ಬೆಂಗಳೂರು : ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರು ತಮ್ಮ ಇಲಾಖೆಗಳಲ್ಲಿ ನಡೆದಿರುವ ಹಗರಣಗಳ ವಿರುದ್ಧ ಧ್ವನಿ ಎತ್ತದಂತೆ ಮನವೊಲಿಸುವುದಕ್ಕಾಗಿ ಕಾಂಗ್ರೆಸ್ ಶಾಸಕ ಎಂ.ಬಿ. ಪಾಟೀಲರನ್ನು ಭೇಟಿಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿದ ಅವರು, ‘ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳವುದಕ್ಕಾಗಿ ಸಚಿವರು ಪಾಟೀಲರ ಮನೆಗೆ ಹೋಗಿ ಬಂದಿದ್ದಾರೆ. ಈಗ ಬೇರೆ ಸಬೂಬು ಹೇಳಬಹುದು. ಶಿಕ್ಷಣ ಸಂಸ್ಥೆಗಳನ್ನು ಹೊಂದಿರುವ ಎಂ.ಬಿ. ಪಾಟೀಲರ …
Read More »ಪಕ್ಷದ ಬ್ಯಾನರ್ ನಂತಿದೆ ಎಂದು ಸರ್ಕಾರ ಕೊಟ್ಟ ಸೀರೆಯನ್ನ ಸಾರಾಸಗಟಾಗಿ ತಿರಸ್ಕರಿಸಿದ ಅಂಗನವಾಡಿ ಕಾರ್ಯಕರ್ತೆಯರು,
ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು(Anganwadi Workers) ರಾಜ್ಯ ಸರ್ಕಾರ ನೀಡುತ್ತಿರುವ ಸೀರೆಗಳನ್ನು ತಿರಸ್ಕರಿಸಿದ್ದಾರೆ. ಪ್ರಧಾನಮಂತ್ರಿಯವರ ಬಹುಮುಖ್ಯ ಕಾರ್ಯಕ್ರಮವಾದ ಪೋಷಣ್ ಅಭಿಯಾನದಡಿ (Poshan Campaign-National Nutrition Mission) ವಿತರಿಸಲು ಮುಂದಾಗಿರುವ ಸೀರೆಗಳನ್ನು ಅಂಗನವಾಡಿ ಕಾರ್ಯಕರ್ತೆಯರು ನಿರಾಕರಿಸಿದ್ದಾರೆ. ಈ ಸೀರೆಗಳು ಸರ್ಕಾರದ ಪ್ರಚಾರಕ್ಕೆ ಬಳಸುವ ಬ್ಯಾನರ್ನಂತಿವೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ. ಹೀಗಾಗಿ ಸೀರೆ ಪಡೆಯಲು ಅಂಗನವಾಡಿ ಕಾರ್ಯಕರ್ತೆಯರು ಹಿಂದೇಟು ಹಾಕಿದ್ದಾರೆ. ಸುಮಾರು 10 ಕೋಟಿ ಮೌಲ್ಯದ 2.5 ಲಕ್ಷಕ್ಕೂ ಹೆಚ್ಚು ಸೀರೆಗಳನ್ನು ರಾಜ್ಯದ …
Read More »ಸುಪ್ರಭಾತ ಅಭಿಯಾನ ಆರಂಭಿಸುತ್ತಿರುವವರು ಉಗ್ರರು : ಹರಿಪ್ರಸಾದ್
ಬೆಂಗಳೂರು: ದೇವಸ್ಥಾನಗಳಲ್ಲಿ ಧ್ವನಿವರ್ಧಕ ಬಳಸಲು ಕರೆ ಕೊಟ್ಟವರು ಭಯೋತ್ಪಾದಕರು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಹೇಳಿದ್ದಾರೆ. ವಿಧಾನ ಸೌಧದಲ್ಲಿ ಮಾತನಾಡಿದ ಅವರು, ಯಾರು ಈ ಸುಪ್ರಭಾತ ಅಭಿಯಾನವನ್ನು ಪ್ರಾರಂಭ ಮಾಡುತ್ತಿದ್ದಾರೋ ಅವರು ಭಯೋತ್ಪಾದಕರು. ಅವರನ್ನು ಕಾನೂನು ಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ (ಯುಎಪಿಎ) ಕಾಯ್ದೆಯ ಅಡಿಯಲ್ಲಿ ಅರೆಸ್ಟ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ಸಮಾಜ ವಿರೋಧಿ ಶಕ್ತಿಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಇವರು ಸಂಘ ಪರಿವಾರದ ವಿವಿಧ …
Read More »ವಿಶ್ವ ತಾಯಂದಿರ ದಿನಾಚರಣೆ ಹಿನ್ನೆಲೆಯಲ್ಲಿ 600ಕ್ಕೂ ಹೆಚ್ಚು ಗರ್ಭಿಣಿ ತಾಯಿಯರಿಗೆ ಸೀಮಂತ ಶಾಸ್ತ್ರ
ಬೆಂಗಳೂರು: ವಿಶ್ವ ತಾಯಂದಿರ ದಿನಾಚರಣೆ ಹಿನ್ನೆಲೆಯಲ್ಲಿ 600ಕ್ಕೂ ಹೆಚ್ಚು ಗರ್ಭಿಣಿ ತಾಯಿಯರಿಗೆ ಸೀಮಂತ ಶಾಸ್ತ್ರ ಕಾರ್ಯಕ್ರಮವನ್ನು ಸಾಂಪ್ರದಾಯಿಕವಾಗಿ ನೆರವೇರಿಸಲಾಯಿತು. ಬೆಂಗಳೂರು ಹೊರವಲಯ ಟಿ.ದಾಸರಹಳ್ಳಿಯ ಎಂಇಐ ಮೈದಾನದಲ್ಲಿ ಯಾವುದೇ ಸಮಸ್ಯೆಗಳು ಎದುರಾಗದಂತೆ ಮೃತ್ಯುಂಜಯ, ಗಣಪತಿ ಹೋಮ ಹವನ ಮಾಡುವ ಮೂಲಕ ದೇವರಿಗೆ ಪೂಜೆ ಸಲ್ಲಿಸಿ ಸಾಮೂಹಿಕವಾಗಿ ಸೀಮಂತ ಶಾಸ್ತ್ರ ಮಾಡಲಾಯಿತು. ಟಿ. ದಾಸರಹಳ್ಳಿಯ ಕಾಂಗ್ರೆಸ್ ಮುಖಂಡೆ ಗೀತಾ ಶಿವರಾಂ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು ಕಾರ್ಯಕ್ರಮಕ್ಕೆ ಬಂದಿರುವ ಮಹಿಳೆಯರಿಗೆ ಅರಿಶಿನ ಕುಂಕುಮ, ಸೀರೆ, ಬಳೆ …
Read More »ಗೋವುಗಳನ್ನು ದತ್ತು ತೆಗೆದುಕೊಳ್ಳುವ ಪುಣ್ಯಕೋಟಿ ಯೋಜನೆ ಪ್ರಾರಂಭ : ಸಿಎಂ
ಬೆಂಗಳೂರು : ರಾಜ್ಯದ ಗೋಶಾಲೆಗಳಲ್ಲಿನ ಗೋವುಗಳನ್ನು 11,000 ರೂ.ಗಳ ವಾರ್ಷಿಕ ಮೊತ್ತಕ್ಕೆ ದತ್ತು ತೆಗೆದುಕೊಳ್ಳುವ ಪುಣ್ಯಕೋಟಿ ದತ್ತು ಯೋಜನೆಯನ್ನು ಪ್ರಾರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಶನಿವಾರ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಲಾಖೆಯ ವತಿಯಿಂದ ಕಿರುಚಿತ್ರ ಪ್ರದರ್ಶನ, ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಿಸಿ ಮಾತನಾಡಿದರು. ಈ ಹಿಂದೆ ನಾನು ನನ್ನ ಹುಟ್ಟುಹಬ್ಬವನ್ನು ಅನಾಥಾಶ್ರಮಕ್ಕೆ ತೆರಳಿ ಮಕ್ಕಳಿಗೆ ದಾನಧರ್ಮ ಮಾಡುವ ಮೂಲಕ ಆಚರಿಸಿಕೊಳ್ಳುತ್ತಿದ್ದೆ. ಈ ಬಾರಿ ನಾನು …
Read More »ಕರ್ನಾಟಕದಲ್ಲಿ ಇನ್ನು ಮುಂದೆ ಬಿಜೆಪಿಯ ಪರ್ವ: ಆರ್.ಅಶೋಕ್
ಬೆಂಗಳೂರು: ಕರ್ನಾಟಕದಲ್ಲಿ ಇನ್ನು ಮುಂದೆ ಬಿಜೆಪಿಯ ಪರ್ವ, ಡಬಲ್ ಇಂಜಿನ್ ಸರ್ಕಾರ ಬೇಕು ಅಂತ ಕೇಳುತ್ತಿದ್ದಾರೆ. ಡಬಲ್ ಇಂಜಿನ್ ಮತ್ತೆ ಕೆಲಸ ಮಾಡಲು ರಣತಂತ್ರ ಮಾಡಿದ್ದೇವೆ ಎಂದು ಸಚಿವ ಆರ್. ಸಂತೋಷ್ ಅವರು ರಾಜ್ಯಕ್ಕೆ ಬಂದು ಚರ್ಚೆ ಮಾಡಿ ಹೋಗಿದ್ದಾರೆ. ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ ಭಾಗದ ನಾಯಕರನ್ನ ಬಿಜೆಪಿಗೆ ಬರಮಾಡಿಕೊಳ್ಳಲಾಗಿದೆ. ಯಾವುದೇ ಷರತ್ತುಗಳನ್ನು ಹಾಕದೆ ಪಕ್ಷಕ್ಕೆ ಬರಮಾಡಿಕೊಳ್ಳಲಾಗಿದೆ.ಬಿಜೆಪಿಯ ನಾಯಕರು ಮಾಡಿದ್ದಾರೆ.ಇದು ಪ್ರಾಥಮಿಕ ಹಂತ. ಇನ್ನೂ ಹಲವರನ್ನ ಗುರುತಿಸಿದ್ದೇವೆ. ಇದು ನಿನ್ನೆ, …
Read More »ಶಿವಮೊಗ್ಗದ ಗಲಭೆ, ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆ ಹಿಂದೆ ಸಿದ್ದರಾಮಯ್ಯ ಇದ್ದಾರೆ:ನಳಿನ್ ಕುಮಾರ್ ಕಟೀಲ್
ಬೆಂಗಳೂರು: ಸಿದ್ದರಾಮಯ್ಯ ಡ್ರಗ್ಸ್ ಹಣದಲ್ಲಿ ಸರ್ಕಾರ ನಡೆಸಿದರು.ನಮ್ಮ ಸರ್ಕಾರ ಬಂದು ಡ್ರಗ್ಸ್ ಮುಕ್ತ ಕರ್ನಾಟಕ ಮಾಡಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಭಾನುವಾರ ಯುವ ಮೋರ್ಚಾ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಅವರು, ಗಾಂಧಿಯವರು ಸ್ವಾತಂತ್ರ್ಯ ನಂತರ ಭಾರತ ರಾಮರಾಜ್ಯ ಆಗಬೇಕು ಅಂದರು. ಗಾಂಧಿ ಸ್ವಾತಂತ್ರ್ಯದ ನಂತರದ ಭಾರತ ಜಾತ್ಯಾತೀತ ಆಗಬೇಕು ಅನ್ನಲಿಲ್ಲ. ಭಾರತ ರಾಮರಾಜ್ಯ ಆಗಲು ಪ್ರತೀ ವ್ಯಕ್ತಿ ರಾಮ ಆಗಬೇಕು. ವ್ಯಕ್ತಿ ನಿರ್ಮಾಣದಿಂದ …
Read More »ನಾನು ಜನ್ಮ ದಿನಾಚರಣೆ ಆಚರಿಸಲ್ಲ, ಜಾಹೀರಾತು ನೀಡೋದಾದ್ರೇ ಕಾಂಗ್ರೆಸ್ ಹೋರಾಟ, ಪ್ರತಿಭಟನೆ ಬಗ್ಗೆ ನೀಡಿ – ಡಿಕೆ ಶಿವಕುಮಾರ್
ಬೆಂಗಳೂರು: ಮೇ.15ರಂದು ನನ್ನ ಜನ್ಮ ದಿನಾಚರಣೆಯನ್ನು ನಾನು ಆಚರಿಸಿಕೊಳ್ಳೋದಿಲ್ಲ. ನನ್ನ ಮನೆ ಬಳಿಗೆ ಬರಬೇಡಿ. ನಾನು ಉದಯಪುರದಲ್ಲಿ ಇರುತ್ತೇನೆ. ನನ್ನ ಜನ್ಮ ದಿನಾಚರಣೆ ನಿಮಿತ್ತ ಮಾಧ್ಯಮಗಳಿಗೆ ಜಾಹೀರಾತು ಕೊಡೋ ಬದಲಾಗಿ ಕಾಂಗ್ರೆಸ್ ಪಕ್ಷದಿಂದ ( Congress Party ) ಸರ್ಕಾರದ ವಿರುದ್ಧ ನಡೆಸಿದಂತ ಹೋರಾಟ, ಪ್ರತಿಭಟನೆಗಳ ಬಗ್ಗೆ ನೀಡುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ( DK Shivakumar ) ಮನವಿ ಮಾಡಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ …
Read More »P.S.I.ನೇಮಕಾತಿ ಹಗರಣದ ತನಿಖೆಯನ್ನು ಸಿಐಡಿಗೆ ನೀಡಿರುವುದರ ಹಿಂದೆ ಸತ್ಯ ಹೊರಬರುವುದನ್ನು ತಡೆಯುವ ಹುನ್ನಾರ: ಭಾಸ್ಕರ್ ರಾವ್
ಬೆಂಗಳೂರು: ಪಿಎಸ್‍ಐ ನೇಮಕಾತಿ ಹಗರಣದ ತನಿಖೆಯನ್ನು ಸಿಐಡಿಗೆ ನೀಡಿರುವುದರ ಹಿಂದೆ ಸತ್ಯ ಹೊರಬರುವುದನ್ನು ತಡೆಯುವ ಹುನ್ನಾರವಿದೆ ಎಂದು ಆಮ್ ಆದ್ಮಿ ಪಾರ್ಟಿ ಮುಖಂಡ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಹೇಳಿದರು. ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರೇ ಆರೋಪಿಗಳಾಗಿರುವ ಹಗರಣವನ್ನು ಬಿಜೆಪಿ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ಸಿಐಡಿಯಿಂದಲೇ ತನಿಖೆ ಮಾಡಿಸುವುದು ಹಾಸ್ಯಾಸ್ಪದ. ಈ ತನಿಖೆಗೆ ಯಾವ ಬೆಲೆಯೂ ಇಲ್ಲ. ಅನುಮಾನಾಸ್ಪದ ಅಭ್ಯರ್ಥಿಯ ತನಿಖೆ ವೇಳೆ …
Read More »ನನಗೆ 90 ವರ್ಷ ಆಯ್ತು ವಿಶ್ರಾಂತಿ ಬೇಕು: ಮಾಜಿ ಸಿಎಂ ಎಸ್ ಎಂ ಕೃಷ್ಣ
ಬೆಂಗಳೂರು: ಚಿತ್ರಕಲಾ ಪರಿಷತ್ನಲ್ಲಿ ಇಂಡಿಯನ್ ಆರ್ಟ್ ಫೆಸ್ಟಿವಲ್ ಇಂದಿನಿಂದ ಶುರುವಾಗಿದ್ದು, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಚಾಲನೆ ಕೊಟ್ಟರು. ಬಳಿಕ ಮಾತಾನಾಡಿದ ಅವರು, ಕಲಾಕೃತಿಗಳು ಕಣ್ಣಿಗೆ ಹಾಗೂ ಮನಸ್ಸಿಗೆ ನೆಮ್ಮದಿ, ಸಂತೋಷ ಕೊಡುತ್ತವೆ. ನಮ್ಮ ದೇಶದ ಪ್ರಸಿದ್ಧ ಕಲಾವಿದರು, ಹೆಸರು ಮಾಡಿರುವ ಕಲಾವಿದರು ಬಂದಿದ್ದು, ಅವರ ಕಲಾಕೃತಿಗಳ ಪ್ರದರ್ಶನ ನಡೆಯುತ್ತಿದೆ. ಈ ಕಲಾಕೃತಿಗಳನ್ನು ನೋಡಲು ಸಂತೋಷವಾಗ್ತಿದೆ ಎಂದರು. ಈಗಿನ ರಾಜಕೀಯದಲ್ಲಿ ಆಗ್ತಿರುವ ಬೆಳವಣಿಗೆ ಕುರಿತು ನಿಮ್ಮ ಅಭಿಪ್ರಾಯವೇನು ಎಂಬ …
Read More »