Breaking News

ಬೆಂಗಳೂರು

ಮಾಸ್ಕ್ ಯಾರು ಧರಿಸಬೇಕು? ಎಲ್ಲರಿಗೂ ಕಡ್ಡಾಯವಲ್ಲ – ಆರೋಗ್ಯ ಇಲಾಖೆಯಿಂದ ಸ್ಪಷ್ಟನೆ

ಬೆಂಗಳೂರು: ಕೊರೊನಾ ಭೀತಿಯಿಂದಾಗಿ ಈಗ ರಸ್ತೆಗೆ ಇಳಿಯುವ ಮುನ್ನ ಮಾಸ್ಕ್ ಧರಿಸಿರಬೇಕೆಂಬ ಸುದ್ದಿ ಹರಿದಾಡುತ್ತಿದೆ. ಈ ಸುದ್ದಿಗೆ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದ್ದು, ಎಲ್ಲರೂ ಮಾಸ್ಕ್ ಧರಿಸುವ ಅಗತ್ಯವಿಲ್ಲ ಎಂದು ಹೇಳಿದೆ. ಕೆಲವು ಸೂಪರ್ ಮಾರ್ಕೆಟ್‍ಗಳಲ್ಲಿ, ದಿನಸಿ ಅಂಗಡಿಗಳಲ್ಲಿ ಮಾಸ್ಕ್ ಧರಿಸದ ವ್ಯಕ್ತಿಗಳಿಗೆ ಪ್ರವೇಶ ನಿರಾಕರಿಸುತ್ತಿರುವ ಹಿನ್ನೆಲೆಯಲ್ಲಿಯಲ್ಲಿ ಆರೋಗ್ಯ ಇಲಾಖೆ ಆಯುಕ್ತರು ಸುತ್ತೋಲೆ ಬಿಡುಗಡೆ ಮಾಡಿ ಯಾರು ಧರಿಸಬೇಕು? ಯಾರು ಮಾಸ್ಕ್ ಧರಿಸಬಾರದು ವಿಚಾರಕ್ಕೆ ಸ್ಪಷ್ಟನೆ ನೀಡಿದ್ದಾರೆ. ಅಷ್ಟೇ ಅಲ್ಲದೇ …

Read More »

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ದೇಣಿಗೆ ನೀಡಿದ್ದಾರೆ.

ರಾಜ್ಯದಲ್ಲಿ ಮಾರಣಾಂತಿಕ ಕೊರೊನಾ ವೈರಸ್ ಹೆಚ್ಚುತ್ತಿದ್ದು, ಕೊವಿಡ್-19 ಸೋಂಕಿನ ವಿರುದ್ಧ ಹೋರಾಡಲು ಹಲವರು ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಈ ನಡುವೆ ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ದೇಣಿಗೆ ನೀಡಿದ್ದಾರೆ. ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ನಟ ಪುನೀತ್ ರಾಜ್ ಕುಮಾರ್, ಮುಖ್ಯಮಂತ್ರಿಗಳಿಗೆ 50 ಲಕ್ಷ ಚೆಕ್ ಹಸ್ತಾಂತರಿಸಿದ್ದಾರೆ. ಈ ವೇಳೆ ಡಿಸಿಎಂ …

Read More »

ರೈತರ ಅನುಕೂಲಕ್ಕಾಗಿ ಕಂಟ್ರೋಲ್ ರೂಮ್ ಆರಂಭ …….”

ಬೆಂಗಳೂರು,ಮಾ.31-ರೈತರ ಅನುಕೂಲಕ್ಕಾಗಿ ಕೃಷಿ ಇಲಾಖೆಯು ಕೃಷಿ ನಿಯಂತ್ರಣ ಕೊಠಡಿ ಆರಂಭಿಸಿದ್ದು, ನಿರ್ವಹಣೆಗೆ ನಾಲ್ವರು ಸಿಬ್ಬಂದಿಯನ್ನು ನಿಯೋಜಿಸಿದೆ. ಕೃಷಿ ಇಲಾಖೆಯಲ್ಲಿನ ಮುಖ್ಯ ಕಚೇರಿಯಲ್ಲಿನ ನಿಯಂತ್ರಣ ಕೊಠಡಿ ಸಂಖ್ಯೆಗಳು 08022211764 ಮತ್ತು 08022212818. ಈ ಸಂಖ್ಯೆಗಳು ಇಂದು ಬೆಳಿಗ್ಗೆ 11.00 ರಿಂದ ಸಕ್ರಿಯವಾಗಿರುತ್ತವೆ. ನಿಯಂತ್ರಣ ಕೊಠಡಿಯಲ್ಲಿ ಸ್ಮಿತಾ ಮತ್ತು ವೀಣಾ ಎಂಬುವರು ಬೆಳಗ್ಗೆ 8.00 ರಿಂದ ಮಧ್ಯಾಹ್ನ 2.00 ಗಂಟೆವರೆಗೆ ಹಾಗೂ ರೇಮಗೌಡ ಮತ್ತು ವಿಶ್ವನಾಥ್ ಎಂಬುವರು ಮಧ್ಯಾಹ್ನ 2.00 ರಿಂದ ರಾತ್ರಿ …

Read More »

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 98ಕ್ಕೆ ತಲುಪಿದ್ದು, ಶತಕದ ಗಡಿಯಲ್ಲಿದೆ.

ಬೆಂಗಳೂರು, ಮಾ.31- ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 98ಕ್ಕೆ ತಲುಪಿದ್ದು, ಶತಕದ ಗಡಿಯಲ್ಲಿದೆ. ಈ ನಡುವೆ ನಿನ್ನೆ ಸಂಜೆಯಿಂದ ಇಂದು ಬೆಳಗ್ಗೆಯವರೆಗೆ ಹೊಸದಾಗಿ 10 ಮಂದಿ ಸೋಂಕಿತರು ಪತ್ತೆಯಾಗಿದ್ದಾರೆ. ಆರೋಗ್ಯ ಇಲಾಖೆ ಹೊರಡಿಸಿರುವ ಬುಲೇಟಿನ್‍ ಬಿಡುಗಡೆ ಮಾಡಿದ್ದು, ಅದರಲ್ಲಿ ನಿನ್ನೆ ಸಂಜೆಯವರೆಗೆ 88 ಮಂದಿ ಸೋಂಕಿತರಿದ್ದರು, ಅಲ್ಲಿಂದ ಇಂದಿನ ವರೆಗೆ 98 ಮಂದಿ ಸೋಂಕಿತರು ಪತ್ತೆಯಾಗಿದ್ದಾರೆ. ಈವರೆಗೆ ಮೂರು ಮಂದಿ ಸಾವನ್ನಪ್ಪಿದ್ದರೆ ಆರು ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಹೊಸದಾಗಿ ಪತ್ತೆಯಾದ …

Read More »

ಏಪ್ರಿಲ್ 12ರಿಂದ ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ

ಬೆಂಗಳೂರು: ಕೊರೊನಾ ಹರಡುವಿಕೆ ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ ಮಾಡಿದೆ. ಕೊರೊನಾ ವೈರಸ್ ದೇಶದಲ್ಲಿ ಜಾಸ್ತಿಯಾದ ಕಾರಣ ಈ ಮೊದಲೇ ಶಾಲೆಗಳಿಗೆ ಏಪ್ರಿಲ್ 11ರ ವರೆಗೆ ರಜೆ ಘೋಷಣೆ ಮಾಡಲಾಗಿತ್ತು. ಈಗ ಕೊರೊನಾ ವೈರಸ್ ಹರಡುವಿಕೆ ಹೆಚ್ಚಳವಾದ ಕಾರಣ ಏಪ್ರಿಲ್ 12ರಿಂದ ರಾಜ್ಯದ ಎಲ್ಲಾ ಶಾಲೆಗಳಿಗೆ ಬೇಸಿಗೆ ರಜೆಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಇದರ ಜೊತೆಗೆ ಸುತ್ತೋಲೆಯಲ್ಲಿ ಶಿಕ್ಷಕರಿಗೆ ಕೆಲ ನಿಯಮಗಳನ್ನು ಸೂಚಿಸಿರುವ …

Read More »

ಬೆಂಗಳೂರು:ಲಾಕ್ ಡೌನ್ ಹಿನ್ನೆಲೆ ಆಹಾರ ಧಾನ್ಯ, ಊಟ ಸಿಗದೆ 30ಕ್ಕೂ ಹೆಚ್ಚು ಜನ ನರಳಾಟ “….

ಬೆಂಗಳೂರು: ಲಾಕ್ ಡೌನ್ ಹಿನ್ನೆಲೆ ಆಹಾರ ಧಾನ್ಯ, ಊಟ ಸಿಗದೆ 30ಕ್ಕೂ ಹೆಚ್ಚು ಜನ ನರಳಾಡುತ್ತಿರುವ ಘಟನೆ ಬೆಂಗಳೂರು ಹೊರ ವಲಯದ ನೆಲಮಂಗಲದ ಹೊನ್ನಗಂಗಯ್ಯನ ಪಾಳ್ಯದಲ್ಲಿ ನಡೆದಿದೆ. ಸುಮಾರು ಮೂರು ದಿನಗಳಿಂದ ಊಟ ಸಿಗದೆ ಹಕ್ಕಿಪಿಕ್ಕಿಯ ಜನ ನರಳಾಡುತ್ತಿದ್ದು, ತಾಲೂಕು ಆಡಳಿತ ಇತ್ತ ಗಮನಹರಿಸಿಲ್ಲ. ಕೊರೊನಾ ಭೀತಿಯಿಂದ ದೇಶವನ್ನೇ ಲಾಕ್‍ಡೌನ್ ಮಾಡಿರುವ ಹಿನ್ನಲೆ ದವಸ ಧಾನ್ಯ ಸಿಗದೆ ಜನ ಪರದಾಡುತ್ತಿದ್ದಾರೆ. ಮೂರು ದಿನಗಳಿಂದ ಊಟವಿಲ್ಲದೆ ಹಕ್ಕಿಪಿಕ್ಕಿ ಜನಾಂಗದವರುಪರಿತಪಿಸುತ್ತಿದ್ದರೂ ಈ ಕುಟುಂಬಗಳಿಗೆ …

Read More »

ರಾಜ್ಯದಲ್ಲಿ ಕೊರೊನಾಗೆ ಮೂವರು ಬಲಿ – ಮದ್ಯ ಸಿಗದಕ್ಕೆ 13 ಸಾವು

ಬೆಂಗಳೂರು: ಕುಡುಕರು ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ದಾರಿ ಹಿಡಿಯುತ್ತಿರೋದು, ಕೊರೊನಾ ವೈರಸ್ ಲಾಕ್‍ಡೌನ್ ವೇಳೆ ಉದ್ಭವಿಸಿರುವ ಮತ್ತೊಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಕೊರೊನಾ ವೈರಸ್ ಭೀತಿ ಹೆಚ್ಚಾದ ಹಿನ್ನೆಲೆಯಲ್ಲಿ ದೇಶ ಲಾಕ್‍ಡೌನ್ ಆಗಿದೆ. ಹೀಗಾಗಿ ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಮದ್ಯದಂಗಡಿಗಳು ಬಂದ್ ಆಗಿವೆ. ಇದರಿಂದ ಕುಡಿಯಲು ಮದ್ಯ ಸಿಗದೇ ಖಿನ್ನತೆಗೆ ಒಳಗಾಗಿ ಕಳೆದ ಆರು ದಿನಗಳಲ್ಲಿ ರಾಜ್ಯದ ಹಲವೆಡೆ ಒಟ್ಟು 13 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಮೂವರು …

Read More »

ಕೊರೊನಾಗೆ ಹೆದರಿದ ಕೈದಿಗಳು – ತಪಾಸಣೆ ಮಾಡುವಂತೆ ಆಗ್ರಹಿಸಿ ಉಪವಾಸ

ಬೆಂಗಳೂರು: ಕೊರೊನಾ ಸೋಂಕು ಇಡೀ ವಿಶ್ವವನ್ನೇ ಭಯಪಡಿಸಿದೆ. ಇದೀಗ ಜೈಲಿನಲ್ಲಿರುವ ಕೈದಿಗಳು ಕೂಡ ತಮಗೆಲ್ಲಿ ಕೊರೊನಾ ಬರುತ್ತೋ ಅಂತ ಹೆದರಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ. ಪ್ರತಿದಿನ ಬರುವ ವಿಚಾರಾಣಾಧೀನ ಕೈದಿಗಳನ್ನು ತಪಾಸಣೆ ಮಾಡಿ ನಂತರ ಕಾರಾಗೃಹಕ್ಕೆ ಎಂಟ್ರಿ ನೀಡಬೇಕು. ಅಲ್ಲದೇ ಬ್ಯಾರಕ್‍ಗಳಲ್ಲಿ ಮಿತಿಗಿಂತ ಹೆಚ್ಚಿರುವ ಕೈದಿಗಳನ್ನು ಬೇರೆಡೆ ಸ್ಥಳಾಂತರಿಸಬೇಕು ಎಂದು ಉಪವಾಸ ಸತ್ಯಾಗ್ರಹ ಮಾಡಿ ಪ್ರತಿಭಟಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಈ …

Read More »

ಹೋಮ್ ಕ್ವಾರಂಟೈನ್‍ನಲ್ಲಿರೋರು ಫೋಟೋ ಕಳಿಸಿಲ್ಲ ಅಂದ್ರೆ ಮನೆಗೆ ಬರ್ತಾರೆ ಅಧಿಕಾರಿಗಳು

ಬೆಂಗಳೂರು: ದೇಶದಲ್ಲಿ ಕೊರೊನಾ ವೈರಸ್ ದಿನೇ ದಿನೇ ಹೆಚ್ಚಾಗುತ್ತಿದೆ. ಸರ್ಕಾರ ಏನೇ ಕಠಿಣ ಕ್ರಮ ತೆಗೆದುಕೊಂಡು ಜನರು ಮನೆಯಿಂದ ಹೊರ ಬಂದು ಓಡಾಡುತ್ತಿದ್ದಾರೆ. ಆದ್ದರಿಂದ ಕೊರೊನಾ ಹಬ್ಬುವಿಕೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಹೋಮ್ ಕ್ವಾರಂಟೈನ್‍ನಲ್ಲಿರುವವರ ಮೇಲೆ ನಿಗಾ ಬಿಗಿಗೊಳಿಸಿದೆ. ಈಗಾಗಲೇ ಕ್ವಾರಂಟೈನ್‍ನಲ್ಲಿರುವವರು ಕೊರೊನಾ ವಾಚ್ ಮೊಬೈಲ್ ಆಪ್ ಡೌನ್‍ಲೋಡ್ ಮಾಡಬೇಕೆಂದು ಸರ್ಕಾರ ಕಡ್ಡಾಯ ಮಾಡಿದೆ. ಇದೀಗ ಪ್ರತಿ ಗಂಟೆಗೆ ಒಮ್ಮೆ ತಮ್ಮ ಫೋಟೋಗಳನ್ನು ಈ ಆಪ್‍ನಲ್ಲಿ ಅಪ್ಲೋಡ್ ಮಾಡುವಂತೆ ಸರ್ಕಾರ …

Read More »

ಕೊರೊನಾ ಎಫೆಕ್ಟ್ – ಸಿಇಟಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ದೇಶದಲ್ಲಿ ಕೊರೊನಾ ಎಫೆಕ್ಟ್ ಜಾಸ್ತಿಯಾದ ಕಾರಣ ಮುಂದಿನ ತಿಂಗಳು ನಿಗದಿಯಾಗಿದ್ದ ಸಿಇಟಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಏಪ್ರಿಲ್ 22 ರಿಂದ 24ವರೆಗೆ ಸಿಇಟಿ ಪರೀಕ್ಷೆಗಳು ನಡೆಯಬೇಕಿತ್ತು. ಆದರೆ ಕೊರೊನಾ ವೈರಸ್ ಭೀತಿಯಿಂದ ಪ್ರಧಾನಿ ಮೋದಿ ಅವರು ದೇಶವನ್ನು ಏಪ್ರಿಲ್ 14ವರೆಗೆ ಲಾಕ್‍ಡೌನ್ ಮಾಡಿದ್ದಾರೆ. ಕೊರೊನಾ ವೈರಸ್ ದೇಶದಲ್ಲಿ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ದಿನೇ ದಿನೇ ಕೊರೊನಾ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸಿಇಟಿ ಪರೀಕ್ಷೆಯನ್ನು ಮುಂದೂಡಲಾಗಿದೆ ಇಂದು ಕರ್ನಾಟಕ ಪರೀಕ್ಷಾ …

Read More »