ಬೆಂಗಳೂರು : ‘ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರ ಆಯ್ಕೆಗೆ ಕನಿಷ್ಠ ವಯೋಮಿತಿ 60 ವರ್ಷ ಪೂರೈಸಬೇಕೆಂಬ ನಿಯಮವನ್ನು ಮುಂದಿನ ವರ್ಷದಿಂದ ಸಡಿಲಿಸುವ ಜೊತೆಗೆ, ಪ್ರಶಸ್ತಿ ಮೊತ್ತವನ್ನು ₹ 1 ಲಕ್ಷದಿಂದ ₹ 5 ಲಕ್ಷಕ್ಕೆ ಹೆಚ್ಚಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು. ರವೀಂದ್ರ ಕಲಾಕ್ಷೇತ್ರದಲ್ಲಿ ಸೋಮವಾರ ನಡೆದ 66ನೇ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ‘ಇನ್ನು ಮುಂದೆ ಈ ಪ್ರಶಸ್ತಿಗೆ ಯಾರೂ ಅರ್ಜಿ ಸಲ್ಲಿಸುವ ಅಗತ್ಯ …
Read More »ಆತ್ಮೀಯ ಮಿತ್ರನಿಗೆ ಸಿಎಂ ಮುತ್ತಿನ ವಿದಾಯ
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಂತ್ಯಕ್ರಿಯೆ ಭಾನುವಾರ ಬೆಳಗ್ಗೆ ಸಕಲ ಸರಕಾರಿ ಗೌರವಗಳೊಂದಿಗೆ ನಡೆಯಿತು. ಪುನೀತ್ ರಾಜಕುಮಾರ್ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ಹಲವು ಸಚಿವರು, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹಾಜರಿದ್ದು ಅಂತಿಮ ನಮನ ಸಲ್ಲಿಸಿದರು. ನಸುಕಿನಲಿ ಪುನೀತ್ ರಾಜ್‍ಕುಮಾರ್ ಅಂತಿಮಯಾತ್ರೆ ಮುಕ್ತಾಯಗೊಂಡಿತು. ಸೂರ್ಯ ಉದಯಿಸುವ ಮುಂಚೆಯೇ ಪುನೀತ್ ಪಾರ್ಥೀವ ಶರೀರ ಕಂಠೀರವ ಸ್ಟೇಡಿಯಂ ತಲುಪಿತು. ನಿಗದಿಗಿಂತ ಸಮಯಕ್ಕಿಂತ …
Read More »‘ಕರುನಾಡಿನ ವೀರ ಕನ್ನಡಿಗ’, ಸ್ಯಾಂಡಲ್ವುಡ್ನ ‘ಪವರ್ಸ್ಟಾರ್’, ಕನ್ನಡಿಗರ ಪ್ರೀತಿಯ ಅಪ್ಪು ಇನ್ನು ನೆನಪು ಮಾತ್ರ.
ಬೆಂಗಳೂರು: ಅಸಂಖ್ಯಾತ ಅಭಿಮಾನಿಗಳ ಮನದಲ್ಲಿ ‘ರಾಜಕುಮಾರ’ನಂತೆ ಮೆರೆದಿದ್ದ ಕರುನಾಡಿನ ‘ಕರುನಾಡಿನ ವೀರ ಕನ್ನಡಿಗ’, ಸ್ಯಾಂಡಲ್ವುಡ್ನ ‘ಪವರ್ಸ್ಟಾರ್’, ಕನ್ನಡಿಗರ ಪ್ರೀತಿಯ ಅಪ್ಪು ಇನ್ನು ನೆನಪು ಮಾತ್ರ. ಕಂಠೀರವ ಸ್ಟುಡಿಯೋದಲ್ಲಿ ಇಂದು ಬೆಳಗ್ಗೆ ಸಕಲ ಸರ್ಕಾರಿ ಗೌರವದೊಂದಿಗೆ ಪುನೀತ್ ರಾಜ್‍ಕುಮಾರ್ ಅವರ ಅಂತ್ಯಕ್ರಿಯೆ ನೆರವೇರಿದ್ದು, ಕುಟುಬಂಸ್ಥರು, ಅಭಿಮಾನಗಳ ಆಕ್ರಂದ ಮುಗಿಲು ಮುಟ್ಟಿದೆ. ಅಪ್ಪ-ಅಮ್ಮನ ಸಮಾಧಿ ಬಳಿಯೇ ಪುನೀತ್ ಲೀನವಾಗಿದ್ದಾರೆ. ಕಂಠೀರವ ಸ್ಟೇಡಿಯಂನಿಂದ ಹೂವಿನ ಪಲ್ಲಕ್ಕಿಯಲ್ಲಿ ಭಾನುವಾರ ಮುಂಜಾನೆಯೇ ಪುನೀತ್ರ ಪಾರ್ಥಿವ ಶರೀರವನ್ನ ಮೆರವಣಿಗೆ ಮೂಲಕ …
Read More »ಪುನೀತ್ ರಾಜ್ ಕುಮಾರ್ ಅಂತ್ಯಸಂಸ್ಕಾರ; ಮುಂಜಾನೆಯೇ ಅಂತಿಮಯಾತ್ರೆ, ಪಾರ್ಥೀವ ಶರೀರ ಸಾಗುವ ಮಾರ್ಗ ವಿವರ ಇಂತಿದೆ
ಬೆಂಗಳೂರು: ಹೃದಯಾಘಾತದಿಂದ ನಿಧನರಾದ ಪವರ್ ಸ್ಚಾರ್ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಭಾನುವಾರ ಬೆಳಗ್ಗೆ ನೆರವೇರಲಿದ್ದು, ಪಾರ್ಥೀವ ಶರೀರದ ಅಂತಿಮಯಾತ್ರೆಯು ಭಾನುವಾರ (ಅಕ್ಟೋಬರ್ 31) ಮುಂಜಾನೆಯೇ ನಡೆಯಲಿದೆ. ನಾಳೆ ಮುಂಜಾನೆ ನಟ ಪುನೀತ್ ಅಂತಿಮಯಾತ್ರೆ ಆರಂಭ ಆಗಲಿದ್ದು, ಮುಂಜಾನೆ 4 ರಿಂದ ನಗರದಾದ್ಯಂತ ಪೊಲೀಸರ ಭದ್ರತೆ ಇರಲಿದೆ. ಆದಷ್ಟು ಬೇಗ ಕಂಠೀರವ ಸ್ಟುಡಿಯೋ ತಲುಪಲು ನಿರ್ಧಾರ ಮಾಡಲಾಗಿದೆ. ಅಂತಿಮ ಯಾತ್ರೆ ಸಾಗಲಿರುವ ಪ್ರತಿ ಜಂಕ್ಷನ್ನಲ್ಲಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ಅಂತಿಮಯಾತ್ರೆ …
Read More »: ಪುನೀತ್ ರಾಜ್‍ಕುಮಾರ್ ಅವರ ಅಂತ್ಯಕ್ರಿಯೆ ನಾಳೆ: ಬೊಮ್ಮಾಯಿ
ಬೆಂಗಳೂರು: ಪುನೀತ್ ರಾಜ್‍ಕುಮಾರ್ ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಬೊಮ್ಮಾಯಿ.. ಈಗಷ್ಟೇ ನಾನು ರಾಘಣ್ಣ ಹಾಗೂ ಶಿವರಾಜ್ಕುಮಾರ್ ಜೊತೆ ಮಾತನಾಡಿದೆ. ಪುನೀತ್ ಅವರ ಅಭಿಮಾನಿಗಳು ಲಕ್ಷ ಲಕ್ಷ ಸಂಖ್ಯೆಯಲ್ಲಿ ಹರಿದು ಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಗಿದೆ ಅಂತಾ ಮಾಹಿತಿ ನೀಡಿದರು.
Read More »ಪುನೀತ್ ರಾಜ್‍ಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನ ಪಡೆಯಲು ನಟಿ, ಮಾಜಿ ಸಂಸದೆ ರಮ್ಯ ಬೆಂಗಳೂರಿಗೆ
ಬೆಂಗಳೂರು: ಪವರ್ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನ ಪಡೆಯಲು ನಟಿ, ಮಾಜಿ ಸಂಸದೆ ರಮ್ಯ ಬೆಂಗಳೂರಿಗೆ ಬಂದಿಳಿದಿದ್ದಾರೆ. ಮುಂಬೈದಿಂದ ನಗರದ ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಮ್ಯ ಬಂದಿಳಿದಿದ್ದು ಪುನೀತ್ ರಾಜ್‍ಕುಮಾರ್ ಅಂತಿಮ ದರ್ಶನ ಪಡೆಯಲು ಕಂಠೀರವ ಸ್ಟೇಡಿಯಂಗೆ ತೆರಳಿದ್ದಾರೆ.
Read More »ಅಂತ್ಯಕ್ರಿಯೆ ಅಂತಿಮ ವಿಧಿವಿಧಾನಗಳನ್ನು ವಿನಯ್ ರಾಜ್ ಕುಮಾರ್ ನೆರವೇರಿಸಲಿದ್ದಾರೆ.
ಬೆಂಗಳೂರು: ಹೃದಯಾಘಾತದಿಂದ ವಿಧಿವಶರಾಗಿರುವ ನಟ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಇಂದು ಸಂಜೆ ಕಂಠೀರವ ಸ್ಟುಡಿಯೋದಲ್ಲಿ ನಡೆಯಲಿದ್ದು, ಅಂತಿಮ ವಿಧಿವಿಧಾನಗಳನ್ನು ವಿನಯ್ ರಾಜ್ ಕುಮಾರ್ ನೆರವೇರಿಸಲಿದ್ದಾರೆ. ಪುನೀತ್ ಅಣ್ಣ ರಾಘವೇಂದ್ರ ರಾಜ್ ಕುಮಾರ್ ಅವರ ಹಿರಿಯ ಪುತ್ರ ವಿನಯ್ ರಾಜ್ ಕುಮಾರ್, ಪುನೀತ್ ಅಂತಿಮ ವಿಧಿವಿಧಾನ ಕಾರ್ಯಗಳನ್ನು ನೆರವೇರಿಸಲಿದ್ದಾರೆ ಎಂದು ತಿಳಿದುಬಂದಿದೆ. ಪುನೀತ್ ರಾಜ್ ಕುಮಾರ್ ಅವರಿಗೆ ಇಬ್ಬರು ಹೆಣ್ಣುಮಕ್ಕಳಿರುವುದರಿಂದ ಪುನೀತ್ ಅಣ್ಣ ರಾಘವೇಂದ್ರ ರಾಜ್ ಕುಮಾರ್ ಅವರ ಪುತ್ರನಿಂದ …
Read More »4.50 ಕೋಟಿ ರೂ. ವೆಚ್ಚದ ಹಾಲು ಉತ್ಪಾದಕರ ಮಕ್ಕಳಿಗೆ ವಸತಿ ನಿಲಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ : ಬೆಳಗಾವಿಯಲ್ಲಿ ನಂದಿನಿ ಮಿಲ್ಕ್ ಪ್ರೋಡಕ್ಟ್ (ಎನ್‍ಎಂಪಿ) ಘಟಕ ಸ್ಥಾಪಿಸಲು ಪ್ರಯತ್ನಿಸಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶುಕ್ರವಾರದಂದು ಬೆಳಗಾವಿ ಹಾಲು ಒಕ್ಕೂಟದ ಆವರಣದಲ್ಲಿ ನಡೆದ ಹಾಲು ಉತ್ಪಾದಕರ ರೈತರ ಮಕ್ಕಳಿಗೆ 4.50 ಕೋಟಿ ರೂ. ವೆಚ್ಚದ ವಸತಿ ನಿಲಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಎನ್‍ಎಂಪಿ ಘಟಕ ಸ್ಥಾಪನೆಗೆ ಬೆಳಗಾವಿ ಮಹಾ ನಗರದಲ್ಲಿ …
Read More »ಪುನೀತ್ ರಾಜ್‍ಕುಮಾರ್ ಅವರ ಕಣ್ಣುಗಳನ್ನು ನಾರಾಯಣ ನೇತ್ರಾಲಯಕ್ಕೆ ದಾನ
ಬೆಂಗಳೂರು,ಅ.29- ಇಂದು ನಿಧನರಾದ ನಟ ಪುನೀತ್ ರಾಜ್‍ಕುಮಾರ್ ಅವರ ಕಣ್ಣುಗಳನ್ನು ನಾರಾಯಣ ನೇತ್ರಾಲಯಕ್ಕೆ ದಾನ ಮಾಡಲಾಯಿತು. ಪುನೀತ್ ಅವರ ತಂದೆ ವರನಟ ಡಾ.ರಾಜ್‍ಕುಮಾರ್ ಅವರು ನಿಧನರಾದಾಗ ಅವರ ನೇತ್ರಗಳನ್ನು ಕೂಡ ದಾನ ಮಾಡಲಾಗಿತ್ತು. ಆ ಸಂದರ್ಭದಲ್ಲೇ ತಮ್ಮ ನೇತ್ರಗಳನ್ನು ದಾನ ಮಾಡುವ ಸಹಮತಕ್ಕೆ ಸಹಿ ಹಾಕಿದ್ದರು. ಅದರಂತೆ ಇಂದು ಅಪ್ಪು ಅವರ ನೇತ್ರಗಳನ್ನು ನಾರಾಯಣ ನೇತ್ರಾಲಯಕ್ಕೆ ದಾನ ಮಾಡಲಾಗಿದೆ. ಡಾ.ರಾಜ್ ಅವರು ಮೃತಪಟ್ಟ ನಂತರ ಇಬ್ಬರು ಅಂಧರ ಬಾಳಿಗೆ ಬೆಳಕಾಗಿದ್ದರು. ಈಗ …
Read More »ಬೆಂಗಳೂರಿನಲ್ಲಿ ಇನ್ಮುಂದೆ ಪ್ರತಿಭಟನೆಗೆ ಹೊಸ ರೂಲ್ಸ್; ಹೈಕೋರ್ಟ್ ಸೂಚನೆ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು
ಬೆಂಗಳೂರು: ಪ್ರತಿಭಟನೆ ವಿಚಾರವಾಗಿ ಸುಖಾಸುಮ್ಮನೆ ರಸ್ತೆಗಿಳಿಯುವ ಮುನ್ನ ಎಚ್ಚರ ವಹಿಸಿ. ಏಕೆಂದರೆ ಬೆಂಗಳೂರಿನಲ್ಲಿ ಇನ್ಮುಂದೆ ಪ್ರತಿಭಟನೆಗೆ ಹೊಸ ನಿಯಮವನ್ನು ಜಾರಿಗೆ ತರಲು ಸಿದ್ಧತೆ ನಡೆಸಲಾಗಿದೆ. ಪ್ರತಿಭಟನೆ, ಜಾಥಾಗಳಿಂದ ಸಾರ್ವಜನಿಕರಿಗೆ ಕಿರಿಕಿರಿ ಹಿನ್ನೆಲೆ ಹೈಕೋರ್ಟ್ ಸೂಚನೆ ನೀಡಿದ್ದು, ಈ ಬೆನ್ನಲ್ಲೇ ಎಚ್ಚೆತ್ತ ಬೆಂಗಳೂರು ಪೊಲೀಸರು ಕರ್ನಾಟಕ ಪೊಲೀಸ್ ಌಕ್ಟ್ ಅಡಿ ನಿಬಂಧನೆ ವಿಧಿಸಲು ಸಿದ್ಧತೆ ನಡೆಸಿದೆ. ಸರ್ಕಾರದಿಂದ ಅನುಮೋದನೆ ಪಡೆಯಲು ನಗರ ಪೊಲೀಸ್ ಇಲಾಖೆ ಸಿದ್ಧತೆ ನಡೆಸಿದ್ದು, ಯಾವುದೇ ಪ್ರತಿಭಟನೆಗೆ ಕೇವಲ …
Read More »
Laxmi News 24×7