ಬೆಂಗಳೂರು: ಕೋವಿಡ್ ಪ್ರಕರಣಗಳ ದೃಢಪ್ರಮಾಣ ದರ ಶೇಕಡ 0.66ಕ್ಕೆ ಕುಸಿದಿರುವುದರಿಂದ ಅಕ್ಟೋಬರ್ 1ರಿಂದ ಆರನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದ ತರಗತಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಶುಕ್ರವಾರ ಕೋವಿಡ್ ನಿಯಂತ್ರಣ ಕಾರ್ಯಪಡೆ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ಕೋವಿಡ್ ದೃಢಪ್ರಮಾಣ ದರ ಶೇ 1ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ವಾರದಲ್ಲಿ ಐದು ದಿನಗಳ ಕಾಲ ಆರರಿಂದ ದ್ವಿತೀಯ ಪಿಯುಸಿವರೆಗಿನ ಶೇ 100ರಷ್ಟು …
Read More »ಸೋಮವಾರ ಭಾರತ್ ಬಂದ್: ಬೆಂಗಳೂರಲ್ಲಿ ರೈತರ ಪ್ರತಿಭಟನೆ ಹೇಗಿರುತ್ತೆ..?
ಬೆಂಗಳೂರು: ಸೆಪ್ಟೆಂಬರ್ 27ರ ಭಾರತ್ ಬಂದ್ ಅನ್ನು ಯಶಸ್ವಿಗೊಳಿಸುವ ಸಲುವಾಗಿ ಬಹುತೇಕ ಎಲ್ಲ ಸಂಘಟನೆಗಳು ಬೆಂಬಲ ನೀಡಿವೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ಆಯೋಜಿಸಿ ಮಾತನಾಡಿ ಭಾರತ ಬಂದ್‍ಗೆ ಬಹುತೇಕ ಸಂಘಟನೆಗಳ ಜೊತೆ ರೈತ ಸಂಘಟನೆಗಳ ಸಾಥ್ ಸಿಕ್ಕಿದೆ. ರೈತರೇ ಹೋರಾಟದ ಮುಂಚೂಣಿ ವಹಿಸಲಿದ್ದಾರೆ. ಕಾರ್ಮಿಕ ಸಂಘಟನೆಯೂ ಸಾಥ್ ನೀಡ್ತಿದೆ. ದಲಿತ ಸಮುದಾಯವೂ ಅಪಸ್ವರ ಎತ್ತಿಲ್ಲ ಬೇರೆ ಕಸುಬುಗಳ ಸಂಘಟನೆಗಳು ಬಂದ್‌ನಲ್ಲಿ ಪಾಲ್ಗೊಳ್ಳಲ್ಲಿದ್ದಾರೆ ಎಂದಿದ್ದಾರೆ. …
Read More »ವೈದ್ಯರ ಬದಲಿಗೆ ನರ್ಸ್ಗಳಿಂದ ಗರ್ಭಿಣಿ ಹೆರಿಗೆ; ನವಜಾತ ಗಂಡು ಮಗು ಸಾವು
ಬೆಂಗಳೂರು: ಗರ್ಭಿಣಿಗೆ ಡಾಕ್ಟರ್ ಬದಲು ನರ್ಸ್ಗಳು ಹೆರಿಗೆ ಮಾಡಿಸಿದ್ದರಿಂದ ನವಜಾತ ಗಂಡು ಮಗು ಸಾವನಪ್ಪಿದೆ ಎಂಬ ಆರೋಪ ಕೇಳಿ ಬಂದಿದೆ. ನಗರದ ಕೋಣನಕುಂಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವಿರುದ್ಧ ಹೀಗೊಂದು ಆರೋಪ ಖುದ್ದು ಮಗು ಕಳೆದುಕೊಂಡ ತಾಯಿ ಪವಿತ್ರ ಹಾಗೂ ಸಂಬಂಧಿಕರು ಆರೋಪಿಸಿದ್ದಾರೆ. ಪಲ್ಲವಿ, ಕೋಣನಕುಂಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೇ ಚೆಕಪ್ ಮಾಡಿಸುತ್ತಿದ್ದರು. ಇನ್ನು ನಿನ್ನೆ ರಾತ್ರಿ 10.30ಕ್ಕೆ ಪವಿತ್ರಗೆ ಹೆರಿಗೆ ನೋವು ಕಾಣಿಸಿಕೊಂಡ ಈ ಹಿನ್ನೆಲೆ ಆಕೆಯನ್ನ ಆಸ್ಪತ್ರೆಗೆ …
Read More »ರಾಷ್ಟ್ರೀಯ ಶಿಕ್ಷಣ ನೀತಿ; ಕಾಂಗ್ರೆಸ್ ವಿರುದ್ಧ ಡಾ.ಅಶ್ವತ್ಥನಾರಾಯಣ ಕಿಡಿ
ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಕಾಂಗ್ರೆಸ್ ಪಕ್ಷ ದ್ವಂದ್ವ ನೀತಿ ಅನುಸರಿಸುವ ಮೂಲಕ ರಾಜ್ಯದ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಗಂಭೀರ ಆರೋಪ ಮಾಡಿದರು. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತು ಬೆಂಗಳೂರಿನಲ್ಲಿಂದು ಬಿಜೆಪಿ ಕೇಂದ್ರ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಹಿಂದಿನ ಕಾಂಗ್ರೆಸ್ ಸರಕಾರ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ಪ್ರಹಾರ ನಡೆಸಿದರು. ರಾಷ್ಟ್ರೀಯ …
Read More »ಅಕ್ರಮ ಬಡಾವಣೆ: ಸಚಿವರ ಭಿನ್ನ ನಿಲುವು
ಬೆಂಗಳೂರು: ಮಹಾನಗರ ಪಾಲಿಕೆಗಳ ವ್ಯಾಪ್ತಿಯ ಅಕ್ರಮ ಬಡಾವಣೆಗಳಿಗೆ ಮೂಲಸೌಕರ್ಯ ಒದಗಿಸುವುದಿಲ್ಲ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಹೇಳಿದರೆ, ನಗರ ಸ್ಥಳೀಯ ಸಂಸ್ಥೆಗಳ ಅಕ್ರಮ ಬಡಾವಣೆಗಳಿಗೆ ಮೂಲಸೌಕರ್ಯ ಒದಗಿಸಲಾಗುತ್ತದೆ ಎಂದು ಎಂಟಿಬಿ ನಾಗರಾಜ್ ಹೇಳಿದರು. ಇಬ್ಬರು ಸಚಿವರ ಹೇಳಿಕೆಗಳು ಸದಸ್ಯರ ತೀವ್ರ ಆಕ್ರೋಶಕ್ಕೆ ಕಾರಣವಾಯಿತು. ‘ಈ ಎರಡು ಇಲಾಖೆಗಳು ಸರ್ಕಾರದ ಒಳಗೆ ಇವೆಯೋ ಇಲ್ಲವೇ. ಈ ಸರ್ಕಾರದಲ್ಲಿ ಏನು ನಡೆಯುತ್ತಿದೆ’ ಎಂದು ಸದಸ್ಯರು ಪ್ರಶ್ನಿಸಿದರು. ವಿಧಾನಸಭೆಯಲ್ಲಿ ಶುಕ್ರವಾರ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ …
Read More »ಕರ್ನಾಟಕದಲ್ಲಿ ಹೊಸದಾಗಿ 789 ಜನರಿಗೆ ಕೊರೊನಾ ದೃಢ; 23 ಮಂದಿ ಸಾವು
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಸೆಪ್ಟೆಂಬರ್ 24) ಹೊಸದಾಗಿ 789 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,71,833 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,20,792 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 23 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,706 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 13,306 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ …
Read More »ಲೋಕಸಭಾಧ್ಯಕ್ಷರಿಗೆ ಅಗೌರವ ಸಲ್ಲದು: ಎಚ್.ಡಿ. ಕುಮಾರಸ್ವಾಮಿ
ಬೆಂಗಳೂರು: ‘ಲೋಕಸಭಾಧ್ಯಕ್ಷರು ಮತ್ತು ಅವರು ಅಲಂಕರಿಸಿರುವ ಪೀಠಕ್ಕೆ ಅಗೌರವ ತೋರಬಾರದು ಎನ್ನುವ ಕಾರಣಕ್ಕೆ ಓಂ ಬಿರ್ಲಾ ಅವರ ಭಾಷಣದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ರಾಜ್ಯದ ಸಂಸದೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ವಿಧಾನಸಭಾಧ್ಯಕ್ಷರು ಲೋಕಸಭೆಯ ಸಭಾಧ್ಯಕ್ಷರನ್ನು ಕರೆಸಿದ್ದಾರೆ. ಇಂತಹ ಅಪರೂಪದ ಸಂದರ್ಭದಲ್ಲಿ ಗೈರಾಗುವುದು ಲೋಕಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರಿದಂತೆ. ಆ ರೀತಿ ಆಗುವುದು …
Read More »ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಗೆ ‘ಅತ್ಯುತ್ತಮ ಶಾಸಕ’ ಪ್ರಶಸ್ತಿ
ಬೆಂಗಳೂರು: ಲೋಕಸಭೆ ಮಾದರಿಯಲ್ಲಿ ರಾಜ್ಯ ವಿಧಾನ ಮಂಡಲದಲ್ಲೂ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಮೊದಲ ಬಾರಿಗೆ ಪ್ರದಾನ ಮಾಡಲಾಗಿದ್ದು, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಕುರಿತು ಮಾತನಾಡಿದ ಸ್ಪೀಕರ್ ಕಾಗೇರಿ ಅವರು, ಹಲವು ರಾಜ್ಯಗಳಲ್ಲಿ ಉತ್ತಮ ಶಾಸಕ ಪ್ರಶಸ್ತಿ ಕೊಡುವ ಸಂಪ್ರದಾಯವಿದೆ. ಅತ್ಯುತ್ತಮ ಶಾಸಕ ಪ್ರಶಸ್ತಿ ಆಯ್ಕೆಗೆ ಸಮಿತಿಯನ್ನು ರಚನೆ ಮಾಡಲಾಗಿದ್ದು, ಸ್ಪೀಕರ್ ನೇತೃತ್ವದ ಸಮಿತಿಯಲ್ಲಿ ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯ, ಮಾಧುಸ್ವಾಮಿ, ದೇಶಪಾಂಡೆ …
Read More »ಸೆ.27ರ ಭಾರತ್ ಬಂದ್‍ಗೆ ಪಾಪ್ಯುಲರ್ ಫ್ರಂಟ್‍ನಿಂದ ಸಂಪೂರ್ಣ ಬೆಂಬಲ
ಬೆಂಗಳೂರು: ಒಕ್ಕೂಟ ಸರ್ಕಾರವು ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿರುವ ಸೆ.27ರ ಭಾರತ್ ಬಂದ್‍ಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಪೂರ್ಣ ಬೆಂಬಲ ಘೋಷಿಸುತ್ತದೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ತಿಳಿಸಿದ್ದಾರೆ. ಒಕ್ಕೂಟ ಸರ್ಕಾರವು ವಿವಾದಿತ ಕೃಷಿ ಕಾನೂನು ಜಾರಿಗೆ ತಂದು ಒಂದು ವರ್ಷವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿವೆ. ರೈತ ವಿರೋಧಿಕಾಯ್ದೆಗಳನ್ನು ಹಿಂಪಡೆಯಬೇಕೆಂದು …
Read More »ಎತ್ತಿನಗಾಡಿ ಚಲೋ ಆಯ್ತು, ಸೈಕಲ್ ಜಾಥಾ ಆಯ್ತು, ಇದೀಗ ಕಾಂಗ್ರೆಸ್ನಿಂದ ಟಾಂಗಾ ಜಾಥಾ!
ಬೆಂಗಳೂರು: ಬೆಲೆ ಏರಿಕೆಯನ್ನೇ ಅಸ್ತ್ರವಾಗಿ ಬಳಸಿಕೊಂಡ ಕೈ ನಾಯಕರು, ಮೇಲಿಂದ ಮೇಲೆ ಪ್ರತಿಭಟನೆ ನಡೆಸುತ್ತಿದ್ದಾರೆ. ಎತ್ತಿನಗಾಡಿ ಚಲೋ, ಸೈಕಲ್ ಜಾಥಾ ಬಳಿಕ, ಇದೀಗ ಕಾಂಗ್ರೆಸ್ನಿಂದ ಟಾಂಗಾ ಜಾಥಾ ನಡೆಯುತ್ತಿದೆ. ಮೂರನೇ ಬಾರಿ ವಿಧಾನಸೌಧಕ್ಕೆ ಟಾಂಗದಲ್ಲಿ ಬರುವ ಮೂಲಕ ವಿನೂತನ ಹೋರಾಟಕ್ಕೆ ಕೈ ನಾಯಕರು ಮುಂದಾಗಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಜಾಥಾ ನಡೆಯುತ್ತಿದೆ. ಟಾಂಗ ಜಾಥಾ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ …
Read More »