ಬೆಂಗಳೂರು : ರಾಜ್ಯದಲ್ಲಿ ತಾಲ್ಲೂಕು ಹಾಗೂ ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿರುವ ವೈದ್ಯರ ಕೊರತೆಯನ್ನು ಎರಡು ತಿಂಗಳೊಳಗಾಗಿ ನಿವಾರಣೆ ಮಾಡುವುದಾಗಿ ಸಚಿವ ಶ್ರೀರಾಮುಲು ಭರವಸೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಶಾಸಕರಾದ ಎ.ಟಿ.ರಾಮಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಶ್ರೀರಾಮುಲು, ಈ ಮೊದಲು ಲೋಕಸೇವಾ ಆಯೋಗದ ಮೂಲಕ ವೈದ್ಯg ನೇಮಕಾತಿಯಾಗುತ್ತಿತ್ತು. ಸಚಿವರು, ಶಾಸಕರ ಒತ್ತಾಯದ ಮೆರೆಗೆ ನೇರ ನೇಮಕಾತಿಗೆ ಮುಖ್ಯಮಂತ್ರಿ ಅವರು ಅವಕಾಶ ಮಾಡಿಕೊಟ್ಟಿದ್ದಾರೆ ಅಲ್ಲದೆ ಗುತ್ತಿಗೆ ಆಧಾರದ ಮೇಲೆ ವೈದ್ಯರನ್ನು ನೇಮಿಸಿಕೊಳ್ಳಲು ಜಿಲ್ಲಾ …
Read More »ಜನರು ಒಂದೆಡೆ ಗುಂಪು ಸೇರುವಂತಿಲ್ಲ: ಬಿಬಿಎಂಪಿ ಆದೇಶ
ಬೆಂಗಳೂರು, ಮಾ.12: ಕೊರೋನ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಕಾರಣ ಯಾವುದೇ ಕಾರಣಕ್ಕೂ ಜನ ಒಂದೆಡೆ ಗುಂಪು ಸೇರುವಂತಿಲ್ಲ ಎಂದು ಬಿಬಿಎಂಪಿ ಆದೇಶ ಹೊರಡಿಸಿದೆ. ಬಿಬಿಎಂಪಿ ವ್ಯಾಪ್ತಿಯ ಖಾಸಗಿ ಆಸ್ಪತ್ರೆಗಳು, ಬಾರ್ ಆಯಂಡ್ ರೆಸ್ಟೊರೆಂಟ್, ಹೊಟೇಲ್, ಕಲ್ಯಾಣ ಮಂಟಪ, ಚಿತ್ರಮಂದಿರ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಜನ ಒಟ್ಟಾಗಿ ಗುಂಪು ಸೇರಬಾರದು ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಕಟ್ಟುನಿಟ್ಟಿನ ಸುತ್ತೋಲೆ ಹೊರಡಿಸಿದ್ದಾರೆ. ಹಾಗೆಯೇ ಪೊಲೀಸರ ಅನುಮತಿ ಇಲ್ಲದೆ, ಎನ್‌ಒಸಿ ಪ್ರತಿ ಪಡೆಯದೆ …
Read More »ಇದು ರಾಜ್ಯ ಕಾಂಗ್ರೆಸ್ಸಿನ ಯಂಗ್ ಟೀಂ ಎಂಬಂತೆ ಬಿಂಬಸಿಕೊಳ್ಳಲು ಮುಂದಾಗಿದ್ದ ಯುವ ನಾಯಕರುಗಳು ಡಿಕೆಶಿ ಪಟ್ಟಾಭಿಷೇಕದ ನಂತರ ಫುಲ್ ಸೈಲೆಂಟಾಗಿದ್ದಾರೆ
ಬೆಂಗಳೂರು: ಇದು ರಾಜ್ಯ ಕಾಂಗ್ರೆಸ್ಸಿನ ಯಂಗ್ ಟೀಂ ಎಂಬಂತೆ ಬಿಂಬಸಿಕೊಳ್ಳಲು ಮುಂದಾಗಿದ್ದ ಯುವ ನಾಯಕರುಗಳು ಡಿಕೆಶಿ ಪಟ್ಟಾಭಿಷೇಕದ ನಂತರ ಫುಲ್ ಸೈಲೆಂಟಾಗಿದ್ದಾರೆ. ಮುಂದೆ ಏನು ಮಾಡಬೇಕು ಯಾವ ಹೆಜ್ಜೆ ಇಡಬೇಕು ನಡೆ ಏನು ಎನ್ನುವ ಆತಂಕದಲ್ಲಿದ್ದಾರೆ. ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ, ರಿಜ್ವಾನ್ ಅರ್ಷದ್, ಜಮೀರ್ ಅಹಮ್ಮದ್, ಎಂ.ಬಿ.ಪಾಟೀಲ್ ಮುಂದಿನ ನಡೆ ಏನು ಎನ್ನುವ ಹೊಸ ಮಾತು ಕೈ ಪಾಳಯದಲ್ಲಿ ಆರಂಭವಾಗಿದೆ. ಡಿಕೆಶಿಗೆ ಪಟ್ಟ ತಪ್ಪಿಸಿ ಕೃಷ್ಣಬೈರೇಗೌಡರಿಗೆ ಪಟ್ಟ ಕಟ್ಟಲು ಈ …
Read More »ಆಡಳಿತ ಪಕ್ಷದ ಶಾಸಕರಿಗೆ ಸದನ ನಡೆಸಲು ಆಸಕ್ತಿ ಇಲ್ಲ
ಬೆಂಗಳೂರು,- ಆಡಳಿತ ಪಕ್ಷದ ಶಾಸಕರಿಗೆ ಸದನ ನಡೆಸಲು ಆಸಕ್ತಿ ಇಲ್ಲ. ಹಾಗಾಗಿ ಗದ್ದಲ ಮಾಡಿ ಚರ್ಚೆಗೆ ಅಡ್ಡಿಪಡಿಸುತ್ತಿದ್ದಾರೆ ಎಂದು ಪ್ರತಿಪಕ್ಷದ ಕಾಂಗ್ರೆಸ್ ಶಾಸಕರು ಬಿಜೆಪಿ ಶಾಸಕರ ವಿರುದ್ಧ ಹರಿಹಾಯ್ದ ಪ್ರಸಂಗ ನಡೆಯಿತು. ವಿಧಾನಸಭೆ ಪ್ರಶ್ನೋತ್ತರ ಅವಧಿಯ ಬಳಿಕ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹಕ್ಕುಚ್ಯುತಿಯಿಂದ ಸಲ್ಲಿಕೆಯಾಗಿರುವ ಎರಡು ಸೂಚನೆಗಳ ಚರ್ಚೆಗೆ ಅವಕಾಶ ಮಾಡಿ ಕೊಡುವುದಾಗಿ ಹೇಳಿದ್ದಂತೆ ಸಿದ್ದರಾಮಯ್ಯ ಅವರಿಗೆ ಮಾತನಾಡಲು ಆಹ್ವಾನಿಸಿದ್ದರು. ಈ ವೇಳೆ ಬಿಜೆಪಿಯ ಕೆ.ಜಿ.ಬೋಪಯ್ಯ ಮಾತನಾಡಿ, …
Read More »ಹಿರಿಯ ಶಾಸಕರ ರಮೇಶ್‍ಕುಮಾರ್ ಹಾಗೂ ಸಚಿವ ಸುಧಾಕರ್ ನಡುವಿನ ಜಟಾಪಟಿ ಗದ್ದಲ
ಬೆಂಗಳೂರು,ಮಾ.11- ಹಿರಿಯ ಶಾಸಕರ ರಮೇಶ್‍ಕುಮಾರ್ ಹಾಗೂ ಸಚಿವ ಸುಧಾಕರ್ ನಡುವಿನ ಜಟಾಪಟಿ ಹಿನ್ನೆಲೆಯಲ್ಲಿ ನಡೆಯುತ್ತಿರುವ ಗದ್ದಲ ವಿಧಾನಸಭೆಯಲ್ಲಿ ಮುಂದುವರೆದಿದ್ದು, ಕೋಲಾಹಲದ ವಾತಾವರಣ ನಿರ್ಮಿಸಿತು. ಒಂದು ಹಂತದಲ್ಲಿ ವಿರೋಧ ಪಕ್ಷದವರು ಸಮಾಧಾನಗೊಂಡು ಕಲಾಪಕ್ಕೆ ಸಹಕರಿಸಲು ಮುಂದಾದರೂ ಆಡಳಿತ ಪಕ್ಷದ ಶಾಸಕರು ರೊಚ್ಚಿಗೆದ್ದಿದ್ದರಿಂದ 15 ನಿಮಿಷ ಸದನ ಮುಂದೂಡಬೇಕಾದ ಅನಿವಾರ್ಯತೆ ಎದುರಾಯಿತು. ಇಂದು ವಿಧಾನಸಭೆಯ ಕಲಾಪ ಆರಂಭಗೊಳ್ಳುತ್ತಿದ್ದಂತೆ ವಿಪಕ್ಷದ ನಾಯಕ ಸಿದ್ದರಾಮಯ್ಯ, ಸಚಿವ ಕೆ.ಎಸ್.ಈಶ್ವರಪ್ಪ ಇಬ್ಬರೂ ಏಕಕಾಲಕ್ಕೆ ಎದ್ದು ನಿಂತು ನಿನ್ನೆಯ ಘಟನೆಯ …
Read More »ಕಲಬುರ್ಗಿಯಲ್ಲಿ ನಿಧನರಾದ ಶ್ರೀ ಮಹಮದ್ ಹುಸೇನ್ ಸಿದ್ದಿಕಿ, ಕೊರೊನಾ ಶಂಕಿತರೇ ಹೊರತು, ಅವರಿಗೆ ಆ ಸೋಂಕು ತಗುಲಿರುವುದು ದೃಢಪಟ್ಟಿಲ್ಲ
ಬೆಂಗಳೂರು: ಕಲಬುರ್ಗಿಯಲ್ಲಿ ನಿಧನರಾದ ಶ್ರೀ ಮಹಮದ್ ಹುಸೇನ್ ಸಿದ್ದಿಕಿ, ಕೊರೊನಾ ಶಂಕಿತರೇ ಹೊರತು, ಅವರಿಗೆ ಆ ಸೋಂಕು ತಗುಲಿರುವುದು ದೃಢಪಟ್ಟಿಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರೋ ಅವರು, ನಾಗರಿಕರ ಹಿತದೃಷ್ಟಿಯಿಂದ, ಮೃತರ ಅಂತ್ಯಸಂಸ್ಕಾರಕ್ಕಾಗಿ ಕೆಲವೊಂದು ಮುಂಜಾಗ್ರತಾ ಕ್ರಮಗಳನ್ನು ಜಿಲ್ಲಾ ಆರೋಗ್ಯ ಇಲಾಖೆಯು ಕೈಗೊಂಡಿದೆ. ಇದರಲ್ಲಿ ಯಾವುದೇ ಅನಗತ್ಯ ಗೊಂದಲ, ಭಯ ಸೃಷ್ಟಿಸುವುದು ಬೇಡ ಎಂದು ಕೂಡ ಮನವಿ ಮಾಡಿಕೊಂಡಿದ್ದಾರೆ.
Read More »ಕೆಪಿಸಿಸಿ ಅಧ್ಯಕ್ಷರಾಗಿ ಮಾಜಿ ಸಚಿವ ಡಿ.ಕೆ. ಶಿವಕುಮಾರ ಈಶ್ವರ ಖಂಡ್ರೆ, ಸತೀಶ ಜಾರಕಿಹೊಳಿ ಮತ್ತು ಸಲೀಂ ಅಹ್ಮದ್ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ
ಬೆಂಗಳೂರು: ಅವರನ್ನು ಕಾಂಗ್ರೆಸ್ ನೇಮಕ ಮಾಡಿದೆ ಮತ್ತು ವಿರೋಧ ಪಕ್ಷದ ನಾಯಕ ಮತ್ತು ಶಾಸಕಾಂಗ ನಾಯಕನ ಹುದ್ದೆಯಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಮುಂದುವರೆಯಲಿದ್ದಾರೆ. ಈಶ್ವರ ಖಂಡ್ರೆ, ಸತೀಶ ಜಾರಕಿಹೊಳಿ ಮತ್ತು ಸಲೀಂ ಅಹ್ಮದ್ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ಮಾಡಿ ನೇಮಕ ಮಾಡುವುದರ ಮೂಲಕ ಪಕ್ಷ ಬಲವರ್ಧನೆಯ ಮಹತ್ವದ ಜವಾಬ್ದಾರಿ ಎಐಸಿಸಿ ಎಲ್ಲರ ಮೇಲೂ ಹಾಕಿದೆ, ಈ ಕುರಿತು ಇಂದು ಅಧಿಕೃತ ಪ್ರಕಟಣೆ ಬಿಡುಗಡೆಗೊಳಿಸಿರುವ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಕೊನೆಗೂ ಕೆಪಿಸಿಸಿಗೆ …
Read More »ನಾಳೆಯಿಂದಲೇ ಅಂಗನವಾಡಿಯಿಂದ 5ನೇ ತರಗತಿವರೆಗೆ ರಜೆ ಘೋಷಣೆ
ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಕೇಸ್ ಪತ್ತೆಯಾದ ಹಿನ್ನೆಲೆಯಲ್ಲಿ ಬೆಂಗಳೂರು ಶೈಕ್ಷಣಿಕ ಜಿಲ್ಲೆಗಳ ವ್ಯಾಪ್ತಿಯಲ್ಲಿ 5ನೇ ತರಗತಿವರೆಗೆ ರಜೆ ಘೋಷಿಸಲಾಗಿದೆ. ಕೊರೋನಾ ಸೋಂಕಿತ ವ್ಯಕ್ತಿ ಮತ್ತು ಪತ್ನಿ, ಮಗು ಹಾಗೂ ಚಾಲಕನಿಗೆ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. 10 ವರ್ಷದೊಳಗಿನ ಮಕ್ಕಳಿಗೆ ರೋಗನಿರೋಧಕ ಶಕ್ತಿ ಕಡಿಮೆಯಾಗಿರುವ ಕಾರಣ ಸೋಂಕು ತಗುಲಿದರೆ ಬೇಗನೆ ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಮಾರ್ಚ್ 10 ರಿಂದ 17 ರವರೆಗೆ ಅಂಗನವಾಡಿ …
Read More »ದೇಶದಲ್ಲಿ ಮತ್ತೆ ಏಳು ಹೊಸ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದ್ದು, ಇದುವರೆಗೆ ದೃಢಪಟ್ಟವರ ಸಂಖ್ಯೆ 48ಕ್ಕೇರಿದೆ
ನವದೆಹಲಿ, ಮಾ.10- ದೇಶದಲ್ಲಿ ಮತ್ತೆ ಏಳು ಹೊಸ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದ್ದು, ಇದುವರೆಗೆ ದೃಢಪಟ್ಟವರ ಸಂಖ್ಯೆ 48ಕ್ಕೇರಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ತಿಳಿಸಿದೆ.ದುಬೈನಿಂದ ಮಹಾರಾಷ್ಟ್ರದ ಪುಣೆ ಜಿಲ್ಲೆಗೆ ಆಗಮಿಸಿದ ದಂಪತಿಯಲ್ಲಿ ವೈರಾಣು ಸೋಂಕು ಇರುವುದು ದೃಢಪಟ್ಟಿದೆ. ನಿನ್ನೆ ಹೊಸ ಕೊರೊನಾ ವೈರಸ್ ಪ್ರಕರಣಗಳು ದೆಹಲಿ, ಉತ್ತರ ಪ್ರದೇಶ, ಕೇರಳದ ಎರ್ನಾಕುಲಂ, ಜಮ್ಮು, ಬೆಂಗಳೂರು, ಪಂಜಾಬ್ ಮತ್ತು ಪುಣೆಗಳಲ್ಲಿ ವರದಿಯಾಗಿದೆ. ಆದರೆ, ದೇಶದಲ್ಲಿ ಇದುವರೆಗೆ ಕೊರೊನಾ ವೈರಸ್ …
Read More »ಇಂದಿನಿಂದ ಬೆಂಗಳೂರಲ್ಲಿ ಬೀದಿಬದಿ ಹಣ್ಣು-ಚಾಟ್ಸ್ ವ್ಯಾಪಾರ ನಡೆಸುವಂತಿಲ್ಲ: ಸಿಎಂ ಖಡಕ್ ಸೂಚನೆ
ಇಂದಿನಿಂದ ಬೆಂಗಳೂರಲ್ಲಿ ಬೀದಿಬದಿ ಹಣ್ಣು-ಚಾಟ್ಸ್ ವ್ಯಾಪಾರ ನಡೆಸುವಂತಿಲ್ಲ: ಸಿಎಂ ಖಡಕ್ ಸೂಚನೆ ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಹಾಗೂ ಕಾಲರಾ ಭೀತಿ ಹೆಚ್ಚಾಗಿರುವ ಹಿನ್ನೆಲೆ ಇಂದಿನಿಂದ ಬೆಂಗಳೂರಿನಲ್ಲಿ ಯಾವುದೇ ಬೀದಿಬದಿ ವ್ಯಾಪಾರಿಗಳು ವ್ಯಾಪಾರ ನಡೆಸಬಾರದೆಂದು ಸಿಎಂ ಬಿ.ಎಸ್. ಯಡಿಯೂರಪ್ಪ ಖಡಕ್ ಸೂಚನೆ ಕೊಟ್ಟಿದ್ದಾರೆ. ಬಿಬಿಎಂಪಿ ಮೇಯರ್ ಗೌತಮ್ ಕುಮಾರ್, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಜಿ.ಮಂಜುನಾಥ್ ರಾಜು, ಆಡಳಿತ ಪಕ್ಷದ ನಾಯಕ ಮುನೀಂದ್ರಕುಮಾರ್ ಹಾಗೂ ಆಯುಕ್ತ ಅನಿಲ್ ಕುಮಾರ್‌ಗೆ ಸಿಎಂ …
Read More »