Breaking News

ಬೆಂಗಳೂರು

ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ: ಬಡತನ ಮೆಟ್ಟಿ ಜಡ್ಜ್ ಆದ ಮಗಳು

ಬೆಂಗಳೂರು:  ಹೊರವಲಯದ ಆನೇಕಲ್ ತಾಲ್ಲೂಕಿನ ತಿರುಪಾಳ್ಯ ಎಂಬ ಪುಟ್ಟ ಹಳ್ಳಿಯ ಹೆಣ್ಣುಮಗಳು ನಾಗಿಣಿ ಎಲ್, ಇಂದು ಸಿವಿಲ್ ನ್ಯಾಯಾಧೀಶೆಯಾಗಿ  ಆಯ್ಕೆಯಾಗುವ ಮೂಲಕ ಇಡೀ ರಾಜ್ಯದ ಗಮನ ಸೆಳೆದಿದ್ದಾರೆ. ಆಟೋ ಚಾಲಕನ ಮಗಳಾಗಿ ಬೆಳೆದು, ಹೂವು ಮಾರುತ್ತಲೇ ಓದಿ, ಇಂದು ನ್ಯಾಯದ ಸೀಟಿನಲ್ಲಿ ಕುಳಿತುಕೊಳ್ಳಲು ಸಜ್ಜಾಗಿರುವುದು ಕೇವಲ ಒಂದು ಕುಟುಂಬದ ಯಶಸ್ಸಲ್ಲ, ಬದಲಿಗೆ ಹೋರಾಟದ ಹಾದಿಯಲ್ಲಿರುವ ಕೋಟ್ಯಂತರ ಯುವಜನತೆಗೆ ಮಾದರಿಯಾಗಿದ್ದಾರೆ. ನಾಗಿಣಿ ಅವರ ತಂದೆ ಲಕ್ಷ್ಮಣ್ ದಿನವಿಡೀ ಆಟೋ ಚಾಲನೆ ಮಾಡಿ …

Read More »

ಸೈನಿಕರ ವಿರುದ್ಧ ಕಾರ್ಯಕ್ರಮ – ಅಜೀಂ ಪ್ರೇಮ್‌ಜಿ ವಿವಿ ವಿರುದ್ಧ ಎಬಿವಿಪಿ ಪ್ರತಿಭಟನೆ

ಬೆಂಗಳೂರು: ಸರ್ಜಾಪುರದಲ್ಲಿರುವ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ  ವಿರುದ್ಧ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌  ಪ್ರತಿಭಟನೆ ನಡೆಸಿದೆ. ಸಂಜೆ ವಿವಿ ಆವರಣಕ್ಕೆ ನುಗ್ಗಿದ ಎಬಿವಿಪಿ ವಿದ್ಯಾರ್ಥಿಗಳು ತ್ರಿವರ್ಣ ಧ್ವಜ ಹಿಡಿದು ಪ್ರತಿಭಟನೆ ನಡೆಸಿದರು. ವಿವಿಯ ನಾಮಫಲಕಕ್ಕೆ ಕಪ್ಪುಮಸಿ ಬಳಿದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಸರ್ಜಾಪುರ ಪೊಲೀಸರು ತೆರಳಿ ಎಬಿವಿಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದರು. ಇದೇ ವೇಳೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೂ ಪತ್ರ ಬರೆದಿರುವ ಎಬಿವಿಪಿ, ಅಜೀಂ …

Read More »

ಶಿವಮೊಗ್ಗದಲ್ಲಿ ಶಾಲಾ ಬಾಲಕನ ಹತ್ಯೆ – 15 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಶಿವಮೊಗ್ಗ: ಶಿವಮೊಗ್ಗದಲ್ಲಿನಡೆದ ಶಾಲಾ ಬಾಲಕನ  ಹತ್ಯೆಯನ್ನು ಸಿಎಂ ಸಿದ್ದರಾಮಯ್ಯ ಖಂಡಿಸಿದ್ದು, ಮೃತ ಬಾಲಕನ ಪೋಷಕರಿಗೆ ಸರ್ಕಾರದ ವತಿಯಿಂದ 15 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಶಾಲಾ ವಿದ್ಯಾರ್ಥಿಯನ್ನು ಥಳಿಸಿ, ಹತ್ಯೆಗೈದಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ. ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ನೆರವಾಗುವುದರ ಜೊತೆಗೆ ಕೃತ್ಯದಲ್ಲಿ ಭಾಗಿಯಾದ ಪ್ರತಿಯೊಬ್ಬ ಅಪರಾಧಿಗೂ ಕಾನೂನಿನ ಮೂಲಕ ತಕ್ಕ ಶಿಕ್ಷೆಯಾಗುವಂತೆ ಕ್ರಮವಹಿಸಿ, ಆತನ ಸಾವಿಗೆ ನ್ಯಾಯ ಕೊಡಿಸಲು ಪ್ರಾಮಾಣಿಕ ಪ್ರಯತ್ನ …

Read More »

ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನಕ್ಕೆ ಪತ್ರ ಬರೆದಿರೋದು ಬಂಡಾಯದ ಸೂಚನೆ – ರೇಣುಕಾಚಾರ್ಯ

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನಕ್ಕಾಗಿ ಶಾಸಕರು ಪತ್ರ ಬರೆದಿರೋದು ಬಂಡಾಯದ ಸೂಚನೆ ಅಂತ ಬಿಜೆಪಿ ಮಾಜಿ ಸಚಿವ ರೇಣುಕಾಚಾರ್ಯ ಲೇವಡಿ ಮಾಡಿದ್ದಾರೆ. ಹೊನ್ನಾಳಿಯಲ್ಲಿ ನಡೆಯಲಿರೋ ಕೃಷಿ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಆಹ್ವಾನ ನೀಡಿದರು. ಈ ವೇಳೆ ಶಾಸಕರ ಪತ್ರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸಚಿವ ಸ್ಥಾನ ಕೊಡಿ ಅಂತ ಪತ್ರ ಬರೆಯೋ ಪದ್ಧತಿ ಇರಲಿಲ್ಲ. ನಾನು ಅನೇಕ ವರ್ಷಗಳಿಂದ ರಾಜಕೀಯದಲ್ಲಿ ಇದ್ದೇನೆ. 6-7 ಜನ ಸಿಎಂರನ್ನ …

Read More »

ಶಿವಮೊಗ್ಗದಲ್ಲಿ ಸಂಕೇತ್‌ ಹತ್ಯೆ| ಕೋಮು ಗಲಭೆ ಹುಟ್ಟು ಹಾಕಲು ಕೃತ್ಯ ಎಸಗಿದಂತಿದೆ – ಸಿಟಿ ರವಿ

ಬೆಂಗಳೂರು: ಶಿವಮೊಗ್ಗದಲ್ಲಿ ಅನ್ಯ ಕೋಮಿನ ಹುಡುಗರಿಂದ ಸಂಕೇತ್‌ ಕೊಲೆ (Sanketh Murder) ಪ್ರಕರಣದ ಬಗ್ಗೆ ಸಮಗ್ರ ತನಿಖೆ ಆಗಬೇಕು ಎಂದು ಸರ್ಕಾರವನ್ನ ಬಿಜೆಪಿ ನಾಯಕ ಸಿಟಿ ರವಿ (CT Ravi) ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, 10ನೇ ತರಗತಿ ಓದುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಯಾವುದೇ ಕಾರಣ ಇಲ್ಲದೇ ಹತ್ಯೆ ಮಾಡಿದ್ದಾರೆ. 10ನೇ ಕ್ಲಾಸ್‌ ವಿಶೇಷ ತರಗತಿ ಮುಗಿಸಿಕೊಂಡು ಬರುತ್ತಿದ್ದಾಗ ಕೊಂದಿದ್ದಾರೆ. ಭಟ್ಕಳ, ಬಾಗಲಕೋಟೆ ಯಲ್ಲಿ ಇಂತಹ ಗಲಾಟೆಗಳು …

Read More »

ಸತೀಶ್ ಜಾರಕಿಹೋಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೇಳೋದು ತಪ್ಪಲ್ಲ: ಅಶೋಕ್ ಪಟ್ಟಣ್

ಬೆಂಗಳೂರು: ಮೊದಲ ಬಾರಿ ಗೆದ್ದ ಶಾಸಕರು ಸಚಿವ ಸ್ಥಾನ ಕೇಳುವುದು ತಪ್ಪಲ್ಲ. ಆದರೆ ಸಚಿವ ಸ್ಥಾನ ಕೊಡೋದು ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ವಿಧಾನಸಭೆ ಮುಖ್ಯ ಸಚೇತಕ ಅಶೋಕ್ ಪಟ್ಟಣ್  ತಿಳಿಸಿದ್ದಾರೆ. ಮೊದಲ ಬಾರಿ ಗೆದ್ದ ಕಾಂಗ್ರೆಸ್ ಶಾಸಕರು ಮಂತ್ರಿ ಸ್ಥಾನಕ್ಕಾಗಿ ಪತ್ರ ಬರೆದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮೊದಲ ಬಾರಿ ಗೆದ್ದಿರೋರು ಮಂತ್ರಿ ಸ್ಥಾನ ಕೇಳೋದು ತಪ್ಪೇನು ಅಲ್ಲ. ಇದರಲ್ಲಿ ಯಾವುದೇ ಗೊಂದಲ, ಬಂಡಾಯ ಇಲ್ಲ. ಎಲ್ಲರಿಗೂ …

Read More »

ಲಂಚ ಪಡೆಯುವಾಗ ಸಿಕ್ಕಿಬಿದ್ದ ಚಂದ್ರು ಲಮಾಣಿ – ಶಾಸಕರ ಉಚ್ಚಾಟನೆಗೆ ಬಿಜೆಪಿ ಚಿಂತನೆ

ಬೆಂಗಳೂರು: ಶಾಸಕ ಡಾ.ಚಂದ್ರು‌ ಲಮಾಣಿ  ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿರೋದು ಬಿಜೆಪಿಗೆ ನುಂಗಲಾರದ ತುತ್ತಾಗಿದೆ. ಕಮಿಷನ್ ವಿರುದ್ಧ ಹೋರಾಟ ನಡೆಸಿ ಕಾಂಗ್ರೆಸ್ ವಿರುದ್ಧ ಕೆಂಡ ಉಗುಳುತ್ತಿದ್ದ ಬಿಜೆಪಿಗೆ ತಮ್ಮದೇ ಪಕ್ಷದ ಶಾಸಕ ಸಿಕ್ಕಿಬಿದ್ದಿರೋದು ಸಹಿಸಲಾಗದ ಮರಣ ಸಂಕಟ ಬಂದಂತಾಗಿದೆ. ಈ ಹಿನ್ನೆಲೆ ಚಂದ್ರು ಲಮಾಣಿ ವಿರುದ್ಧ ಶಿಸ್ತು ಕ್ರಮಕ್ಕೆ ಚಿಂತನೆ ನಡೆಸಿದೆ. ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಟ್ರ್ಯಾಪ್‌ ಆಗಿದ್ದು, ಈ ಪ್ರಕರಣ ಸಂಬಂಧ ವರಿಷ್ಠರಿಗೆ ರಾಜ್ಯ …

Read More »

ಬಾಗಲಕೋಟೆಯಲ್ಲಿ ಪರಿಸ್ಥಿತಿ ಪೂರ್ಣ ನಿಯಂತ್ರಣಕ್ಕೆ ಬಂದಿದೆ: ಡಾ.ಪರಮೇಶ್ವರ್‌

ಬೆಂಗಳೂರು: ‘ಬಾಗಲಕೋಟೆಯಲ್ಲಿ ಮೆರವಣಿಗೆ ಬಗ್ಗೆ ಸ್ಥಳೀಯವಾಗಿ ನೋಡಿಕೊಂಡು ತೀರ್ಮಾನ ಮಾಡುವಂತೆ ಸೂಚಿಸಿದ್ದೇನೆ’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಾಗಲಕೋಟೆ ಈಗ ಶಾಂತವಾಗಿದೆ‌. ಪೊಲೀಸ್ ತಕ್ಷಣ ಕಾರ್ಯಪ್ರವೃತ್ತರಾಗಿದ್ದರಿಂದ ಪರಿಸ್ಥಿತಿ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ. ಮೆರವಣಿಗೆ ಬಗ್ಗೆ ಸ್ಥಳೀಯವಾಗಿ ನೋಡಿಕೊಂಡು ತೀರ್ಮಾನ ಮಾಡುವಂತೆ ಸೂಚಿಸಿದ್ದೇನೆ ಎಂದರು. ಹಿರಿಯ ಎಡಿಜಿಪಿಯನ್ನು ಕಳುಹಿಸಿದ್ದೇನೆ. ಸಾಕಷ್ಟು ಪೊಲೀಸ್‌ ಪಡೆಯನ್ನು ನಿಯೋಜಿಸಲಾಗಿದೆ. ಶಾಂತಿಸಭೆ ನಿರ್ದೇಶನ ನೀಡಲಾಗಿದೆ ಎಂದ ಅವರು, ಘಟನೆಯಲ್ಲಿ ಪೊಲೀಸರಿಗೂ …

Read More »

ಬೆಸ್ಕಾಂ |ಮೃತರ ಕುಟುಂಬದವರಿಗೆ ತಲಾ ₹1 ಕೋಟಿ ಪರಿಹಾರ: ಚೆಕ್‌ ವಿತರಿಸಿದ ಜಾರ್ಜ್‌

ಬೆಂಗಳೂರು: ಕರ್ತವ್ಯದ ವೇಳೆ ಮೃತಪಟ್ಟಿರುವ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬವರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್‌ ಅವರು ತಲಾ ₹1 ಕೋಟಿ ಪರಿಹಾರದ ಚೆಕ್‌ ಅನ್ನು ಬುಧವಾರ ವಿತರಿಸಿದರು. ವಿದ್ಯುತ್‌ ಆಘಾತದಲ್ಲಿ ಮೃತಪಟ್ಟ ಗೌರಿಬಿದನೂರು ಉಪ ವಿಭಾಗದ ಸಹಾಯಕ ಪವರ್‌ಮ್ಯಾನ್‌ ಉದಯ ಕುಮಾರ್‌ ಅವರ ಪತ್ನಿ ವಿ. ಕೀರ್ತನಾ, ರಸ್ತೆ ಅಪಘಾತಗಳಲ್ಲಿ ಮೃತರಾದ ಗುಡಿಬಂಡೆ ಉಪ ವಿಭಾಗದ ಪವರ್‌ಮ್ಯಾನ್‌ ಬಿ.ವಿ. ಮಂಜಪ್ಪ ಅವರ ಪತ್ನಿ ದಾಕ್ಷಾಯಿಣಿ ಹಾಗೂ ಚಿಂತಾಮಣಿ ಉಪ …

Read More »

ಅನೈತಿಕ ಸಂಬಂಧ ಶಂಕೆ – ಪತ್ನಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆಗೈದ ಪತಿ

ರಾಮನಗರ: ಕೌಟುಂಬಿಕ ಕಲಹ ಹಾಗೂ ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಪತಿಯೇ ಬರ್ಬರವಾಗಿ ಹತ್ಯೆ ಮಾಡಿರೋ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಕಗ್ಗಲೀಪುರ  ಪೊಲೀಸ್ ಠಾಣಾ ವ್ಯಾಪ್ತಿಯ ಕುಳ್ಳೇಗೌಡನಪಾಳ್ಯದಲ್ಲಿ ನಡೆದಿದೆ. ಸಿಂಚನ(21) ಕೊಲೆಯಾದ ಮಹಿಳೆ, ಪತಿ ರೇಣುಕಯ್ಯ ಎಂಬಾತನೇ ತಲೆಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಪತ್ನಿಯ ಶೀಲ ಶಂಕಿಸಿ ಆಗಾಗೆ ರೇಣುಕಯ್ಯ ಗಲಾಟೆ ಮಾಡ್ತಿದ್ದ. ಅದರಂತೆ ಶುಕ್ರವಾರವೂ ಕೂಡ …

Read More »