Breaking News
Home / ಜಿಲ್ಲೆ / ಬೆಂಗಳೂರು (page 60)

ಬೆಂಗಳೂರು

ಸದನದಲ್ಲಿ ಬೆಲೆ ಏರಿಕೆ ಗದ್ದಲ: ಬಿಜೆಪಿಯದ್ದು ಲೂಟಿ ಸರ್ಕಾರ ಎಂದ ‘ಸಿದ್ದು’; ‘ಭೂತದ ಬಾಯಲ್ಲಿ ಭಗವದ್ಗೀತೆ’ ಎಂದು ವಿಪಕ್ಷಗಳಿಗೆ ಸಿಎಂ ಬೊಮ್ಮಾಯಿ ‘ಗುದ್ದು’

ಬೆಂಗಳೂರು: ವಿಧಾನಸಭೆ ಕಲಾಪದ ವೇಳೆ ಬೆಲೆ ಏರಿಕೆ ವಿಚಾರ ಮತ್ತೆ ಪ್ರತಿಧ್ವನಿಸಿದ್ದು, ಆಡಳಿತ ಪಕ್ಷ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ಸದಸ್ಯರ ನಡುವೆ ಪರಸ್ಪರ ವಾಕ್ಸಮರ, ವಾಗ್ದಾಳಿಗಳಿಗೆ ಕಾರಣವಾಗಿದೆ. ಬೆಲೆ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಉತ್ತರಿಸಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿರುವುದು ನಿಜ. ಅದನ್ನು ನಾವು ಒಪ್ಪಿಕೊಳ್ಳುತ್ತೇವೆ ಆದರೆ ಅದಕ್ಕೆ ಪೆಟ್ರೋಲ್, ಡಿಸೆಲ್ ಬೆಲೆ ಏರಿಕೆಯಾಗಿರುವುದು ಮಾತ್ರ ಕಾರಣವಲ್ಲ, ಬೇರೆ ಬೇರೆ ಕಾರಣಗಳಿಂದ ಬೆಲೆ …

Read More »

‘ಮೋದಿ ಅಲೆ ಭ್ರಮೆ’ ಬಗ್ಗೆ ಬಿಎಸ್‌ವೈ ಹೇಳಿಕೆಗೆ ಬಿಜೆಪಿ ನಾಯಕರು ಅಸಮಾಧಾನ

ಬೆಂಗಳೂರು, ಸೆಪ್ಟೆಂಬರ್‌ 20: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಲೆಯ ವಿಚಾರವಾಗಿ ಕರ್ನಾಟಕ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ನೀಡಿರುವ ಹೇಳಿಕೆಯು ಹಲವಾರು ಕರ್ನಾಟಕ ಬಿಜೆಪಿ ನಾಯಕರು ಹಾಗೂ ಕೇಂದ್ರ ಬಿಜೆಪಿ ನಾಯಕರು ಅಸಮಧಾನಗೊಂಡಿದ್ದಾರೆ ಎಂದು ಹೇಳಲಾಗಿದೆ. ಕರ್ನಾಟಕ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ದಾವಣಗೆರೆಯಲ್ಲಿ ನಡೆದ ಎರಡು ದಿನಗಳ ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಬಿಜೆಪಿ ಪಕ್ಷವನ್ನು ಯಾವ ರೀತಿಯಲ್ಲಿ ಗಟ್ಟಿಗೊಳಿಸುವುದು …

Read More »

ಜನ ಕಲ್ಯಾಣಕ್ಕಾಗಿ ನವ ಚಂಡಿಕಾ ಹೋಮ ನೆರವೇರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ಕ್ಷೇತ್ರದ ಜನರು, ಕೆಎಂಎಫ್ ಸಂಸ್ಥೆಯ ಪ್ರಗತಿ ಹಾಗೂ ಕುಟುಂಬಸ್ಥರ ಏಳ್ಗೆಗಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿ ನವ ಚಂಡಿಕಾ ಹೋಮ ನೆರವೇರಿಸಿದರು.   ಕಳೆದ ಭಾನುವಾರ ಮತ್ತು ಸೋಮವಾರದಂದು ಎರಡು ದಿನಗಳವರೆಗೆ ಉಡುಪಿ ಜಿಲ್ಲೆಯ ನಾಡಿನ ಸುಪ್ರಸಿದ್ಧ ದೇವಸ್ಥಾನವಾಗಿರುವ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ಹೋಮ-ಹವನ ನೆರವೇರಿಸಿದರು.   ಕಳೆದ ಎರಡು …

Read More »

ಸರ್ಕಾರಿ ಕಚೇರಿಗೆ ನುಗ್ಗಿ ಹಿರಿಯ ಕೆಎಎಸ್​ ಅಧಿಕಾರಿಗೆ ಕೊಲೆ ಬೆದರಿಕೆ ಆರೋಪ

ಬೆಂಗಳೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕರಾಗಿ ನೇಮಕಗೊಂಡಿರುವ ಕೆಎಎಸ್ ಅಧಿಕಾರಿ ಬಿ.ಕೆ.ನಾಗರಾಜಪ್ಪ ಅವರ ಮೇಲೆ ಕೊಲೆ ಬೆದರಿಕೆ ಕೇಳಿ ಬಂದಿದ್ದು ಸರ್ಕಾರಿ ಕಚೇರಿಗೆ ನುಗ್ಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಮಹಾಲಕ್ಷ್ಮಿ ಲೇಔಟ್ ನ ಭೋವಿ ಪಾಳ್ಯದಲ್ಲಿರುವ ಭೋವಿ ಅಭಿವೃದ್ಧಿ ನಿಗಮದ ಕಚೇರಿಗೆ ಅತಿಕ್ರಮ ಪ್ರವೇಶ ಮಾಡಿ ಹಣ ಮಂಜೂರಾತಿ ಮಾಡುವಂತೆ ಧಮ್ಕಿ ಹಾಕಿರೋ ಆರೋಪಿಗಳು. ನಾವು ಹೇಳಿದ ವ್ಯಕ್ತಿಗಳಿಗೆ ಹಣ ಮಂಜೂರು ಮಾಡಬೇಕು. ಇಲ್ಲದಿದ್ದರೆ ಸರ್ಕಾರಿ ಕಚೇರಿಯಲ್ಲಿ …

Read More »

ವಿದೇಶಿ ಏಜೆನ್ಸಿಗಳಿಗೆ ರಕ್ಷಣಾ ಮಾಹಿತಿ ನೀಡುತ್ತಿದ್ದ ಬೆಂಗಳೂರಿನ ಬಟ್ಟೆ ವ್ಯಾಪಾರಿಯ ಬಂಧನ

ಬೆಂಗಳೂರು: ನಗರದ ಸಿಸಿಬಿ ಪೊಲೀಸರು ಮತ್ತು ಮಿಲಿಟರಿ ಗುಪ್ತಚರ ವಿಭಾಗದ ಅಧಿಕಾರಿಗಳ ಜಂಟಿ ಕಾರ್ಯಾಚಾರಣೆಯಲ್ಲಿ ವಿದೇಶಿ ಏಜೆನ್ಸಿಗಳಿಗೆ ಭಾರತದ ರಕ್ಷಣಾ ಮಾಹಿತಿ ನೀಡುತ್ತಿದ್ದ ಯುವಕನ್ನು ಬಂಧಿಸಲಾಗಿದೆ. ರಾಜಸ್ಥಾನ ಮೂಲದ ಈತ ಬೆಂಗಳೂರಿನಲ್ಲಿ ಬಟ್ಟೆ ವ್ಯಾಪಾರಿಯಾಗಿದ್ದ ಎನ್ನಲಾಗಿದೆ. ಆರೋಪಿಯು ರಾಜಸ್ಥಾನದ ಬೆರ್ಮರ್ ಮೂಲದವನು. ಬೆಂಗಳೂರಿನ ಕಾಟನ್ ಪೇಟೆಯ ಜಾಲಿ ಮೊಹಲ್ಲಾದಲ್ಲಿ ಬಟ್ಟೆ ವ್ಯಾಪಾರಿಯಾಗಿದ್ದ. ಸೇನೆಯ ಕಮಾಂಡೋ ಸಮವಸ್ತ್ರ ಧರಿಸಿ ಬಾರ್ಮರ್ ನ ಮಿಲಿಟರಿ ಸ್ಟೇಶನ್ ಮಾಹಿತಿ, ಸೇನಾ ವಾಹನಗಳ ಓಡಾಟದ ಮಾಹಿತಿಯನ್ನು …

Read More »

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿರುವ 2021ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯ ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿರುವ 2021ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯ ಫಲಿತಾಂಶ ಪ್ರಕಟವಾಗಿದೆ. ಆಗಸ್ಟ್ 28 ಮತ್ತು 29ರಂದು ಸಿಇಟಿ ಪರೀಕ್ಷೆಗಳು ನಡೆದಿತ್ತು. ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ಮಾಹಿತಿ ನೀಡಿದರು. ಮೈಸೂರಿನ ಪ್ರಮತಿ ಹಿಲ್ ವೀವ್ ಅಕಾಡೆಮಿಯ ಮೇಘನ್ ಎಚ್.ಕೆ. ಅವರು ಎಲ್ಲಾ ವಿಭಾಗದಲ್ಲೂ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಎಂಜಿನಿಯರಿಂಗ್, ಬಿ-ಫಾರ್ಮಾ, ಕೃಷಿ …

Read More »

ದ್ವಿತೀಯ ಪಿಯು ಫಲಿತಾಂಶ: ಇಲಾಖೆ ಫಲಿತಾಂಶ ತಿರಸ್ಕರಿಸಿದ 36 ವಿದ್ಯಾರ್ಥಿಗಳು ಅನುತ್ತೀರ್ಣ!

ಬೆಂಗಳೂರು: ಕೋವಿಡ್ ಕಾರಣದಿಂದ ಈ ಬಾರಿ ದ್ವಿತೀಯ ಪಿಯುಸಿಯಲ್ಲಿ ಎಲ್ಲಾ ವಿದ್ಯಾರ್ಥಿಗಳನ್ನು ಹಿಂದಿನ ತರಗತಿಗಳ ಫಲಿತಾಂಶದಂತೆ ಉತ್ತೀರ್ಣ ಮಾಡಲಾಗಿತ್ತು. ಆದರೆ ಪಿಯು ಇಲಾಖೆ ನೀಡಿದ್ದ ಫಲಿತಾಂಶವನ್ನು ತಿರಸ್ಕರಿಸಿ, ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳ ಫಲಿತಾಂಶ ಇಂದು ಪ್ರಕಟವಾಗಿದೆ. ಪಿಯು ಇಲಾಖೆ ನೀಡಿದ್ದ ಫಲಿತಾಂಶವನ್ನು ತಿರಸ್ಕರಿಸಿ, 592 ಹೊಸ ಅಭ್ಯರ್ಥಿಗಳು (ಫ್ರೇಶರ್) ಪರೀಕ್ಷೆ ಬರೆದಿದ್ದರು. ಅದರಲ್ಲಿ 556 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, 36 ಮಂದಿ ಅನುತ್ತೀರ್ಣರಾಗಿದ್ದಾರೆ. ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಈ ಹಿಂದಿನ ಫಲಿತಾಂಶ ಪುನಃ …

Read More »

ಬೆಂಗಳೂರಿನಲ್ಲಿ ಛತ್ತೀಸ್‍ಗಢದ ಬಿಜೆಪಿ ಮಾಜಿ MLA ನಿಧನ

ರಾಯ್‍ಪುರ್: ಛತ್ತೀಸ್‍ಗಢದ ಬಿಜೆಪಿ ಮಾಜಿ ಶಾಸಕ ಯುಧ್ವೀರ್ ಸಿಂಗ್ ಜುದೇವ್ ಸೋಮವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಯುಧ್ವೀರ್ ಸಿಂಗ್ ಜುದೇವ್(39) ಲಿವರ್ ಸಮಸ್ಯೆಯಿಂದ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಯುಧ್ವೀರ್ ಸಿಂಗ್ ಜುದೇವ್ ಛತ್ತೀಸ್‍ಗಢದ ಜಶ್‍ಪುರದ ಹಿಂದಿನ ರಾಜಮನೆಯನಕ್ಕೆ ಸೇರಿದವರಾಗಿದ್ದು, 2013ರಲ್ಲಿ ನಿಧನರಾದ ಬಿಜೆಪಿಯ ಪ್ರಭಾವಿ ನಾಯಕ ದಿಲೀಪ್ ಸಿಂಗ್ ಜುದೇವ್ ಅವರ ಕಿರಿಯ ಪುತ್ರರಾಗಿದ್ದಾರೆ. ಯುಧ್ವೀರ್ ಸಿಂಗ್‍ರವರು ಬಹಳ ದಿನಗಳಿಂದ ಲಿವರ್ ಸಂಬಂಧಿತ …

Read More »

ಸಿದ್ದರಾಮಯ್ಯ ಅವರನ್ನು ನಾನೇ ಬಿಜೆಪಿಗೆ ಕರೆ ತರುತ್ತೇನೆ: ರಾಜೂ ಗೌಡ

ಬೆಂಗಳೂರು: ಸಿದ್ದರಾಮಯ್ಯ ಅವರನ್ನು ನಾನೇ ಬಿಜೆಪಿಗೆ ಕರೆ ತರುತ್ತೇನೆ ಎಂದು ಶಾಸಕ ರಾಜೂ ಗೌಡ ಹೇಳಿದ್ದಾರೆ.   ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿನ್ನ ಬಿಎಸ್‍ವೈ ಅವರು ಕಾರ್ಯಕಾರಿಣಿ ಸಭೆಯಲ್ಲಿ ವಿರೋಧ ಪಕ್ಷದವರನ್ನು ಯಾರು ನಿರ್ಲಕ್ಷಿಸ ಬಾರದು. ಒಳ್ಳೆಯ ರೀತಿ ಕೆಲಸವನ್ನು ಮಾಡಬೇಕು. ಮೋದಿ, ಮೋದಿ ಎನ್ನಲು ಹೋಗಬೇಡಿ ನಿಮ್ಮ ಕೆಲಸವನ್ನು ಮಾಡಿ ಎಂದರು ಹೇಳಿದ್ದಾರೆ ಎಂದಿದ್ದಾರೆ. ನಾವೇಲ್ಲರು ಬಿಜೆಪಿಯಲ್ಲಿಯೇ ಇರುತ್ತೇವೆ. ಮತ್ತೆ ಬಿಜೆಪಿಯಿಂದಲೇ ಗೆದ್ದು ಮಂತ್ರಿಯಾಗುತ್ತೇವೆ. ಕಾಂಗ್ರೆಸ್‍ನಿಂದ ಕೆಲವು ಶಾಸಕರಿಗೆ …

Read More »

ಕಾಫಿ, ಟೀ ಕುಡಿಯೋಕೆ ಇಲ್ಲಿಗೆ ಬರಬೇಕಾ: ಮಾತನಾಡಲು ಅವಕಾಶ ಕೋರಿದ ಶಿವಲಿಂಗೇಗೌಡ

ಬೆಂಗಳೂರು: ‘ನೀವು ಕೂತ್ಕೊ ಅಂದ್ರೆ ಕೈಮುಗಿದು ಕೂತು ಬಿಡ್ತೀನಿ. ನಮಗೂ ಮಾತಾಡೋಕೆ ಅವಕಾಶ ಕೊಡಿ. ನಾವೇನು ಕಾಫಿ-ಟೀ ಕುಡಿಯಲು ಇಲ್ಲಿಗೆ ಬರಬೇಕಾ’ ಎಂದು ಜೆಡಿಎಸ್ ಶಾಸಕ ಶಿವಲಿಂಗೇಗೌಡ ಸ್ಪೀಕರ್​ ಸ್ಥಾನದಲ್ಲಿ ಕುಮಾರ್ ಬಂಗಾರಪ್ಪ ಅವರನ್ನು ಖಾರವಾಗಿ ಪ್ರಶ್ನಿಸಿದರು. ವಿಧಾನಸಭೆಯಲ್ಲಿ ಬೆಲೆ ಏರಿಕೆ ಬಗ್ಗೆ ನಡೆಯುತ್ತಿದದ ಚರ್ಚೆಗೆ ಉತ್ತರ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎದ್ದು ನಿಂತರು. ಈ ವೇಳೆ ಮಾತನಾಡಲು ನಿಂತ ಶಿವಲಿಂಗೇಗೌಡರಿಗೆ ಕುಳಿತುಕೊಳ್ಳುವಂತೆ ಕುಮಾರ್ ಬಂಗಾರಪ್ಪ ಸೂಚಿಸಿದರು. ಸ್ಪೀಕರ್ …

Read More »