿರುವ ಹೊತ್ತಿನಲ್ಲಿಯೇ ಕಾರ್ಯಾಧ್ಯಕ್ಷ ಅಲೆಕ್ಸೊ ರೆಜಿನಾಲ್ಡೊ ಲೊರೆಂಕೊ ಅವರು ಭೇಟಿ ನೀಡಿದ್ದಾರೆ. ಈ ಭೇಟಿ ಕುರಿತಂತೆ ಹೋಟೆಲ್‌ ಬಳಿ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಚರ್ಚಿಸಲು ಅವರು ನಿರಾಕರಿಸಿದ್ದರು. ಗೋವಾ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ …

Read More »

ಮೇ ಬಳಿಕವಷ್ಟೇ ಸ್ಥಳೀಯ ಸಂಸ್ಥೆ ಚುನಾವಣೆ?

ಬೆಂಗಳೂರು: ಮುಂದಿನ ವರ್ಷದ ಮೇ ಬಳಿಕವೇ ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ ಚುನಾವಣೆ ನಡೆಯಲು ಸಾಧ್ಯ! ಹೌದು, ತಾಲೂಕು ಮತ್ತು ಜಿಲ್ಲಾ ಪಂಚಾಯತ್‌ ಕ್ಷೇತ್ರಗಳ ಗಡಿ ನಿರ್ಣಯ, ಸದಸ್ಯರ ಸಂಖ್ಯೆ ತೀರ್ಮಾನ, ಮೀಸಲಾತಿ ನಿಗದಿ ಆರಂಭ ವಾ ಗಿದ್ದು, ಮುಂದಿನ ಎಪ್ರಿಲ್‌ ವೇಳೆಗೆ ಇದರ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆಯಿದೆ. ಈ ಎಲ್ಲ ಪ್ರಕ್ರಿಯೆ ಮುಗಿದ ಅನಂತರವೇ ಈ ಎರಡೂ ಚುನಾ ವಣೆ ನಡೆಯುವ ಸಾಧ್ಯತೆ ಇದೆ. ಈ ಸಂಬಂಧ ರಚಿಸಲಾಗಿರುವ “ಕರ್ನಾಟಕ ಪಂಚಾಯತ್‌ರಾಜ್‌ ಕ್ಷೇತ್ರಗಳ …

Read More »

ಕಾಂಗ್ರೆಸ್ ಎಂಎಲ್​ಸಿ ಅಭ್ಯರ್ಥಿಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಪ್ರಪ್ರಥಮವಾಗಿ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಮೊನ್ನೆಮೊನ್ನೆಯಷ್ಟೇ ಬಿಡುಗಡೆ ಮಾಡಿದ್ದು, ಇದೀಗ ಕಾಂಗ್ರೆಸ್ ಕೂಡ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.   ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಸಂಬಂಧಿ ಎಸ್​. ರವಿ ಹಾಗೂ ಬೆಳಗಾವಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಮ್ಮ ಚನ್ನರಾಜ ಬಸವರಾಜ ಹಟ್ಟಿಹೊಳಿ ಸೇರಿ 20 ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಅನುಮೋದಿಸಿದ್ದು, ಪಕ್ಷ ಆ ಪಟ್ಟಿಯನ್ನು ಅಧಿಕೃತವಾಗಿ …

Read More »

ಮಹೇಶ್​ ಜೋಷಿ ಕನ್ನಡ ಸಾಹಿತ್ಯ ಪರಿಷತ್ ನೂತನ ಅಧ್ಯಕ್ಷ; ನ. 24ರಂದು ಅಧಿಕೃತ ಘೋಷಣೆ

ಬೆಂಗಳೂರು: ಶತಮಾನ ಪೂರೈಸಿರುವ ಕನ್ನಡ ಸಾಹಿತ್ಯ ಪರಿಷತ್ತಿನ 26ನೇ ಅಧ್ಯಕ್ಷರಾಗಿ ನಾಡೋಜ ಡಾ. ಮಹೇಶ ಜೋಷಿ ಆಯ್ಕೆಯಾಗಿದ್ದಾರೆ. ರಾಜ್ಯದ ಒಟ್ಟು 420 ಮತಕೇಂದ್ರಗಳಲ್ಲಿ ಭಾನುವಾರ ಬೆಳಗ್ಗೆಯಿಂದ ಸಂಜೆವರೆಗೆ ನಡೆದ ಮತದಾನದಲ್ಲಿ 1.59 ಲಕ್ಷ ಮತದಾರರು ಭಾಗವಹಿಸಿದ್ದರು. ರಾತ್ರಿ ವೇಳೆಗೆ 5 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳ ಫಲಿತಾಂಶ ಪ್ರಕಟವಾಗಿತ್ತು. ಈ ಪೈಕಿ ಮಹೇಶ ಜೋಷಿ ಅವರಿಗೆ 51,169 ಮತಗಳು ಲಭಿಸಿದ್ದು, ಎರಡನೇ ಸ್ಥಾನದಲ್ಲಿರುವ ಡಾ. ಶೇಖರಗೌಡ ಮಾಲಿಪಾಟೀಲ ಅವರಿಗೆ 17,656 ಮತಗಳು …

Read More »

ಭಯಾನಕ ಮಳೆಯಲ್ಲಿ ಪುನೀತ್‌ ಬ್ಯಾನರ್‌ ಎದುರು ಕೈಮುಗಿದು ಕುಳಿತ ಅಭಿಮಾನಿ- ವಿಡಿಯೋ ವೈರಲ್‌

ಬೆಂಗಳೂರು: ನಟ ಪುನೀತ್‌ ರಾಜ್‌ಕುಮಾರ್‌ ಎಲ್ಲರನ್ನೂ ಅಗಲಿ ತಿಂಗಳಾಗುತ್ತ ಬಂದರೂ ಅವರ ಸಾವಿನ ಬಗ್ಗೆ ಇದುವರೆಗೂ ಹಲವು ಅಭಿಮಾನಿಗಳಿಗೆ ಅರಗಿಸಿಕೊಳ್ಳಲು ಸಾಧ್ಯವೇ ಆಗುತ್ತಿಲ್ಲ. ಅಂಥ ಬೆಲೆ ಕಟ್ಟಲಾಗದ ಅಭಿಮಾನ ಅವರ ಮೇಲಿದೆ. ಇದಾಗಲೇ ಸಿನಿಕ್ಷೇತ್ರದವರು, ಕುಟುಂಬಸ್ಥರು ಸೇರಿದಂತೆ ಸಾಮಾನ್ಯ ಜನರು ಕೂಡ ಅಪ್ಪುವಿನ ಜತೆಗಿನ ತಮ್ಮ ಒಡನಾಟವನ್ನು ನೆನಪಿಸಿಕೊಳ್ಳುತ್ತಿರುವ ಬೆನ್ನಲ್ಲೇ ಪುನೀತ್‌ ಅವರ ಸಮಾಧಿಯ ಮುಂದೆ ಬಂದು ರೋಧಿಸುತ್ತಿರುವವರೂ ಹಲವರು.   ಇದೀಗ ಅಭಿಮಾನಿಯೊಬ್ಬ ಸುರಿಯುವ ಮಳೆಯನ್ನೂ ಲೆಕ್ಕಿಸದೇ ಪುನೀತ್​ ಅವರ …

Read More »

“ಕನಕದಾಸರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದೇ ಅವರಿಗೆ ಕೊಡುವ ನಿಜವಾದ ಗೌರವ”

ಬೆಂಗಳೂರು,ನ.22-ದಾಸ ಶ್ರೇಷ್ಠ ಕನಕದಾಸರ ಚಿಂತನೆಗಳು ಮತ್ತು ತತ್ವ ಆದರ್ಶಗಳನ್ನು ಅಳವಡಿಸಿಕೊಂಡರೆ ಸಮಾಜದಲ್ಲಿ ಶಾಂತಿ, ನೆಮ್ಮದಿ ಹಾಗೂ ನವ ಸಮಾಜ ನಿರ್ಮಾಣವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯಪಟ್ಟರು. ಕನಕದಾಸರ ಜಯಂತಿ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ದಾಸರ ಚಿಂತನೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಅವರಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಹೇಳಿದರು. ನವಸಮಾಜ , ಸಮಸಮಾಜ ನಿರ್ಮಾಣವಾಗಬೇಕೆಂದು ಕನಸು ಕಂಡಿದ್ದ ಕನಕದಾಸರು ಪರಿವರ್ತನೆಯ …

Read More »

ಮಳೆಯಿಂದ ಮನೆ ಸಂಪೂರ್ಣ ಹಾನಿಯಾಗಿದ್ದರೆ ತಕ್ಷಣವೇ 1 ಲಕ್ಷ ರೂ. ಪರಿಹಾರ ಬಿಡುಗಡೆ; ಸಿಎಂ ಬೊಮ್ಮಾಯಿ

ಬೆಂಗಳೂರು : ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮನೆ ಕಳೆದುಕೊಂಡವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಮಳೆಯಿಂದ ಮನೆ ಸಂಪೂರ್ಣ ಹಾನಿಯಾಗಿದ್ದರೆ ತಕ್ಷಣವೇ 1 ಲಕ್ಷ ರೂ. ಪರಿಹಾರ ಬಿಡುಗಡೆ ಮಾಡಲು ಸೂಚನೆ ನೀಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ ಹಲವು ಜಿಲ್ಲೆಗಳಲ್ಲಿ ನೆರೆಹಾನಿ ಸಂಭವಿಸಿದ್ದು, 500 ಕೋಟಿ ರೂ.ಗಳನ್ನು ರಸ್ತೆ ದುರಸ್ತಿಪಡಿಸಲು ಬಿಡುಗಡೆ ಮಾಡಲಾಗಿದೆ. ಬೆಳೆ ಸಮೀಕ್ಷೆ ಇಂದಿನಿಂದ ಆರಂಭವಾಗಲಿದ್ದು, …

Read More »