Breaking News

ಬೆಂಗಳೂರು

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್ ಜೈಲಿಗೆ

ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್‌ರನ್ನು  ಫೆ.26ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ಕೋರ್ಟ್ ಆದೇಶ ಹೊರಡಿಸಿದೆ. ಬೈರತಿ ಬಸವರಾಜ್ ರನ್ನು ಬಂಧಿಸಿ ಏಳು ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದ ಸಿಐಡಿ ಪೊಲೀಸರು, ಇಂದು 42ನೇ ಎಸಿಜೆಎಂ ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ವಿಚಾರಣೆ ವೇಳೆ ಬೈರತಿ ಬಸವರಾಜ್‌ಗೆ ಹೃದಯ ಸಂಬಂಧಿ ಕಾಯಿಲೆ ಇದೆ. ಹಾಗಾಗಿ ಸೋಮವಾರ ಜಾಮೀನು ಅರ್ಜಿ ವಿಚಾರಣೆ ಇದೆ. ಅಲ್ಲಿ ತನಕ ಜಯದೇವ …

Read More »

ವೇದವಿದ್ಯಾ ವಿಹಾರ ಗುರುಕುಲಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ

ರಾಮನಗರ: ಇಲ್ಲಿನ ಬನ್ನಿಕುಪ್ಪೆ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ವೇದವಿದ್ಯಾ ವಿಹಾರ ಗುರುಕುಲಕ್ಕೆ  ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್  ಶಂಕುಸ್ಥಾಪನೆ ನೆರವೇರಿಸಿದರು. ವೇದ ಉಪನ್ಯಾಸದ ಗುರುಕುಲಕ್ಕೆ ಗುದ್ದಲಿಪೂಜೆ ನೆರವೇರಿಸಿ ಹೋಮ ಕಾರ್ಯಕ್ರಮದಲ್ಲಿ ಭಾಗಿಯಾದ ಸಚಿವರು, ಸ್ಥಳೀಯರಿಗೆ ಗುರುಕುಲದ ವತಿಯಿಂದ ಸೀರೆ ವಿತರಣೆ ಮಾಡಿದ್ರು. ಈ ವೇಳೆ ಕೇಂದ್ರ ಸಚಿವರಿಗೆ ಸಂಸದ ಡಾ.ಮಂಜುನಾಥ್, ಪತ್ನಿ ಅನುಸೂಯ ಮಂಜುನಾಥ್ ಸೇರಿ ಸ್ಥಳೀಯ ಬಿಜೆಪಿ ಮುಖಂಡರು ಸಾಥ್ ನೀಡಿದ್ರು. ಬಳಿಕ ಬೆಂಗಳೂರು ಹೊರವಲಯದ STRR ರಿಂಗ್ ರಸ್ತೆ …

Read More »

ವಿಧಾನಸೌಧದಲ್ಲಿ ಮಾಧ್ಯಮಗಳ ನಿರ್ಬಂಧಕ್ಕೆ ವಿರೋಧ – ಮಾಧ್ಯಮ ಪ್ರತಿನಿಧಿಗಳಿಂದ ಮೌನ ಧರಣಿ

ಬೆಂಗಳೂರು: ಭದ್ರತೆಯ ನೆಪವೊಡ್ಡಿ ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಭಂಧ ವಿಧಿಸಿರುವ ರಾಜ್ಯ ಸರ್ಕಾರದ ಕ್ರಮವನ್ನ ವಿರೋಧಿಸಿ ಮಾಧ್ಯಮ ಪ್ರತಿನಿಧಿಗಳಿಂದು ಮೌನ ಧರಣಿ ನಡೆಸಿದರು. ವಿಧಾನಸೌಧದ ಗಾಂಧಿ ಪ್ರತಿಮೆ  ಮುಂಭಾಗದಲ್ಲಿ ಕುಳಿತು ಮುಖಕ್ಕೆ ಕಪ್ಪು ಮಾಸ್ಕ್‌ ಧರಿಸಿ ಮೌನ ಧರಣಿ ನಡೆಸಿದರು. ಅಲ್ಲದೇ ಮಾಧ್ಯಮ ಸ್ವಾತಂತ್ರ್ಯ ರಕ್ಷಿಸಲು, ಪ್ರಜಾಸತ್ತಾತ್ಮಕ ಮೌಲ್ಯಗಳನ್ನ ಎತ್ತಿಹಿಡಿಯಲು ಪತ್ರಿಕೋದ್ಯಮ ಸ್ವಾತಂತ್ರ್ಯಕ್ಕೆ ಅಡ್ಡಿಯಾಗುವ ನಿರ್ಬಂಧಗಳನ್ನ ಮರುಪರಿಶೀಲಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದರು. ಸ್ಥಳಕ್ಕೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ (KV …

Read More »

ಬೆಳಗಾವಿ ಕೈಗಾರಿಕಾ ಅಭಿವೃದ್ಧಿಗೆ ಬಜೆಟ್‌ನಲ್ಲಿ ವಿಶೇಷ ಪ್ಯಾಕೇಜ್ ಬೇಡಿಕೆ ಮುಖ್ಯಮಂತ್ರಿಗೆ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯಿಂದ ಮನವಿ

ಬೆಳಗಾವಿ: ಬೆಳಗಾವಿ ಪ್ರದೇಶದ ಕೈಗಾರಿಕೆ, ಎಂಎಸ್‌ಎಂಇಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಮುಂಬರುವ ರಾಜ್ಯ ಬಜೆಟ್‌ನಲ್ಲಿ ವಿಶೇಷ ನೆರವು ನೀಡುವಂತೆ ಬೆಳಗಾವಿ ವಾಣಿಜ್ಯೋದ್ಯಮ ಸಂಘದ (Belgaum Chamber of Commerce and Industries) ವತಿಯಿಂದ ಮುಖ್ಯಮಂತ್ರಿ ಸಿದ್ಧರಾಮದ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ. ಬೆಳಗಾವಿ ಉತ್ತರ ಕರ್ನಾಟಕದ ಪ್ರಮುಖ ಕೈಗಾರಿಕಾ ಕೇಂದ್ರವಾಗಿದ್ದು, ಎಂಜಿನಿಯರಿಂಗ್, ಫೌಂಡ್ರಿ, ಹೈಡ್ರಾಲಿಕ್ಸ್, ಪ್ರಿಸಿಷನ್ ಘಟಕಗಳು ಹಾಗೂ ಏರೋಸ್ಪೇಸ್ ಕ್ಷೇತ್ರಗಳಲ್ಲಿ ಮಹತ್ವದ ಸ್ಥಾನ ಹೊಂದಿದೆ ಎಂದು ಉಲ್ಲೇಖಿಸಲಾಗಿದೆ. ಸೂಕ್ತ ಬಜೆಟ್ …

Read More »

ಇನ್ನೂ 10 ವರ್ಷ ರಾಜಕೀಯದಲ್ಲಿ ಇರುತ್ತೇನೆ: ಸತೀಶ್ ಜಾರಕಿಹೊಳಿ

ಬೆಂಗಳೂರು: ಉದ್ದಿಮೆ ಜೊತೆಗೆ ರಾಜಕೀಯದಲ್ಲಿ ಇದ್ದುಕೊಂಡು 30 ವರ್ಷದಿಂದ ಸಮಾಜಸೇವೆ ಮಾಡುತ್ತಿದ್ದೇನೆ. ಈ ವೇಳೆ ಹಲವು ಏಳು-ಬೀಳು ಕಂಡಿದ್ದೇನೆ. ಕನಿಷ್ಠ 10 ವರ್ಷ ರಾಜಕೀಯದಲ್ಲಿದ್ದು ನಾಡಿನ ಅಭಿವೃದ್ಧಿಗೆ ಇನ್ನಷ್ಟು ಪೂರಕವಾಗಿ ಕೆಲಸ ಮಾಡುವುದಾಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಂಗಳೂರು ಪ್ರೆಸ್‌ಕ್ಲಬ್​​​ನಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಪ್ರೆಸ್‌ಕ್ಲಬ್ ವರ್ಷದ ವ್ಯಕ್ತಿ’ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು. ಸಿಎಂ ಸಿದ್ದರಾಮಯ್ಯ ಜೊತೆ 25 ವರ್ಷದಿಂದ ರಾಜಕೀಯದಲ್ಲಿದ್ದೇನೆ. ಈ ವೇಳೆ ಶೋಷಿತರಿಗೆ ಸಾಮಾಜಿಕ …

Read More »

ಗ್ರಾ.ಪಂ ತೆರಿಗೆ ಸಂಗ್ರಹದಲ್ಲಿ ಹಿಂದೆ ಬಿದ್ದ ಗ್ರಾಮೀಣಾಭಿವೃದ್ಧಿ ಇಲಾಖೆ – ಈ ವರ್ಷ 71% ಮಾತ್ರ ಸಂಗ್ರಹ

ಬೆಂಗಳೂರು: ಸದಾ ಒಂದಿಲ್ಲೊಂದು ವಿಷಯಗಳ ಬಗ್ಗೆ ಮಾತಾಡಿ ವಿವಾದ ಸೃಷ್ಟಿ ಮಾಡೋ ಸಚಿವ ಪ್ರಿಯಾಂಕ್  ಇಲಾಖೆ ಅಭಿವೃದ್ದಿ ವಿಚಾರದಲ್ಲಿ ಮಾತ್ರ ಹಿಂದೆ ಬಿದ್ದಂತೆ ಕಾಣ್ತಿದೆ. ಇದಕ್ಕೆ ಉದಾಹರಣೆ ಎಂಬಂತೆ ತಮ್ಮ ಇಲಾಖೆ ವ್ಯಾಪ್ತಿಯ ಗ್ರಾಮ ಪಂಚಾಯತಿಗಳ ತೆರಿಗೆ ಸಂಗ್ರಹದಲ್ಲಿ ಇಲಾಖೆ ಹಿಂದೆ ಬಿದ್ದಿದೆ. ಗ್ರಾಮೀಣಾಭಿವೃದ್ಧಿ ಇಲಾಖೆಯ ಅಂಕಿ ಅಂಶಗಳ ಪ್ರಕಾರವೇ ಕಳೆದ 3 ವರ್ಷಗಳಿಂದ ತೆರಿಗೆ ಸಂಗ್ರಹದಲ್ಲಿ ಇಲಾಖೆ ಹಿಂದೆ ಬಿದ್ದಿದೆ. ಈ ಆರ್ಥಿಕ ವರ್ಷ ಅಂದರೆ 2025-26ನೇ ಸಾಲಿನ …

Read More »

ಮುಷ್ಕರ ನಡುವೆಯೂ ಸಾರಿಗೆ ನಿಗಮಗಳ ಬಸ್‌‍ ಸೇವೆ ಯಥಾಸ್ಥಿತಿ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಸಾರಿಗೆ ನಿಗಮಗಳ ನೌಕರರು ಬೆಂಗಳೂರು ಚಲೋ ಮುಷ್ಕರ ನಡೆಸುವ ಕರೆಯ ನಡುವೆಯೂ ಬಸ್‌‍ ಸೇವೆ ಯಥಾಸ್ಥಿತಿಯಲ್ಲಿದೆ. ಇಂದು ಬೆಳಿಗ್ಗೆ ಕೆಎಸ್‌‍ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ವ್ಯಾಪ್ತಿಯಲ್ಲಿ ಬಸ್‌‍ ಸಂಚಾರ ಎಂದಿನಂತೆ ಮುಂದುವರೆದಿದ್ದು, ಯಾವುದೇ ವ್ಯತ್ಯಯವಾಗಿಲ್ಲ ಎಂದು ಕೆಎಸ್‌‍ಆರ್‌ಟಿಸಿ ಪ್ರಕಟಣೆ ತಿಳಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾಸಮಿತಿ ನೇತೃತ್ವದಲ್ಲಿ ಬೆಂಗಳೂರು ಚಲೋ ಮುಷ್ಕರ ನಡೆಸುವುದಾಗಿ …

Read More »

ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌ – ಆರೋಪ ಮುಕ್ತಗೊಳಿಸುವಂತೆ ಸೂರಜ್‌ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿದ್ದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್‌ ರೇವಣ್ಣಗೆ ಮತ್ತೆ ಹಿನ್ನಡೆಯಾಗಿದೆ. ಪ್ರಕರಣದಲ್ಲಿ ತಮ್ಮನ್ನು ಆರೋಪ‌ ಮುಕ್ತಗೊಳಿಸುವಂತೆ‌ ಕೋರಿ ಸಲ್ಲಿಸಿದ್ದ ಅರ್ಜಿಯನ್ನ ಜನಪ್ರತಿನಿಧಿಗಳ ಸೆಷನ್ಸ್ ಕೋರ್ಟ್ ವಜಾಗೊಳಿಸಿದೆ. ಇದಕ್ಕೂ ಮುನ್ನ ಆರೋಪ ಮುಕ್ತಗೊಳಿಸುವಂತೆ ಸಲ್ಲಿಸಿದ್ದ ಡಿಶ್ಚಾರ್ಜ್ ಅರ್ಜಿಯನ್ನ 42ನೇ ಎಸಿಜೆಎಂ ಕೋರ್ಟ್ ವಜಾಗೊಳಿಸಿತ್ತು. ಇದನ್ನ ಸೂರಜ್‌ ರೇವಣ್ಣ ಜನಪ್ರತಿನಿಧಿಗಳ ಸೆಷನ್ಸ್ ಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ಇದೀಗ ಇಲ್ಲಿಯೂ ಅರ್ಜಿಯನ್ನ ವಜಾಗೊಳಿಸಿದ್ದು, ಎಸಿಜೆಎಂ ಕೋರ್ಟ್ ಆದೇಶವನ್ನ ಎತ್ತಿಹಿಡಿದಿದೆ. …

Read More »

ವಿಜಯೇಂದ್ರ, ಅಶೋಕ್‌ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಕೆಶಿ ವಾರ್ನಿಂಗ್‌

ಬೆಂಗಳೂರು: ಬಿಜೆಪಿಯ ಎಲ್ಲಾ ಶಾಸಕರು ( ಬ್ಲ್ಯಾಕ್‌ಮೇಲ್‌ ಮಾಡ್ತಿದ್ದಾರೆ. ಗೌರವದಿಂದ ಇದ್ರೆ ಸರಿ, ಇಲ್ಲದಿದ್ರೆ ಎಸ್ಮಾ (ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ) ಅಡಿಯಲ್ಲಿ ಕ್ರಮ ತೆಗೆದುಕೊಳ್ಳಬೇಕಾಗುತ್ತೆ. ಅಶೋಕ್‌, ವಿಜಯೇಂದ್ರ ಮನೆ ಮುಂದೆನೇ ಕಸ ಹಾಕಿಸಬೇಕಾಗುತ್ತೆ ಅಂತ ಡಿಸಿಎಂ ಡಿಕೆ ಶಿವಕುಮಾರ್‌  ಎಚ್ಚರಿಕೆ ಕೊಟ್ಟರು. ಬೆಂಗಳೂರಿನ ಕಸವನ್ನು ದೊಡ್ಡಬಳ್ಳಾಪುರಕ್ಕೆ  ನಿಯಮಬಾಹಿರವಾಗಿ ಸಾಗಿಸಲಾಗುತ್ತಿದೆ ಎನ್ನುವ ಬಿಜೆಪಿ ಶಾಸಕರ ಆರೋಪಕ್ಕೆ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ಎಲ್ಲಾ ಶಾಸಕರು ಬ್ಲ್ಯಾಕ್‌ ಮೇಲ್‌  ಮಾಡ್ತಿದ್ದಾರೆ. ತಮ್ಮ ಕ್ಷೇತ್ರಕ್ಕೆ …

Read More »

ಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ – ನಾಲಾಯಕ್.. ಅಯೋಗ್ಯ ಸರ್ಕಾರ ಇದು: ಬಿವೈವಿ ಕಿಡಿ

ಬೆಂಗಳೂರು: ಇದೊಂದು ನಾಲಾಯಕ್ ಸರ್ಕಾರ. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧವನ್ನ ಬಿಜೆಪಿ ಖಂಡಿಸುತ್ತೆ ಎಂದು ಬಿಜೆಪಿ  ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ  ಕಿಡಿಕಾರಿದ್ದಾರೆ. ಬೆಂಗಳೂರಲ್ಲಿ ಪ್ರತಿಕ್ರಿಯಿಸಿದ ಅವರು, ಇದು ಪ್ರಜಾಪ್ರಭುತ್ವ ವಿರೋಧಿ ನಡೆ. ಬೆಳಗಾವಿ ಅಧಿವೇಶನದಲ್ಲಿ ದ್ವೇಷ ಭಾಷಣ ಕಾಯ್ದೆ ತಂದ್ರು. ಇದೆಲ್ಲವನ್ನ ಗಮನಿಸಿದ್ರೆ ಕಾಂಗ್ರೆಸ್ ಸರ್ಕಾರದ್ದು ಪ್ರಜಾಪ್ರಭುತ್ವ ಅಣಕಿಸುವ ನಡೆ ಎಂದು ಟೀಕಿಸಿದ್ದಾರೆ. ಪಾಕಿಸ್ತಾನ ಜಯಘೋಷಗಳನ್ನ ನಿಲ್ಲಿಸಲು ಆಗದ ಅಯೋಗ್ಯ ಸರ್ಕಾರ ಇದು. ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದವರಿಗೆ ಪುರಾವೆ …

Read More »