ಬೆಂಗಳೂರು: ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಗೆ ಇಂದು 46ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಕುಟುಂಬಸ್ಥರು ಹಾಗೂ ಅಭಿಮಾನಿಗಳೊಂದಿಗೆ ಸೇರಿ ತಲ್ವಾರ್ ನಿಂದ ಕೇಕ್ ಕಟ್ ಮಾಡಿ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಂಡಿದ್ದಾರೆ. ತಲ್ವಾರ್ ನಲ್ಲಿ ಕೇಕ್ ಕತ್ತರಿಸೋ ಮೂಲಕ ದುನಿಯಾ ವಿಜಯ್ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಕಾನೂನಿನ ಪ್ರಕಾರ ಯಾವುದೆ ಆಯುಧಗಳನ್ನು ಸಾರ್ವಜನಿಕವಾಗಿ ಬಳಸುವಂತಿಲ್ಲ ಹಾಗೂ ಪ್ರದರ್ಶಿಸುವಂತಿಲ್ಲ. ಐದು ಇಂಚಿಗೂ ಉದ್ದದ ಕತ್ತಿಯನ್ನು …
Read More »ಸ್ವಿಡ್ಜರ್‌ಲ್ಯಾಂಡ್‌ನಿಂದ ಬಂದು ಎರಡೇ ದಿನದಲ್ಲಿ ಸಂಪುಟ ವಿಸ್ತರಣೆ ಮಾಡ್ತೀನಿ’ ವಿದೇಶಕ್ಕೆ ಹಾರಿದ ಸಿಎಂ
ಬೆಂಗಳೂರು, ಜ.19-ಸ್ವಿಡ್ಜರ್‌ಲ್ಯಾಂಡ್‌ನ ದಾವೋಸ್‍ನಿಂದ ಹಿಂದಿರುಗಿದ ಎರಡೇ ದಿನಗಳಲ್ಲಿ ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು. ಈ ಬಗ್ಗೆ ಯಾರಿಗೂ ಯಾವುದೇ ರೀತಿಯ ಗೊಂದಲ ಬೇಡ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ವಿದೇಶಕ್ಕೆ ತೆರಳುವ ಮುನ್ನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ದಾವೋಸ್‍ನಿಂದ ಹಿಂದುರುಗಿದ ಎರಡೇ ದಿನಗಳಲ್ಲಿ ಸಂಪುಟ ವಿಸ್ತರಣೆ ಮಾಡುತ್ತೇನೆ. ಈ ಸಂಬಂಧ ನಿನ್ನೆ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಶಾ …
Read More »ರಾಜ್ಯ ಸರ್ಕಾರಕ್ಕೆ ಅಧಿವೇಶನ ನಡೆಸಿ ಜನರ ಸಮಸ್ಯೆ ಚರ್ಚೆಯಾಗುವುದು ಬೇಕಿಲ್ಲ. ಅದಕ್ಕಾಗಿ ವಿಧಾನಮಂಡಲ ಅಧಿವೇಶನ ಕರೆಯಲು ಹಿಂದೆ-ಮುಂದೆ ನೋಡುತ್ತಿದೆ
ಬೆಂಗಳೂರು, ಜ.18- ರಾಜ್ಯ ಸರ್ಕಾರಕ್ಕೆ ಅಧಿವೇಶನ ನಡೆಸಿ ಜನರ ಸಮಸ್ಯೆ ಚರ್ಚೆಯಾಗುವುದು ಬೇಕಿಲ್ಲ. ಅದಕ್ಕಾಗಿ ವಿಧಾನಮಂಡಲ ಅಧಿವೇಶನ ಕರೆಯಲು ಹಿಂದೆ-ಮುಂದೆ ನೋಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ನಗರದ ಪ್ರೆಸ್‍ಕ್ಲಬ್‍ನಲ್ಲಿ ಪತ್ರಕರ್ತ ಚಂದ್ರಶೇಖರ್ ರಾವ್ ಅವರ ನೆನಪು ಮಾಸುವ ಮುನ್ನ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ವರ್ಷಕ್ಕೆ ಕನಿಷ್ಠ 60 ದಿನ ಅಧಿವೇಶನ ನಡೆಸಬೇಕೆಂಬ ಕಾನೂನನ್ನು ನಾವೇ ಮಾಡಿಕೊಂಡಿದ್ದೇವೆ. ಆದರೆ, ಅದು ಸರಿಯಾಗಿ ಪಾಲನೆಯಾಗುತ್ತಿಲ್ಲ. ಈ …
Read More »ಬೆಳ್ಳಿ ಪರದೆ ಮೇಲೆ ಬಹಳಷ್ಟು ನಿರೀಕ್ಷೆ ಇಟ್ಟುಕೊಂಡಿರುವ ಶ್ರೀ ಭರತ ಬಾಹುಬಲಿ ಇದೇ ವಾರ ರಾಜ್ಯಾದ್ಯಂತ ಬಿಡುಗಡೆ
ಬೆಳ್ಳಿ ಪರದೆ ಮೇಲೆ ಬಹಳಷ್ಟು ನಿರೀಕ್ಷೆ ಇಟ್ಟುಕೊಂಡಿರುವ ಶ್ರೀ ಭರತ ಬಾಹುಬಲಿ ಇದೇ ವಾರ ರಾಜ್ಯಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ. ಚಿತ್ರದ ನಾಯಕ ಕಂ ನಿರ್ದೇಶಕ ಮಂಜು ಮಾಂಡವ್ಯ ಬಿಡುಗಡೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಪ್ರೊಮೋಷನ್‍ನ ಕೊನೆಯ ಹಂತವಾಗಿ ಮಾಧ್ಯಮಗಳ ಮುಂದೆ ಚಿತ್ರತಂಡ ಬಂದಿತ್ತು. ಈ ಸಂದರ್ಭದಲ್ಲಿ ಹಿರಿಯ ನಟ ಚರಣ್ ರಾಜ್ ಅವರ ಮಗನ ಪರಿಚಯವನ್ನು ನಿರ್ದೇಶಕರು ಮಾಡಿಕೊಟ್ಟಿದ್ದು ವಿಶೇಷವಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಮಂಜು ಮಾಂಡವ್ಯ ಚಿತ್ರದ ಟ್ರೇಲರ್‍ನಲ್ಲಿ …
Read More »ನಟಿ ರಶ್ಮಿಕಾ ಮಂದಣ್ಣ ಅವರಿಗೆ ಇದೇ 21ರಂದು ವಿಚಾರಣೆಗೆ ಹಾಜರಾಗುವಂತೆ ಐಟಿ ನೋಟಿಸ್
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಗೆ ಸಿಲುಕಿರುವ ಬಹುಭಾಷಾ ನಟಿ ರಶ್ಮಿಕಾ ತಂದೆ ಮದನ್ ಮಂದಣ್ಣ ಹಾಗೂ ತಾಯಿ ಸುಮನ್ ಅವರಿಗೆ ಪ್ರತ್ಯೇಕವಾಗಿ ನೋಟಿಸ್ ಜಾರಿ ಬೆಂಗಳೂರು,ಜ.18- ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಗೆ ಸಿಲುಕಿರುವ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಇದೇ 21ರಂದು(ಮಂಗಳವಾರ) ವಿಚಾರಣೆಗೆ ಹಾಜರಾಗುವಂತೆ ಐಟಿ ನೋಟಿಸ್ ಜಾರಿ ಮಾಡಿದೆ. ಐಟಿ ಅಧಿಕಾರಿಗಳು ರಶ್ಮಿಕಾ ಮಂದಣ್ಣ , ಅವರ ತಂದೆ ಮದನ್ ಮಂದಣ್ಣ ಹಾಗೂ ತಾಯಿ …
Read More »ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆ ಸಂದರ್ಭದಲ್ಲಿ ಅಸಮಾಧಾನ
ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆ ಸಂದರ್ಭದಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಆಡಳಿತಾರೂಢ ಬಿಜೆಪಿ ಸದಸ್ಯರೇ ತಮ್ಮ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಬೆಂಗಳೂರು, ಜ.18- ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆ ಸಂದರ್ಭದಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಆಡಳಿತಾರೂಢ ಬಿಜೆಪಿ ಸದಸ್ಯರೇ ತಮ್ಮ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಮಾಜಿ ಸಚಿವ ಆರ್.ಅಶೋಕ್, ಶಾಸಕ ಸತೀಶ್‍ರೆಡ್ಡಿ ನಡುವೆ ಸ್ಥಾಯಿ ಸಮಿತಿ ಚುನಾವಣೆ ಸದಸ್ಯರ ಆಯ್ಕೆ ಸಂಬಂಧ ಮಾತಿನ …
Read More »ಕೆಪಿಸಿಸಿ ಅಧ್ಯಕ್ಷ ಸ್ಥಾನದ ಹೆಸರು ಘೋಷಣೆ ಇನ್ನಷ್ಟು ವಿಳಂಬ
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಹೆಸರು ಘೋಷಣೆ ಇನ್ನಷ್ಟು ವಿಳಂಬವಾಗುವ ಸಾಧ್ಯತೆಯಿದೆ. ಕಾರ್ಯಾಧ್ಯಕ್ಷ ಸ್ಥಾನಗಳ ಬಗ್ಗೆ ಹೈಕಮಾಂಡ್ ಇಂದು ಅಂತಿಮ ನಿರ್ಧಾರ ಕೈಗೊಳುವ ಸಾಧ್ಯತೆಯಿರುವುದರಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಘೋಷಣೆಯೂ ವಿಳಂಬವಾಗಲಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಹೆಸರನ್ನು ಹೈಕಮಾಂಡ್ ಫೈನಲ್ ಮಾಡಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ. ಆದರೆ ಕೆಪಿಸಿಸಿಗೆ ನಾಲ್ವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ. ಈ …
Read More »ಭಜರಂಗಿ 2 ಸೆಟ್‍ನಲ್ಲಿ ಬೆಂಕಿ, 1 ಕೋಟಿ ವೆಚ್ಚದ ಸೆಟ್ ಭಸ್ಮ
ನೆಲಮಂಗಲ, ಜ.16- ಸೆಂಚುರಿಸ್ಟಾರ್ ಶಿವರಾಜ್‍ಕುಮಾರ್ ಅಭಿನಯದ ಭಜರಂಗಿ 2 ಚಿತ್ರದ ಸೆಟ್‍ಗೆ ಇಂದು ಬೆಳಗ್ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಕೆಲ ಹೊತ್ತು ಆತಂಕದ ವಾತಾವರಣ ಸೃಷ್ಟಿಸಿದೆ. ಹರ್ಷ ನಿರ್ದೇಶನದ ಭಜರಂಗಿ 2 ಚಿತ್ರದ ಚಿತ್ರೀಕರಣವು ನೆಲಮಂಗಲದ ಬಳಿ ಇರುವ ಮೋಹನ್ ಬಿ.ಕೆರೆ ಸ್ಟುಡಿಯೋದಲ್ಲಿ 1 ಕೋಟಿ ರೂ. ವೆಚ್ಚದ ಸೆಟ್‍ನ್ನು ನಿರ್ಮಿಸಲಾಗಿತ್ತು. ಇಂದಿನ ಚಿತ್ರೀಕರಣದಲ್ಲಿ ನಾಯಕ ನಟ ಶಿವರಾಜ್‍ಕುಮಾರ್ ಸೇರಿದಂತೆ ಸುಮಾರು 300ಕ್ಕೂ ಹೆಚ್ಚು ಸಹಕಲಾವಿದರು ಪಾಲ್ಗೊಂಡಿದ್ದು ಶೂಟಿಂಗ್ ನಡೆಯುವ …
Read More »ಸಂಚು ರೂಪಿಸಿದ್ದ ಆರು ಮಂದಿ ತೀವ್ರ ಮತೀಯ ವಾದಿಗಳನ್ನು ನಗರ ಪೊಲೀಸರು ಹಿಂದೂ ಸಂಘಟನೆಯ ಕಾರ್ಯಕರ್ತ ವರುಣ್ ಕೊಲೆ ಯತ್ನ ಪ್ರಕರಣದಲ್ಲಿ ಬಂಧಿಸಿದ್ದಾರೆ.
ಬೆಂಗಳೂರು, ಜ.17- ಹಿಂದೂ ಮುಖಂಡರನ್ನು ಹತ್ಯೆ ಮಾಡಿ ನಗರದಲ್ಲಿ ಶಾಂತಿ ಕದಡಿ ಮತೀಯ ಗಲಭೆ ಹುಟ್ಟುಹಾಕಲು ಭಾರೀ ಸಂಚು ರೂಪಿಸಿದ್ದ ಆರು ಮಂದಿ ತೀವ್ರ ಮತೀಯ ವಾದಿಗಳನ್ನು ನಗರ ಪೊಲೀಸರು ಹಿಂದೂ ಸಂಘಟನೆಯ ಕಾರ್ಯಕರ್ತ ವರುಣ್ ಕೊಲೆ ಯತ್ನ ಪ್ರಕರಣದಲ್ಲಿ ಬಂಧಿಸಿದ್ದಾರೆ. ಆರೋಪಿಗಳ ಬಂಧನ ಮತ್ತು ಅದರ ಕಾರ್ಯಾಚರಣೆಯ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿಂದು ಮಾಹಿತಿ ನೀಡಿದ ನಗರ ಪೊಲೀಸ್ ಆಯುಕ್ತ ಭಾಸ್ಕರ್‍ರಾವ್, ಆರೋಪಿಗಳು ಅತ್ಯಂತ ಚಾಣಾಕ್ಷತನದಿಂದ ಸಾಕ್ಷಿಗಳು ಸಿಗದಂತೆ ವಿಧ್ವಂಸಕ ಕೃತ್ಯ …
Read More »ಸಾಗರಮಾಲ ಯೋಜನೆಯು ದೇಶದ ಎಲ್ಲಾ ಬಂದರುಗಳನ್ನು ಆಧುನಿಕರಣಗೊಳಿಸಿ
ಸಾಗರಮಾಲ ಯೋಜನೆಯು ದೇಶದ ಎಲ್ಲಾ ಬಂದರುಗಳನ್ನು ಆಧುನಿಕರಣಗೊಳಿಸಿ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆಯುತ್ತಿರುವ ಬಂದ್ ಕುರಿತಾಗಿ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ಬೆಂಗಳೂರು ವಿಧಾನಸೌಧದಲ್ಲಿ ಸಾಗರಮಾಲಾ ಯೋಜನೆ ವಿರೋಧಿಸಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ,ಜಿ ಯವರ ಉಸ್ತುವಾರಿ ಜಿಲ್ಲೆಯಾದ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆಯುತ್ತಿರುವ ಬಂದ್ …
Read More »