ಬೆಂಗಳೂರು: ಬೆಳಗಾವಿ ರಾಜಕಾರಣ ಪ್ರವೇಶಿಸಿದ್ದಕ್ಕೆ ಅಸಮಾಧಾನಗೊಂಡು ಡಿಕೆ ಶಿವಕುಮಾರ್ ವಿರುದ್ಧ ಬಂಡಾಯ ಸಾರಿದ್ದ ರಮೇಶ್ ಜಾರಕಿಹೊಳಿ ಅವರಿಗೆ ಕೊನೆಗೂ ಡಿಕೆಶಿ ಬಳಿಯಿದ್ದ ಜಲಸಂಪನ್ಮೂಲ ಖಾತೆ ಸಿಕ್ಕಿದೆ. ಡಾ.ಕೆ.ಸುಧಾಕರ್ ಅವರಿಗೆ ವೈದ್ಯಕೀಯ ಶಿಕ್ಷಣ ಅಥವಾ ಇಂಧನ ಇಲಾಖೆ ಸಿಗಲಿದೆ ಎಂದು ಹೇಳಲಾಗುತಿತ್ತು. ಆದರೆ ಈಗ ವೈದ್ಯಕೀಯ ಶಿಕ್ಷಣ ಖಾತೆ ಫೈನಲ್ ಆಗಿದೆ ಮಂತ್ರಿಗಳಾಗಿ 10 ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸಿದ್ದರೂ ಇನ್ನು ಖಾತೆ ಹಂಚಿಕೆ ಆಗಿರಲಿಲ್ಲ. ಜಲಸಂಪನ್ಮೂಲ ಖಾತೆ ಸಿಗಬೇಕೆಂದು ಜಾರಕಿಹೊಳಿ ಪಟ್ಟು …
Read More »7ದಿನದ ಹಸುಗೂಸಿಗೆ ಹೃದಯ ಸಮಸ್ಯೆ – ಜೀರೋ ಟ್ರಾಫಿಕ್‍ನಲ್ಲಿ ಶಿವಮೊಗ್ಗದಿಂದ ಬೆಂಗ್ಳೂರಿಗೆ ರವಾನೆ
ಶಿವಮೊಗ್ಗ: ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ 7 ದಿನದ ಹಸುಗೂಸಿನ ಜೀವ ಉಳಿಸಲು ಜೀರೋ ಟ್ರಾಫಿಕ್ ವ್ಯವಸ್ಥೆ ಮಾಡಿ ಶಿವಮೊಗ್ಗದಿಂದ ಬೆಂಗಳೂರಿಗೆ ಅಂಬುಲೆನ್ಸ್‌ನಲ್ಲಿ ರವಾನಿಸಲಾಗಿದೆ. ಮೆಗ್ಗಾನ್ ಆಸ್ಪತ್ರೆಯ ವೈದ್ಯರ ಸಲಹೆ ಮೇರೆಗೆ ಶಿವಮೊಗ್ಗದಿಂದ ಜೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಕಂದಮ್ಮನನ್ನು ಅಂಬುಲೆನ್ಸ್‌ನಲ್ಲಿ ಬೆಂಗಳೂರಿಗೆ ಕರೆತರಲಾಗುತ್ತಿದೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಬೇಲಿ ಮಲ್ಲೂರು ಗ್ರಾಮದ ಸ್ವಾಮಿ ಹಾಗೂ ಸುಧಾ ದಂಪತಿಗೆ ಫೆ. 4ರಂದು ಮೆಗ್ಗಾನ್ ಆಸ್ಪತ್ರೆಯಲ್ಲಿ ಗಂಡು ಮಗು ಜನಿಸಿತ್ತು. ಜನನದ ನಂತರ ಮಗುವನ್ನು …
Read More »ಕುಮಾರಸ್ವಾಮಿಯವರ ಪುತ್ರ, ನಟ ನಿಖಿಲ್‍ಕುಮಾರಸ್ವಾಮಿ ಅವರ ವಿವಾಹದ ನಿಶ್ಚಿತಾರ್ಥ ಇಂದು ಖಾಸಗಿ ಹೊಟೇಲ್‍ನಲ್ಲಿ ಅದ್ಧೂರಿಯಾಗಿ ನೆರವೇರಿತು.
ಬೆಂಗಳೂರು, ಫೆ.10-ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಶಾಸಕಿ ಅನಿತಾ ಕುಮಾರಸ್ವಾಮಿಯವರ ಪುತ್ರ, ನಟ ನಿಖಿಲ್‍ಕುಮಾರಸ್ವಾಮಿ ಅವರ ವಿವಾಹದ ನಿಶ್ಚಿತಾರ್ಥ ಇಂದು ಖಾಸಗಿ ಹೊಟೇಲ್‍ನಲ್ಲಿ ಅದ್ಧೂರಿಯಾಗಿ ನೆರವೇರಿತು. ಮಾಜಿ ಸಚಿವ ಎಂ.ಕೃಷ್ಣಪ್ಪ ಅವರ ಸಹೋದರನ ಮೊಮ್ಮಗಳಾದ ರೇವತಿ ಅವರೊಂದಿಗೆ ನಿಖಿಲ್‍ಕುಮಾರಸ್ವಾಮಿ ವಿವಾಹದ ನಿಶ್ಚಿತಾರ್ಥವು ಎರಡೂ ಕುಟುಂಬಗಳ ಬಂಧು-ಬಳಗ ಹಾಗೂ ಹಿರಿಯರ ಸಮ್ಮುಖದಲ್ಲಿ ನೆರವೇರಿತು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಸಚಿವ ಎಚ್.ಡಿ.ರೇವಣ್ಣ ಸೇರಿದಂತೆ ಕುಟುಂಬದ ಸದಸ್ಯರು ನಿಶ್ಚಿತಾರ್ಥದಲ್ಲಿ ಭಾಗವಹಿಸಿದ್ದರು. ವಿವಿಧ …
Read More »ಯಾವುದೇ ಕ್ಷಣದಲ್ಲಿ ನೂತನ ಸಚಿವರಿಗೆ ಖಾತೆ ಹಂಚಿಕೆ ಸಾಧ್ಯತೆಯಾರಿಗೆ ಯಾವ ಖಾತೆ ಸಾಧ್ಯತೆ?
ಯಾವುದೇ ಕ್ಷಣದಲ್ಲಿ ನೂತನ ಸಚಿವರಿಗೆ ಖಾತೆ ಹಂಚಿಕೆ ಸಾಧ್ಯತೆ ಬೆಂಗಳೂರು,ಫೆ.10- ಸಾಕಷ್ಟು ಕಸರತ್ತು ನಡೆಸಿ ಸಚಿವ ಸಂಪುಟ ವಿಸ್ತರಣೆ ಮಾಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಯಾವುದೇ ಕ್ಷಣದಲ್ಲಿ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಿದ್ದಾರೆ. ಈ ಮೊದಲೇ ತಮ್ಮ ಮಂತ್ರಿ ಮಂಡಲದಲ್ಲಿದ್ದ 17 ಸಚಿವರಿಗೂ ಹೆಚ್ಚುವರಿಯಾಗಿ ಖಾತೆಗಳ ಹಂಚಿಕೆ ಮಾಡಲಾಗಿತ್ತು. ಇದೀಗ ಹೆಚ್ಚುವರಿ ಖಾತೆಗಳನ್ನು ವಾಪಸ್ ಪಡೆದು ನೂತನ ಸಚಿವರಿಗೆ ಹಂಚಿಕೆ ಮಾಡಲಾಗುತ್ತದೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿಗಳೇ ಸ್ಪಷ್ಟನೆ …
Read More »ಆಡಂಬರ, ಅಬ್ಬರ ಇಲ್ಲದ ಹಿತವಾದ ಪ್ರೇಮ್ ಕಹಾನಿ ‘ದಿಯಾ’
6-5=2 ಹಾರಾರ್ ಚಿತ್ರದ ಸೂಪರ್ ಸಕ್ಸಸ್ ನಿರ್ದೇಶಕ ಅಶೋಕ್ ಕೆ.ಎಸ್ ಈ ಬಾರಿ ‘ದಿಯಾ’ ಚಿತ್ರದ ಮೂಲಕ ಟ್ರಾಯಂಗಲ್ ಲವ್ ಸ್ಟೋರಿ ಹೇಳ ಹೊರಟಿದ್ದಾರೆ. ಇಲ್ಲೂ ಹಾರಾರ್ ಎಳೆ ಇದ್ದು ಪ್ರೇಕ್ಷಕರಿಗೆ ಥ್ರಿಲ್ ನೀಡೋದ್ರಲ್ಲಿ ಮತ್ತೊಮ್ಮೆ ಗೆದ್ದಿದ್ದಾರೆ. ಹೊಸತಂಡ ಕಟ್ಟಿಕೊಂಡು ಹೊಸ ಕಥೆ ಹೇಳ ಹೊರಟಿರೋ ದಿಯಾ ಚಿತ್ರ ಇಂದು ಬಿಡುಗಡೆಯಾಗಿ ಪ್ರೇಕ್ಷಕರಿಂದ ಪಾಸಿಟಿವ್ ರೆಸ್ಪಾನ್ಸ್ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಸಂಪೂರ್ಣ ಹೊಸತನದಿಂದ ಕೂಡಿರೋ ರೋಮ್ಯಾಂಟಿಕ್ ಪ್ರೇಮ್ ಕಹಾನಿ ದಿಯಾ ಚಿತ್ರದಲ್ಲಿದೆ. …
Read More »ನೂತನ 10 ಸಚಿವರೂ ಕೂಡ ಸಿದ್ದರಾಮಯ್ಯ ಬೆಂಬಲಿಗರು. ಹೀಗಾಗಿ ಅವರನ್ನು ಒಳ್ಳೆಯ ಕೆಲಸ ಮಾಡಿ ಎಂದು ಬೆನ್ನು ತಟ್ಟಿ
ಚಾಮರಾಜನಗರ: ಮಾಜಿ ಸಿಎಂ ಸಿದ್ದರಾಮಯ್ಯ ಪ್ರಬುದ್ಧರು. ಅನರ್ಹರು ಜನತಾ ನ್ಯಾಯಾಲಯದಲ್ಲಿ ಗೆದ್ದು ಅರ್ಹರಾಗಿದ್ದಾರೆ. ನೂತನ 10 ಸಚಿವರೂ ಕೂಡ ಸಿದ್ದರಾಮಯ್ಯ ಬೆಂಬಲಿಗರು. ಹೀಗಾಗಿ ಅವರನ್ನು ಒಳ್ಳೆಯ ಕೆಲಸ ಮಾಡಿ ಎಂದು ಬೆನ್ನು ತಟ್ಟಿ ಪ್ರೋತ್ಸಾಹಿಸಬೇಕು ಎಂದು ಬಿಎಸ್‍ಪಿ ಉಚ್ಛಾಟಿತ ಶಾಸಕ ಎನ್ ಮಹೇಶ್ ಸಲಹೆ ನೀಡಿದ್ದಾರೆ. ಚಾಮರಾಜನಗರದ ಯಳಂದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹರು ಯಾವುದೇ ಪಕ್ಷಕ್ಕೆ ಹೋಗಿ ಮಂತ್ರಿಯಾದರೂ ಆವರು ಅನರ್ಹರೇ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಮಹೇಶ್, …
Read More »-ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯನವರ ಒಳಜಗಳದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಫುಟ್‍ಪಾತ್ ಸ್ಥಿತಿಗೆ ಬಂದಿವೆ
ಬೆಂಗಳೂರು.ಫೆ.8-ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯನವರ ಒಳಜಗಳದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಫುಟ್‍ಪಾತ್ ಸ್ಥಿತಿಗೆ ಬಂದಿವೆ ಎಂದು ಕಂದಾಯ ಸಚಿವ ಆರ್.ಅಶೋಕ್ ಲೇವಡಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುವುದಿಲ್ಲ ಎಂದು ಕುಮಾರಸ್ವಾಮಿ ಹೇಳುತ್ತಾರೆ. ಕುಮಾರಸ್ವಾಮಿ ಮತ್ತೆ ಸಿಎಂ ಆಗುವುದೇ ಇಲ್ಲ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಇಬ್ಬರ ಜಗಳದಲ್ಲಿ ಎರಡೂ ಪಕ್ಷಗಳು ಬೀದಿಗೆ ಬಿದ್ದಿವೆ ಎಂದು ವ್ಯಂಗ್ಯವಾಡಿದರು. ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಹೇಳುತ್ತಿರುವುದು ನೂರಕ್ಕೆ ನೂರರಷ್ಟು ಸತ್ಯ. ಏಕೆಂದರೆ …
Read More »ಸೋಮವಾರ ಖಾತೆಗಳನ್ನು ಹಂಚಿಕೆ ಇಂದಿಲ್ಲಿ :BSY
ಬೆಂಗಳೂರು,ಫೆ.8- ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿರುವ ನೂತನ 10 ಮಂದಿ ಶಾಸಕರಿಗೆ ಸೋಮವಾರ ಖಾತೆಗಳನ್ನು ಹಂಚಿಕೆ ಮಾಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ಘೋಷಿಸಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಸಚಿವರಿಗೆ ಯಾವ ಖಾತೆಗಳನ್ನು ನೀಡಬೇಕೆಂಬ ಪಟ್ಟಿ ಸಿದ್ದವಾಗಿದೆ. ಸೋಮವಾರ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡುವುದಾಗಿ ಹೇಳಿದರು. ಇಂದು ಶನಿವಾರ ರಜಾದಿನವಾಗಿದ್ದರಿಂದ ಪಟ್ಟಿಯನ್ನು ಪ್ರಕಟಿಸಲು ಸಾಧ್ಯವಾಗಿಲ್ಲ. ಸೋಮವಾರ ಖಾತೆಗಳ ಹಂಚಿಕೆಯಾಗಲಿದೆ. ಈ ಬಗ್ಗೆ ಯಾವುದೇ ರೀತಿಯ ಗೊಂದಲವಿಲ್ಲ ಎಂದು ಸ್ಪಷ್ಟಪಡಿಸಿದರು. ಇಂದೇ …
Read More »10 ಮಂದಿ ಸಚಿವರಿಗೆ ಸಿಎಂ ಯಡಿಯೂರಪ್ಪ ಸಲಹೆ ಖಾತೆಗಳ ಬಗ್ಗೆ ಮಾಧ್ಯಮಗಳ ಮುಂದೆ ಬೇಡಿಕೆ ಇಡಬೇಡಿ. ಹೈಕಮಾಂಡ್ ಜೊತೆ ಚರ್ಚಿಸಿ ಖಾತೆಗಳನ್ನು ಅಂತಿಮ
ಬೆಂಗಳೂರು: ಪ್ರಮಾಣ ವಚನ ಸ್ವೀಕರಿಸಿದ ನೂತನ 10 ಮಂದಿ ಸಚಿವರಿಗೆ ಸಿಎಂ ಯಡಿಯೂರಪ್ಪ ಸಲಹೆಗಳನ್ನು ನೀಡಿದ್ದಾರೆ. ನೂತನ ಸಚಿವರ ಜೊತೆ ಸಂಪುಟ ಕೊಠಡಿಯಲ್ಲಿ ಸಭೆ ನಡೆಸಿದ ಯಡಿಯೂರಪ್ಪ ಆರಂಭದಲ್ಲಿ ಅಭಿನಂದನೆ ತಿಳಿಸಿ ಸರ್ಕಾರ ಮತ್ತು ಪಕ್ಷದಲ್ಲಿ ಯಾವ ರೀತಿ ಇರಬೇಕೆಂಬ ಬಗ್ಗೆ ಸಿಎಂ ಪಾಠ ಮಾಡಿದ್ದಾರೆ. ನಿಮ್ಮನ್ನು ಮಂತ್ರಿ ಮಾಡುತ್ತೇನೆ ಎಂದು ಹೇಳಿದ ಭರವಸೆಯನ್ನು ಈಡೇರಿಸಿದ್ದೇನೆ. ಆದರೆ ಖಾತೆಗಾಗಿ ನೀವು ಸ್ವಲ್ಪ ಕಾಯಬೇಕು. ಖಾತೆಗಳ ಬಗ್ಗೆ ಮಾಧ್ಯಮಗಳ ಮುಂದೆ ಬೇಡಿಕೆ ಇಡಬೇಡಿ. …
Read More »ಕೇಂದ್ರ ಬಜೆಟ್ ನಲ್ಲಿ ಬೆಳಗಾವಿ-ಧಾರವಾಡ ರೈಲು ಯೋಜನೆಗೆ ಅಸ್ತು
ಬೆಳಗಾವಿ: ಬೆಳಗಾವಿ-ಧಾರವಾಡ ನಡುವೆ ನೇರ ರೈಲು ಓಡಿಸಬೇಕು ಎನ್ನುವ ಹಲವು ದಶಕಗಳ ಬೇಡಿಕೆ ಸಾಕಾರಗೊಳ್ಳುವ ಕಾಲ ಈಗ ಕೂಡಿ ಬಂದಿದೆ. ಸೋಮವಾರ ಲೋಕಸಭೆಯಲ್ಲಿ ಮಂಡಿಸಿದ ಕೇಂದ್ರ ಬಜೆಟ್ ನಲ್ಲಿ ಹಣಕಾಸು ಸಚಿವೆ ನಿಮ೯ಲಾ ಸೀತಾರಾಮನ್ ಅವರು ಈ ಯೋಜನೆಗಾಗಿ ರೂ.988 ಕೋಟಿ ಅನುದಾನವನ್ನು ನೀಡಲು ಒಪ್ಪಿಗೆ ಸೂಚಿಸಿದ್ದು, ಈ ಮೂಲಕ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯ ಜನರ ಹಲವಾರು ವಷ೯ಗಳ ಕನಸು ನನಸಾಗಲು ಹಸಿರು ನಿಶಾನೆ ತೋರಿದ್ದಾರೆ. ತಿಂಗಳ ಹಿಂದಷ್ಟೇ ನೈರುತ್ಯ …
Read More »
Laxmi News 24×7